ಬೆಂಗಳೂರು, ಮೇ.9 www.bengaluruwire.com : 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶವು ಇಂದು ಪ್ರಕಟವಾಗಲಿದೆ. ಶೇ 76.91ರ ವಿದ್ಯಾರ್ಥಿಗಳು ಪಾಸಾಗಿದ್ದಾರೆ. ಕರ್ನಾಟಕದ ಒಟ್ಟು 2,750 ಪರೀಕ್ಷಾ ಕೇಂದ್ರಗಳಲ್ಲಿ 8.69 ಲಕ್ಷ ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದಿದ್ದರು.
ಇಂದು ಕರ್ನಾಟಕ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ(Karnataka SSLC Results 2024) karresults.nic.in ವೆಬ್ಸೈಟ್ನಲ್ಲಿ ಪ್ರಕಟಗೊಳ್ಳಲಿದೆ. ವಿದ್ಯಾರ್ಥಿಗಳು ಅಧಿಕೃತ ವೆಬ್‌ಸೈಟ್ kseab.karnataka.gov.in ಗೆ ಭೇಟಿ ನೀಡಿ ಫಲಿತಾಂಶವನ್ನು ಬೆಳಗ್ಗೆ 10.30ರ ನಂತರ ವೀಕ್ಷಿಸಬಹುದು. ಈ ಬಾರಿ ಮಾರ್ಚ್ 25 ರಿಂದ ಏಪ್ರಿಲ್ 6ರವರೆಗೆ ಪರೀಕ್ಷೆ ನಡೆದಿತ್ತು, ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು 8.69 ಲಕ್ಷ ವಿದ್ಯಾರ್ಥಿಗಳು ಬರೆದಿದ್ದರು.
ಈ ಬಾರಿ ಮೂರು ಬಾರಿ ಪರೀಕ್ಷೆ ಬರೆಯುವುದಕ್ಕೆ ಅವಕಾಶ ನೀಡಲಾಗಿದ್ದು, ಕೊನೆಯದಾಗಿ ಹೆಚ್ಚಿನ ಅಂಕ ತೆಗೆದುಕೊಂಡದನ್ನು ಅಂತಿಮವಾಗಿ ಗಣನೆಗೆ ತೆಗೆದುಕೊಳ್ಳಲಾಗುವುದು ಎಂದು ಆಯುಕ್ತೆ ಮಂಜುಶ್ರೀ ಹೇಳಿದ್ದಾರೆ.
ಉಡುಪಿ ಜಿಲ್ಲೆ ಶೇಕಡ 94 ದೊಂದಿಗೆ ಫಲಿತಾಂಶದಲ್ಲಿ ಪ್ರಥಮ ಸ್ಥಾನ ಪಡೆದಿದೆ. ದಕ್ಷಿಣ ಕನ್ನಡ ಜಿಲ್ಲೆ ಶೇ.92.12 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು, ದ್ವೀತಿಯ ಸ್ಥಾನವನ್ನು ಪಡೆದುಕೊಂಡಿದೆ. ಯಾದಗಿರಿ ಜಿಲ್ಲೆ ಕೊನೆ ಸ್ಥಾನ ಪಡೆದುಕೊಂಡಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಈ ಬಾರಿಯೂ ಬಾಲಕಿಯರೇ ಮೈಲುಗೈ ಸಾಧಿಸಿದ್ದಾದ್ದಾರೆ. ಓರ್ವ ವಿದ್ಯಾರ್ಥಿನಿ ಮಾತ್ರ ಈ ಬಾರಿ 625ಕ್ಕೆ 625 ಅಂಕಗಳನ್ನು ತೆಗೆದುಕೊಂಡಿದ್ದಾರೆ ಅಂತ ತಿಳಿಸಿದ್ದಾರೆ.
ಎಸ್‌ಎಸ್‌ಎಲ್‌ಸಿ ಪರೀಕ್ಷೆಯು ಪ್ರಥಮ ಭಾಷೆಯ ಪತ್ರಿಕೆ, ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್ ಮತ್ತು ಸಂಸ್ಕೃತದೊಂದಿಗೆ ಪ್ರಾರಂಭವಾಗಿತ್ತು. ಏಪ್ರಿಲ್ 8 ರಂದು ಜೆಟಿಎಸ್ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಮತ್ತು ಮೌಖಿಕ ಪರೀಕ್ಷೆಗಳು ನಡೆದಿದ್ದವು.
ಪರೀಕ್ಷೆಗೆ ಅರ್ಹರಾದ ವಿದ್ಯಾರ್ಥಿಗಳ ಸಂಖ್ಯೆ 4,41,910 ಹಾಗೂ ವಿದ್ಯಾರ್ಥಿನಿಯರು 4,28,058 ಮಂದಿ ಇದ್ದರು. ರಾಜ್ಯದ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವು ಏಪ್ರಿಲ್ 10 ಪ್ರಕಟ ಮಾಡಲಾಗಿತ್ತು. ಈ ವರ್ಷದ ದ್ವಿತೀಯ ಪಿಯುಸಿಯ ಒಟ್ಟಾರೆ ಫಲಿತಾಂಶ ಶೇ.81.15 ರಷ್ಟಿತ್ತು ಎಂಬುದನ್ನು ಗಮನಿಸಬೇಕು.