Sunday, June 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Treated Water | ಬೆಂಗಳೂರಿನ ಕುಡಿಯುವ ನೀರಿನ ಸಮಸ್ಯೆ ನಿಯಂತ್ರಣ : ಗೃಹೇತರ ಬಳಕೆಗೆ ಸಂಸ್ಕರಿತ ನೀರಿನ ಬಳಕೆ ಹೆಚ್ಚಳವೊಂದೇ ಪರಿಹಾರ!!

ಬೆಂಗಳೂರು ಜಲಮಂಡಳಿಯು ಜಲ ಸ್ನೇಹಿ ಅಂಡ್ರಾಯ್ಡ್ ಆಪ್ ಅನ್ನು ಮಾ.14ರಿಂದ ಪ್ರಾರಂಭಿಸಲಾಗಿದ್ದು, ಸಂಸ್ಕರಿಸಿದ ನೀರನ್ನು ಸಾರ್ವಜನಿಕರು, ಸಂಘ ಸಂಸ್ಥೆಗಳು ಬುಕ್ ಮಾಡಬಹುದು. | ಐಟಿ ಸಂಸ್ಥೆಗಳಿಂದ "ಝೀರೋ ಬ್ಯಾಕ್ಟೀರಿಯಲ್‌" ಸಂಸ್ಕರಿತ ನೀರಿಗೆ ಬೇಡಿಕೆ ಹೆಚ್ಚಾಗುತ್ತಿದೆ.

by Bengaluru Wire Desk
May 17, 2024
in Bengaluru Focus, BW Special
Reading Time: 2 mins read
0

ದಿನೇ ದಿನೇ ರಾಜಧಾನಿ ಬೆಂಗಳೂರಿನ ಜನಸಂಖ್ಯೆ ಒಂದೇ ಸಮನೆ ಏರಿಕೆಯಾಗುತ್ತಿದೆ. ಹೀಗಾಗಿ ಕುಡಿಯುವ ನೀರಿಗೆ ಬೇಡಿಕೆ, ಒಳಚರಂಡಿಯಲ್ಲಿ ತ್ಯಾಜ್ಯ ನೀರು ಬಿಡುಗಡೆಯೂ ಹೆಚ್ಚಾಗುತ್ತಿದೆ. ಬೆಂಗಳೂರು ಜಲಮಂಡಳಿಯು (BWSSB) ತ್ಯಾಜ್ಯ ನೀರನ್ನು ಪರಿಸರ ಸ್ನೇಹಿ ರೀತಿಯಲ್ಲಿ ಸಂಸ್ಕರಿಸಿ ಮರುಬಳಕೆ ಮಾಡಲು ತ್ಯಾಜ್ಯ ನೀರು ಸಂಸ್ಕರಣಾ ಘಟಕಗಳನ್ನು ಸ್ಥಾಪಿಸಿದೆ. ಜಲ ಸ್ನೇಹಿ ಆಪ್ ಪ್ರಾರಂಭಿಸಿದ ಮೇಲೆ ಸಂಸ್ಕರಿತ ನೀರಿನ ಪೂರೈಕೆ ಪ್ರಮಾಣವೂ ಹೆಚ್ಚಾಗಿದೆ.

ಜನವರಿಯಿಂದ ಏಪ್ರಿಲ್ ತನಕದ ನಾಲ್ಕು ತಿಂಗಳಲ್ಲಿ ಬಿಡಬ್ಲ್ಯುಎಸ್ ಎಸ್ ಬಿಯು ಒಟ್ಟಾರೆ 7,64,17,000 ಲೀ. ಸಂಸ್ಕರಿಸಿದ ನೀರನ್ನು ವಿವಿಧ ರೀತಿಯ ಗ್ರಾಹಕರಿಗೆ ಪೂರೈಕೆ ಮಾಡಿದೆ. 

ಜಲ ಸ್ನೇಹಿ ಆಪ್ ಅನ್ನು ಮಾ.14ರಿಂದ ಪ್ರಾರಂಭಿಸಲಾಗಿದ್ದು, ಜಲ ಸ್ನೇಹಿ ಆಪ್‌ನಲ್ಲಿ ಸಾರ್ವಜನಿಕರು ಕೆಲವು ಡೇಟಾವನ್ನು ಭರ್ತಿ ಮಾಡುವ ಮೂಲಕ ಸಂಸ್ಕರಿಸಿದ ನೀರನ್ನು ಬುಕ್ ಮಾಡಬಹುದು. ನಂತರ ಜಲಮಂಡಳಿಯ ಅಧಿಕಾರಿಗಳು ಸಂಸ್ಕರಿಸಿದ ನೀರನ್ನು ಪೂರೈಸುತ್ತಾರೆ. ಜಲಸ್ನೇಹಿ ಅಪ್ಲಿಕೇಶನ್ ಅನ್ನು ಪ್ರಾರಂಭಿಸಿದ ನಂತರ ಸಂಸ್ಕರಿಸಿದ ನೀರಿನ ಪೂರೈಕೆಯ ಹೆಚ್ಚಳವಾಗಿದೆ. ಕೆಳಗಿನ ಕೋಷ್ಟಕವು ಇದನ್ನು ಪುಷ್ಠೀಕರಿಸುತ್ತದೆ.

ಪ್ರಸ್ತುತ ಒಟ್ಟು 1348.5 ದಶಲಕ್ಷ ಲೀಟರ್ ಸಾಮರ್ಥ್ಯದ 34 ತ್ಯಾಜ್ಯ ನೀರು ಸಂಸ್ಕರಣಾ ಘಟಕಗಳನ್ನು ಸ್ಥಾಪಿಸಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣಾ ಮಂಡಳಿ ಹಾಗೂ ಹಸಿರು ನ್ಯಾಯಾಧೀಕರಣದ ಮಾನದಂಡಗಳ ಪ್ರಕಾರ ತ್ಯಾಜ್ಯ ನೀರನ್ನು ಸಂಸ್ಕರಿಸುತ್ತಿದೆ. ಬೆಂಗಳೂರು ಜಲಮಂಡಳಿಯು ತ್ಯಾಜ್ಯ ನೀರು ಸಂಸ್ಕರಣಾ ಘಟಕಗಳಿಂದ ಸಂಸ್ಕರಿಸಿದ ನೀರನ್ನು ಪ್ರಸ್ತುತ ರೈಲ್ವೇ ವೀಲ್ ಫ್ಯಾಕ್ಟರಿ, ರಾಜಭವನ, ವಿಧಾನ ಸೌಧ, ಹೈಕೋರ್ಟ್, ಗಾಲ್ಫ್ ಕೋರ್ಸ್, ಕಬ್ಬನ್ ಪಾರ್ಕ್, ನೆಹರು ಪ್ಲಾನಿಟೋರಿಯಂ, ಇಂದಿರಾಗಾಂಧಿ ಕಾರಂಜಿ ಪಾರ್ಕ್, ಲಾಲ್‌ಬಾಗ್ ಬೊಟಾನಿಕಲ್ ಗಾರ್ಡನ್, ಯಲಹಂಕದ ಅನಿಲ ಆಧಾರಿತ ವಿದ್ಯುತ್ ಉತ್ಪಾದನಾ ಘಟಕ ಮತ್ತಿತರ ದೊಡ್ಡ ದೊಡ್ಡ ಸಂಸ್ಥೆ, ಕಟ್ಟಡಗಳಿಗೆ ಸರಬರಾಜು ಮಾಡುತ್ತಿದೆ. ಅಲ್ಲದೆ ನಿರ್ಮಾಣದ ಕಾಮಗಾರಿಗಳಿಗೂ ಸಂಸ್ಕರಿತ ನೀರನ್ನು ಸರಬರಾಜು ಮಾಡುತ್ತಿದೆ.

ಕೋಲಾರ ಜಿಲ್ಲೆಯ ಕೆರೆಗಳನ್ನು ತುಂಬಿಸಲು ಸಣ್ಣ ನೀರಾವರಿ ಇಲಾಖೆಗೆ ಸೇರಿದ ಕೆರೆಗಳಿಗೆ ಒಟ್ಟಾರೆ 350 ದ.ಲ.ಲೀ ಸಂಸ್ಕರಿಸಿದ ನೀರನ್ನು ಸರಬರಾಜು ಮಾಡಲಾಗುತ್ತಿದೆ. ಕೆಸಿ ವ್ಯಾಲಿಯಲ್ಲಿ 308 ದ.ಲ.ಲೀ ತ್ಯಾಜ್ಯ ನೀರು ಶುದ್ದೀಕರಣ ಘಟಕದಿಂದ ಮತ್ತು ಬೆಳ್ಳಂದೂರಿನಲ್ಲಿ 90 ದ.ಲ.ಲೀ ತ್ಯಾಜ್ಯ ನೀರು ಶುದ್ದೀಕರಣ ಘಟಕದಿಂದ ಕೋಲಾರ ಜಿಲ್ಲೆಯ ಹಲವು ಕೆರೆಗಳಿಗೆ ಹರಿಸಲಾಗುತ್ತಿದೆ ಎಂದು ಜಲಮಂಡಳಿ ಅಧಿಕಾರಿಗಳು ತಿಳಿಸಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಕೆರೆಗಳಿಗೆ ನಗರದ ಸಂಸ್ಕರಿತ ನೀರು ಪೂರೈಕೆ :

ರಾಜಕಾಲುವೆಯಿಂದ ತ್ಯಾಜ್ಯ ನೀರು ಸಂಸ್ಕರಣಾ ಘಟಕದಿಂದ 80 ದ.ಲ.ಲೀ ತ್ಯಾಜ್ಯ ನೀರು ಶುದ್ದೀಕರಣ, ಹೊರಮಾವಿನಲ್ಲಿ 20 ದ.ಲ.ಲೀ ಶುದ್ಧೀಕರಿಸಿದ ಸಂಸ್ಕರಿತ ನೀರನ್ನು ಮತ್ತು ಹೆಬ್ಬಾಳದಲ್ಲಿ 100 ದ.ಲ.ಲೀ ತ್ಯಾಜ್ಯ ಸಂಸ್ಕರಿತ ನೀರನ್ನು ಶುದ್ದೀಕರಣ ಮಾಡಲಾಗುತ್ತಿದೆ. ಸುಮಾರು 150 ದ.ಲ.ಲೀ ನೀರನ್ನು ಚಿಕ್ಕಬಳ್ಳಾಪುರ ಜಿಲ್ಲೆಯ ಕೆರೆಗಳನ್ನು ತುಂಬಿಸಲು ಸಣ್ಣ ನೀರಾವರಿಗೆ ಸರಬರಾಜು ಮಾಡಲಾಗುತ್ತಿದೆ.

ನಗರದ 15 ಕೆರೆಗಳಿಗೆ ಸಂಸ್ಕರಿತ ನೀರು ಹರಿಸುವ ಕಾರ್ಯಕ್ಕೆ ಚಾಲನೆ :

ಕಳೆದ ವರ್ಷ ಮುಂಗಾರು ತಿಂಗಳಿನಲ್ಲಿ ಮಳೆಯ ಕೊರತೆಯಿಂದಾಗಿ, ಬೆಂಗಳೂರಿನಲ್ಲಿ ತೀವ್ರ ಕುಡಿಯುವ ನೀರಿನ ಸಮಸ್ಯೆ ಎದುರಿಸುವಂತಾಗಿತ್ತು. ಈ ಬರದ ಪರಿಸ್ಥಿತಿಯಲ್ಲಿ ಬೆಂಗಳೂರು ಜಲಮಂಡಳಿಯು ತ್ಯಾಜ್ಯ ನೀರು ಸಂಸ್ಕರಣಾ ಘಟಕಗಳಿಂದ ಸಂಸ್ಕರಿಸಿದ ನೀರಿನ ಮರುಬಳಕೆಯನ್ನು ಹೆಚ್ಚಿಸಲು, ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿ, ಶುದ್ದೀಕರಿಸಿದ ನೀರನ್ನು ತೋಟಗಾರಿಕೆ, ರಸ್ತೆ ನಿರ್ಮಲೀಕರಣ, ಶೌಚಾಲಯಗಳಲ್ಲಿ ಫ್ಲಷಿಂಗ್ ಹಾಗೂ ಮೊದಲ ಹಂತದಲ್ಲಿ ನಗರದ 15 ಕೆರೆಗಳಿಗೆ ಸಂಸ್ಕರಿತ ನೀರು ತುಂಬಿಸಿ ಅಂತರ್ಜಲ ಹೆಚ್ಚಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿದೆ.

ಸಂಸ್ಕರಿಸಿದ ನೀರನ್ನು ಕೆರೆಗೆ ಹರಿಸಿ, ಅಂತರ್ಜಲ ಹೆಚ್ಚಿಸುವ ಕಾರ್ಯ ಆರಂಭಾಗಿರುವ ಚಿತ್ರ.
(ಕೋಷ್ಠಕದಲ್ಲಿನ 13ನೇ ಕ್ರಮಸಂಖ್ಯೆ ವಿ ವ್ಯಾಲಿಯಿಂದ ನಾಯಂಡಹಳ್ಳಿ ಕೆರೆಗೆ ಸಂಸ್ಕರಿತ ನೀರು ಪೂರೈಕೆಯಾಗುತ್ತಿದೆ.)

ಬೆಂಗಳೂರು ಜಲಮಂಡಳಿಯು ಈ ಕೆಳಕಂಡ ಕೆರೆಗಳಿಗೆ ಸಂಸ್ಕರಿಸಿದ ತ್ಯಾಜ್ಯ ನೀರನ್ನು ತುಂಬಿಸಲಾಗುತ್ತಿದ್ದು ಇದರಿಂದ ಅಂತರ್ಜಲ ಮಟ್ಟವನ್ನು ಹೆಚ್ಚಿಸಬಹುದಾಗಿರುತ್ತದೆ. ಪ್ರಾಣಿ, ಪಕ್ಷಿಗಳಿಗೆ ತುಂಬಾ ಅನುಕೂಲವಾಗಿರುತ್ತದೆ ಹಾಗೂ ಪರಿಸರಕ್ಕೆ ಪೂರಕವಾಗಿರುತ್ತದೆ. ನಗರದಲ್ಲಿ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಸಂಸ್ಕರಿತ ನೀರಿನ ಬಳಕೆಯನ್ನು ಸಾರ್ವಜನಿಕರು, ಸಂಘ ಸಂಸ್ಥೆಗಳು ಬಳಸಿಕೊಳ್ಳಬೇಕಿದೆ. ಆಗ ಕುಡಿಯುವ ನೀರಿನ ಬಳಕೆ ಅನ್ಯ ಚಟುವಟಿಕೆಗಳಿಗೆ ಬಳಕೆಯಾಗುವುದು ತಪ್ಪುತ್ತದೆ.

ಜಲಮಂಡಳಿಯ ವತಿಯಿಂದ ನಗರದಲ್ಲಿ 34 ಕ್ಕೂ ಹೆಚ್ಚು ತ್ಯಾಜ್ಯ ನೀರು ಸಂಸ್ಕರಣಾ ಘಟಕಗಳನ್ನು ಪ್ರಾರಂಭಿಸಲಾಗಿದೆ. ಇವುಗಳ ಮೂಲಕ ಪ್ರತಿ ದಿನ 1200 ಎಂ.ಎಲ್‌.ಡಿ ಯಷ್ಟು ಉತ್ತಮ ಗುಣಮಟ್ಟದ ಸಂಸ್ಕರಿಸಿದ ನೀರು ಲಭ್ಯವಾಗುತ್ತಿದೆ. ಇದರ ಬಳಕೆಯನ್ನು ಹೆಚ್ಚಿಸುವ ಮೂಲಕ ಕಾವೇರಿ ನೀರಿನ ಮೇಲಿನ ಒತ್ತಡವನ್ನು ಕಡಿಮೆ ಮಾಡುವುದು ನಮ್ಮ ಗುರಿಯಾಗಿದೆ. 

ಸಂಸ್ಕರಿಸಿದ ನೀರಿಗೆ ಐ.ಟಿ ಕಂಪನಿಗಳಿಂದ ಹೆಚ್ಚಿನ ಬೇಡಿಕೆ :

ವಿಪ್ರೋ ಸಂಸ್ಥೆಗೆ ಪ್ರತಿದಿನ ಬಿಡಬ್ಲುಎಸ್ ಎಸ್ ಬಿ ಸಂಸ್ಕರಿತ ನೀರನ್ನು ಪೂರೈಸುವ ಟ್ಯಾಂಕರ್ ಚಿತ್ರ.

ಭಾರತದ ಪ್ರಮುಖ ವಿಜ್ಞಾನ ಸಂಶೋಧನಾ ಸಂಸ್ಥೆಯಾಗಿರುವಂತಹ ಐಐಎಸ್‌ಸಿ ವಿಜ್ಞಾನಿಗಳ ಸಹಯೋಗ ಮತ್ತು ಮಾರ್ಗದರ್ಶನದಲ್ಲಿ ಬೆಂಗಳೂರು ಜಲಮಂಡಳಿಯ ಇಂಜಿನಿಯರ್‌ಗಳು ತ್ಯಾಜ್ಯ ನೀರು ಸಂಸ್ಕರಣೆಯಲ್ಲಿ “ಝೀರೋ ಬ್ಯಾಕ್ಟೀರಿಯಲ್‌” ಎಂಬ ದೇಶೀಯ ತಂತ್ರಜ್ಞಾನವನ್ನು ರೂಪಿಸಿದ್ದಾರೆ. ಇತ್ತೀಚೆಗೆ ಪ್ರಾರಂಭಿಸಲಾದ ಈ ಯೋಜನೆಯ ಮೂಲಕ ಪ್ರತಿ ದಿನ ಸುಮಾರು 1 ಕೋಟಿ ಲೀಟರ್‌ ನಷ್ಟು ಝೀರೋ ಬ್ಯಾಕ್ಟೀರಿಯಲ್‌ ಸಂಸ್ಕರಿಸಿದ ನೀರು ಉತ್ಪಾದನೆಯ ಸಾಮರ್ಥ್ಯವನ್ನು ಜಲಮಂಡಳಿ ಅಳವಡಿಸಿಕೊಂಡಿದೆ. 

ಇದೀಗ ನಗರದ ಅಗರ, ಕೆ.ಸಿ ವ್ಯಾಲಿ ಮತ್ತು ಬೆಳ್ಳಂದೂರು ಎಸ್‌.ಟಿ.ಪಿ ಗಳಲ್ಲಿ ಈ ಹೊಸ ತಂತ್ರಜ್ಞಾನ ಅಳವಡಿಸಿಕೊಳ್ಳಲಾಗಿದ್ದು ಈ ನೀರಿಗೆ ಐಟಿ ಕಂಪನಿಗಳಿಂದ ಬೇಡಿಕೆ ಬಂದಿದೆ ಎಂದು ಅಧ್ಯಕ್ಷರಾದ ಡಾ ರಾಮ್‌ ಪ್ರಸಾತ್‌ ಮನೋಹರ್‌ ತಿಳಿಸಿದ್ದಾರೆ.

ವಿಪ್ರೋಗೆ ಟ್ಯಾಂಕರ್‌ ಗಳ ಮೂಲಕ ಪ್ರತಿ ದಿನ 3 ಲಕ್ಷ ಲೀ. ಸಂಸ್ಕರಿಸಿದ ನೀರು :

ವಿಪ್ರೋ ಕಂಪನಿ ಕೆಲವು ದಿನಗಳ ಹಿಂದೆ ಸಂಸ್ಕರಿಸಿದ ನೀರು ಸರಬರಾಜು ಮಾಡುವಂತೆ ಜಲಮಂಡಳಿಗೆ ಅರ್ಜಿ ಸಲ್ಲಿಸಿತ್ತು. ಐಐಎಸ್‌ಸಿ ವಿಜ್ಞಾನಿಗಳ ಸಹಯೋಗ ಮತ್ತು ಮಾರ್ಗದರ್ಶನದಲ್ಲಿ ಅಳವಡಿಸಿಕೊಳ್ಳಲಾಗಿರುವ ನೂತನ ತಂತ್ರಜ್ಞಾನದ ಮೂಲಕ ಶುದ್ದೀಕರಿಸಲಾಗುತ್ತಿರುವ “ಝೀರೋ ಬ್ಯಾಕ್ಟೀರಿಯಲ್‌” ಉತ್ತಮ ಗುಣಮಟ್ಟದ ಸಂಸ್ಕರಿಸಿ ಪ್ರತಿದಿನ 3 ಲಕ್ಷ ಲೀ. ಸಂಸ್ಕರಿಸಿ ನೀರಿನ ಸರಬರಾಜು ಆರಂಭಿಸಲಾಗಿದೆ. ಈಗಾಗಲೇ ಇನ್ನಿತರ ಕಂಪನಿಗಳಾದ ಹೆಚ್‌.ಎ.ಎಲ್‌, ಬ್ರೂಕ್‌ಫಿಲ್ಡ್‌ ಮತ್ತು ಅಡೋಬ್‌ ಸಿಸ್ಟಮ್ಸ್‌ ಕಂಪನಿಗಳ ಜೊತೆಗೆ 40 ಐಟಿ ಪಾರ್ಕ್ ಗಳು ಬೇಡಿಕೆಯಿಟ್ಟಿದ್ದು ಜಲಮಂಡಳಿ ಅಧಿಕಾರಿಗಳು ಮಾತುಕತೆ ನಡೆಸುತ್ತಿದ್ದಾರೆ ಎಂದು ಅಧ್ಯಕ್ಷರಾದ ಡಾ ರಾಮ್‌ ಪ್ರಸಾತ್‌ ಮನೋಹರ್‌ ವಿವರಿಸಿದ್ದಾರೆ.

ಪ್ರಮುಖ ಐ.ಟಿ ಕಂಪನಿಗಳು ಸ್ವಚ್ಚತೆ ಹಾಗೂ ಏರ್‌ ಕಂಡಿಷನಿಂಗ್‌ ಸೇರಿದಂತೆ ಹಲವಾರು ಕಾರ್ಯಗಳಿಗೆ ಸಂಸ್ಕರಿಸಿದ ನೀರು ಬಳಕೆಗೆ ಮುಂದಾಗಿರುವುದು ಬಹಳ ಸಂತಸದ ವಿಷಯ. ಸಂಸ್ಕರಿಸಿದ ನೀರಿನ ಬಳಕೆ ಹೆಚ್ಚು ಮಾಡುವುದರಿಂದ ಅಗತ್ಯವಿರುವ ಕಡೆಗಳಲ್ಲಿ ಕಾವೇರಿ ನೀರಿನ ಸರಬರಾಜು ಮಾಡುವುದು ಸಾಧ್ಯವಾಗಲಿದೆ. ಅಲ್ಲದೇ, ಅಂತರ್ಜಲದ ಮೇಲಿನ ಒತ್ತಡವೂ ಕಡಿಮೆ ಆಗಲಿದೆ. ಬೆಂಗಳೂರು ಜಲಮಂಡಳಿ ಐ.ಟಿ ಕಂಪನಿಗಳ ಜೊತೆಗಿದ್ದು, ಅವಶ್ಯಕತೆ ಇರುವಷ್ಟು ನೀರನ್ನ ಸರಬರಾಜು ಮಾಡಲು ಬಿಡಬ್ಲ್ಯುಎಸ್ ಎಸ್ ಬಿ ಸಿದ್ದವಿದೆ ಎಂದು ಡಾ. ರಾಮ್‌ ಪ್ರಸಾತ್‌ ಮನೋಹರ್‌ ಹೇಳಿದ್ದಾರೆ.

ಕಳೆದ 2 ತಿಂಗಳಲ್ಲಿ ಕೈಗೊಂಡ ಕಾರ್ಯಗಳಿಗೆ ಐಟಿ ಕಂಪನಿಗಳು ಹಾಗೂ ಬಲ್ಕ್‌ ಯೂಸರ್ಸ್‌ಗಳು ಸಾಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಸಂಸ್ಕರಿಸಿದ ನೀರಿನ ಬೇಡಿಕೆ 60 ಸಾವಿರ ಲೀಟರ್‌ಗಳಿಂದ 6 ಎಂ.ಎಲ್‌.ಡಿ ಗೆ ತಲುಪಿದೆ. ಇದನ್ನು ಇನ್ನಷ್ಟು ಹೆಚ್ಚು ಮಾಡುವ ಗುರಿಯನ್ನು ಜಲಮಂಡಳಿ ಇಟ್ಟುಕೊಂಡಿದೆ. ಭವಿಷ್ಯದ ಬೆಂಗಳೂರಿಗಾಗಿ ನೀರಿನ ಮಿತವ್ಯಯ ಹಾಗೂ ಯೋಗ್ಯ ರೀತಿಯ ಬಳಕೆ ಅತ್ಯವಶ್ಯಕವಾಗಿದೆ. ಇದಕ್ಕಾಗಿ ಸಂಸ್ಕರಿತ ನೀರಿನ ಬಳಕೆ ಹೆಚ್ಚಾದರೆ, ಅನವಶ್ಯಕವಾಗಿ ಕಾವೇರಿ ನೀರಿನ ಮೇಲಿನ ಒತ್ತಡ ಕಡಿಮೆಯಾಗಲಿದೆ.

WhatsApp Join our WhatsApp Channel
Previous Post

Space Science | ಬೆಂಗಳೂರಿಗರೇ ಆಕಾಶದಲ್ಲಿನ ವಿಸ್ಮಯ ನೋಡಬೇಕಾ? : ನೆಹರು ತಾರಾಲಯ ನಿಮಗಾಗಿ ಟೆಲಿಸ್ಕೋಪ್ ಲೈಬ್ರೆರಿ ವ್ಯವಸ್ಥೆ ಕಲ್ಪಿಸಿದೆ

Next Post

Chinnaswamy Stadium | ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಳಪೆ ಆಹಾರ ವಿತರಣೆ : ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯಿಂದ ನಿರಂತರವಾಗಿ ಪ್ರಯೋಗಾಲಯ ಪರೀಕ್ಷೆಗೆ ಸೂಚನೆ

Next Post

Chinnaswamy Stadium | ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಳಪೆ ಆಹಾರ ವಿತರಣೆ : ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯಿಂದ ನಿರಂತರವಾಗಿ ಪ್ರಯೋಗಾಲಯ ಪರೀಕ್ಷೆಗೆ ಸೂಚನೆ

ಬೆಂಗಳೂರಿನ ಪಕ್ಷಿನೋಟ (ಸಾಂದರ್ಭಿಕ ಚಿತ್ರ)

#BBMP Property Tax News | ಒಟಿಎಸ್ ಸೌಲಭ್ಯಕ್ಕೆ ಒಲವು ತೋರದ ಸ್ವತ್ತಿನ ಮಾಲೀಕರು : ಆಸ್ತಿ ತೆರಿಗೆ ಪಾವತಿಸದವರ ವಿರುದ್ಧ ಸದ್ಯದಲ್ಲೇ ಕಾನೂನು ಕ್ರಮ!!

Please login to join discussion

Like Us on Facebook

Follow Us on Twitter

Recent News

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group