Sunday, June 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Chief Minister City Rounds | ಮುಂಗಾರು ಮಳೆ ಮುನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಸಿಟಿ ರೌಂಡ್ಸ್ : ರಾಜಕಾಲುವೆ, ಪ್ರವಾಹ ಪೀಡಿತ ಸ್ಥಳಗಳಲ್ಲಿ ಪರಿಶೀಲನೆ

ಉಪಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಕೂಡ ಮುಖ್ಯಮಂತ್ರಿಗಳೊಂದಿಗೆ ಜೊತೆಗೂಡಿ ಎಸ್ ಡಬ್ಲ್ಯುಡಿ ಕಾಮಗಾರಿ ಪರಿಶೀಲಿಸಿದರು. | ನಗರದಾದ್ಯಂತ ಇರುವ ಒಣಮರ, ಅಪಾಯಕಾರಿ ಮರಗಳನ್ನು ತೆರವುಗೊಳಿಸಲು ಸಿಎಂ ಸೂಚಿಸಿದ್ದಾರೆ.

by Bengaluru Wire Desk
May 22, 2024
in Bengaluru Focus, News Wire, Public interest
Reading Time: 3 mins read
0

ಬೆಂಗಳೂರು, ಮೇ.22 www.bengaluruwire.com : ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜಧಾನಿಗೆ ಮುಂಗಾರು ಮಳೆ ಆಗಮಿಸುವ ಮುನ್ನ ಬುಧವಾರ ಉಪಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಸಿಟಿರೌಂಡ್ಸ್ ನಡೆಸಿದರು. ಈ ಸಂದರ್ಭದಲ್ಲಿ ಪ್ರಮುಖವಾಗಿ ರಾಜಕಾಲುವೆಯಿಂದ ಪ್ರವಾಹ ಸಂಭವಿಸುವ ಸ್ಥಳಗಳು, ಕಾಮಗಾರಿ ನಡೆಯುತ್ತಿರುವ ಸ್ಥಳಗಳನ್ನು ಪರಿಶೀಲಿಸಿ ಲೋಪವಿದ್ದ ಕಡೆ ಅಧಿಕಾರಿಗಳನ್ನು ತರಾಟಗೆ ತೆಗೆದುಕೊಂಡರು.

ಗೃಹ ಕಚೇರಿ ಕೃಷ್ಣಾದಿಂದ ಹೊರಟು ಮೊದಲಿಗೆ ಮೈಸೂರು ರಸ್ತೆಯ ಗಾಳಿಆಂಜನೇಯ ಸ್ವಾಮಿ ದೇವಸ್ಥಾನದ ಬಳಿಯ ರಾಜಕಾಲುವೆ, ಬಳಿಕ ನಾಯಂಡಹಳ್ಳಿ ರಾಜಕಾಲುವೆ, ಬಿಟಿಎಂ ಲೇಔಟ್‌ ನಲ್ಕಿ ನಮ್ಮ ಮೆಟ್ರೋ ನಿರ್ಮಿಸುತ್ತಿರುವ ಡಬಲ್‌ ಡೆಕ್ಕರ್‌ – 2 ಟಯರ್ ವ್ಯವಸ್ಥೆಯನ್ನು ಪರಿಶೀಲಿಸಿ ಕೆಲವೊಂದು ಸಲಹೆ ಸೂಚನೆ ಮತ್ತು ಅಧಿಕಾರಿಗಳಿಗೆ ನಿಗದಿತ ಗಡುವು ನೀಡಿದರು. ರಾಜಕಾಲುವೆಯಿಂದ ನೀರು ಹೊರಗೆ ಹರಿದು, ಮನೆಗಳಿಗೆ ನೀರು ನುಗ್ಗುವ ಸಮಸ್ಯೆ ಎದುರಿಸುತ್ತಿದ್ದ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಕೋಡಿಚಿಕ್ಕನಹಳ್ಳಿ ಸ್ಥಳಕ್ಕೂ ಸಿಎಂ ಭೇಟಿ ನೀಡಿದರು. ಅದೇ ವಿಧಾನಸಭಾ ಕ್ಷೇತ್ರದ ಹೊಸೂರು ಮುಖ್ಯರಸ್ತೆ ಸಿಲ್ಕ್ ಬೋರ್ಡ್ ನಲ್ಲಿನ ಮಟ್ರೋ ಕಾಮಗಾರಿಯಿಂದಾಗಿ ಮಳೆನೀರು ಚರಂಡಿ ವಿಸ್ತೀರ್ಣ ಕಡಿಮೆಯಾಗಿ, ಪ್ರವಾಹ ಪರಿಸ್ಥಿತಿ ಉಂಟಾಗುತ್ತಿರುವ ಸ್ಥಳಕ್ಕೂ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳೊಂದಿಗೆ ಭೇಟಿ ನೀಡಿ‌ಪರಿಶೀಲಿಸಿದರು. 

ಅದೇ ರೀತಿ ಶಾಂತಿನಗರದಲ್ಲಿ ಕಳೆದ ಆರು ವರ್ಷಗಳಿಂದ ನೆನೆಗುದಿಗೆ ಬಿದ್ದು ಸಾರ್ವಜನಿಕರಿಗೆ ವಿಪರೀತ ಕಿರಿಕಿರಿ ಆಗುತ್ತಿರುವ  2.95 ಕಿ.ಮೀ. ಉದ್ದದ ಈಜಿಪುರ ಫ್ಲೈ ಓವರ್‌ ಕಾಮಗಾರಿ ನಿಧಾನಗತಿ ಆಗುಥತಿರುವ ಬಗ್ಗೆ ಗುತ್ತಿಗೆದಾರರನ್ನು ಸಿಎಂ ತರಾಟೆಗೆ ತೆಗೆದುಕೊಂಡು ಬೇಗ ಕಾಮಗಾರಿ ಮುಗಿಸಲು ಎಚ್ಚರಿಕೆ ನೀಡಿದರು.

1 ನೇ ಸ್ಥಳ : ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನ

ವಾರ್ಡ್ : ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನ ವಾರ್ಡ್

ವಿಧಾನಸಭಾ ಕ್ಷೇತ್ರ : ವಿಜಯನಗರ

ಸಮಸ್ಯೆ ಏನು? : 

ಗಾಳಿ ಆಂಜನೇಯ ದೇವಸ್ಥಾನ ಸಮೀಪದ ರಾಜಕಾಲುವೆಯಲ್ಲಿ ಮಳೆಗಾಲದಲ್ಲಿ ಪ್ರವಾಹ ಉಂಟಾಗುತ್ತಿದೆ.

ಮುಖ್ಯಮಂತ್ರಿಗಳ ಸೂಚನೆ ಏನು? :

ಇದಕ್ಕೆ ಸಮಾನಾಂತರವಾಗಿ ಇನ್ನೊಂದು ಕಾಲುವೆ ನಿರ್ಮಿಸುವುದರಿಂದ ಪ್ರವಾಹ ತಗ್ಗಿಸಬಹುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ಅವರು ಮುಖ್ಯಮಂತ್ರಿಗಳಿಗೆ ವಿವರಿಸಿದರು. ಪ್ರವಾಹ ನಿಯಂತ್ರಣ ಕಾಮಗಾರಿಗೆ 11.5 ಕೋಟಿ ರೂ. ಅಂದಾಜು ವೆಚ್ಚದ ಯೋಜನೆ ರೂಪಿಸಲಾಗಿದ್ದು, ಈ ಕಾಮಗಾರಿಯನ್ನು ಕೂಡಲೇ ಕೈಗೆತ್ತಿಕೊಳ್ಳುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.

ಈ ರಾಜಕಾಲುವೆಗೆ ಸಾರ್ವಜನಿಕರು ಕಸ ಎಸೆಯುವುದನ್ನು ತಡೆಗಟ್ಟಲು ಕ್ರಮ ವಹಿಸುವಂತೆ ಸೂಚಿಸಿದರು.

ನೀಡಿದ ಎಚ್ಚರಿಕೆ ಏನು? : ಈ ವರ್ಷ ಸಮಸ್ಯೆಗೆ ಶಾಶ್ವತ ಪರಿಹಾರ ಆಗಬೇಕು. ಇಲ್ಲದೊದ್ದರೆ ಸಸ್ಪೆಂಡ್ ಆಗ್ತೀರ ಎಂದು ಚೀಫ್ ಎಂಜಿನಿಯರ್ ಗೆ ಸಿಎಂ ಎಚ್ಚರಿಸಿದರು.

ಸಮಸ್ಯೆ ಪರಿಹಾರಕ್ಕೆ ಕಾಲ ಮಿತಿ : ಮಳೆಗಾಲದೊಳಗೆ ಪೂರ್ಣಗೊಳಿಸಲು ಸೂಚಿಸಿದರು.

2ನೇ ಸ್ಥಳ : ನಾಯಂಡಹಳ್ಳಿ

ವಿಧಾನಸಭಾ ಕ್ಷೇತ್ರ : ವಿಜಯನಗರ

ಯಾವ ವಾರ್ಡ್ : ನಾಯಂಡಹಳ್ಳಿ ವಾರ್ಡ್

ಸಮಸ್ಯೆ ಏನು?: ರಾಜಕಾಲುವೆಯಲ್ಲಿ ಮಳೆಗಾಲ ಪ್ರವಾಹ ಉಂಟಾಗುತ್ತಿದೆ. ಫ್ಲೈಓವರ್‌ ನಿರ್ಮಿಸಿದ್ದರಿಂದ ರಾಜಕಾಲುವೆಯ ವಿಸ್ತಾರ ಕಡಿಮೆ ಆಗಿದೆ.

ಮುಖ್ಯಮಂತ್ರಿಗಳ ಸೂಚನೆ ಏನು?: 

ನೀರು ಸರಾಗವಾಗಿ ಹರಿದುಹೋಗಲು ಹೆಚ್ಚುವರಿ ಕಾಲುವೆ ಅಗತ್ಯವಿದೆ. ಏಳುಕೋಟಿ ವೆಚ್ಚದ ಕಾಮಗಾರಿ ಅನುಮೋದನೆಯಾಗಿದ್ದು, ಹಣಕಾಸು ಇಲಾಖೆ ಹಾಗೂ ಕಂದಾಯ ಇಲಾಖೆ ಅನುಮೋದನೆ ಅಗತ್ಯವಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ಅವರು ವಿವರಿಸಿದರು. ಅದರಂತೆ ಹಣಕಾಸು ಇಲಾಖೆ ಹಾಗೂ ಕಂದಾಯ ಇಲಾಖೆ ಅನುಮೋದನೆ ನೀಡಿ, ಕೂಡಲೇ ಬಿಬಿಎಂಪಿಯು ಕಾಮಗಾರಿ ಕೈಗೆತ್ತಿಕೊಳ್ಳಲು ಅನುವು ಮಾಡುವಂತೆ ಎರಡೂ ಇಲಾಖೆಗಳಿಗೆ ಸೂಚನೆ ನೀಡಿದರು.

ಕಾಲಮಿತಿ: 2024ರ ವರ್ಷದೊಳಗೆ

3ನೇ ಸ್ಥಳ :  ಬಿಟಿಎಂ ಮೆಟ್ರೋ ಸ್ಟೇಷನ್

ವಾರ್ಡ್ : ಬಿಟಿಎಂ ಲೇಔಟ್‌

ವಿಧಾನಸಭೆ ಕ್ಷೇತ್ರ: ಬಿಟಿಎಂ ಲೇಔಟ್‌ 

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರು ನಗರ ಸಂಚಾರ, ಸ್ಥಳ ಪರಿಶೀಲನೆ ವೇಳೆಗೆ ಬಿಟಿಎಂ ಮೆಟ್ರೋಸ್ಟೇಷನ್‌ಗೆ ಭೇಟಿ ನೀಡಿ ಮೇಲುಸೇತುವೆ ರಸ್ತೆ ಹಾಗೂ ಮೆಟ್ರೋ ಮಾರ್ಗಗಳೆರಡೂ ಒಂದರ ಮೇಲೊಂದು ಇರುವ ಡಬಲ್‌ ಡೆಕ್ಕರ್‌ – 2 ಟಯರ್ ವ್ಯವಸ್ಥೆಯನ್ನು ಮುಖ್ಯಮಂತ್ರಿಗಳು ಪರಿಶೀಲಿಸಿದರು. ಮೂರು ಕಿ.ಮೀ. ಉದ್ದದ  ಮೇಲ್ಸೇತುವೆ- ರಸ್ತೆಯ ನಿರ್ಮಾಣ ಕಾರ್ಯವನ್ನು ಪರಿಶೀಲಿಸಿದ ಮುಖ್ಯಮಂತ್ರಿಗಳು, ಸಂಚಾರ ದಟ್ಟಣೆ ನಿವಾರಣೆಗೆ ಈ ಡಬ್ಬಲ್ ಡೆಕರ್ ಮಾದರಿಯನ್ನು ನಗರದ ಇತರ ಭಾಗಗಳಲ್ಲಿಯೂ ಅಳವಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. 

ಸಿಲ್ಕ್‌ ಬೋರ್ಡ್‌ ಜಂಕ್ಷನ್‌ ಸಂಚಾರ ದಟ್ಟಣೆಗೆ ಪರಿಹಾರ ರೂಪವಾಗಿ  ಈ ವ್ಯವಸ್ಥೆಯನ್ನು ಅಳವಡಿಸಲಾಗುತ್ತಿದೆ. ಇದಲ್ಲದೆ, ಸುಗಮ ಸಂಚಾರಕ್ಕಾಗಿ, ಬಿಟಿಎಂ ನಿಂದ ಬನಶಂಕರಿ ಕಡೆಗೆ ಹೋಗುವಾಗ, ರಾಘವೇಂದ್ರಸ್ವಾಮಿ ದೇವಸ್ಥಾನ ವೃತ್ತ, ಜಯನಗರ 5ನೇ ಬ್ಲಾಕ್‌ನಲ್ಲಿ ಅಂಡರ್‌ ಪಾಸ್‌ ನಿರ್ಮಾಣಕ್ಕೆ ಬೇಡಿಕೆ ಇದ್ದು, ಇಲ್ಲಿ ಅಂಡರ್‌ ಪಾಸ್‌ ನಿರ್ಮಿಸಲು ಸೂಚಿಸಿದರು.

* 4ನೇ ಸ್ಥಳ : ಕೋಡಿ ಚಿಕ್ಕನಹಳ್ಳಿ

ವಾರ್ಡ್‌ : ನಂ. 188

ವಿಧಾನಸಭಾ ಕ್ಷೇತ್ರ : ಬೊಮ್ಮನಹಳ್ಳಿ 

ಸಮಸ್ಯೆ : ರಾಜಕಾಲುವೆಯಿಂದ ನೀರು ಹೊರಗೆ ಹರಿದು, ಮನೆಗಳಿಗೆ ನೀರು ನುಗ್ಗುವ ಸಮಸ್ಯೆ

ಮುಖ್ಯಮಂತ್ರಿಯವರು ನೀಡಿದ ಸೂಚನೆಗಳು : 

ಇಲ್ಲಿನ ಪ್ರವಾಹ ನಿಯಂತ್ರಣಕ್ಕೆ ಜಾಕ್‌ವೆಲ್‌ ಮೂಲಕ ರಾಜಕಾಲುವೆಯಿಂದ ಹೊರ ಬರುವ ನೀರನ್ನು ಪಂಪ್‌ ಮಾಡಿ ಮಡಿವಾಳ ಕೆರೆಗೆ ಹರಿಸಲು ಸೂಚನೆ ನೀಡಿದರು. 4.3  ಕೋಟಿ ರೂ. ವೆಚ್ಚದ ಈ ಕಾಮಗಾರಿಯನ್ನು ಬೇಗನೆ ಪ್ರಾರಂಭಿಸಲು ಸೂಚಿಸಿದರು.

 * 5ನೇ ಸ್ಥಳ : ಸಿಲ್ಕ್‌ ಬೋರ್ಡ್‌,ಹೊಸೂರು ಮುಖ್ಯರಸ್ತೆ

ವಿಧಾನಸಭಾ ಕ್ಷೇತ್ರ :‌ ಬೊಮ್ಮನಹಳ್ಳಿ

ಸಮಸ್ಯೆ : ಮಟ್ರೋ ಕಾಮಗಾರಿಯಿಂದಾಗಿ ಮಳೆನೀರು ಚರಂಡಿ ವಿಸ್ತೀರ್ಣ ಕಡಿಮೆಯಾಗಿ, ಪ್ರವಾಹ ಪರಿಸ್ಥಿತಿ ಉಂಟಾಗುತ್ತಿದೆ. 

ಮುಖ್ಯಮಂತ್ರಿಯವರು ನೀಡಿದ ಸೂಚನೆಗಳು : 

ಪರಿಹಾರಕ್ಕೆ ಪರ್ಯಾಯ ವ್ಯವಸ್ಥೆ ಮಾಡಲು 4.5 ಕೋಟಿ ಕಾಮಗಾರಿ ಅಗತ್ಯವಿದೆ ಹಾಗೂ  ಸರ್ಕಾರದ ಉನ್ನತಾಧಿಕಾರ ಸಮಿತಿಯ ಅನುಮತಿ ಅಗತ್ಯವಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ವಿವರಿಸಿದರು. ಪರ್ಯಾಯ ವ್ಯವಸ್ಥೆಯ ಕಾಮಗಾರಿ ಕೈಗೊಳ್ಳಲು ಸಮ್ಮತಿಸಿದ ಮುಖ್ಯಮಂತ್ರಿಗಳು ಮುಂದಿನ ಉನ್ನತಾಧಿಕಾರ ಸಮಿತಿ ಸಭೆಯ ಮುಂದೆ ಮಂಡಿಸಲು ಸೂಚಿಸಿದರು. ಜೊತೆಗೆ ಈ ಯೋಜನೆಯನ್ನು ಮುಂದಿನ 10-15 ವರ್ಷಗಳ ಪರಿಣಾಮವನ್ನು ಗಮನದಲ್ಲಿರಿಸಿಕೊಂಡು ಕ್ರಿಯಾ ಯೋಜನೆ ರೂಪಿಸಲು ಸೂಚಿಸಿದರು. ಹೆಚ್ಚುವರಿ ಅನುದಾನ ನೀಡುವ ಬಗ್ಗೆ ಪರಿಶೀಲಿಸಲಾಗುವುದು ಎಂದು ತಿಳಿಸಿದರು.

* 6 ನೇ ಸ್ಥಳ‌ : ಈಜಿಪುರ

ವಿಧಾನಸಭಾ ಕ್ಷೇತ್ರ : ಶಾಂತಿನಗರ

ಸಮಸ್ಯೆ : ಕಳೆದ ಆರು ವರ್ಷಗಳಿಂದ ನೆನೆಗುದಿಗೆ ಬಿದ್ದು ಸಾರ್ವಜನಿಕರಿಗೆ ವಿಪರೀತ ಕಿರಿಕಿರಿ ಆಗುತ್ತಿದೆ. 2.95 ಕಿ.ಮೀ. ಉದ್ದದ ಈಜಿಪುರ ಫ್ಲೈ ಓವರ್‌ ಕಾಮಗಾರಿ.

ಮುಖ್ಯಮಂತ್ರಿಯವರು ನೀಡಿದ ಸೂಚನೆಗಳು: 

ಈ ಕಾಮಗಾರಿಯನ್ನು ಪೂರ್ಣಗೊಳಿಸಲು ಪ್ರಸಕ್ತ ಸರ್ಕಾರ ಅಧಿಕಾರಕ್ಕೆ ಬಂದನಂತರ 2023ರ ನ.20‌ ರಂದು ಬಿಎಸ್ ಸಿಪಿಎಲ್ (BSCPL) ಎಂಬ ಕಂಪೆನಿಗೆ ಕಾರ್ಯಾದೇಶ ನೀಡಲಾಗಿತ್ತು. ಟೆಂಡರ್‌ ಷರತ್ತಿನ ಪ್ರಕಾರ 15 ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳಿಸಬೇಕಾಗಿತ್ತು. ಆದರೆ ಕಳೆದ ಆರು ತಿಂಗಳಲ್ಲಿ ಕೇವಲ ಶೇ. 4 ರಿಂದ 6 ರಷ್ಟು ಪ್ರಗತಿಯಾಗಿದೆ. ಈ ಮಾಹಿತಿ ತಿಳಿದ ಮುಖ್ಯಮಂತ್ರಿಗಳು ಸ್ಥಳದಲ್ಲಿದ್ದ ಗುತ್ತಿಗೆದಾರರನ್ನು ತರಾಟೆಗೆ ತೆಗೆದುಕೊಂಡರು. ಗುತ್ತಿಗೆದಾರರಿಗೆ ನಿಯಮಾನುಸಾರ ನೋಟಿಸ್‌ ನೀಡಿ, ಸ್ಪಂದಿಸದಿದ್ದರೆ ಕಾನೂನು ಪ್ರಕಾರ ಟೆಂಡರ್‌ ರದ್ದುಪಡಿಸಿ, ಬೇರೆಯವರಿಗೆ ಗುತ್ತಿಗೆ ನೀಡುವಂತೆ ಸೂಚಿಸಿದರು.

ಅಗತ್ಯ ಹಣ ಕೊಟ್ಟಿದ್ದರೂ ಆರು ತಿಂಗಳಲ್ಲಿ ಕೇವಲ ಶೇ.4 ಕಾಮಗಾರಿ ಮಾಡಿದ್ದೀಯಲ್ಲಾ, ಸಾರ್ವಜನಿಕರಿಗೆ ಆಗುವ ತೊಂದರೆ ಬಗ್ಗೆ ಪ್ರಜ್ಞೆ ಬೇಡ್ವಾ, ನಿನ್ನ ಕೈಲಿ ಆಗದಿದ್ದರೆ ಜಾಗ  ಖಾಲಿ ಮಾಡಿ ಎಂದು ಕಂಪನಿ ಪ್ರತಿನಿಧಿಗಳಿಗೆ ಸಿಎಂ ಸ್ಪಷ್ಟ ಎಚ್ಚರಿಕೆ ನೀಡಿದರು.

ಒಣಗಿದ ಮರ ಯಾಕೆ ಬಿಟ್ಕೊಂಡಿದ್ದೀರಿ? ಅನಾಹುತ ಆಗ್ಲಿ ಅಂತನಾ : ಸಿಎಂ ತರಾಟೆ

ಸಿಟಿ ರೌಂಡ್ಸ್ ವೇಳೆ ಸಿಎಂ‌ ಕಣ್ಣಿಗೆ ರಸ್ತೆ ಬದಿ ಇದ್ದ ಒಣ ಮರಗಳು ಕಣ್ಣಿಗೆ ಬಿದ್ದವು. ಈ ವೇಳೆ ಗರಂ ಆದ ಸಿಎಂ, ಒಣಗಿದ ಮರ ಯಾಕೆ ಬಿಟ್ಕೊಂಡಿದ್ದೀರಿ. ಅನಾಹುತ ಆಗ್ಲಿ ಅಂತನಾ ಎಂದು ಅಧಿಕಾರಿಗಳನ್ನು ಪ್ರಶ್ನಿಸಿದರು. ಬನಶಂಕರಿ 2ನೇ ಹಂತ 100 ಅಡಿ ರಸ್ತೆಯ ಒಣಗಿದ ಮರಗಳನ್ನು ತೆರವುಗೊಳಿಸಬೇಕು. ನಗರದಾದ್ಯಂತ ಇರುವ ಒಣಮರ, ಅಪಾಯಕಾರಿ ಮರಗಳನ್ನು ತೆರವುಗೊಳಿಸಬೇಕು. ನಗರ ಸೌಂದರ್ಯಕ್ಕೆ ಹೆಚ್ಚು ಒತ್ತು ಕೊಡಬೇಕು. ಪದ್ಮನಾಭನಗರ ಫ್ಲೈಓವರ್ ಬಳಿ ಹಾನಿಯಾಗಿರುವ ಫುಟ್ ಪಾತ್ ಶೀರ್ಘವಾಗಿ ದುರಸ್ತಿಗೊಳಿಸಲು ಹಾಗೂ ಮೆಟ್ರೋ ಮತ್ತು ಫ್ಲೈ ಓವರ್ ಕಾಮಗಾರಿಯಿಂದಾಗಿ ಅಲ್ಲಲ್ಲಿ ಹಾಕಲಾಗಿದ್ದ ಡೆಬ್ರಿಸ್ ಗಳನ್ನು ಆಗಿಂದಾಗಲೇ ತೆರವುಗೊಳಿಸಲು ಸಿಎಂ ಸೂಚನೆ ನೀಡಿದರು.

ಸಿಟಿ ರೌಂಡ್ಸ್ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಿಲ್ಕ್ ಬೋರ್ಡ್ ಮೆಟ್ರೋ ಸ್ಟೇಷನ್ ಕಾಮಗಾರಿ ಮತ್ತು ಬಿಎಂಆರ್ ಸಿಎಲ್ (BMRCL) ನಿರ್ಮಿಸುತ್ತಿರುವ ಬೃಹತ್ ನೀರುಗಾಲುವೆ (SWD) ವಿಭಾಗದಿಂದ ಕೈಗೊಂಡಿರುವ ಕಾಮಗಾರಿಯ ಪ್ರಗತಿಯನ್ನು  ವೀಕ್ಷಿಸಿದರು.

ಮುಖ್ಯಂಮತ್ರಿಗಳ ನಗರ ಪ್ರದಕ್ಷಿಣೆ ಸಂದರ್ಭದಲ್ಲಿ ಸಚಿವರಾದ ಭೈರತಿ ಸುರೇಶ್, ರಾಮಲಿಂಗಾರೆಡ್ಡಿ, ಶಾಸಕರಾದ ಸತೀಶ್ ರೆಡ್ಡಿ, ಸಿಎಂ ರಾಜಕೀಯ ಸಲಹೆಗಾರ ಗೋವಿಂದರಾಜ್, ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್, ಬಿಎಂಆರ್ ಸಿಎಲ್ ವ್ಯವಸ್ಥಾಪಕ ನಿರ್ದೇಶಕರಾದ ಮಹೇಶ್ವರ ರಾವ್ ಸೇರಿದಂತೆ ಹಲವು ಅಧಿಕಾರಿಗಳು ಪಾಲ್ಗೊಂಡಿದ್ದರು.

WhatsApp Join our WhatsApp Channel
Previous Post

Positive News | ಬಡ ಮಹಿಳೆಯ ಬಾಳಿಗೆ ಬೆಳಕಾಯಿತು ಗೃಹಲಕ್ಷ್ಮಿ ಯೋಜನೆಯ ಹಣ!!

Next Post

BW SPECIAL | ಕಾಲೇಜು ಶಿಕ್ಷಣ ಇಲಾಖೆಯಲ್ಲಿ ಅವ್ಯವಸ್ಥೆ : 15 ವರ್ಷ ಸೇವೆ ಸಲ್ಲಿಸಿದರೂ ವೃಂದ ಬದಲಾವಣೆ, ಬಡ್ತಿಯಿಲ್ಲದೆ ಸೊರಗಿದ 120 ಟೈಪಿಸ್ಟ್ ಗಳು

Next Post
ಕರ್ನಾಟಕ ರಾಜ್ಯ ಕಾಲೇಜು ಶಿಕ್ಷಣ ಇಲಾಖೆ ಕೇಂದ್ರ ಕಚೇರಿಯ ಚಿತ್ರ.

BW SPECIAL | ಕಾಲೇಜು ಶಿಕ್ಷಣ ಇಲಾಖೆಯಲ್ಲಿ ಅವ್ಯವಸ್ಥೆ : 15 ವರ್ಷ ಸೇವೆ ಸಲ್ಲಿಸಿದರೂ ವೃಂದ ಬದಲಾವಣೆ, ಬಡ್ತಿಯಿಲ್ಲದೆ ಸೊರಗಿದ 120 ಟೈಪಿಸ್ಟ್ ಗಳು

Local Body Election | ಬಿಬಿಎಂಎಪಿ, ಜಿಲ್ಲಾ ಮತ್ತು ತಾಲ್ಲೂಕು ಪಂಚಾಯತಿ ಚುನಾವಣೆಗೆ ನಾವು ಸಿದ್ಧ : ಮುಖ್ಯಮಂತ್ರಿ ಸಿದ್ದರಾಮಯ್ಯ

Please login to join discussion

Like Us on Facebook

Follow Us on Twitter

Recent News

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group