Sunday, June 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

BW SPECIAL | KTTP Act Violations | ಬಿಬಿಎಂಪಿ ಶಾಲಾ- ಕಾಲೇಜಿನ ವಾರ್ಷಿಕೋತ್ಸವ, ಪ್ರವಾಸದಲ್ಲೂ ಹಣ ದುರ್ಬಳಕೆ? : ಕೆಟಿಟಿಪಿ ಕಾಯ್ದೆ ಉಲ್ಲಂಘಿಸಿದ 33 ಶಿಕ್ಷಕರಿಗೆ ಶೋಕಾಸ್ ನೋಟಿಸ್!!

ಮೇ.24ರಂದೇ ಈ ಶೋಕಾಸ್ ನೀಡಿ, ಆ ಪತ್ರ ತಲುಪಿದ ಮೂರು ದಿನಗಳ ಒಳಗಾಗಿ ಉತ್ತರ ನೀಡುವಂತೆ ತಿಳಿಸಿದ್ದರೂ, ಮೇ.30ರ ತಾರೀಖಿನವರೆಗೂ ಒಬ್ಬೇ ಒಬ್ಬ ಶಿಕ್ಷಕರು ಸೂಕ್ತ ಸಮಜಾಯುಷಿಯನ್ನು ನೀಡದಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.

by Bengaluru Wire Desk
May 31, 2024
in Bengaluru Focus, BW Special, Public interest
Reading Time: 1 min read
1
ಬಿಬಿಎಂಪಿಯ ಶಿಕ್ಷಣ ಇಲಾಖೆಯಲ್ಲಿ ಅನುದಾನದ ಹಣ ಬಳಕೆಯಲ್ಲಿ ಕೆಟಿಟಿಪಿ ಕಾಯ್ದೆ ಉಲ್ಲಂಘನೆ ಸಂಬಂಧ ಶಿಕ್ಷಕರಿಗೆ ಕಾರಣ ಕೇಳಿ ನೋಟಿಸ್ ಜಾರಿ ಮಾಡಲಾಗಿದೆ.

ಬಿಬಿಎಂಪಿಯ ಶಿಕ್ಷಣ ಇಲಾಖೆಯಲ್ಲಿ ಅನುದಾನದ ಹಣ ಬಳಕೆಯಲ್ಲಿ ಕೆಟಿಟಿಪಿ ಕಾಯ್ದೆ ಉಲ್ಲಂಘನೆ ಸಂಬಂಧ ಶಿಕ್ಷಕರಿಗೆ ಕಾರಣ ಕೇಳಿ ನೋಟಿಸ್ ಜಾರಿ ಮಾಡಲಾಗಿದೆ.

ಬೆಂಗಳೂರು, ಮೇ.31 www.bengaluruwire.com : ಬಿಬಿಎಂಪಿಯ ವಲಯ ಮಟ್ಟದಲ್ಲಿ ಶಾಲಾ ಮತ್ತು ಕಾಲೇಜುಗಳಿಗೆ ಭದ್ರತಾ ಏಜನ್ಸಿ ಮೂಲಕ ಶಿಕ್ಷಕರ ನಿಯೋಜನೆ ಮಾಡಲು ಹೊರಟು ಸಾರ್ವಜನಿಕ ವಲಯದಿಂದ ತೀವ್ರ ವಿರೋಧ ವ್ಯಕ್ತವಾದ ನಂತರ ಹಿಂದೆ ಸರಿದು ಮುಜುಗರಕ್ಕೆ ಒಳಗಾಗಿದ್ದ ಶಿಕ್ಷಣ ಇಲಾಖೆಯಲ್ಲಿ ಇದೀಗ ಮತ್ತೊಂದು ಯಡವಟ್ಟು ಮಾಡಿಕೊಂಡಿರುವುದು ಬಹಿರಂಗವಾಗಿದೆ. ಪಾಲಿಕೆಯ ಶಾಲಾ ಕಾಲೇಜುಗಳಲ್ಲಿನ 33 ಮಂದಿ ಶಿಕ್ಷಕರು ಕಾನೂನು ಉಲ್ಲಂಘಿಸಿ 23 ರಿಂದ 25 ಲಕ್ಷ ರೂ. ಹಣ ದುರ್ಬಳಕೆ ಮಾಡಿರುವುದು ಮೇಲ್ನೋಟಕ್ಕೆ ಕಂಡುಬಂದಿರುವ ಸಂಬಂಧ ಶೋಕಾಸ್ ನೋಟಿಸ್ ನೀಡಲಾಗಿದೆ.

ಶೋಕಾಸ್ ನೋಟಿಸ್ ಪ್ರತಿ.

ಬಿಬಿಎಂಪಿ ಶಾಲಾ ಮತ್ತು ಕಾಲೇಜಿನ 33 ಜನ ಪ್ರಾಂಶುಪಾಲರು ಹಾಗೂ ಶಿಕ್ಷಕರು ಕಾನೂನು ಉಲ್ಲಂಘಿಸಿ ತಾವೇ ಸ್ವತಃ ಹಾಗೂ ಸಹೋದ್ಯೋಗಿಗಳಿಂದ ಹಣವನ್ನು ವಿತ್ ಡ್ರಾ ಮಾಡಿರುವ ಪ್ರಕರಣದಲ್ಲಿ ವಿಶೇಷ ಆಯುಕ್ತೆ ಪ್ರೀತಿ ಗೆಹ್ಲೋಟ್ ಮೇ.24ರಂದು ಸೂಕ್ತ ಸಮಜಾಯುಷಿಯನ್ನು ಲಿಖಿತ ರೂಪದಲ್ಲಿ ನೀಡುವಂತೆ ಕಾರಣ ಕೇಳಿ ನೋಟಿಸ್ ನೀಡಿದ್ದಾರೆ. ಈ 33 ಶಿಕ್ಷಕರು ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ಅಧಿನಿಯಮ (KTTP Act) ಉಲ್ಲಂಘಿಸಿ ತಮಗೆ ಬೇಕಾದಂತೆ ಹಣ ಬಳಕೆ ಮಾಡಿಕೊಂಡಿದ್ದಾರೆಂದು ಈ ನೋಟಿಸ್ ನೀಡಲಾಗಿದೆ. ಮೇ.24ರಂದೇ ಈ ಶೋಕಾಸ್ ನೀಡಿ, ಆ ಪತ್ರ ತಲುಪಿದ ಮೂರು ದಿನಗಳ ಒಳಗಾಗಿ ಉತ್ತರ ನೀಡುವಂತೆ ತಿಳಿಸಿದ್ದರೂ, ಮೇ.30ರ ತಾರೀಖಿನವರೆಗೂ ಒಬ್ಬೇ ಒಬ್ಬ ಶಿಕ್ಷಕರು ಸೂಕ್ತ ಸಮಜಾಯುಷಿಯನ್ನು ನೀಡದಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.

2023-24ನೇ ಸಾಲಿನಲ್ಲಿ ಪಾಲಿಕೆಯ ಶಾಲಾ- ಕಾಲೇಜುಗಳಿಗೆ ಶಿಕ್ಷಣ ಲೇಖನ ಸಾಮಗ್ರಿ, ಶಾಲಾ- ಕಾಲೇಜು ವಾರ್ಷಿಕೋತ್ಸವ, ಕಟ್ಟಡದ ಸಣ್ಣಪುಟ್ಟ ರಿಪೇರಿ, ಪರೀಕ್ಷಾ ವೆಚ್ಚ ಹಾಗೂ ಶೈಕ್ಷಣಿಕ ಪ್ರವಾಸಕ್ಕಾಗಿ ಪಾಲಿಕೆ ಕೇಂದ್ರ ಕಚೇರಿಯಿಂದ ಸುಮಾರು 35 ಲಕ್ಷ ರೂ.ಗಳ ಅನುದಾನದ ಹಣವನ್ನು ಬಿಡುಗಡೆ ಮಾಡಲಾಗಿತ್ತು. ಕೆಟಿಟಿಪಿ ಕಾಯ್ದೆಯ ಪ್ರಕಾರ ಸಾಮಾನ್ಯವಾಗಿ ಸರಕು, ಸೇವೆ ನೀಡಿದವರಿಗೆ ಆರ್ ಟಿಜಿಎಸ್ ಮೂಲಕ ಹಣ ಪಾವತಿ ಮಾಡಬೇಕಿರುತ್ತದೆ. ಆದರೆ ಇಲ್ಲಿ ಶಾಲಾ- ಕಾಲೇಜುಗಳ ಪ್ರಿನ್ಸಿಪಾಲರು, ಶಾಲೆ- ಕಾಲೇಜು ಅನುದಾನದ ಹಣದ ವಹಿವಾಟು ನಡೆಸಲು ಅಧಿಕಾರ ಹೊಂದಿದ ಶಿಕ್ಷಕರು ಸ್ವಯಂ ರೀತಿಯಲ್ಲಿ ಹಣ ವಿತ್ ಡ್ರಾ ಮಾಡಿರುವುದು, ತಮ್ಮ ಸಹದ್ಯೋಗಿಗಳ ಹೆಸರಿನಲ್ಲಿ, ಡಿ-ಗ್ರೂಪ್ ನೌಕರರ ಹೆಸರಿನಲ್ಲಿ ಹೀಗೆ ಬೇರೆ ಬೇರಿ ರೀತಿಯಲ್ಲಿ ಪಾಲಿಕೆಯ ಹಣವನ್ನು ಬ್ಯಾಂಕ್ ನಿಂದ ಹಿಂಪಡೆದು ಹಣ ಬಳಸಿಕೊಂಡಿರುವುದು ಬ್ಯಾಂಕ್ ಪಾಸ್ ಶೀಟ್ ಪರಿಶೀಲಿಸಿದಾಗ ಈ ನಿಯಮ ಉಲ್ಲಂಘನೆ ಮಾಡಿರುವುದು ಕಂಡು ಬಂದಿದೆ ಎಂದು ಬಿಬಿಎಂಪಿಯ ಮೂಲಗಳು ಬೆಂಗಳೂರು ವೈರ್ ಗೆ ತಿಳಿಸಿವೆ.

ಈ ಬಗ್ಗೆ ವಿಶೇಷ ಆಯುಕ್ತರು ಹೇಳುವುದೇನು? :

“ಬಿಬಿಎಂಪಿ ಶಾಲಾ- ಕಾಲೇಜುಗಳಲ್ಲಿ ಶೈಕ್ಷಣಿಕ ಪ್ರವಾಸ, ವಾರ್ಷಿಕೋತ್ಸವ, ಶಾಲಾ-ಕಾಲೇಜು ಲೇಖನ ಸಾಮಗ್ರಿ, ರಿಪೇರಿ ಮತ್ತಿತರ ಕಾರ್ಯಗಳಿಗೆಂದು 2023-24ನೇ ಸಾಲಿನಲ್ಲಿ ಅನುದಾನದ ಹಣ ಬಿಡುಗಡೆ ಮಾಡಲಾಗಿತ್ತು. ಆದರೆ ಹಣ ಹಿಂಪಡೆಯುವಿಕೆ ಹಾಗೂ ಇತರರಿಗೆ ಹಣ ಪಾವತಿ ವಿಷಯದಲ್ಲಿ ಕೆಟಿಟಿಪಿ ಕಾಯ್ದೆಯನ್ನು ಉಲ್ಲಂಘಿಸಿ ಸ್ವಂತಕ್ಕೆ ಬಳಸಿಕೊಂಡಿರುವುದು, ಸಹದ್ಯೋಗಿಗಳ ಮೂಲಕ ಪಾಲಿಕೆಯ ಅನುದಾನದ ಹಣ ಬ್ಯಾಂಕಿನಿಂದ ಹಿಂಪಡೆದಿರುವ ಬ್ಯಾಂಕ್ ಪಾಸ್ ಶೀಟ್ ಪರಿಶೀಲನೆಯಿಂದ ಗೊತ್ತಾಗಿದೆ. ಇನ್ಯಾವುದೇ ರೀತಿಯಲ್ಲಿ ಕಾನೂನು ಉಲ್ಲಂಘನೆಯಾಗಿರುವ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ. ಸದ್ಯ ಅವರಿಗೆಲ್ಲಾ ಕಾರಳ ಕೇಳಿ ನೋಟಿಸ್ ನೀಡಲಾಗಿದೆ. ಜೂನ್ 5ರ ತನಕ ಅವರು ನೀಡುವ ಉತ್ತರ ಆಧರಿಸಿ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ.”

  • ಪ್ರೀತಿ ಗೆಹ್ಲೋಟ್, ಬಿಬಿಎಂಪಿ ಶಿಕ್ಷಣ ಇಲಾಖೆ ವಿಶೇಷ ಆಯುಕ್ತೆ

ಇದೊಂದು ಗಂಭೀರವಾದ ವಿಷಯ. ಏಕೆಂದರೆ ಐದು ಮಂದಿಯಲ್ಲ, ಹತ್ತು ಮಂದಿಯಲ್ಲ, ಪಾಠ ಹೇಳುವ 33 ಜನ ಶಿಕ್ಷಕರು ಕಾನೂನು ಪಾಲನೆ ಮಾಡುವುದು ಬಿಟ್ಟು ಉಲ್ಲಂಘಿಸಿದ್ದಾರೆಂದರೆ ಮಕ್ಕಳಿಗೆ ಇನ್ಯಾವ ರೀತಿ ಇವರು ಶಿಕ್ಷಣ ನೀಡಲು ಸಾಧ್ಯ? ಎಂಬ ಪ್ರಶ್ನೆ ಉದ್ಭವಾಗುತ್ತದೆ.

ಭದ್ರತಾ ಏಜೆನ್ಸಿ ಮೂಲಕ ಶಿಕ್ಷಕರನ್ನು ನಿಯೋಜನೆ ಮಾಡುವುದಕ್ಕೆ ಸಾರ್ವಜನಿಕ ವಲಯದಿಂದ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಬಿಬಿಎಂಪಿ ಮೇ.28ರಂದು ತನ್ನ ನಿಲುವಿನಿಂದ ಹಿಂದೆ ಸರಿದಿದೆ. ಕೊನೆಗೆ ಆ ಏಜೆನ್ಸಿಗಳಿಗೆ ನೀಡಿದ್ದ ಟೆಂಡರ್‌ ಅನ್ನು ರದ್ದುಪಡಿಸಿತ್ತು. 2024–25ನೇ ಸಾಲಿನ ಶೈಕ್ಷಣಿಕ ವರ್ಷದ ಮೇ 29ರಂದು ಆರಂಭವಾಗಿದೆ. ಬಿಬಿಎಂಪಿ ಶಾಲೆ, ಕಾಲೇಜುಗಳನ್ನು ಶೈಕ್ಷಣಿಕವಾಗಿ ಉತ್ತಮ ಗೊಳಿಸಲು ಅಗತ್ಯ ಶಿಕ್ಷಕರು ಹಾಗೂ ಉಪನ್ಯಾಸಕರನ್ನು ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ (ಎಸ್‌ಡಿಎಂಸಿ) ಹಾಗೂ ಕಾಲೇಜು ಅಭಿವೃದ್ಧಿ ಮಂಡಳಿ (ಸಿಡಿಸಿ) ಮೂಲಕ ನಿಯೋಜಿಸಿಕೊಳ್ಳಲು ತೀರ್ಮಾನಿಸಲಾಯಿತು. ಇದೀಗ ಶಾಲಾ- ಕಾಲೇಜು ಶಿಕ್ಷಕರೇ ನಿಯಮ ಉಲ್ಲಂಘಿಸಿ ಪಾಲಿಕೆ ಅನುದಾನ ಬಳಕೆಯಲ್ಲಿ ಅವ್ಯವಹಾರ ನಡೆಸಿರುವ ಸಾಧ್ಯೆತೆಗಳ ಬಗ್ಗೆ ಪೂರ್ಣ ರೂಪದ ತನಿಖೆ ನಂತರವಷ್ಟೇ ಸತ್ಯ ಸಂಗತಿ ಬೆಳಕಿಗೆ ಬರಬೇಕಿದೆ.

WhatsApp Join our WhatsApp Channel
Previous Post

Energy News | ದೇಶದ ವಿದ್ಯುತ್ ವಲಯದ ಹೊಸ ಸಾಧನೆ : ಮೇ.30 ರಂದು ದಾಖಲೆಯ 250 ಗಿಗಾವ್ಯಾಟ್ ಬೇಡಿಕೆ ಪೂರೈಸಿದ ಇಂಧನ ಕ್ಷೇತ್ರ

Next Post

Defence News | ಯಶಸ್ವಿಯಾಗಿ ತರಬೇತಿ ಪೂರ್ಣಗೊಳಿಸಿದ 60 ವಾಯುಪಡೆ ಅಧಿಕಾರಿಗಳ ಆಕರ್ಷಕ ನಿರ್ಗಮನ ಪಥಸಂಚಲನ

Next Post
74 ವಾರಗಳ ಕಠಿಣ ತರಬೇತಿ ಪೂರ್ಣಗೊಳಿಸಿದ ವಾಯುಪಡೆಯ 60 ಇಂಜಿನಿಯರಿಂಗ್ ಅಧಿಕಾರಿಗಳು ಇಂದು ಬೆಂಗಳೂರಿನ ವಾಯುಪಡೆ ತರಬೇತಿ ಕೇಂದ್ರದಲ್ಲಿ ಆಕರ್ಷಕ ಪಥಸಂಚಲನ ನಡೆಸಿದರು.

Defence News | ಯಶಸ್ವಿಯಾಗಿ ತರಬೇತಿ ಪೂರ್ಣಗೊಳಿಸಿದ 60 ವಾಯುಪಡೆ ಅಧಿಕಾರಿಗಳ ಆಕರ್ಷಕ ನಿರ್ಗಮನ ಪಥಸಂಚಲನ

Loksabha Elections Counting | ಲೋಕಸಭಾ ಚುನಾವಣೆ ಜೂ.4 ಮತ ಎಣಿಕೆ : ಬೆಂಗಳೂರು ಜಿಲ್ಲಾ ಚುನಾವಣಾಧಿಕಾರಿಗಳಿಂದ ಪೂರ್ವಸಿದ್ದತಾ ಸಭೆ

Please login to join discussion

Like Us on Facebook

Follow Us on Twitter

Recent News

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group