ಬೆಂಗಳೂರು, ಜೂ.8 www.bengaluruwire.com : ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA)ವು ಜೆ.ಬಿ. ಕಾವಲ್ ಗ್ರಾಮದಲ್ಲಿ ಸುಮಾರು 5 ಎಕರೆ ಪ್ರದೇಶದಲ್ಲಿ ಅನಧಿಕೃತ ಬಡಾವಣೆ ನಿರ್ಮಾಣ ಕಾಮಗಾರಿಯನ್ನು ಕಾರ್ಯಾಚರಣೆ ನಡೆಸಿ ತೆರವುಗೊಳಿಸಿದೆ.
ಬಿಡಿಎ ಸ್ವಾಧೀನಪಡಿಸಿಕೊಂಡಿರುವ ಪ್ರದೇಶ, ಸಿ.ಡಿ.ಪಿ. ಪ್ರದೇಶ, ಡಾ. ಶಿವರಾಮ ಕಾರಂತ ಬಡಾವಣೆ ಹಾಗೂ ಪ್ರಾಧಿಕಾರದ ಅಧಿಕೃತ ಬಡಾವಣೆಗಳಲ್ಲಿ ಅನಧಿಕೃತ ಬಡಾವಣೆಯನ್ನು ನಿರ್ಮಿಸುತ್ತಿರುವುದು ಬಿಡಿಎ ಗಮನಕ್ಕೆ ಬಂದಿರುತ್ತದೆ.
ಖಾಸಗಿ ಬಡಾವಣೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ಪ್ರಾಧಿಕಾರದಿಂದ ಬಡಾವಣೆ ನಕ್ಷೆಯ ಅನುಮೋದನೆಯನ್ನು ಪಡೆದು ಬಡಾವಣೆಯನ್ನು ರಚಿಸಿ, ನಿವೇಶನವನ್ನು ಹಂಚಿಕೆ ಮಾಡಬೇಕು. ಪ್ರಾಧಿಕಾರದಿಂದ ಬಡಾವಣೆಯ ನಕ್ಷೆಯನ್ನು ಅನುಮೋದನೆ ಪಡೆಯದೇ ಬಡಾವಣೆಯನ್ನು ನಿರ್ಮಿಸಿ, ನಿವೇಶನಗಳನ್ನು ಮಾರಾಟ ಮಾಡಲಾಗುತ್ತಿದೆ. ಈ ವಿಷಯವು ಪ್ರಾಧಿಕಾರದ ಗಮನಕ್ಕೆ ಬಂದಿದ್ದು, ಅಂತಹ ಅನಧಿಕೃತ ಬಡಾವಣೆಯನ್ನು ನಿರ್ಮಿಸುವುದು ಅಥವಾ ನಿವೇಶನಗಳನ್ನು ಮಾರಾಟ ಮಾಡುವವರ ವಿರುದ್ಧ ಕಾನೂನು ರೀತ್ಯ ಕ್ರಮಕೈಗೊಳ್ಳಲಾಗುವುದು ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.