Friday, September 18, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    Breaking News | ನವೆಂಬರ್ ಅಂತ್ಯಕ್ಕೆ ತುಮಕೂರಿಗೆ ಎತ್ತಿನಹೊಳೆ ನೀರು: ಸಚಿವ ಚಲುವರಾಯಸ್ವಾಮಿ ಭರವಸೆ

    ಮೆಕ್ಕಾ ವಾಯುಪ್ರದೇಶದ ಬಳಿ ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ: ಪವಿತ್ರ ಕ್ಷೇತ್ರಗಳ ರಕ್ಷಣೆ ‘ರೆಡ್ ಲೈನ್’ ಎಂದ ರಿಯಾದ್

    ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

    UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

    ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

    ದೆಹಲಿಯಲ್ಲಿ ಬ್ರಿಕ್ಸ್‌ ಶೃಂಗಸಭೆ: ಕೊಳಗೇರಿಗೆ ಪರದೆ ಕಟ್ಟಿ ಬಡತನ ಮರೆಮಾಚುವ ಯತ್ನಕ್ಕೆ ಆಕ್ರೋಶ

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

  • Bengaluru Focus
    GBA Head Office Image

    GBA News | ಬೆಂಗಳೂರು : ಜಿಬಿಎ ವ್ಯಾಪ್ತಿಯಲ್ಲಿ ಇ-ಖಾತಾ ಸೇವೆಗಳು ಮತ್ತಷ್ಟು ಸುಲಭ; ಸೆ. 21ರಿಂದ ‘ಇ-ಆಸ್ತಿ 2.0’ ನೂತನ ಇ-ಖಾತಾ ವ್ಯವಸ್ಥೆ ಜಾರಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

    GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    BWSSB News | ಬೆಂಗಳೂರಿನಲ್ಲಿ ತ್ಯಾಜ್ಯ ನೀರು ಸಂಸ್ಕರಣೆಗೆ ಬಿಗಿಯಾದ ಕ್ರಮ: KSPCB, ಜಲಮಂಡಳಿಗೆ ಸಚಿವ ರಾಮಲಿಂಗಾರೆಡ್ಡಿ ಗಡುವು

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Artificial Colors Use Ban In Kabab Foods | ರಾಜ್ಯದಲ್ಲಿ ಸಸ್ಯಹಾರಿ ಮತ್ತು ಮಾಂಸಾಹಾರಿ ಕಬಾಬ್ ಗಳಲ್ಲಿ ಕೃತಕ ಬಣ್ಣ ಬಳಕೆ ನಿಷೇಧ : ಉಲ್ಲಂಘನೆಗೆ 7 ವರ್ಷ ಜೈಲು

ರಾಜ್ಯಾದ್ಯಂತ ಮಾರಾಟ ಮಾಡಲಾಗುತ್ತಿರುವ 39 ಕಬಾಬ್‌ಗಳ ಮಾದರಿಗಳನ್ನು ಸಂಗ್ರಹಿಸಿ ರಾಜ್ಯ ಪ್ರಯೋಗಾಲಯಗಳಲ್ಲಿ ವಿಶ್ಲೇಷಣೆಗೊಳಪಡಿಸಲಾಗಿತ್ತು. | ಪರೀಕ್ಷಾ ವರದಿಗಳು ಗಾಬರಿ ಹುಟ್ಟಿಸುವಂತಿತ್ತು.

by Bengaluru Wire Desk
June 24, 2024
in News Wire
Reading Time: 1 min read
0

ಬೆಂಗಳೂರು, ಜೂ.24 www.bengaluruwire.com : ಮೀನು ಸೇರಿದಂತೆ ಚಿಕನ್ ಕಬಾಬ್ ಇನ್ನಿತರ ಮಾಂಸಾಹಾರದಲ್ಲಿ ಕೃತಕ ಬಣ್ಣ ಬೆರಸುವುದನ್ನ ನಿಷೇಧಿಸಿ ಆಹಾರ ಸುರಕ್ಷತಾ ಇಲಾಖೆ ಆದೇಶ ಹೊರಡಿಸಿದೆ. ಕೆಲವು ಆಹಾರಗಳಲ್ಲಿ ಕೃತಕ ಬಣ್ಣದ ಬಳಕೆ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿರುವ ಹಿನ್ನೆಲೆಯಲ್ಲಿ ಈ ಹಿಂದೆ ಗೋಬಿ ಮಂಚೂರಿ ಹಾಗೂ ಕಾಟನ್ ಕ್ಯಾಂಡಿಗಳಲ್ಲಿ ಕೃತಕ ಬಣ್ಣಗಳ ಬಳಕೆಯನ್ನ ನಿಷೇಧಿಸಲಾಗಿತ್ತು. 

ಇದೇ ವೇಳೆ ಚಿಕನ್ ಕಬಾಬ್ ಗಳಲ್ಲೂ ಕೃತಕ ಬಣ್ಣಗಳ ಬೆರಸುವಿಕೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ಪರೀಕ್ಷೆಗೊಳಪಡಿಸಿ ಕ್ರಮ ಕೈಗೊಳ್ಳುವಂತೆ ಆರೋಗ್ಯ ಸಚಿವ  ದಿನೇಶ್ ಗುಂಡೂರಾವ್ ಅವರು ಆಹಾರ ಸುರಕ್ಷತಾ ಇಲಾಖೆ ಆಯುಕ್ತರಿಗೆ ಸೂಚನೆ ನೀಡಿದ್ದರು. ಕಳಪೆಗುಣಮಟ್ಟದ ಆಹಾರ ಸೇವನೆ ಇತ್ತಿಚೆಗೆ ಜನರ ಆರೋಗ್ಯದ ಮೇಲೆ ತೀವ್ರ ಹಾನಿಯನ್ನುಂಟುಮಾಡುತ್ತಿದೆ. ಈ ಹಿನ್ನಲೆಯಲ್ಲಿ ರಾಜ್ಯದಾದ್ಯಂತ ಮೀನು ಸೇರಿದಂತೆ ಚಿಕನ್ ಕಬಾಬ್ ಇನ್ನಿತರ ಮಾಂಸಾಹಾರದಲ್ಲಿ ಕೃತಕ ಬಣ್ಣ ಬೆರಸುವುದನ್ನ ನಿಷೇಧಿಸಿ ಆಹಾರ ಸುರಕ್ಷತಾ ಇಲಾಖೆ ಜೂ.21ರಂದು ಆದೇಶಿಸಿದೆ.

ಜನಸಾಮಾನ್ಯರ ಆರೋಗ್ಯದ ದೃಷ್ಟಿಯಿಂದ ಹಾನಿಕಾರಕ ಆಹಾರದ ಬಗ್ಗೆ ಜಾಗೃತಿ ಮೂಡಿಸುವುದು ಅಗತ್ಯವಾಗಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ಸಚಿವರ ಸೂಚನೆಯ ಮೇರೆಗೆ ರಾಜ್ಯಾದ್ಯಂತ ಮಾರಾಟ ಮಾಡಲಾಗುತ್ತಿರುವ ಕಬಾಬ್‌ಗಳು ಗುಣಮಟ್ಟ ಪರೀಕ್ಷೆಗೆ ಒಳಪಡಿಸಲಾಗಿತ್ತು. 

ಕೃತಕ ಬಣ್ಣ ಬೆರಸುವಿಕೆಯಿಂದಾಗಿ ಚಿಕನ್ ಕಬಾಬ್ ಕಳಪೆಯಾಗಿದ್ದು, ಇದರಿಂದ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತಿರುವುದು ಕಂಡುಬಂದ ಹಿನ್ನೆಲೆಯಲ್ಲಿ ಚಿಕನ್ ಕಬಾಬ್, ಫಿಶ್ ಆಹಾರಗಳಲ್ಲಿ ಕೃತಕ ಬಣ್ಣ ಬೆರಸುವಿಕೆಯನ್ನ ನಿಷೇಧಿಸಿ ಆಹಾರ ಸುರಕ್ಷತಾ ಆಯುಕ್ತರು ಆದೇಶ ಹೊರಡಿಸಿದ್ದಾರೆ.

ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಆದೇಶದ ಪ್ರತಿ.

ರಾಜ್ಯಾದ್ಯಂತ ಮಾರಾಟ ಮಾಡಲಾಗುತ್ತಿರುವ 39 ಕಬಾಬ್‌ಗಳ ಮಾದರಿಗಳನ್ನು ಸಂಗ್ರಹಿಸಿ ರಾಜ್ಯ ಪ್ರಯೋಗಾಲಯಗಳಲ್ಲಿ ವಿಶ್ಲೇಷಣೆಗೊಳಪಡಿಸಲಾಗಿತ್ತು. ಈ ರೀತಿಯ ಮಾದರಿಗಳಲ್ಲಿ 8 ಕಬಾಬ್‌ನ ಮಾದರಿಗಳು ಕೃತಕ ಬಣ್ಣದಿಂದ (ಸನ್‌ಸೆಟ್ ಯೆಲ್ಲೋ 7 ಮಾದರಿಗಳು, ಸನ್‌ಸೆಟ್ ಯೆಲ್ಲೋ ಮತ್ತು ಕಾರ್ಮೋಸಿನ್ ಹೊಂದಿರುವ ಮಾದರಿಗಳು 1) ಕೂಡಿರುವುದರಿಂದ ಅಸುರಕ್ಷಿತ ಎಂದು ವಿಶ್ಲೇಷಣಾ ವರದಿಗಳಲ್ಲಿ ಕಂಡುಬಂದಿದೆ. The Food Safety and Standards Act, 2006 ರ ನಿಯಮ 3(1)(zz)(viii)ರನ್ವಯ ಅಸುರಕ್ಷಿತ ಎಂದು ವರದಿ ಮಾಡಲ್ಪಟ್ಟಿರುತ್ತವೆ.

The Food Safety and Standards (Food Products Standards and Food Additives) Regulations, 2011 ರ‌ ಅನ್ವಯ ಯಾವುದೇ ಕೃತಕ ಬಣ್ಣಗಳನ್ನು ಉಪಯೋಗಿಸುವಂತಿರುವುದಿಲ್ಲ. ಕೃತಕ ಬಣ್ಣಗಳು ಬಳಕೆದಾರರ ಆರೋಗ್ಯದ ಮೇಲೆ ತೀವ್ರ ಪರಿಣಾಮ ಉಂಟುಮಾಡಬಹುದಾಗಿರುತ್ತದೆ. ಈ ಹಿನ್ನೆಲೆಯಲ್ಲಿ ಕಬಾಬ್‌ನ ತಯಾರಿಕೆಯಲ್ಲಿ ಯಾವುದೇ ಕೃತಕ ಬಣ್ಣಗಳನ್ನು ಬಳಸುವುದಕ್ಕೆ ಅವಕಾಶವಿಲ್ಲ ಎಂದು ಆದೇಶದಲ್ಲಿ‌ ತಿಳಿಸಲಾಗಿದೆ.

ಉಲ್ಲಂಘನೆಯ ಪ್ರಕರಣಗಳು ಕಂಡುಬಂದಲ್ಲಿ ತಯಾರಿಸುವವರ ಮೇಲೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ-2006ರ ನಿಯಮ 59ರಡಿ 7 ವರ್ಷಗಳಿಂದ ಜೀವಾವಧಿ ಅವಧಿಯವರೆಗೆ ಜೈಲು ಶಿಕ್ಷೆಯನ್ನು ಮತ್ತು 10 ಲಕ್ಷ ರೂ.ವರೆಗೆ ದಂಡವನ್ನು ವಿಧಿಸಲು ನ್ಯಾಯಾಲಯದಲ್ಲಿ ಮೊಕದ್ದಮೆಗಳನ್ನು ದಾಖಲಿಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.‌

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

BBMP News | Dengue Cases Increasing | ಬೆಂಗಳೂರಿನಲ್ಲಿ ಡೆಂಗ್ಯೂ ಪ್ರಕರಣಗಳು ಜೂನ್ ತಿಂಗಳಲ್ಲಿ ಹೆಚ್ಚಳ : ಕಳೆದ ವರ್ಷಕ್ಕೆ ಹೋಲಿಸಿದಲ್ಲಿ 6 ತಿಂಗಳಲ್ಲಿ ಶೇ.52ರಷ್ಟು ಏರಿಕೆ!!

Next Post

Nandini Milk Rate Hike | ಕೆಎಂಎಫ್ ಹಾಲು ಶೇಖರಣೆ ಏರಿಕೆ ಹಿನ್ನಲೆ ; ಜೂ.26ರಿಂದ ಪ್ಯಾಕೇಟಿನಲ್ಲಿ 50 ಎಂಎಲ್ ಹೆಚ್ಚುವರಿ ಹಾಲು : ಅರ್ಧ, ಒಂದು ಲೀ. ಗೆ ತಲಾ 2 ರೂ. ಹೆಚ್ಚಳ!!

Next Post
ಕೆಎಂಎಫ್ ಕೇಂದ್ರ ಕಚೇರಿ ಚಿತ್ರ

Nandini Milk Rate Hike | ಕೆಎಂಎಫ್ ಹಾಲು ಶೇಖರಣೆ ಏರಿಕೆ ಹಿನ್ನಲೆ ; ಜೂ.26ರಿಂದ ಪ್ಯಾಕೇಟಿನಲ್ಲಿ 50 ಎಂಎಲ್ ಹೆಚ್ಚುವರಿ ಹಾಲು : ಅರ್ಧ, ಒಂದು ಲೀ. ಗೆ ತಲಾ 2 ರೂ. ಹೆಚ್ಚಳ!!

Jayanna Shed Drivers Problem | ಜಯಣ್ಣ ಶೆಡ್‍ನಲ್ಲಿ ರೇಣುಕಾಸ್ವಾಮಿ ಪ್ರಕರಣಕ್ಕೆ ಸಂಬಂಧಿಸದ ಜಪ್ತಿಯಾಗಿರುವ ವಾಹನಗಳ ಬಿಡುಗಡೆಗೆ ಡ್ರೈವರ್ಸ್ ಯೂನಿಯನ್ ಆಗ್ರಹ

Please login to join discussion

Like Us on Facebook

Follow Us on Twitter

Recent News

GBA Head Office Image

GBA News | ಬೆಂಗಳೂರು : ಜಿಬಿಎ ವ್ಯಾಪ್ತಿಯಲ್ಲಿ ಇ-ಖಾತಾ ಸೇವೆಗಳು ಮತ್ತಷ್ಟು ಸುಲಭ; ಸೆ. 21ರಿಂದ ‘ಇ-ಆಸ್ತಿ 2.0’ ನೂತನ ಇ-ಖಾತಾ ವ್ಯವಸ್ಥೆ ಜಾರಿ

September 17, 2026

Breaking News | ನವೆಂಬರ್ ಅಂತ್ಯಕ್ಕೆ ತುಮಕೂರಿಗೆ ಎತ್ತಿನಹೊಳೆ ನೀರು: ಸಚಿವ ಚಲುವರಾಯಸ್ವಾಮಿ ಭರವಸೆ

September 17, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
GBA Head Office Image

GBA News | ಬೆಂಗಳೂರು : ಜಿಬಿಎ ವ್ಯಾಪ್ತಿಯಲ್ಲಿ ಇ-ಖಾತಾ ಸೇವೆಗಳು ಮತ್ತಷ್ಟು ಸುಲಭ; ಸೆ. 21ರಿಂದ ‘ಇ-ಆಸ್ತಿ 2.0’ ನೂತನ ಇ-ಖಾತಾ ವ್ಯವಸ್ಥೆ ಜಾರಿ

September 17, 2026

Breaking News | ನವೆಂಬರ್ ಅಂತ್ಯಕ್ಕೆ ತುಮಕೂರಿಗೆ ಎತ್ತಿನಹೊಳೆ ನೀರು: ಸಚಿವ ಚಲುವರಾಯಸ್ವಾಮಿ ಭರವಸೆ

September 17, 2026

ಮೆಕ್ಕಾ ವಾಯುಪ್ರದೇಶದ ಬಳಿ ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ: ಪವಿತ್ರ ಕ್ಷೇತ್ರಗಳ ರಕ್ಷಣೆ ‘ರೆಡ್ ಲೈನ್’ ಎಂದ ರಿಯಾದ್

September 16, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d