Sunday, June 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Bannergatta Leopard Safari | ಬನ್ನೇರುಘಟ್ಟದಲ್ಲಿ ಬೃಹತ್ ಚಿರತೆ ಸಫಾರಿ ಆರಂಭ : ವಿವಿಧ ಕಾರ್ಯಕ್ರಮಗಳಿಗೆ ಸಚಿವ ಈಶ್ವರ ಖಂಡ್ರೆ ಚಾಲನೆ

ಮೃಗಾಲಯ ಸಂದರ್ಶಕರಿಗೆ ರಿಯಾಯಿತಿ ದರದಲ್ಲಿ ಸಸಿ‌ ನೀಡಲು ಸಚಿವರ ಸಲಹೆ | ಗಣರಾಜ್ಯದ ದಿನ ಹುಟ್ಟಿದ ಆನೆ ಮರಿಗೆ “ಸ್ವರಾಜ್’’ ನಾಮಕರಣ | ಆನೆ ಹಾಲುಣಿಸುವ ಕೇಂದ್ರದ ಉದ್ಘಾಟನೆ

by Bengaluru Wire Desk
June 26, 2024
in Bengaluru Focus, Public interest
Reading Time: 2 mins read
0

ಬನ್ನೇರುಘಟ್ಟ, ಜೂ.26 www.bengaluruwire.com :  ಹುಲಿ ಸಫಾರಿ, ಸಸ್ಯಹಾರಿ ಪ್ರಾಣಿಗಳ ಸಫಾರಿ, ಸಿಂಹ ಸಫಾರಿ, ಕರಡಿ ಸಫಾರಿ ಇರುವ ಬನ್ನೇರುಘಟ್ಟ ಉದ್ಯಾನದಲ್ಲಿ ನೂತನವಾಗಿ ನಿರ್ಮಿಸಿರುವ ಚಿರತೆ ಸಫಾರಿಗೆ ಅರಣ್ಯ ಸಚಿವ ಈಶ್ವರ ಖಂಡ್ರೆ ಇಂದು ಚಾಲನೆ ನೀಡಿದರು.

ಇದು ದಕ್ಷಿಣ ಭಾರತದ ಪ್ರಥಮ ಮತ್ತು ದೇಶದಲ್ಲಿಯೇ ಅತಿ ದೊಡ್ಡ ಚಿರತೆ ಸಫಾರಿ ಆಗಿದೆ. ಪ್ರಸ್ತುತ 8  ಚಿರತೆಗಳನ್ನು ತೆರೆದ ವನ ಪ್ರದೇಶದಲ್ಲಿ ಸಫಾರಿಗೆ ಬಿಡಲಾಗಿದೆ. ಇದು ಈ ಉದ್ಯಾನದ ಮತ್ತೊಂದು ಆಕರ್ಷಣೆಯಾಗಿದ್ದು, ಪ್ರವಾಸಿಗರು ಮತ್ತು ಸಂದರ್ಶಕರನ್ನು ಸೆಳೆಯಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಈ ಚಿರತೆ ಸಫಾರಿ ಪ್ರದೇಶವು ನೈಸರ್ಗಿಕ ಬಂಡೆಗಳಿಂದ ಹಾಗೂ ಅರೆ ಎಲೆ ಉದುರುವ ಕಾಡುಗಳಿಂದ ಕೂಡಿದೆ. ಕೇಂದ್ರ ಮೃಗಾಲಯ ಪ್ರಾಧಿಕಾರದ ಮಾರ್ಗಸೂಚಿಗಳ ಪ್ರಕಾರ, 20 ಹೆಕ್ಟೇರ್ ಪ್ರದೇಶವನ್ನು ಗುರುತಿಸಿ ರೈಲ್ವೆ ಬ್ಯಾರಿಕೇಡ್ ಹಾಕಲಾಗಿದೆ. ಒಟ್ಟು 4.5 ಕೋಟಿ ರೂ. ವೆಚ್ಚದಲ್ಲಿ ಸುರಕ್ಷಿತ ವಿನ್ಯಾಸ ರೂಪಿಸಲಾಗಿದೆ. ಈ ಇಡೀ ಪ್ರದೇಶಕ್ಕೆ 4.5 ಮೀಟರ್ ಎತ್ತರದ ಲಂಬ ಚೈನ್ ಲಿಂಕ್ ಜಾಲರಿ ಅಳವಡಿಸಲಾಗಿದ್ದು, ಎಂಎಸ್ ಶೀಟ್ ಗಳನ್ನು 1.5 ಮೀಟರ್ ಎತ್ತರವಿರುವ 30ಡಿಗ್ರಿ ಇಳಿಜಾರಿನ ಕೋನದಲ್ಲಿ ಹಾಕುವ ಮೂಲಕ ಚಿರತೆಗಳು ಹೊರಗೆ ಬಾರದಂತೆ ಎಚ್ಚರ ವಹಿಸಲಾಗಿದೆ ಎಂದು ತಿಳಿಸಿದರು.

ಅರಣ್ಯ ಸಚಿವ ಈಶ್ವರ ಖಂಡ್ರೆ ಬನ್ನೇರುಘಟ್ಟದಲ್ಲಿ ಸಫಾರಿ ಮಾಡಿದರು.

ಬನ್ನೇರುಘಟ್ಟ ಸುತ್ತ ಮುತ್ತ ಬೆಟ್ಟಗುಡ್ಡಗಳಿದ್ದು, ಇದು ಚಿರತೆಗಳು ವಾಸಿಸಲು ಉತ್ತಮ ತಾಣವಾಗಿದೆ. ಹೀಗಾಗಿಯೇ ಇಲ್ಲಿ ಹೆಚ್ಚಿನ ಸಂಖ್ಯೆ ಚಿರತೆಗಳೂ ಇವೆ. ಈ ಪೈಕಿ ಹೊಲ, ಗದ್ದೆಗಳಲ್ಲಿ ಹೆಣ್ಣು ಚಿರತೆಗಳು ಮರಿ ಹಾಕಿ ಹೋಗುವ ಸಂದರ್ಭದಲ್ಲಿ ಅಂತಹ ಮರಿಗಳನ್ನು ತಂದು ಉದ್ಯಾನದಲ್ಲಿ ಪಾಲನೆ ಮಾಡಲಾಗುತ್ತದೆ. ಪ್ರಸ್ತುತ ಉದ್ಯಾನದಲ್ಲಿ 14 ಚಿರತೆಗಳಿವೆ ಎಂದೂ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಸ್ವಾಗತ ಕಮಾನನ್ನೂ ಉದ್ಘಾಟಿಸಿದರು.

ಆನೆಮರಿಗೆ ನಾಮಕರಣ:

ಬನ್ನೇರುಘಟ್ಟದಲ್ಲಿರುವ ವೇದಾ ಎಂಬ ಹೆಣ್ಣಾನೆ ಕಳೆದ ಜನವರಿ 26ರ ಗಣರಾಜ್ಯ ದಿನದಂದು ಗಂಡಾನೆ ಮರಿಗೆ ಜನ್ಮ ನೀಡಿದ್ದು, ಭಾರತ ಗಣತಂತ್ರದ ದಿನ ಹುಟ್ಟಿದ ಈ ಆನೆಗೆ ‘ಸ್ವರಾಜ್’ ಎಂದು ನಾಮಕರಣ ಮಾಡಲಾಯಿತು. ಈಶ್ವರ ಖಂಡ್ರೆ ಅವರು ಫಲಕ ಅನಾವರಣ ಮಾಡಿ ಆನೆಗೆ ಸ್ವರಾಜ್ ಎಂದು ಹೆಸರಿಟ್ಟರು.

ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ನೀಡಿದ ಸಚಿವರು.

ಆನೆ ಹಾಲುಣಿಸುವ ಕೇಂದ್ರದ ಉದ್ಘಾಟನೆ:

ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ 26 ಆನೆಗಳಿದ್ದು, ಇಲ್ಲಿ ವರ್ಷಕ್ಕೆ 2ರಿಂದ 3 ಮರಿಗಳ ಜನನವಾಗುತ್ತದೆ. ಈ ಆನೆ ಮರಿಗಳಿಗೆ ಹಾಲುಣಿಸುವ ಕೇಂದ್ರವನ್ನೂ ಇಂದು ಉದ್ಘಾಟಿಸಲಾಯಿತು. ಉದ್ಯಾನದಲ್ಲಿ ಜನಿಸುವ ಆನೆಮರಿಗಳ ಪೈಕಿ ಸುಮಾರು 3 ವರ್ಷದ ಮರಿಗಳನ್ನು ಹಾಲುಣಿಸಲು ತಾಯಿಯಿಂದ ಬೇರ್ಪಡಿಸಿ, ಮಾವುತರ ಜೊತೆ ಬಾಂಧವ್ಯ ಬೆಸೆಯಲು 10 ಲಕ್ಷ ರೂ. ವೆಚ್ಚದಲ್ಲಿ ನವೀಕರಿಸಲಾಗಿರುವ ಹಾಲುಣಿಸುವ ಕೇಂದ್ರಕ್ಕೆ ಸ್ಥಳಾಂತರಿಸಲಾಗುತ್ತದೆ, ಅಲ್ಲಿ ಮಾವುತರು ಮತ್ತು ಕಾವಾಡಿಗಳು ಆನೆ ಮರಿಗಳಿಗೆ 24 ಗಂಟೆಯೂ ವಿಶೇಷ ಆರೈಕೆ ಮಾಡುತ್ತಾರೆ ಎಂದು ಈಶ್ವರ ಖಂಡ್ರೆ ಹೇಳಿದರು.  

ಈ ಕೇಂದ್ರದಲ್ಲಿ ಆನೆ ಮರಿಗಳ ಮುಕ್ತ ಸಂಚಾರಕ್ಕಾಗಿ ಒಂದು ಸಣ್ಣ ಕ್ರಾಲ್ ಮತ್ತು ಮರಿಗಳ ಮೇಲೆ ನಿಗಾ ಇಡಲು ಅಸ್ತಿತ್ವದಲ್ಲಿರುವ ಆನೆ ಕಟ್ಟಡದ ಮೇಲೆ ಕಾವಾಡಿಗಳಿಗೆ ಒಂದು ಕೋಣೆಯನ್ನು ನಿರ್ಮಿಸಲಾಗಿದೆ. ಈ ಕೇಂದ್ರವನ್ನೂ ಇಂದು ಉದ್ಘಾಟಿಸಲಾಗಿದೆ ಎಂದರು.

ಸ್ಕೈವಾಕ್ ಗೆ ಭೂಮಿಪೂಜೆ: 

ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ ಸ್ಕೈವಾಕ್ ಮತ್ತು ಐದು ಪ್ರಾಣಿ ಆವರಣಗಳಿಗೆ ಇಂದು ಭೂಮಿ ಪೂಜೆ ನೆರವೇರಿಸಲಾಯಿತು. ಮೃಗಾಲಯದಿಂದ ಚಿಟ್ಟೆ ಉದ್ಯಾನವನಕ್ಕೆ ಸಂಪರ್ಕವನ್ನು ಕಲ್ಪಿಸಲು ಸ್ಕೈ ವಾಕ್ ವಿನ್ಯಾಸಗೊಳಿಸಲಾಗಿದೆ ಈ ಸ್ಕೈವಾಕ್ ನಲ್ಲಿ ನಡೆಯುವ ಪ್ರವಾಸಿಗರಿಗೆ ಅರಣ್ಯ ದರ್ಶನವೂ ಆಗುತ್ತದೆ. ಹತ್ತಿರದಿಂದ ಪಕ್ಷಿಗಳನ್ನು ನೋಡಲು ಅವಕಾಶವೂ ಆಗುತ್ತದೆ. 

ಇಂದು ಬನ್ನೇರುಘಟ್ಟದಲ್ಲಿ ಮಕ್ಕಳ ಮತ್ತು ವಯಸ್ಕರ ಆಟದ ಆವರಣ ಉದ್ಘಾಟಿಸಿದ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಅವರು ಜೋಕಾಲಿ ಆಡಿದ ಕ್ಷಣ.

ಚಿಟ್ಟೆ ಉದ್ಯಾನವನದಲ್ಲಿ ಶಿಶು ಆರೈಕೆ ಕೊಠಡಿ : 

ಬನ್ನೇರುಘಟ್ಟ ಉದ್ಯಾನಕ್ಕೆ ಬರುವ ಸಂದರ್ಶಕರ ಪೈಕಿ, ಮಹಿಳೆಯರು, ಹಾಲುಣಿಸುವ ತಾಯಂದಿರೂ ಇರುತ್ತಾರೆ. ಹೀಗಾಗಿ ಶಿಶು ಆರೈಕೆ ಕೋಣೆಯನ್ನು ಸಹ ಇಲ್ಲಿ ನಿರ್ಮಿಸಲಾಗಿದೆ. ಇದನ್ನು ಇಂದು ಉದ್ಘಾಟಿಸಲಾಗಿದೆ.

ಮೃಗಾಲಯದ ಸಂದರ್ಶಕರಿಗೊಂದು ಸಸಿ:

ಮೃಗಾಲಯಕ್ಕೆ ಬರುವ ಪ್ರತಿಯೊಬ್ಬರಿಗೂ ಪ್ರಾಣವಾಯು- ಆಮ್ಲಜನಕ ನೀಡುವ ವೃಕ್ಷಗಳ ಮಹತ್ವದ ಬಗ್ಗೆ ತಿಳಿಸಿ, ಅವರು ಮನೆಗೆ ತೆರಳುವಾಗ ಒಂದು ಸಸಿ ಖರೀದಿಸಿ ತೆಗೆದುಕೊಂಡು ಹೋಗಿ ತಮ್ಮ ಮನೆಯ ಮುಂದೆ ನೆಟ್ಟು, ಪೋಷಿಸುವಂತೆ ಪ್ರೇರೇಪಿಸಬೇಕು. ರೈತರಿಗೆ ರಿಯಾಯಿತಿ ದರದಲ್ಲಿ ಸಸಿಗಳನ್ನು ನೀಡುವ ರೀತಿಯಲ್ಲೇ ಮೃಗಾಲಯಕ್ಕೆ ಬರುವ ಸಂದರ್ಶಕರಿಗೂ ರಿಯಾಯಿತಿ ದರದಲ್ಲಿ ಸಸಿಗಳನ್ನು ಪೂರೈಸಬೇಕು ಎಂದು ಬನ್ನೇರುಘಟ್ಟ ಉದ್ಯಾನವನದ ಸಿಬ್ಬಂದಿಗೆ ಸೂಚನೆ ನೀಡಿದರು.

ಇಂದು ನಡೆದ ವಿವಿಧ ಕಾರ್ಯಕ್ರಮಗಳಲ್ಲಿ ಕರ್ನಾಟಕ ಮೃಗಾಲಯ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಡಾ. ಸುನೀಲ್ ಪನ್ವಾರ್, ಬನ್ನೇರುಘಟ್ಟ ಜೈವಿಕ ಉದ್ಯಾನವನದ ಕಾರ್ಯ ನಿರ್ವಾಹಕ ನಿರ್ದೇಶಕ ಎ.ವಿ. ಸೂರ್ಯಸೇನ್ ಮತ್ತಿತರರು ಉಪಸ್ಥಿತರಿದ್ದರು.

WhatsApp Join our WhatsApp Channel
Previous Post

New Loksabha Speaker Om Birla | ಲೋಕಸಭೆ ಸ್ಪೀಕರ್ ಆಗಿ ಓಂ ಬಿರ್ಲಾ ಆಯ್ಕೆ : ಇಂಡಿಯಾ ಮೈತ್ರಿಕೂಟಕ್ಕೆ ಆರಂಭದಲ್ಲೇ ಸೋಲಿನ ರುಚಿ

Next Post

Science News | IISC 3D Hydrogel Culture System | ಕ್ಷಯ ಪತ್ತೆ ಕ್ಷೇತ್ರದಲ್ಲಿ ಹೊಸ ಕ್ರಾಂತಿ : ಐಐಎಸ್ಸಿಯಿಂದ “3ಡಿ ಹೈಡ್ರೋಜೆಲ್” ಅಭಿವೃದ್ಧಿ

Next Post

Science News | IISC 3D Hydrogel Culture System | ಕ್ಷಯ ಪತ್ತೆ ಕ್ಷೇತ್ರದಲ್ಲಿ ಹೊಸ ಕ್ರಾಂತಿ : ಐಐಎಸ್ಸಿಯಿಂದ "3ಡಿ ಹೈಡ್ರೋಜೆಲ್" ಅಭಿವೃದ್ಧಿ

CM Siddaramiah Delhi Tour | ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿ ಪ್ರವಾಸ  : ಜೂ.29 ಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ

Please login to join discussion

Like Us on Facebook

Follow Us on Twitter

Recent News

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group