ಬೆಂಗಳೂರು, ಜು.17 www.bengaluruwire.com : ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ( CM Siddaramiah) ಸಮಾಧಾನಕರ ಸುದ್ದಿಯೊಂದನ್ನು ನೀಡಿದ್ದಾರೆ. ಖಾಸಗಿ ವಲಯದಲ್ಲಿ ಕನ್ನಡಿಗ (Kannadiga)ರಿಗೆ ಉದ್ಯೋಗ ಮೀಸಲಾತಿಗೆ (Job Reservation) ಕರ್ನಾಟಕ ಸರ್ಕಾರ (Karnataka Government) ಮಹತ್ವದ ಹೆಜ್ಜೆ ಇಟ್ಟಿದೆ.
ರಾಜ್ಯದ ಖಾಸಗಿ ಕೈಗಾರಿಕೆ (Private Industry) ಗಳಲ್ಲಿನ ಉದ್ಯೋಗಗಳು ಉತ್ತರ ಭಾರತದ ರಾಜ್ಯಗಳ ಪಾಲಾಗುತ್ತಿರುವ ಬಗ್ಗೆ ಹಲವು ದಿನಗಳಿಂದ ಕನ್ನಡಿಗರಿಂದ ಕೂಗೆದ್ದಿತ್ತು. ರಾಜ್ಯದ ಭೂಮಿ, ಮೂಲಭೂತ ಸೌಕರ್ಯಗಳನ್ನ ಪಡೆಯುವ ಕೈಗಾರಿಕಾ ಸಂಸ್ಥೆಗಳಲ್ಲಿ ಸ್ಥಳೀಯರಿಗೆ ಮೀಸಲಾತಿ ನೀಡಬೇಕು ಎಂಬ ಬಗ್ಗೆ ಬೇಡಿಕೆಯಿತ್ತು. ಆದ್ದರಿಂದ ರಾಜ್ಯದಲ್ಲಿನ ಎಲ್ಲಾ ಕೈಗಾರಿಕೆಗಳು ಮತ್ತು ಎಲ್ಲಾ ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ನೀಡಲು ರಾಜ್ಯ ಮುಂದಾಗುತ್ತಿದೆ. ಈ ನಿಟ್ಟಿನಲ್ಲಿ
ಶುಕ್ರವಾರ ಅಥವಾ ಸೋಮವಾರ ವಿಧಾನಸಭೆಯಲ್ಲಿ ಕರ್ನಾಟಕ ರಾಜ್ಯ ಕೈಗಾರಿಗಳು ಮತ್ತು ಇತರೆ ಸಂಸ್ಥೆಗಳಲ್ಲಿ ಸ್ಥಳೀಯ ಅಭ್ಯರ್ಥಿಗಳ ಉದ್ಯೋಗ ಮಸೂದೆ -2024 ಅನ್ನು ಕಾರ್ಮಿಕ ಇಲಾಖೆಯು ಮಂಡನೆಗೆ ಮುಂದಾಗಿದ್ದು ಸಂಪುಟ ಸಭೆಯಲ್ಲೂ ವಿಧೇಯಕ ಮಂಡನೆಗೆ ಹಸಿರು ನಿಶಾನೆ ಸಿಕ್ಕಿದೆ.
ರಾಜ್ಯದ ಖಾಸಗಿ ಕೈಗಾರಿಕೆಗಳು ಹಾಗೂ ಇತರೆ ಸಂಸ್ಥೆಗಳಲ್ಲಿ ಆಡಳಿತಾತ್ಮಕ ಹುದ್ದೆಗಳಿಗೆ ಶೇ.50 (ವ್ಯವಸ್ಥಾಪಕ, ಸೂಪರ್‌ವೈಸರ್, ಟೆಕ್ನಿಕಲ್ ಇತರೆ ಉನ್ನತ ಹುದ್ದೆಗಳು) ಹಾಗೂ ಆಡಳಿತಾತ್ಮಕವಲ್ಲದ (ಕೌಶಲ ರಹಿತ, ಕ್ಲರ್ಕ್, ಅರೆ ಕೌಶಲ ಗುತ್ತಿಗೆ ನೌಕರ) ಹುದ್ದೆಗಳಿಗೆ ಶೇ.75 ಮೀಸಲಾತಿ, ಸಿ ಮತ್ತು ಡಿ ದರ್ಜೆ ಉದ್ಯೋಗಳಲ್ಲಿ ಶೇ.ರಷ್ಟು 100 ಮೀಸಲಾತಿಗೆ ತೀರ್ಮಾನಿಸಿದೆ. ನಿಯಮ ಉಲ್ಲಂಘಿಸಿದರೆ 25 ಸಾವಿರ ರೂ. ತನಕ ದಂಡ ವಿಧಿಸುವ ಅಂಶವಿದೆ. ದಂಡ ವಿಧಿಸಿದ ನಂತರವೂ ಉದ್ಯೋಗ ನೀಡದೇ ಹೋದರೆ ದಿನಕ್ಕೆ 100 ರೂ. ದಂಡ ಅಸ್ತ್ರ ಪ್ರಯೋಗ ಮಾಡುವ ಬಗ್ಗೆ ವಿಧೇಯಕದಲ್ಲಿದೆ ಎಂದು ತಿಳಿದುಬಂದಿದೆ.
ಇದನ್ನೂ ತಪ್ಪದೇ ಓದಿ : BDA Published 172 Illegal Layouts List | ಬೆಂಗಳೂರಿನಲ್ಲಿದೆ 172 ಅನಧಿಕೃತ ಬಡಾವಣೆಗಳು ಎಚ್ಚರ!! : ಬಿಡಿಎ, ಕಾನೂನು ಬದ್ಧವಲ್ಲದ ಖಾಸಗಿ ಲೇಔಟ್ ಗಳ ಸಂಪೂರ್ಣ ವಿವರ ಪ್ರಕಟಿಸಿದೆ : ಇಲ್ಲಿದೆ ಅವುಗಳ ಪಟ್ಟಿ
ಮೀಸಲಾತಿ ಪಡೆಯಲು ಅರ್ಹತೆ ಏನಿರಬೇಕು? :
– ಕರ್ನಾಟಕದಲ್ಲಿ ಹುಟ್ಟಿರಬೇಕು
– ಕರ್ನಾಟಕದಲ್ಲಿ 15 ವರ್ಷ ವಾಸವಿರಬೇಕು
– ಕನ್ನಡ ಓದಲು, ಬರೆಯಲು ಮಾತನಾಡಲು ಬರಬೇಕು
– ನೋಡಲ್ ಏಜೆನ್ಸಿ ನಡೆಸುವ ಕನ್ನಡ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು
“ರಾಜ್ಯದ ಖಾಸಗಿ ಕೈಗಾರಿಕೆಗಳು ಹಾಗೂ ಇತರೆ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಆಡಳಿತಾತ್ಮಕ ಹುದ್ದೆಗಳಿಗೆ ಶೇ.50 ಹಾಗೂ ಆಡಳಿತಾತ್ಮಕವಲ್ಲದ ಹುದ್ದೆಗಳಿಗೆ ಶೇ.75 ಮೀಸಲಾತಿ ನಿಗದಿಪಡಿಸುವ ವಿಧೇಯಕಕ್ಕೆ ಸೋಮವಾರ ನಡೆದ ಸಚಿವ ಸಂಪುಟ ಸಭೆಯು ಒಪ್ಪಿಗೆ ನೀಡಿದೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.
“ಕನ್ನಡಿಗರು ಕನ್ನಡದ ನೆಲದಲ್ಲಿ ಉದ್ಯೋಗ ವಂಚಿತರಾಗುವುದನ್ನು ತಪ್ಪಿಸಿ, ತಾಯ್ನಾಡಿನಲ್ಲಿ ನೆಮ್ಮದಿಯ ಬದುಕು ಕಟ್ಟಿಕೊಳ್ಳಲು ಅವಕಾಶ ಕಲ್ಪಿಸಬೇಕು ಎಂಬುದು ನಮ್ಮ ಸರ್ಕಾರದ ಆಶಯ. ನಮ್ಮದು ಕನ್ನಡಪರವಾದ ಸರ್ಕಾರ. ಕನ್ನಡಿಗರ ಹಿತ ಕಾಯುವುದು ನಮ್ಮ ಆದ್ಯತೆಯಾಗಿದೆ” ಎಂದು ಅವರು ಹೇಳಿದ್ದಾರೆ.
“ಬೆಂಗಳೂರು ವೈರ್” ಡಿಜಿಟಲ್ ವೆಬ್ ನ್ಯೂಸ್ ಪೋರ್ಟೆಲ್ಲಿನ ಸೋಶಿಯಲ್ ಮೀಡಿಯಾ ಪೇಜ್ ಹಾಗೂ Google News ಗಳಿಗೆ ಉಚಿತವಾಗಿ Subscribe ಆಗಲು Facebook, Telegram, Twitter, Youtube, Whatsup Channel ಗೆ ಜಾಯಿನ್ ಆಗಲು ಇವುಗಳ ಲಿಂಕ್ ಮೇಲೆ ಕ್ಲಿಕ್ ಮಾಡಿ.