Sunday, June 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

BBMP White Topping Road Tender | “ಲೋಕಸಭೆ  ಚುನಾವಣೆ ಖರ್ಚಿಗಾಗಿ ಬಿಬಿಎಂಪಿ ರಸ್ತೆ ಕಾಮಗಾರಿಯಲ್ಲಿ ಕೋಟ್ಯಾಂತರ ರೂ. ಮೌಲ್ಯದ ಹಗರಣ” – ಮಾಜಿ ಮೇಯರ್ ಎಸ್.ಹರೀಶ್ ಗಂಭೀರ ಆರೋಪ

“ಗುಂಡಿ ಬೀಳದ, ರೋಡ್ ಕಟ್ಟಿಂಗ್ ಆಗದೆ ಚೆನ್ನಾಗಿರುವ ರಸ್ತೆಗಳನ್ನೇ ವೈಟ್ ಟಾಪಿಂಗ್ ಗೆ ಆಯ್ಕೆ ಮಾಡಿದ್ದಾರೆ. ಗುಂಡಿಬಿದ್ದ ಹಾಗೂ ಹಳ್ಳವಿರುವ ರಸ್ತೆಗಳಿದ್ದರೂ ಅದನ್ನು ಕಾಮಗಾರಿಗಾಗಿ ಆಯ್ಕೆ ಮಾಡಿಲ್ಲ.” | ಟೆಂಡರ್ ಪ್ರಕ್ರಿಯೆ ಪ್ರತಿ ಹಂತದಲ್ಲೂ ಕಾನೂನು ಉಲ್ಲಂಘನೆಯ ಬಗ್ಗೆ ಬಿಜೆಪಿ ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷರಿಂದ ಟೀಕೆ. | ಪ್ರಕರಣದ ಬಗ್ಗೆ ಲೋಕಾಯುಕ್ತಕ್ಕೆ ದೂರು ನೀಡುವುದಾಗಿ ಹೇಳಿಕೆ

by Bengaluru Wire Desk
July 20, 2024
in Bengaluru Focus, Public interest
Reading Time: 1 min read
0
ಬೆಂಗಳೂರಿನ ರಸ್ತೆಯೊಂದರ ಸಾಂದರ್ಭಿಕ ಚಿತ್ರ.

ಬೆಂಗಳೂರಿನ ರಸ್ತೆಯೊಂದರ ಸಾಂದರ್ಭಿಕ ಚಿತ್ರ.

ಬೆಂಗಳೂರು, ಜು.20 www.bengaluruwire.com : ಬಿಬಿಎಂಪಿಯಲ್ಲಿ ಲೋಕಸಭಾ ಚುನಾವಣೆಗೆ ಹಣ ಸಂಗ್ರಹಿಸಲು ರಸ್ತೆ ಕಾಮಗಾರಿಯಲ್ಲಿ ನೂರಾರು ಕೋಟಿ ರೂ. ದೊಡ್ಡ ಹಗರಣ ನಡೆಸಿದ್ದಾರೆ ಎಂದು ಮಾಜಿ ಉಪ ಮಹಾಪೌರ ಮತ್ತು ಬಿಜೆಪಿ ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್ ಹರೀಶ್ ಅವರು ಆರೋಪಿಸಿದ್ದಾರೆ.

ನಗರದ ಬಿಜೆಪಿಯ “ಜಗನ್ನಾಥ ಭವನ”ದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಶನಿವಾರ ಮಾತನಾಡಿದ ಅವರು, ಲೋಕಸಭಾ ಚುನಾವಣೆಗೂ ಮೊದಲು 2 ಸಾವಿರ ಕೋಟಿ ರೂಪಾಯಿ ಟೆಂಡರ್ ಪ್ರಕ್ರಿಯೆ ಆರಂಭಿಸಿದ್ದರು. ಫೆಬ್ರವರಿ 5ರಂದು ಟೆಂಡರ್ ಕರೆದಿದ್ದು, ಫೆ. 17 ಆಗಿತ್ತು. ಫೆ. 21ರಂದು ಟೆಂಡರ್ ತೆರೆಯುವುದಾಗಿ ಹೇಳಿದ್ದರು. ಫೆ. 22ರಂದು ತಾಂತ್ರಿಕ ಮೌಲ್ಯಮಾಪನ ಸಮಿತಿಯಲ್ಲಿ ಚರ್ಚಿಸಿ ಅವತ್ತೇ ಅನುಮೋದನೆ ಕೊಟ್ಟಿದ್ದರು. ಅದೇ 23ರಂದು ಆರ್ಥಿಕ ಮೌಲ್ಯಮಾಪನ ಮಾಡಿ, ಅನುಮೋದನೆ ನೀಡಿದ್ದರು. ಆದರೆ ಮಾರ್ಚ್ 16ರಂದು ನೀತಿ ಸಂಹಿತೆ ಜಾರಿಯಾಗಿತ್ತು. ಮಾರ್ಚ್ 15ರೊಳಗೆ ಎಲ್ಲ ಟೆಂಡರ್ ಗಳ ಕಾಮಗಾರಿ ಮಾಡುವಂತೆ ಎಲ್ಲ ಗುತ್ತಿಗೆದಾರರಿಗೆ ಕಾರ್ಯಾದೇಶ ನೀಡಿದ್ದಾರೆ. ಚುನಾವಣಾ ಕರ್ಚಿಗಾಗಿ ಈ ಹಣದ ಮೇಲೆ ಅವಲಂಬಿಸಿದ್ದು, ಮಾರ್ಚ್ 15ರ ತನಕ ಕಾದಿದ್ದರು ಎಂದು ಹರೀಶ್ ದೂರಿದ್ದಾರೆ.

ಮಾಜಿ ಉಪ ಮಹಾಪೌರ ಮತ್ತು ಬಿಜೆಪಿ ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್ ಹರೀಶ್, ಮಾಜಿ ಮೇಯರ್ ಗೌತಮ್ ಕುಮಾರ್ ಅವರಿಂದು ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದರು.

ಬೊಮ್ಮಾಯಿಯವರು ಮುಖ್ಯಮಂತ್ರಿಗಳಾದ್ದಾಗ ಬೆಂಗಳೂರಿಗೆ 6 ಸಾವಿರ ಕೋಟಿ ರೂ. ಬಿಡುಗಡೆ ಮಾಡಿದ್ದರು. ರಸ್ತೆ ಡಾಂಬರೀಕರಣ, ಫುಟ್‍ಪಾತ್ ಸರಿಪಡಿಸುವಿಕೆ, ರಸ್ತೆಗಳ ಸಮಗ್ರ ಅಭಿವೃದ್ಧಿಯ ಉದ್ದೇಶವಿತ್ತು. ಪ್ರತಿ ಕ್ಷೇತ್ರಕ್ಕೂ 25ರಿಂದ 30 ಕೋಟಿ, 50 ಕೋಟಿ ರೂ., 100 ರಿಂದ 150 ಕೋಟಿ ರೂ. ಅನುದಾನ ನೀಡಿದ್ದರು. ಈ ಎಲ್ಲ ಕಾಮಗಾರಿಗಳು ಮುಗಿದು ಕೆಲವು ಬಿಲ್ ಪಾವತಿ ಆಗಿತ್ತು. ಹಲವು ಕಾಮಗಾರಿ ಇನ್ನೂ ಪ್ರಗತಿಯಲ್ಲಿವೆ. ಇನ್ನೂ ಕೆಲವು ಕಾರ್ಯಗಳಿಗೆ ಬಿಲ್ ಪಾವತಿ ಆಗಿರಲಿಲ್ಲ ಎಂದು ವಿವರ ನೀಡಿದರು.

ನಮ್ಮಲ್ಲಿ ಟಿವಿಸಿಸಿ ಸೆಲ್ ಇದೆ. ಗುತ್ತಿಗೆದಾರರಿಗೆ ಹಣ ಪಾವತಿಗೆ ಮೊದಲು ಇದೇ ಟಿವಿಸಿಸಿಯವರು ಪರಿಶೀಲಿಸಿ ದೃಢೀಕರಣ ಪತ್ರ ನೀಡುತ್ತಾರೆ. ಆ ಬಳಿಕ ಹಣ ಪಾವತಿಯಾಗುತ್ತದೆ. ಇತ್ತೀಚೆಗೆ ಕಾಮಗಾರಿ ಆದ ರಸ್ತೆಗಳಿಗೂ ವೈಟ್ ಟಾಪಿಂಗ್  ಮುಂದಾಗಿದ್ದಾರೆ. ಹಿಂದಿನ ರಸ್ತೆ ಅಭಿವೃದ್ಧಿ ಕಾಮಗಾರಿಗಳ ಹಣವೇ ಪಾವತಿ ಆಗಿಲ್ಲ. ಅದರ ಮೇಲೆ ವೈಟ್ ಟಾಪಿಂಗ್ ನಡೆದರೆ ಟಿವಿಸಿಸಿಯವರು ಹೇಗೆ ಸರ್ಟಿಫಿಕೇಟ್ ಕೊಡಲು ಸಾಧ್ಯ?  ಹೇಗೆ ಹಣ ಪಾವತಿ ಸಾಧ್ಯ? ಎಂದು ಬಿಬಿಎಂಪಿ ಆಡಳಿತಕ್ಕೆ ಪ್ರಶ್ನಿಸಿದ್ದಾರೆ.

“ಗುಂಡಿ ಬೀಳದ, ರೋಡ್ ಕಟ್ಟಿಂಗ್ ಆಗದೆ ಚೆನ್ನಾಗಿರುವ ರಸ್ತೆಗಳನ್ನೇ ವೈಟ್ ಟಾಪಿಂಗ್ ಗೆ ಆಯ್ಕೆ ಮಾಡಿದ್ದಾರೆ. ಗುಂಡಿಬಿದ್ದ ಹಾಗೂ ಹಳ್ಳವಿರುವ ರಸ್ತೆಗಳಿದ್ದರೂ ಅದರ ಕಾಮಗಾರಿ ಮಾಡಿಲ್ಲ. ದೋಷ ಹೊಣೆಗಾರಿಕೆಯ ಅವಧಿ (Defect liability period –DLP) ಮುಗಿಯದ ರಸ್ತೆಗಳನ್ನೂ ವೈಟ್ ಟಾಪಿಂಗ್ ಕಾಮಗಾರಿಗೆ ಆಯ್ಕೆ ಮಾಡಿಕೊಂಡಿದ್ದಾರೆ. ಟೆಂಡರ್ ಶೂರ್ ರಸ್ತೆಗಳನ್ನೂ ಮರು ವೈಟ್ ಟಾಪಿಂಗ್ ಮಾಡಲು ಪರಿಗಣಿಸಿದ್ದಾರೆ. 2018-19ರಲ್ಲಿ ಕಾರ್ಯಾದೇಶ ನೀಡಿದ್ದ ರಸ್ತೆಗಳನ್ನೇ ಪರಿಗಣಿಸಿದ್ದಾರೆ. ಗುತ್ತಿಗೆದಾರರು ಹತ್ತಾರು ಕೋಟಿ ಇಎಂಡಿ ಮೊತ್ತ ಕಟ್ಟಿದ್ದ ರಸ್ತೆಯನ್ನೇ ಆರಿಸಿದ್ದಾರೆ. ಹಿಂದೆ ಕಾಮಗಾರಿ ನಡೆಸಿದವರಿಗೆ ಕಾರ್ಯಾದೇಶ ರದ್ದು ಮಾಡಿದ ಬಗ್ಗೆ ಸೂಚನೆ ಕೊಟ್ಟಿಲ್ಲ” ಎಂದು ಹರೀಶ್ ಅವರು ಟೀಕಿಸಿದ್ದಾರೆ.

“ಯಾರೋ ಒಬ್ಬರ ಓಲೈಕೆಗೆ ಸಿಂಗಲ್ ಟೆಂಡರ್ ನೀಡಲಾಗಿದೆ” :

ಎಂ.ಜಿ.ರಸ್ತೆಯ ಸಾಂದರ್ಭಿಕ ಚಿತ್ರ.

“ಲೋಕಸಭಾ ಚುನಾವಣೆಗೆ ದುಡ್ಡಿನ ಅವಶ್ಯಕತೆ ಇದ್ದುದರಿಂದ ಏಜೆಂಟ್, ಮಿಡ್ಲ್‍ಮೆನ್, ಕಲೆಕ್ಷನ್ ಏಜೆಂಟ್ ಎನ್ನಲಾದ ಬಿಬಿಎಂಪಿಯ ಪ್ರಮುಖ ಅಧಿಕಾರಿಗಳ ಮೂಲಕ ವೈಟ್ ಟಾಪಿಂಗ್ ಯೋಜನೆಯು ನಡೆದಿದೆ. ಹಿಂದಿನ ಕಾರ್ಯಾದೇಶ ರದ್ದು ಮಾಡಿದ್ದರೆ ಸಂಪುಟದ ಅನುಮತಿ ಬೇಕಾಗಿತ್ತು. ಆದರೆ, ಈ ರೀತಿ ಯಾವುದೇ ಅನುಮತಿ ಪಡೆದಿರಲಿಲ್ಲ. ಕಾನೂನು ಕಾಯ್ದೆ ಉಲ್ಲಂಘಿಸಿ ಒಂದು ಸಿಂಗಲ್ ಟೆಂಡರ್ ಕೊಟ್ಟಿದ್ದಾರೆ. ಮಂಗಳೂರಿನಲ್ಲಿ ಸ್ಪರ್ಧಿಸಿದ್ದ ಮೊಹಿಯುದ್ದೀನ್ ಬಾವ ಅವರ ತಮ್ಮ ಸೈಫುದ್ದೀನ್‍ರಿಗೆ ಸೇರಿದ ಓಶಿಯನ್ ಕಂಪೆನಿಗೆ ಸಿಂಗಲ್ ಟೆಂಡರ್ ಕೊಟ್ಟಿದ್ದಾರೆ. ಚೀಫ್ ಎಂಜಿನಿಯರ್ ಪ್ರಹ್ಲಾದ್ ಅವರೇ ಈ ನೋಟ್ ಹಾಕಿ ಮಂಜೂರಾತಿ ಕೊಟ್ಟಿದ್ದಾರೆ. ಬಳಿಕ ಅವರೇ ಎಂಜಿನಿಯರಿಂಗ್ ಚೀಫ್ ಆಗಿ ಅನುಮೋದಿಸಿದೆ ಎಂದು ಬರೆದಿದ್ದಾರೆ. 2018-19ರ ಟೆಂಡರ್ ರದ್ದು ಮಾಡದೆ, ಯಾರೋ ಒಬ್ಬರ ಓಲೈಕೆಗೆ ಸಿಂಗಲ್ ಟೆಂಡರ್ ಕೊಟ್ಟಿದ್ದಾರೆ. ಬೇರೆಯವರಿಗೂ ಹಾಗೇ ಮಾಡಬೇಕಿತ್ತಲ್ಲವೇ” ಎಂದು ಮಾಜಿ ಮೇಯರ್ ಹಾಗೂ ಬಿಜೆಪಿ ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್ ಹರೀಶ್ ಆರೋಪಿಸಿದ್ದು, ಇದಕ್ಕಾಗಿ ಕಾಮಗಾರಿ ಹರಾಜಿನ ನಾಟಕ ಮಾಡುವ ಅವಶ್ಯಕತೆ ಇರಲಿಲ್ಲ ಅಲ್ಲವೇ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಿರ್ದಿಷ್ಟ ತಾಂತ್ರಿಕ ಸಮಿತಿಗೇ ತಿಲಾಂಜಲಿ :

25 ಕೋಟಿಗೂ ಹೆಚ್ಚು ಮೊತ್ತದ ಕಾಮಗಾರಿಯು ನಿರ್ದಿಷ್ಟ ತಾಂತ್ರಿಕ ಸಮಿತಿ ಮುಂದೆ ಹೋಗಬೇಕೆಂದು ಸೂಚನೆ ಇದೆ. ಆದರೆ, ಆ ಸಮಿತಿಯನ್ನೇ ವಿಸರ್ಜಿಸಿದ್ದಾರೆ. ಇವರೇ ತಾಂತ್ರಿಕ ಸಮಿತಿ ಮಾಡಿಕೊಂಡು, ಪಾಲಿಕೆ ಪ್ರಧಾನ ಎಂಜಿನಿಯರ್ ಪ್ರಹ್ಲಾದ್ ಸೂತ್ರಧಾರಿ ಆಗಿದ್ದುಕೊಂಡು ಅವರೇ ಅನುಮೋದಿಸುತ್ತಾರೆ. ಇದು ಏಕಪಾತ್ರಾಭಿನಯವಾಗಿದ್ದು, ಮೊನ್ನೆ ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ಸಚಿವ ಡಿ.ಕೆ.ಶಿವಕುಮಾರ್ ನಗರದಾದ್ಯಂತ ವೈಟ್ ಟಾಪಿಂಗ್ ರಸ್ತೆ ಕಾಮಗಾರಿಗೆ ಚಾಲನೆ ಕೊಟ್ಟಿದ್ದಾರೆ ಎಂದು ಅವರು ದೂರಿದರು.

ತರಾತುರಿಯಲ್ಲಿ ಟೆಂಡರ್ ಮಾಡಿದ್ದೇಕೆ? ಪ್ರಕೃತಿ ವಿಕೋಪ ಇದ್ದರೆ ಟೆಂಡರ್ ಅವಧಿಯನ್ನು ಸ್ವಲ್ಪ ಕಡಿಮೆ ಮಾಡಬಹುದು. ಇದೊಂದು ದೊಡ್ಡ ಹಗರಣ. ಈ ಪ್ರಕರಣವನ್ನು ಲೋಕಾಯುಕ್ತೆ ತನಿಖೆ ನಡೆಸಲು ಕೊಡುತ್ತೇವೆ. ಅಲ್ಲದೆ ಈಗಾಗಲೇ ಗುತ್ತಿಗೆದಾರರಿಗೆ ಕಾಮಗಾರಿ ಪೂರ್ಣಗೊಳಿಸಿದ ಪ್ರಮಾಣ ಪತ್ರ (Work Done Certificate) ಕೊಟ್ಟಿದ್ದೆಲ್ಲವೂ ನಕಲಿ ಎಂದು ಆರೋಪಿಸಿದ ಅವರು, ಲೋಕಸಭಾ ಚುನಾವಣೆಗೆ ಬಿಬಿಎಂಪಿಯಲ್ಲಿ ವಿನೂತನ ಮಾದರಿಯ ತಯಾರಿ ನಡೆದಿತ್ತು. ಪ್ರಪಂಚದಲ್ಲಿ 8 ಅದ್ಭುತಗಳಿದ್ದರೆ, ಬಿಬಿಎಂಪಿಯಲ್ಲಿ 10 ರಿಂದ 12 ಅದ್ಭುತಗಳಿವೆ. ಅದರಲ್ಲಿ ಒಂದು ಅದ್ಭುತ ಇಲ್ಲಿದೆ ಎಂದು ವಿವರಿಸಿದರು. ಸುದ್ದಿಗೋಷ್ಠಿಯಲ್ಲಿ ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿ ಗೌಡ, ಮಾಜಿ ಮಹಾಪೌರರಾದ ಗೌತಮ್ ಕುಮಾರ್, ಪ್ರಮುಖರು ಹಾಜರಿದ್ದರು.

WhatsApp Join our WhatsApp Channel
Previous Post

Indira Canteen | ಸ್ಥಗಿತಗೊಂಡಿದ್ದ 11 ಇಂದಿರಾ ಕ್ಯಾಂಟೀನ್ ಇಂದಿನಿಂದಲೇ ಪುನರಾರಂಭ : ಗುತ್ತಿಗೆ ಸಂಸ್ಥೆ, ಆಹಾರ ಪೂರೈಕೆಗಿಂತ ಹೆಚ್ಚಿನ ಬಿಲ್ ಸಲ್ಲಿಕೆ ಹಿನ್ನಲೆಯಲ್ಲಿ ಅನುದಾನ ಕಡಿತ : ಪಾಲಿಕೆ ಸ್ಪಷ್ಟನೆ

Next Post

Professional Course Fees | ಎಂಜನಿಯರಿಂಗ್ ಕೋರ್ಸುಗಳ ಶುಲ್ಕ ಶೇ.10ರಷ್ಟು ಹೆಚ್ಚಳ : 2024-25ನೇ ಸಾಲಿನ ಪ್ರವೇಶಕ್ಕೆ ಅನ್ವಯ ; ಹಾಗಾದರೆ ಫೀಸ್ ಎಷ್ಟಿದೆ?

Next Post

Professional Course Fees | ಎಂಜನಿಯರಿಂಗ್ ಕೋರ್ಸುಗಳ ಶುಲ್ಕ ಶೇ.10ರಷ್ಟು ಹೆಚ್ಚಳ : 2024-25ನೇ ಸಾಲಿನ ಪ್ರವೇಶಕ್ಕೆ ಅನ್ವಯ ; ಹಾಗಾದರೆ ಫೀಸ್ ಎಷ್ಟಿದೆ?

CREATOR: gd-jpeg v1.0 (using IJG JPEG v62), quality = 82?

IT/ITES #14hrWorkingDay | ಐಟಿ ಉದ್ಯೋಗಿಗಳ ಕೆಲಸದ ಅವಧಿ 14 ಗಂಟೆಗಳಿಗೆ ವಿಸ್ತರಣೆ : ರಾಜ್ಯ ಸರ್ಕಾರದ ಚಿಂತನೆಗೆ ಮಾಹಿತಿ ತಂತ್ರಜ್ಞಾನ ವಲಯದ ಕೆಐಟಿಯು ವ್ಯಾಪಕ ವಿರೋಧ : ಒಕ್ಕೂಟ ಏನು ಹೇಳುತ್ತಿದೆ?

Please login to join discussion

Like Us on Facebook

Follow Us on Twitter

Recent News

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group