ಲಡಾಖ್, ಜು.22 www.bengaluruwire.com : ಜಮ್ಮು ಮತ್ತು ಕಾಶ್ಮೀರದ ಕಾರ್ಗಿಲ್ ಸೆಕ್ಟರ್‌ನಲ್ಲಿ ಪಾಕಿಸ್ತಾನದ ವಿರುದ್ಧ ಗೆಲವು ಸಾಧಿಸಿದ “ವಿಜಯ್ ದಿವಸ್” (Vijay Diwas)ನ 25 ನೇ ವಾರ್ಷಿಕೋತ್ಸವದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಜುಲೈ 26 ರಂದು ಲಡಾಖ್‌ನ ದ್ರಾಸ್‌ಗೆ ಭೇಟಿ ನೀಡಲಿದ್ದಾರೆ.
ಇದಕ್ಕೂ ಮುನ್ನ ಭಾನುವಾರ ಲಡಾಖ್‌ನ ಲೆಫ್ಟಿನೆಂಟ್ ಗವರ್ನರ್ ಬ್ರಿಗ್ (ನಿವೃತ್ತ) ಬಿ.ಡಿ ಮಿಶ್ರಾ ಅವರು ಭಾನುವಾರ ಸೆಕ್ರೆಟರಿಯೇಟ್‌ನಲ್ಲಿ ಸಭೆ ನಡೆಸಿದರು ಮತ್ತು ದ್ರಾಸ್‌ನಲ್ಲಿರುವ ಕಾರ್ಗಿಲ್ ಯುದ್ಧ ಸ್ಮಾರಕಕ್ಕೆ ಪ್ರಧಾನಿ ಭೇಟಿಯ ವ್ಯವಸ್ಥೆಗಳ ಬಗ್ಗೆ ಪರಿಶೀಲಿಸಿದರು.
ಲೆಫ್ಟಿನೆಂಟ್ ಗವರ್ನರ್ ಬ್ರಿಗೇಡಿಯರ್ (ಡಾ) ಬಿಡಿ ಮಿಶ್ರಾ (ನಿವೃತ್ತ) ಅವರು ಲೆಫ್ಟಿನೆಂಟ್ ಗವರ್ನರ್ ಸೆಕ್ರೆಟರಿಯೇಟ್‌ನಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಕಾರ್ಗಿಲ್ ಯುದ್ಧ ಸ್ಮಾರಕ ದ್ರಾಸ್‌ಗೆ ಭೇಟಿ ನೀಡುವ ಕುರಿತು ಚರ್ಚಿಸಲು ಸಭೆ ನಡೆಸಿದರು. ಈ ಕುರಿತಂತೆ ಲಡಾಖ್ ಲೆಫ್ಟಿನೆಂಟ್ ಗವರ್ನರ್ ಕಚೇರಿಯು ಎಕ್ಸ್ ನಲ್ಲಿ ಈ ವಿಷಯವನ್ನು ಪೋಸ್ಟ್ ಮಾಡಿದ್ದಾರೆ.
ಪ್ರಧಾನಮಂತ್ರಿಯವರ ಭೇಟಿಗೆ ಮುನ್ನ ಲಡಾಕ್ ಲೆಫ್ಟಿನೆಂಟ್ ಗವರ್ನರ್ ಜುಲೈ 24 ರಂದು ದ್ರಾಸ್‌ನಲ್ಲಿರುವ ಕಾರ್ಗಿಲ್ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಲಿದ್ದಾರೆ. ಈ ಹಿಂದೆ ಪ್ರಧಾನಿ ಮೋದಿ ಅವರು ಕಾರ್ಗಿಲ್ ಸೈನಿಕರೊಂದಿಗೆ ದೀಪಾವಳಿ ಆಚರಿಸಿ, 1999 ರ ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ಸೇನಾ ಸಿಬ್ಬಂದಿಗಳಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದನ್ನು ಇಲ್ಲಿ ನೆನಪಿಸಿಕೊಳ್ಳಬಹುದು.
ಕಾರ್ಗಿಲ್ ವಿಜಯ್ ದಿವಸ್ ಮಹತ್ವವೇನು?:
ಏಕೆಂದರೆ 1999 ರಲ್ಲಿ ಆಪರೇಷನ್ ವಿಜಯ್ ಗೆಲುಲು ಸಾಧಿಸಿದ ನೆನಪಿಗಾಗಿ ಭಾರತದಲ್ಲಿ ಪ್ರತಿ ವರ್ಷ ಜುಲೈ 26 ರಂದು ಕಾರ್ಗಿಲ್ ವಿಜಯ್ ದಿವಸ್ ಅನ್ನು ಆಚರಿಸಲಾಗುತ್ತದೆ. ಈ ಘಟನೆಯು ಭಾರತ ಮತ್ತು ಪಾಕಿಸ್ತಾನದ ನಡುವೆ 1999ರ ಮೇ ನಲ್ಲಿ ಯುದ್ಧ ಪ್ರಾರಂಭವಾಗಿ ಯಶಸ್ವಿಯಾಗಿ ಭಾರತವು ಶತ್ರುಗಳನ್ನು ಹಿಮ್ಮೆಟ್ಟಿಸುವುದರೊಂದಿಗೆ ಕಾರ್ಗಿಲ್ ಯುದ್ಧದ ಮುಕ್ತಾಯವಾಯಿತು.
ಜಮ್ಮು ಮತ್ತು ಕಾಶ್ಮೀರದ ಕಾರ್ಗಿಲ್ ಸೆಕ್ಟರ್‌ನಲ್ಲಿ ಪಾಕಿಸ್ತಾನಿ ಸೈನಿಕರು ಮತ್ತು ಭಯೋತ್ಪಾದಕರು ಒಳನುಸುಳಿದ್ದರು. ಈ ಸಂಘರ್ಷದ ಸಮಯದಲ್ಲಿ, ಭಾರತೀಯ ಪಡೆಗಳು ಯಶಸ್ವಿಯಾಗಿ ಕಾರ್ಯತಂತ್ರ ನಡೆಸಿ ಭೂಮಾತೆಯ ಸಂರಕ್ಷಣೆ ಕಾರ್ಯದಲ್ಲಿ ವಿಜಯಿಯಾದರು.
ಈ ದಿನವು ರಾಷ್ಟ್ರದ ರಕ್ಷಣೆಯಲ್ಲಿ ತಮ್ಮ ಪ್ರಾಣವನ್ನು ತ್ಯಾಗ ಮಾಡಿದ ಸೈನಿಕರ ಧೈರ್ಯವನ್ನು ಗೌರವಿಸುತ್ತದೆ ಮತ್ತು ಭಾರತೀಯ ಸಶಸ್ತ್ರ ಪಡೆಗಳ ಶಕ್ತಿಯನ್ನು ನೆನೆಯಲಾಗುತ್ತದೆ. ಕಾರ್ಗಿಲ್ ವಿಜಯ್ ದಿವಸ್ ನಮ್ಮ ಸೈನಿಕರ ತ್ಯಾಗ, ವೀರ ಬಲಿದಾನಕ್ಕೆ ಗೌರವ ಸಲ್ಲಿಸುವ, ಮತ್ತು ರಾಷ್ಟ್ರದ ಸಾರ್ವಭೌಮತೆ ಹಾಗುಯ ಸಮಗ್ರತೆಯನ್ನು ರಕ್ಷಿಸಲು ನಮ್ಮ ರಕ್ಷಣಾ ಪಡೆಗಳ ಬದ್ಧತೆಯನ್ನು ಪುನರುಚ್ಚರಿಸುತ್ತದೆ.
ಕಾರ್ಗಿಲ್ ವಿಜಯ್ ದಿವಸ್‌ನ 25 ನೇ ವಾರ್ಷಿಕೋತ್ಸವವನ್ನು ಈ ವರ್ಷ ಜುಲೈ 26 ರಂದು ದೇಶದಾದ್ಯಂತ ಬಹಳ ಸಂಭ್ರಮದಿಂದ ಆಚರಿಸಲು ಪೂರ್ವ ಸಿದ್ಧತೆ ಆರಂಭವಾಗಿದೆ.