Saturday, June 13, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

    ಡಿಎಲ್ ಎಂಎಸ್ ಸ್ಟಾಟಿಕ್ ಡಿಜಿಟಲ್ ಮೀಟರ್ ಚಿತ್ರ

    ಬೆಂಗಳೂರಿಗರಿಗೆ ಭರ್ಜರಿ ಕೊಡುಗೆ: ಹೊಸ ವಿದ್ಯುತ್ ಸಂಪರ್ಕಕ್ಕೆ ಒಸಿ ಕಡ್ಡಾಯವಲ್ಲ, ಆದರೆ…

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Independence Day | ಬೆಂಗಳೂರು : ಸ್ವಾತಂತ್ರ್ಯ ದಿನಾಚರಣೆಯಲ್ಲಿ ಮಿಂಚಲಿದೆ ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಕಾರ್ಯಕ್ರಮ ಪ್ರದರ್ಶನ

by Bengaluru Wire Desk
August 13, 2024
in Bengaluru Focus
Reading Time: 1 min read
0
Manik shaw parade ground

ಮಾಣಿಕ್ ಷಾ ಕವಾಯತು ಮೈದಾನದಲ್ಲಿ ಆ.15ರ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಡೆಯುವ ಪಥಸಂಚಲನ ಕಾರ್ಯಕ್ರಮಕ್ಕೆ ಪೂರ್ವಭಾವಿಯಾಗಿ ಅಭ್ಯಾಸದಲ್ಲಿ ತೊಡಗಿರುವ ವಿವಿಧ ಪೊಲೀಸ್ ತುಕುಡಿಗಳು.

ಬೆಂಗಳೂರು, ಆ.13 www.bengaluruwire.com : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಗೆ ಇನ್ನು ಎರಡು ದಿನ ಬಾಕಿಯಿದೆ. ರಾಜ್ಯ ಸರ್ಕಾರದಿಂದ ನಡೆಯುವ ಕಾರ್ಯಕ್ರಮ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಆಯೋಜನೆ ನಡೆಯುತ್ತಿದ್ದು, ಆಗಸ್ಟ್ 15 ರಂದು ಬೆಳಗ್ಗೆ 9 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಧ್ವಜಾರೋಹಣ ಮಾಡಿ ಗೌರವ ವಂದನೆ ಸ್ವೀಕರಿಸಿದ್ದಾರೆ. ಬಳಿಕ ನಾಡಿನ ಜನತೆಗೆ ಸ್ವಾತಂತ್ರ್ಯೋತ್ಸವದ ಸಂದೇಶ ನೀಡುತ್ತಾರೆ.

ಸ್ವಾತಂತ್ರ್ಯಾ ದಿನಾಚರಣೆ ಹಿನ್ನಲೆಯಲ್ಲಿ ಮಾಣಿಕಾ ಷಾ ಮೈದಾನದಲ್ಲಿ ಹಮ್ಮಿಕೊಂಡಿರುವ ವಿವಿಧ ಕಾರ್ಯಕ್ರಮಗಳ ಕುರಿತಾಗಿ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ನಗರ ಪೊಲೀಸ್ ಆಯುಕ್ತ ದಯಾನಂದ್ ಹಾಗೂ ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ.ಎ.ದಯಾನಂದ್ ಅವರು ಮಂಗಳವಾರ ಜಂಟಿ ಪತ್ರಿಕಾಗೋಷ್ಠಿ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಪಾಲಿಕೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ಅಂಗಾಂಗ ದಾನ ಮಾಡಿರುವ ಒಟ್ಟು 64 ಕುಟುಂಬದ ಸದಸ್ಯರಿಗೆ ಮುಖ್ಯಮಂತ್ರಿಗಳು ಪ್ರಶಂಸಾ ಪತ್ರ ನೀಡಿ ಗೌರವಿಸಲಿದ್ದಾರೆ ಎಂದರು.

ಸ್ವಾಂತಂತ್ರ್ಯೋತ್ಸವದಲ್ಲಿ ಮಿಂಚಲಿದೆ ಪಂಚಗ್ಯಾರಂಟಿ ಪ್ರದರ್ಶನ :

ಸ್ವಾತಂತ್ರ್ಯೋತ್ಸವದ ಅಂಗವಾಗಿ ನಾಡಗೀತೆ ಮತ್ತು ರೈತಗೀತೆ, 750 ಪ್ರೌಢಶಾಲಾ ಮಕ್ಕಳಿಂದ ಜಯಭಾರತಿ ಎಂಬ ಕಾರ್ಯಕ್ರಮ, ರಾಷ್ಟ್ರೀಯ ಸೇವಾ ಯೋಜನೆ, ರಾಜ್ಯ ಎನ್.ಎಸ್.ಎಸ್ ಕೋಶ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಸರ್ಕಾರದ ಐದು ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳ ಬಗ್ಗೆ 400 ಮಕ್ಕಳು ಪ್ರದರ್ಶನ ಕಾರ್ಯಕ್ರಮ ನೀಡಲಿದ್ದಾರೆ. ಬಿಬಿಎಂಪಿಯ ಸಂಯುಕ್ತ ಪದವಿಪೂರ್ವ ಕಾಲೇಜಿನ 700 ಮಕ್ಕಳಿಂದ ಸ್ವಾತಂತ್ರ್ಯ ಹೋರಾಟಗಾರ್ತಿ ರಾಣಿ ಅಬ್ಬಕ್ಕ ದೇವಿ ಕುರಿತ ಕಾರ್ಯಕ್ರಮ, ಮರಾಠ ಲೈಟ್ ಇನ್ ಫೆಂಟ್ರಿ ರೆಜಿಮೆಂಟಿನ ಸೈನಿಕರಿಂದ ನಾಡಿನ ಹೆಸರಾಂತ ಸಾಹಸ ಕ್ರೀಡೆಯಾದ ಮಲ್ಲಕಂಬ ಪ್ರದರ್ಶನ, ಸೇನಾಪಡೆಯ ಪ್ಯಾರಚೂಟ್ ರೆಜಿಮೆಂಟ್ ತರಬೇತಿ ಕೇಂದ್ರದ ಸೇನಾನಿಗಳಿಂದ ಪ್ಯಾರಾ ಮೋಟಾರ್ ಪ್ರದರ್ಶನ, ಕಾರ್ಪ್ಸ್ ಮಿಲಿಟರಿ ಪೊಲೀಸ್ ಕೇಂದ್ರ ಮತ್ತು ಶಾಲೆಯಿಂದ ಮೋಟಾರ್ ಸೈಕಲ್ ಪ್ರದರ್ಶನವಿರಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಮಾಣಿಕ್ ಷಾ ಕವಾಯತು ಮೈದಾನದಲ್ಲಿ ಸ್ವಾತಂತ್ರ್ತ್ಯೋತ್ಸವ ಕಾರ್ಯಕ್ರಮದ ಪೂರ್ವ ಸಿದ್ಧತೆ ಪರಿಶೀಲಿಸುತ್ತಿರುವ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್. ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಹಾಗೂ ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ.ಎ.ದಯಾನಂದ್ ಜೊತೆಗಿದ್ದಾರೆ.

ಈ ಕಾರ್ಯಕ್ರಮದ ಹಿನ್ನಲೆಯಲ್ಲಿ ಮಾಣಿಕ್ ಷಾ ಮೈದಾನದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗುತ್ತಿದ್ದು, ಭದ್ರತೆಗಾಗಿ 100 ಸಿಸಿ ಕ್ಯಾಮರಾ ವ್ಯವಸ್ಥೆ, 2 ಬ್ಯಾಗೇಜ್ ಸ್ಕ್ಯಾನರ್ ಮತ್ತು ವ್ಯವಸ್ಥಿತ ಸಂಚಾರ ನಿಯಂತ್ರಣಾ ವ್ಯವಸ್ಥೆಗಳನ್ನು ಮಾಡಲಾಗಿರುತ್ತದೆ. ಕೆಎಸ್ ಆರ್ ಪಿ, ಸಿಆರ್ ಪಿಎಫ್, ಬಿಎಸ್ಎಫ್, ಅಗ್ನಿಶಾಮಕ ದಳ ಸೇರಿದಂತೆ 1500 ಮಂದಿ ಗೌರವರಕ್ಷೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತ ದಯಾನಂದ್ ಹೇಳಿದ್ದಾರೆ. ನಗರದಲ್ಲಿ ಕೆಲವು ಕಡೆ ಸಂಚಾರ ಮಾರ್ಗ ಬದಲಾವಣೆ ಮಾಡಿ ಬೆಂಗಳೂರು ನಗರ ಸಂಚಾರಿ ಪೊಲೀಸರು ಆದೇಶ ಹೊರಡಿಸಿದ್ದಾರೆ. ಇದರ ಅಂಗವಾಗಿ ಬೆಂಗಳೂರು ನಗರ ಸಂಚಾರ ಪೊಲೀಸರು ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಕವಾಯತು ಮೈದಾನದ ಒಳಗಡೆ ಮತ್ತು ಸುತ್ತ-ಮುತ್ತಲ ಭಾಗಗಳಲ್ಲಿ ಈ ಕೆಳಕಂಡಂತೆ ಸಂಚಾರ ಬಂದೋಬಸ್ತ್ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

ವಾಹನ ಪ್ರವೇಶ, ನಿಲ್ದಾಣ ವ್ಯವಸ್ಥೆ ಹೇಗಿರುತ್ತೆ? :

ಕಾರ್ ಪಾಸ್‌ಗಳನ್ನು ಹೊಂದಿರುವ ಎಲ್ಲಾ ಆಹ್ವಾನಿತರು ಅವರುಗಳ ಪಾಸ್‌ಗಳಲ್ಲಿ ನಿಗದಿಪಡಿಸಿದ ಗೇಟ್‌ಗಳಲ್ಲಿ ಆಗಮಿಸಿ ನಿಗದಿತ ಸ್ಥಳಗಳಲ್ಲಿ ವಾಹನ ನಿಲುಗಡೆ ಮಾಡಬೇಕು. ತುರ್ತು ಸೇವಾ ವಾಹನಗಳಾದ ಅಂಬುಲೆನ್ಸ್, ಅಗ್ನಿಶಾಮಕ ದಳದ ವಾಹನಗಳು, ನೀರಿನ ಟ್ಯಾಂಕರ್, ಕೆ.ಎಸ್.ಆರ್.ಪಿ., ಕ್ಯೂ.ಆರ್.ಟಿ, ಬಿ.ಬಿ.ಎಂ.ಪಿ. ಹಾಗೂ ಪಿಡಬ್ಲ್ಯೂಡಿ ವಾಹನಗಳು ಪ್ರವೇಶ ದ್ವಾರ-2ರ ಮುಖಾಂತರ ಪರೇಡ್ ಮೈದಾನದ ಒಳಗೆ ಪ್ರವೇಶಿಸಿ ನಂತರ ಪೋರ್ಟ್ ವಾಲ್ ಹಿಂಭಾಗದಲ್ಲಿ (ದಕ್ಷಿಣದ ಕಡೆಗೆ) ವಾಹನಗಳನ್ನು ನಿಲುಗಡೆ ಮಾಡಬಹುದಾಗಿದೆ. ಕಾರ್ಯಕ್ರಮಕ್ಕೆ ಬರುವ ಎಲ್ಲಾ ಮಾಧ್ಯಮದವರ ವಾಹನಗಳು ಪ್ರವೇಶ ದ್ವಾರ-4ರ ಮೂಲಕ ಒಳ ಪ್ರವೇಶಿಸಿ ಮೈದಾನದ ಪೂರ್ವ ಭಾಗದಲ್ಲಿ ನಿಗದಿತ ಸ್ಥಳದಲ್ಲಿ ವಾಹನ ನಿಲುಗಡೆ ಮಾಡಬಹುದಾಗಿದೆ.

ಇದನ್ನೂ ಓದಿ :

1) ಜಗತ್ ಪ್ರಸಿದ್ಧರಾಗಿದ್ದ ಭಾರತದ ಈ ವ್ಯಕ್ತಿಗಳು ತಮ್ಮ ಕೆಲಸಗಳಿಗೆ ಹೆಚ್ಚಾಗಿ ಬಳಸುತ್ತಿದ್ದ ಕೈ ಯಾವುದು ಗೊತ್ತಾ?

2) BW SPECIAL | Tungabhadra Dam Situation | ತುಂಗಭದ್ರ ಅಣೆಕಟ್ಟು ಅವಘಡ : ಕಳೆದ 10 ವರ್ಷಗಳ ಸರಾಸರಿಗಿಂತ ಈಗಿನ ನೀರಿನ ಹೊರಹರಿವು 37,693 ಕ್ಯೂಸೆಕ್ಸ್ ಹೆಚ್ಚಳ

ವಾಹನ ನಿಲುಗಡೆ ನಿಷೇಧವಿರುವ ರಸ್ತೆಗಳು :

* ಸೆಂಟ್ರಲ್ ಸ್ಟ್ರೀಟ್, ಅನಿಲ್ ಕುಂಬ್ಳೆ ವೃತ್ತದಿಂದ ಶಿವಾಜಿನಗರ ಬಸ್ ನಿಲ್ದಾಣದವರೆಗೆ

* ಕಬ್ಬನ್ ರಸ್ತೆ, ಸಿ.ಟಿ.ಓ. ವೃತ್ತದಿಂದ ಕೆ.ಆರ್.ರಸ್ತೆ & ಕಬ್ಬನ್‌ರಸ್ತೆ ಜಂಕ್ಷನ್‌ವರೆಗೆ

* ಎಂ.ಜಿ.ರಸ್ತೆ, ಅನಿಲ್ ಕುಂಬ್ಳೆ ವೃತ್ತದಿಂದ ಕ್ವೀನ್ಸ್‌ ವೃತ್ತದವರೆಗೆ.

ಬೆಂಗಳೂರು ಸಂಚಾರ ಪೊಲೀಸರಿಂದ ಸಾರ್ವಜನಿಕ ಬಂಧುಗಳಲ್ಲಿ ವಿಶೇಷ ಮನವಿ ಮಾಡಲಾಗಿದ್ದು, ಮಾಣಿಕ್ ಷಾ ಪರೇಡ್ ಮೈದಾನ ಹಾಗೂ ಸುತ್ತಮುತ್ತ ವಾಹನಗಳ ನಿಲುಗಡೆಗೆ ಸ್ಥಳಾವಕಾಶ ಕೊರತೆ ಇರುವುದರಿಂದ ಹಾಗೂ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡಲು ಸಾರ್ವಜನಿಕರು, ಸಾರ್ವಜನಿಕ ಸಾರಿಗೆ ವ್ಯವಸ್ಥೆ ಮತ್ತು ಮೆಟ್ರೋ ಸೇವೆಯನ್ನು ಬಳಸುವಂತೆ ನಗರ ಸಂಚಾರಿ ಪೊಲೀಸರು ಪತ್ರಿಕಾ ಪ್ರಕಟಣೆಯಲ್ಲಿ ಕೋರಿದ್ದಾರೆ. ಯಾವುದೇ ಸಹಾಯಕ್ಕಾಗಿ ಪೊಲೀಸರು ಸದಾ ನಿಮ್ಮೊಂದಿಗಿರುತ್ತಾರೆ. ದಯವಿಟ್ಟು ಸ್ಥಳದಲ್ಲಿರುವ ಪೊಲೀಸರನ್ನು ಸಂಪರ್ಕಿಸಿ ಅಥವಾ 112ಗೆ ಕರೆ ಮಾಡಿ, ಸ್ವಾತಂತ್ರೋತ್ಸವ ದಿನಾಚರಣೆ ಸಂಭ್ರಮಾಚರಣೆಯನ್ನು ಯಶಸ್ವಿಗೊಳಿಸಲು ತಮ್ಮ ಸಹಕಾರವನ್ನು ಬಯಸುತ್ತೇವೆ ಎಂದು ಪೊಲೀಸರು ಮನವಿ ಮಾಡಿದ್ದಾರೆ.

WhatsApp Join our WhatsApp Channel
Previous Post

ಜಗತ್ ಪ್ರಸಿದ್ಧರಾಗಿದ್ದ ಭಾರತದ ಈ ವ್ಯಕ್ತಿಗಳು ತಮ್ಮ ಕೆಲಸಗಳಿಗೆ ಹೆಚ್ಚಾಗಿ ಬಳಸುತ್ತಿದ್ದ ಕೈ ಯಾವುದು ಗೊತ್ತಾ?

Next Post

National Space Day 2024 | ದೇಶದ ಮೊದಲ ರಾಷ್ಟ್ರೀಯ ಬಾಹ್ಯಾಕಾಶ ದಿನ 2024ಕ್ಕೆ ಇಸ್ರೋ ಸಜ್ಜು

Next Post

National Space Day 2024 | ದೇಶದ ಮೊದಲ ರಾಷ್ಟ್ರೀಯ ಬಾಹ್ಯಾಕಾಶ ದಿನ 2024ಕ್ಕೆ ಇಸ್ರೋ ಸಜ್ಜು

18 ಸಿಬಿಐ ಅಧಿಕಾರಿಗಳಿಗೆ ವಿಶೇಷ ಹಾಗೂ ಪ್ರತಿಭಾನ್ವಿತ ಸೇವೆಗಾಗಿ ರಾಷ್ಟ್ರಪತಿಗಳ ಪೊಲೀಸ್ ಪದಕ ವಿತರಣೆ : ಇಲ್ಲಿದೆ ಪಟ್ಟಿ

Please login to join discussion

Like Us on Facebook

Follow Us on Twitter

Recent News

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

June 13, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

June 13, 2026

ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

June 12, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group