Saturday, September 19, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ಗ್ರಾಮಠಾಣಾ ಆಸ್ತಿಗಳಿಗೆ ನ.1ರಿಂದ ಮನೆ ಬಾಗಿಲಿಗೇ ಇ-ಸ್ವತ್ತು ಖಾತೆ: ಈಶ್ವರ ಖಂಡ್ರೆ ಸೂಚನೆ

    ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ: ₹32,611 ಕೋಟಿ ಯೋಜನೆಗಳಿಗೆ ಅನುಮೋದನೆ: ತುಳು ಎರಡನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ಘೋಷಣೆ

    Breaking News | ನವೆಂಬರ್ ಅಂತ್ಯಕ್ಕೆ ತುಮಕೂರಿಗೆ ಎತ್ತಿನಹೊಳೆ ನೀರು: ಸಚಿವ ಚಲುವರಾಯಸ್ವಾಮಿ ಭರವಸೆ

    ಮೆಕ್ಕಾ ವಾಯುಪ್ರದೇಶದ ಬಳಿ ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ: ಪವಿತ್ರ ಕ್ಷೇತ್ರಗಳ ರಕ್ಷಣೆ ‘ರೆಡ್ ಲೈನ್’ ಎಂದ ರಿಯಾದ್

    ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

    UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

    ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

  • Bengaluru Focus

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ​ಜೆ.ಪಿ. ನಗರದಿಂದ ಗೊಟ್ಟಿಗೆರೆವರೆಗೆ ಶೇ. 34 ರಷ್ಟು ಬೀದಿ ದೀಪ ಬಂದ್; ​ಕತ್ತಲಲ್ಲಿ ರಸ್ತೆಗಳು; ಸಚಿವ ಕೃಷ್ಣ ಬೈರೇಗೌಡ ದಿಢೀರ್ ರಾತ್ರಿ ರೌಂಡ್ಸ್

    GBA Head Office Image

    GBA News | ಬೆಂಗಳೂರು : ಜಿಬಿಎ ವ್ಯಾಪ್ತಿಯಲ್ಲಿ ಇ-ಖಾತಾ ಸೇವೆಗಳು ಮತ್ತಷ್ಟು ಸುಲಭ; ಸೆ. 21ರಿಂದ ‘ಇ-ಆಸ್ತಿ 2.0’ ನೂತನ ಇ-ಖಾತಾ ವ್ಯವಸ್ಥೆ ಜಾರಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

    GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

“ಬಿಬಿಎಂಪಿಯ ಕಾಮಗಾರಿ ಸಮಾಲೋಚನೆ ಹೆಸರಲ್ಲಿ ವರ್ಷಂಪ್ರತಿ 100 ಕೋಟಿ ರೂ. ಗುಳುಂ”

by Bengaluru Wire Desk
August 27, 2024
in Bengaluru Focus, Public interest
Reading Time: 1 min read
0
GBA Head Office Image

ಜಿಬಿಎ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ.

ಬೆಂಗಳೂರು, ಆ.27 www.bengaluruwire.com : ಕಾಮಗಾರಿ ಗುತ್ತಿಗೆಯಲ್ಲಿ, ಟೆಂಡರ್ ಮೂಲಕ ನಿರ್ವಹಿಸಿದ ಕಾಮಗಾರಿಗಳಿಗೆ ಹಣ ಪಾವತಿಸಲು ಪಾಲಿಕೆಯ ಅಧಿಕಾರಿಗಳು ನೂರಾರು ಕೋಟಿ ರೂಪಾಯಿ ಕಮಿಷನ್, ಭ್ರಷ್ಟಾಚಾರ ನಡೆಸುತ್ತಿರೋದು ಹಳೆಯ ವಿಷಯ. 

ಬಿಬಿಎಂಪಿಯ ಮುಖ್ಯ ಅಭಿಯಂತರರುಗಳು ಯೋಜನೆ ನಿರ್ವಹಣಾ ಸಮಾಲೋಚನೆ (Project Management Consultancy- PMC) ಹೆಸರಿನಲ್ಲಿ ಕೋಟ್ಯಾಂತ ರೂ. ಹಣವನ್ನು ಕೊಳ್ಳೆ ಹೊಡೆಯುತ್ತಿರುವ ವಿಷಯ ಬಹಿರಂಗವಾಗಿದೆ.

ಪಾಲಿಕೆ ವ್ಯಾಪ್ತಿಯಲ್ಲಿ ಕೈಗೊಳ್ಳುವ ಪ್ರತಿಯೊಂದು ಕಾಮಗಾರಿಗಳಿಗೆ ಸಂಬಂಧಿಸಿದಂತೆ ಪಿಎಂಸಿ ಕಾರ್ಯವನ್ನು ಸಂಬಂಧಪಟ್ಟ ಆಯಾ ಮುಖ್ಯ ಅಭಿಯಂತರರುಗಳೇ ಕಾನೂನು ಬಾಹಿರವಾಗಿ ನಿರ್ವಹಿಸುತ್ತಿದ್ದಾರೆ ಎಂದು ಆಡಳಿತ ಪಕ್ಷದ ಮಾಜಿ ನಾಯಕ ಎನ್.ಆರ್.ರಮೇಶ್ ಆರೋಪಿಸಿದ್ದಾರೆ.

ಪಾಲಿಕೆ ವ್ಯಾಪ್ತಿಯಲ್ಲಿ ವರ್ಷ ಒಂದಕ್ಕೆ ಕನಿಷ್ಠ 4 ಸಾವಿರದಿಂದ 5 ಸಾವಿರ ಕೋಟಿ ರೂಪಾಯಿಗಳಷ್ಟು ಮೊತ್ತದ ಅಭಿವೃದ್ಧಿ ಕಾರ್ಯಗಳು ಅಥವಾ ಕಾಮಗಾರಿಗಳು ನಡೆಯುತ್ತದೆ. ಇವುಗಳಿಂದ ವರ್ಷಂಪ್ರತಿ 80 ಕೋಟಿಯಿಂದ 100 ಕೋಟಿ ರೂಪಾಯಿಗಳಷ್ಟು ಮೊತ್ತ ಕೇವಲ ಪಿಎಂಸಿ ಹೆಸರಿನಲ್ಲಿ ಸಂಬಂಧಪಟ್ಟ ಆಯಾ ಮುಖ್ಯ ಅಭಿಯಂತರರುಗಳ ಜೇಬು ಸೇರುತ್ತಿದೆ. ಈ ಸಂಬಂಧ  ಕಳೆದ ಹತ್ತು ವರ್ಷಗಳಿಂದ ಇಂತಹ ಕಾನೂನು ಬಾಹಿರ ಕಾರ್ಯದಲ್ಲಿ ತೊಡಗಿಕೊಂಡಿರುವ ಎಲ್ಲಾ ಮುಖ್ಯ ಅಭಿಯಂತರರುಗಳ ವಿರುದ್ಧ ಕಾನೂನು ರೀತ್ಯಾ ಕಠಿಣ ಕ್ರಮ ತೆಗೆದುಕೊಳ್ಳಬೇಕೆಂದು ರಮೇಶ್ ಅವರು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರನ್ನು ಆಗ್ರಹಿಸಿದ್ದಾರೆ.

ಪ್ರತಿಯೊಂದು ಕಾಮಗಾರಿಯ ಒಟ್ಟು ಮೊತ್ತದ ಶೇ.2 ರಷ್ಟು ಮೊತ್ತವನ್ನು ಪಿಎಂಸಿ ಹೆಸರಿನಲ್ಲಿ ಕಡಿತಗೊಳಿಸುವ ಮುಖ್ಯ ಅಭಿಯಂತರರುಗಳು ಅಂತಹ ಎಲ್ಲಾ ಪಿಎಂಸಿ ಕಾರ್ಯಗಳನ್ನು ತಮ್ಮ ಸಂಬಂಧಿಕರು, ಬೆಂಬಲಿಗರು ಅಥವಾ ಹಿಂಬಾಲಕರ ಮೂಲಕವೇ ನಡೆಸುತ್ತಿದ್ದಾರೆ. ಪ್ರತಿಯೊಂದು ಕಾಮಗಾರಿಯಲ್ಲಿ ಲಕ್ಷಾಂತರ ರೂಪಾಯಿಗಳನ್ನು ಕೊಳ್ಳೆ ಹೊಡೆಯುತ್ತಿರುವ ಸಂಗತಿ ಇದುವರೆವಿಗೆ ಬಿಬಿಎಂಪಿಯ ಮುಖ್ಯ ಆಯುಕ್ತರು ಹಾಗೂ ಮಾನ್ಯ ಆಡಳಿತಾಧಿಕಾರಿಗಳ ಗಮನಕ್ಕೆ ಬಾರದೇ ಇರುವುದು ನಿಜಕ್ಕೂ ದುರಾದೃಷ್ಟಕರ ಎಂದು ಟೀಕಿಸಿದ್ದಾರೆ.

ಪ್ರತಿಯೊಂದು ಕಾಮಗಾರಿಯ ಪಿಎಂಸಿ ಏಜನ್ಸಿಗಳನ್ನು ನಿಗದಿ ಮಾಡುವ ಸಂಬಂಧ ನಿಯಮಾನುಸಾರ ಪಿಎಂಸಿ ಮೊತ್ತ 5 ಲಕ್ಷಕ್ಕಿಂತಲೂ ಕಡಿಮೆ ಇದ್ದರೆ ಕೊಟೇಷನ್ (Quotation) ಮೂಲಕ ಮತ್ತು 5 ಲಕ್ಷಕ್ಕಿಂತಲೂ ಹೆಚ್ಚಿದ್ದರೆ ಟೆಂಡರ್ (Tender) ಆಹ್ವಾನಿಸಿದ ನಂತರ ಅರ್ಹರಿಗೆ ಈ ಕಾರ್ಯದ ಬಗ್ಗೆ ಕಾರ್ಯಾದೇಶ ಪತ್ರ ನೀಡಬೇಕಿರುತ್ತದೆ. ಆದರೆ ಇಲ್ಲಿ‌ ತಮ್ಮವರಿಗೆ ಪಿಎಂಸಿ ಕೆಲಸ ಕೊಡಿಸಲು ಬೇರೆ ಏಜನ್ಸಿಗಳು ಕೊಟೇಷನ್ ಕೊಡದಂತೆ ಅಥವಾ ಟೆಂಡರ್ ನಲ್ಲಿ ಭಾಗವಹಿಸದಂತೆ ಆಯಾ ಮುಖ್ಯ ಅಭಿಯಂತರರು ನೋಡಿಕೊಳ್ಳುತ್ತಾರೆ.

ಪಾಲಿಕೆ ವ್ಯಾಪ್ತಿಯಲ್ಲಿ ಗುತ್ತಿಗೆದಾರರು ನಿರ್ವಹಿಸಿದ ಕಾಮಗಾರಿ ಬಿಲ್ಲುಗಳನ್ನು ಪಾವತಿ ಮಾಡುವಲ್ಲಿ ಹೆಚ್ಚಿನ ಆರ್ಥಿಕ ಶಿಸ್ತು ಹಾಗೂ ಪಾರದರ್ಶಕತೆಯನ್ನು ತರುವ ದೃಷ್ಟಿಯಿಂದ 2018ರ ಆಗಸ್ಟ್ 3ರಂದು‌ ಪಾಲಿಕೆಯ ಅಂದಿನ ಆಯುಕ್ತರು ಪಿಎಂಸಿ ಪದ್ಧತಿಯನ್ನು ಜಾರಿಗೆ ತರಲು ಆದೇಶಿಸಿದ್ದರು. ಅಂದಿನ ಆಯುಕ್ತರ ಈ ಆದೇಶವು ಕೆಲವು ಭ್ರಷ್ಟ ಮುಖ್ಯ ಅಭಿಯಂತರರುಗಳಿಗೆ ವರದಾನವಾಗಿ ಪರಿಣಮಿಸಿದ್ದು, ಅದನ್ನೇ ತಮ್ಮ ಸ್ವಾರ್ಥಕ್ಕಾಗಿ ಬಳಸಿಕೊಂಡು ಅಪಾರ ಪ್ರಮಾಣದ ಹಣವನ್ನು ಕಾನೂನು ಬಾಹಿರವಾಗಿ ಲೂಟಿ ಮಾಡಿರುತ್ತಾರೆ.

ಈ ಪದ್ಧತಿ ಜಾರಿ ಮಾಡಿದ ನಂತರ ಇದುವರೆಗೂ ಸುಮಾರು 500 ಕೋಟಿ ರೂಪಾಯಿಗಳಿಗೂ ಹೆಚ್ಚು ಮೊತ್ತವನ್ನು ಪಿಎಂಸಿ ಪದ್ಧತಿ ಅಡಿಯಲ್ಲಿ ಬಿಡುಗಡೆ ಮಾಡಲಾಗಿದೆ. ಇದರ ಪೈಕಿ ಶೇ. 90 ರಷ್ಟು ಹಣವನ್ನು ನಾಲ್ಕೈದು ಪ್ರಾಮಾಣಿಕ ಮುಖ್ಯ ಅಭಿಯಂತರರುಗಳನ್ನು ಹೊರತುಪಡಿಸಿ ಮಿಕ್ಕೆಲ್ಲಾ ಮುಖ್ಯ ಅಭಿಯಂತರರುಗಳು ತಮ್ಮ ರಕ್ತ ಸಂಬಂಧಿಕರುಗಳಿಗೆ, ಹಿಂಬಾಲಕರಿಗೆ, ಮತ್ತು ಅನುಯಾಯಿಗಳಿಗೆ ನಿಯಮಬಾಹಿರವಾಗಿ ಪಿಎಂಸಿ ಪದ್ಧತಿಯ ಟೆಂಡರ್ ಗಳನ್ನು ಮಾಡಿಕೊಡುವ ಮೂಲಕ ಕೋಟ್ಯಾಂತರ ರೂ. ಹಣವನ್ನು ಲಪಟಾಯಿಸಿರುತ್ತಾರೆ ಎಂದು ಎನ್.ಆರ್.ರಮೇಶ್ ಗಂಭೀರ ಆರೋಪ ಮಾಡಿದ್ದಾರೆ.

ಈ ಬಗ್ಗೆ ಕೂಡಲೇ, ಕಳೆದ ಹತ್ತಾರು ವರ್ಷಗಳಿಂದ ನಿತ್ಯ ನಿರಂತರವಾಗಿ ನಡೆಯುತ್ತಿರುವ ಈ ಬೃಹತ್ ಅಕ್ರಮದ ತನಿಖೆಯನ್ನು ಸಿಐಡಿ (CID)ಗೆ ವಹಿಸಬೇಕೆಂದು ಆಗ್ರಹಿಸಿ ಸರ್ಕಾರಕ್ಕೆ ಪತ್ರ ಬರೆಯುವ ಸಂಬಂಧ ಸೂಕ್ತ ಕ್ರಮ ತೆಗೆದುಕೊಳ್ಳಬೇಕೆಂದು ಪಾಲಿಕೆಯ ಮುಖ್ಯ ಆಯುಕ್ತರನ್ನು ಮತ್ತು ಆಡಳಿತಾಧಿಕಾರಿ ಉಮಾಶಂಕರ್ ಅವರನ್ನು ಒತ್ತಾಯಿಸಿದ್ದಾರೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

CAR DOG SQUAD | ಬೆಂಗಳೂರು : ಮಾದಕವಸ್ತು ಪತ್ತೆ ಕಾರ್ಯದಲ್ಲಿ ಎಕ್ಸ್ ಪರ್ಟ್ ಆಗಿದ್ದ ಶ್ವಾನದಳದ ಮಿಕಿ ನಾಯಿ ಸಾವು

Next Post

Telegram News | ಭಾರತದಲ್ಲಿ ಟೆಲಿಗ್ರಾಮ್ ನಿಷೇಧವಾಗುತ್ತಾ? ಕೇಂದ್ರ ಸರ್ಕಾರ ಆಪ್ ವಿರುದ್ಧ ತನಿಖೆ ಆರಂಭಿಸಿದೆ

Next Post
Telegram

Telegram News | ಭಾರತದಲ್ಲಿ ಟೆಲಿಗ್ರಾಮ್ ನಿಷೇಧವಾಗುತ್ತಾ? ಕೇಂದ್ರ ಸರ್ಕಾರ ಆಪ್ ವಿರುದ್ಧ ತನಿಖೆ ಆರಂಭಿಸಿದೆ

Property Buying

ನೀವು ಜಮೀನು, ನಿವೇಶನ, ಮನೆ ಅಥವಾ ಅಪಾರ್ಟ್ ಮೆಂಟ್ ಖರೀದಿಸುತ್ತಿದ್ದೀರಾ? ಗಮನಿಸಿ, ಈ ಎಲ್ಲಾ ಕಾನೂನು ದಾಖಲೆಗಳು ಮುಖ್ಯ

Please login to join discussion

Like Us on Facebook

Follow Us on Twitter

Recent News

Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

September 19, 2026

ಗ್ರಾಮಠಾಣಾ ಆಸ್ತಿಗಳಿಗೆ ನ.1ರಿಂದ ಮನೆ ಬಾಗಿಲಿಗೇ ಇ-ಸ್ವತ್ತು ಖಾತೆ: ಈಶ್ವರ ಖಂಡ್ರೆ ಸೂಚನೆ

September 19, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

September 19, 2026

ಗ್ರಾಮಠಾಣಾ ಆಸ್ತಿಗಳಿಗೆ ನ.1ರಿಂದ ಮನೆ ಬಾಗಿಲಿಗೇ ಇ-ಸ್ವತ್ತು ಖಾತೆ: ಈಶ್ವರ ಖಂಡ್ರೆ ಸೂಚನೆ

September 19, 2026

​ಜೆ.ಪಿ. ನಗರದಿಂದ ಗೊಟ್ಟಿಗೆರೆವರೆಗೆ ಶೇ. 34 ರಷ್ಟು ಬೀದಿ ದೀಪ ಬಂದ್; ​ಕತ್ತಲಲ್ಲಿ ರಸ್ತೆಗಳು; ಸಚಿವ ಕೃಷ್ಣ ಬೈರೇಗೌಡ ದಿಢೀರ್ ರಾತ್ರಿ ರೌಂಡ್ಸ್

September 19, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d