Saturday, September 19, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ಗ್ರಾಮಠಾಣಾ ಆಸ್ತಿಗಳಿಗೆ ನ.1ರಿಂದ ಮನೆ ಬಾಗಿಲಿಗೇ ಇ-ಸ್ವತ್ತು ಖಾತೆ: ಈಶ್ವರ ಖಂಡ್ರೆ ಸೂಚನೆ

    ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ: ₹32,611 ಕೋಟಿ ಯೋಜನೆಗಳಿಗೆ ಅನುಮೋದನೆ: ತುಳು ಎರಡನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ಘೋಷಣೆ

    Breaking News | ನವೆಂಬರ್ ಅಂತ್ಯಕ್ಕೆ ತುಮಕೂರಿಗೆ ಎತ್ತಿನಹೊಳೆ ನೀರು: ಸಚಿವ ಚಲುವರಾಯಸ್ವಾಮಿ ಭರವಸೆ

    ಮೆಕ್ಕಾ ವಾಯುಪ್ರದೇಶದ ಬಳಿ ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ: ಪವಿತ್ರ ಕ್ಷೇತ್ರಗಳ ರಕ್ಷಣೆ ‘ರೆಡ್ ಲೈನ್’ ಎಂದ ರಿಯಾದ್

    ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

    UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

    ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

  • Bengaluru Focus

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ​ಜೆ.ಪಿ. ನಗರದಿಂದ ಗೊಟ್ಟಿಗೆರೆವರೆಗೆ ಶೇ. 34 ರಷ್ಟು ಬೀದಿ ದೀಪ ಬಂದ್; ​ಕತ್ತಲಲ್ಲಿ ರಸ್ತೆಗಳು; ಸಚಿವ ಕೃಷ್ಣ ಬೈರೇಗೌಡ ದಿಢೀರ್ ರಾತ್ರಿ ರೌಂಡ್ಸ್

    GBA Head Office Image

    GBA News | ಬೆಂಗಳೂರು : ಜಿಬಿಎ ವ್ಯಾಪ್ತಿಯಲ್ಲಿ ಇ-ಖಾತಾ ಸೇವೆಗಳು ಮತ್ತಷ್ಟು ಸುಲಭ; ಸೆ. 21ರಿಂದ ‘ಇ-ಆಸ್ತಿ 2.0’ ನೂತನ ಇ-ಖಾತಾ ವ್ಯವಸ್ಥೆ ಜಾರಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

    GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

  • Public interest
  • BW Special
  • Life Style
  • Photo Gallery
  • Video
No Result
View All Result

Home BW Special

Video News | ಬಿಬಿಎಂಪಿಯ ಎಲ್ಲಾ ವಲಯದಲ್ಲಿ ‘ನಂಬಿಕೆ ನಕ್ಷೆ’ ಯೋಜನೆ ಆರಂಭ : ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಿದ್ರೆ ನಿಮಗೆ ಸಿಗುತ್ತೆ ಕಟ್ಟಡ ನಕ್ಷೆ

50X80 ವಿಸ್ತೀರ್ಣದ ವರೆಗಿನ ನಿವೇಶನಗಳಿಗೆ ಈ ಯೋಜನೆ ಅನ್ವಯವಾಗಲಿದೆ | ಬಿಬಿಎಂಪಿಯಿಂದ ಮೊದಲಿಗೆ ಸಿಗಲಿದೆ ತಾತ್ಕಾಲಿಕ ಕಟ್ಟಡ ನಕ್ಷೆ

by Bengaluru Wire Desk
September 2, 2024
in BW Special
Reading Time: 1 min read
0
Building Plan Image

ಕಟ್ಟಡ ನಕ್ಷೆ ಮಂಜೂರಾತಿ ಸಾಂದರ್ಭಿಕ ಚಿತ್ರ.

ಬೆಂಗಳೂರು, ಸೆ.02 www.bengaluruwirecom : “ಕಟ್ಟಡ ನಕ್ಷೆ ಮಂಜೂರಾತಿ ವಿಚಾರದಲ್ಲಿ ಬೆಂಗಳೂರು ನಗರದ ಜನರಿಗೆ ಆಗುತ್ತಿರುವ ತೊಂದರೆ ತಪ್ಪಿಸಲು ʼನಂಬಿಕೆ ನಕ್ಷೆʼ ಯೋಜನೆ ಜಾರಿಗೆ ತರಲಾಗುತ್ತಿದೆ. ಜನರು ತಮ್ಮ ಕಟ್ಟಡ ನಕ್ಷೆಯನ್ನು ಅನುಮೋದಿತ ಕಟ್ಟಡ ವಿನ್ಯಾಸಕಾರರು ಅಥವಾ ಎಂಜಿನಿಯರ್ ಗಳ ಬಳಿ ಅನುಮೋದಿಸಿಕೊಂಡು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಿ ಮಂಜೂರಾತಿ ಪಡೆದುಕೊಳ್ಳುವ ಯೋಜನೆ ಇದಾಗಿದೆ. 50X80 ವಿಸ್ತೀರ್ಣದ ವರೆಗಿನ ನಿವೇಶನಗಳಿಗೆ ಈ ಯೋಜನೆ ಅನ್ವಯವಾಗಲಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ವಿಧಾನಸೌಧದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಸೋಮವಾರ ಮಾತನಾಡಿದ ಅವರು “ಬಿಡಿಎ, ಗೃಹನಿರ್ಮಾಣ ಸಂಘದವರು 50X80 ವಿಸ್ತೀರ್ಣದ ವರೆಗಿನ ನಿವೇಶನಗಳನ್ನೇ ಹೆಚ್ಚಾಗಿ ಅಭಿವೃದ್ಧಿಪಡಿಸಿರುತ್ತಾರೆ. ಇಷ್ಟು ವಿಸ್ತೀರ್ಣದ ನಿವೇಶನದಲ್ಲಿ ಮನೆ ನಿರ್ಮಾಣ ಹಾಗೂ ನವೀಕರಣಕ್ಕೆ ಜನರು ಯಾವುದೇ ತೊಂದರೆಯಿಲ್ಲದೇ ಮುಂದಾಗಬಹುದು. ಅನುಮೋದಿತ ಲೆಕ್ಕ ಪರಿಶೋಧಕರಂತೆ ಅನುಮೋದಿತ ಎಂಜಿನಿಯರ್ ಗಳು ಹಾಗೂ ಕಟ್ಟಡ ವಿನ್ಯಾಸಕಾರರ ಮೂಲಕ ತಾತ್ಕಾಲಿಕ ಕಟ್ಟಡ ನಕ್ಷೆಗೆ ಅನುಮತಿ ನೀಡಲಾಗುವುದು. ನಂತರ ಪಾಲಿಕೆಯ ಎಂಜಿನಿಯರ್ ಗಳು ಪರಿಶೀಲನೆ ನಡೆಸುತ್ತಾರೆ” ಎಂದರು.

“ಮೊದಲು ಬಿಬಿಎಂಪಿಯ 2 ವಲಯಗಳಲ್ಲಿ ಪ್ರಾಯೋಗಿಕವಾಗಿ ಈ ಯೋಜನೆಯನ್ನು ಜಾರಿಗೆ ತರಲಾಗಿತ್ತು. ಯಶಸ್ವಿಯಾಗಿ ಜಾರಿಯಾದ ಈ ಯೋಜನೆಯ ಸಾಧಕ ಭಾದಕಗಳನ್ನು ಸರಿಪಡಿಸಿ ಪ್ರಸ್ತುತ ಬಿಬಿಎಂಪಿಯ ಎಲ್ಲಾ ವಲಯಗಳಿಗೆ ವಿಸ್ತರಿಸಲಾಗುತ್ತಿದೆ. ಇದರಿಂದ ಜನರು ಪಾಲಿಕೆಗೆ ಅಲೆಯುವುದು ತಪ್ಪುತ್ತದೆ” ಎಂದು ಹೇಳಿದರು.

ನಗರದ ಪ್ರಮುಖ ರಸ್ತೆಗಳ ದುರಸ್ತಿಗೆ ರೂ. 660 ಕೋಟಿ ರೂ. :

ಡಿಸಿಎಂ ಡಿ.ಕೆ.ಶಿವಕುಮಾರ್ ಪತ್ರಿಕಾಗೋಷ್ಠಿಯಲ್ಲಿ ನಂಬಿಕೆ ನಕ್ಷೆ ಬಗ್ಗೆ ಮಾತನಾಡಿದರು.

“ಬಿಬಿಎಂಪಿ ವಲಯದಲ್ಲಿ 2,795 ರಸ್ತೆಗುಂಡಿಗಳನ್ನು ಗುರುತಿಸಲಾಗಿದೆ ಎಲ್ಲಾ ರಸ್ತೆ ಗುಂಡಿಗಳನ್ನು ಮುಂದಿನ 15 ದಿನಗಳಲ್ಲಿ ಸಂಪೂರ್ಣವಾಗಿ ಮುಚ್ಚಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ರೂ. 660 ಕೋಟಿ ವೆಚ್ಚದಲ್ಲಿ ಪ್ರಮುಖ ರಸ್ತೆಗಳನ್ನು ದುರಸ್ತಿ ಕೆಲಸ ಕೈಗೆತ್ತಿಕೊಳ್ಳಲಾಗುವುದು. ಇತ್ತೀಚೆಗೆ ದೆಹಲಿಗೆ ಭೇಟಿ ನೀಡಿದಾಗ ಮುಖ್ಯರಸ್ತೆಗಳನ್ನು ಬಿಟ್ಟು ಒಳ ರಸ್ತೆಗಳಲ್ಲಿ ಓಡಾಡಿದೆ. ಅವರಿಗಿಂತ ನಾವೇ ಎಷ್ಟೋ ಮುಂದಿದ್ದೇವೆ. ಅವರನ್ನು ಟೀಕೆ ಮಾಡುತ್ತಿಲ್ಲ, ಅಲ್ಲಿನ ಪರಿಸ್ಥಿತಿ ಬೇರೆ ಇರಬಹುದು. ಮಳೆ ಬಂದ ತಕ್ಷಣ ನಗರದಾದ್ಯಂತ ಎಲ್ಲೆಲ್ಲಿ ನೀರು ನಿಲ್ಲುತ್ತಿತ್ತು, ವಸತಿ ಪ್ರದೇಶಗಳಿಗೆ ನೀರು ನುಗ್ಗಿ ಜನರಿಗೆ ತೊಂದರೆ ಉಂಟಾಗುತ್ತಿತ್ತು ಅವುಗಳನ್ನು ಭಾಗಶಃ ಸರಿ ಪಡಿಸಲಾಗಿದೆ. ಇದಕ್ಕಾಗಿ ಅಧಿಕಾರಿಗಳಿಗೆ ಅಭಿನಂದನೆಗಳು ಎಂದು ಹೇಳಿದರು.

“ರಾಜಕಾಲುವೆಯ 50 ಮೀ. ಸುತ್ತಳತೆಯಲ್ಲಿ ಯಾವುದೇ ನಿರ್ಮಾಣ ಕಾರ್ಯಗಳನ್ನು ಮಾಡುವಂತಿಲ್ಲ ಎಂದು ಎನ್ ಜಿಟಿಯ ನಿಯಮಗಳು ಸೇರಿದಂತೆ ಒಂದಷ್ಟು ನಿಯಮಗಳಿವೆ. ಪ್ರಸ್ತುತ 300 ಕಿ.ಮೀ ಅನ್ನು ಗುರುತಿಸಿ ಅಲ್ಲಿ 30 ಅಡಿ ರಸ್ತೆ ನಿರ್ಮಾಣ ಮಾಡಲಾಗುವುದು. ಭೂಮಿ ಬಿಟ್ಟುಕೊಡುವ ಖಾಸಗಿ ಜಮೀನುಗಳ ಮಾಲೀಕರಿಗೆ ಪರಿಹಾರವಾಗಿ ಟಿಡಿಆರ್ ನೀಡಲಾಗುವುದು. ಅದನ್ನು ಅವರು ಮಾರಾಟ ಮಾಡಿಕೊಳ್ಳಬಹುದು” ಎಂದರು.

“ಹೆಬ್ಬಾಳ, ನಾಗಾವರ, ಬೆಳ್ಳಂದೂರು ಅಕ್ಕಪಕ್ಕ, ಬೆಂಗಳೂರು ದಕ್ಷಿಣ ಭಾಗದಲ್ಲಿ ಒಂದಷ್ಟು ಕಡೆ ಭೂಮಿ ಗುರುತಿಸಲಾಗಿದೆ.  ಮೊದಲ ಹಂತದಲ್ಲಿ 100 ಕಿ.ಮೀ ದೂರ ಕೆಲಸ ಮಾಡಲಾಗುವುದು. ಇದಕ್ಕಾಗಿ ರೂ. 200 ಕೋಟಿ ಅನುದಾನವನ್ನು  ಮೀಸಲಿಡಲಾಗಿದೆ. ಈ ವಿಚಾರವನ್ನು ಕ್ಯಾಬಿನೆಟ್, ಸಚಿವರ ಸಭೆ ಹಾಗೂ ವಿರೋಧ ಪಕ್ಷಗಳ ನಾಯಕರೊಟ್ಟಿಗೆ ನಡೆದ ಸಭೆಗಳಲ್ಲೂ ಪ್ರಾಸ್ತಪಿಸಲಾಗಿದೆ. ಈ ರಸ್ತೆಗಳಲ್ಲಿ ಬಸ್ ಓಡಾಟಕ್ಕೆ ಅವಕಾಶವಿಲ್ಲ. ಬದಲಾಗಿ ಶಾಲಾ, ನಾಗರಿಕರ ವಾಹನಗಳ ಓಡಾಟಕ್ಕೆ ಅವಕಾಶ ನೀಡಲಾಗುವುದು” ಎಂದು ಮಾಹಿತಿ ನೀಡಿದರು.

*ಮಹಾತ್ಮಾ ಗಾಂಧಿ ಕಾಂಗ್ರೆಸ್ ಅಧ್ಯಕ್ಷರಾಗಿ 100 ವರ್ಷ

*ಶಾಲಾ ಮಕ್ಕಳಿಂದ ಸ್ವಚ್ಚತೆ ಬಗ್ಗೆ ಅರಿವು

“ಮಹಾತ್ಮಾ ಗಾಂಧಿ ಕಾಂಗ್ರೆಸ್ ಅಧ್ಯಕ್ಷರಾಗಿ ಕರ್ನಾಟಕದಲ್ಲಿ ಅಧಿಕಾರ ವಹಿಸಿಕೊಂಡು 100 ವರ್ಷಗಳು ಸಂದಿವೆ. ಇದಕ್ಕಾಗಿ ನಗರದಾದ್ಯಂತ ಸ್ವಚ್ಚತಾ ಅಭಿಯಾನ ಹಮ್ಮಿಕೊಳ್ಳಲಾಗುವುದು. ಇದೇ ವೇಳೆ ಒಂದು ಸಾವಿರ ಶಾಲಾ ಮಕ್ಕಳು ಆನ್ ಲೈನ್ ಮೂಲಕ ಪತಿಜ್ಞಾವಿಧಿ ತೆಗೆದುಕೊಳ್ಳಲಿದ್ದಾರೆ. ರಸ್ತೆ ಬದಿ ಹಾಗೂ ರಸ್ತೆಗಳಲ್ಲಿ ಕಸ ಎಸೆಯುವುದರ ವಿರುದ್ಧ ಜಾಗೃತಿ ಮೂಡಿಲಾಗುವುದು. ಮಕ್ಕಳಿಂದ ಕಸ ಎಸೆಯುವವರಿಗೆ ತಿಳಿ ಹೇಳುವ ಕೆಲಸ ಮಾಡಲಾಗುವುದು. ಅಕ್ಟೋಬರ್ 2 ರಂದು ಈ ಕಾರ್ಯಕ್ರಮ ರೂಪಿಸಲಾಗಿದೆ” ಎಂದರು.

ತಮ್ಮ ಹಳೇ ಬೈಕಲ್ಲಿ ನಗರ ಪ್ರದಕ್ಷಿಣೆ ಮಾಡಲಿರುವ ಡಿಸಿಎಂ :

ರಸ್ತೆಗುಂಡಿ ಸಮಸ್ಯೆ ಹೆಚ್ಚಾಗುತ್ತಿರುವ ಬಗ್ಗೆ ಕೇಳಿದಾಗ “ಸಾರ್ವಜನಿಕರಿಗಾಗಿ ʼರಸ್ತೆ ಗುಂಡಿ ಗಮನʼ ಎನ್ನುವ ಆಪ್ ಅನ್ನು ಪರಿಚಯಿಸಿದ್ದು ಅದರಲ್ಲಿ ಗುಂಡಿಗಳ ಫೋಟೋ ತೆಗೆದು ಅಪ್ ಲೋಡ್ ಮಾಡುವ ವ್ಯವಸ್ಥೆ ರೂಪಿಸಲಾಗಿದೆ. ರಸ್ತೆಗಳ ವೀಕ್ಷಣೆಗೆ ಎಂದೇ ನನ್ನ ಹಳೆಯ ಬೈಕ್ ದುರಸ್ತಿ ಮಾಡಿಸಿದ್ದೇನೆ. ಅಧಿಕಾರಿಗಳು ಮುಖ್ಯರಸ್ತೆಗಳನ್ನು ಮಾತ್ರ ತೋರಿಸುತ್ತಾರೆ, ಅದಕ್ಕೆ ಒಳ ರಸ್ತೆಗಳನ್ನು ಬೈಕ್ ಅಲ್ಲಿ ಓಡಾಡಿ ವೀಕ್ಷಿಸುತ್ತೇನೆ. ಜೊತೆಗೆ ಕಮಿಷನರ್ ಕೂರಿಸಿಕೊಂಡು ಒಂದು ಸುತ್ತು ಹೋಗುತ್ತೇನೆ” ಎಂದರು.

ಗುತ್ತಿಗೆದಾರರು ಸರ್ಕಾರಕ್ಕೆ ಬ್ಲಾಕ್ ಮೇಲ್ ಮಾಡಬಾರದು :

ಬಿಬಿಎಂಪಿ ಗುತ್ತಿಗೆದಾರರು ಬಿಲ್ ಬಾಕಿ ಬಗ್ಗೆ ಪ್ರತಿಭಟನೆ ವಿಚಾರ ಕೇಳಿದಾಗ “ಗುತ್ತಿಗೆದಾರರ ನೋವು ನನಗೂ ಅರ್ಥವಾಗುತ್ತದೆ. ಶೇ.50 ರಷ್ಟಿದ್ದ ಬಿಲ್ ಬಾಕಿಯನ್ನು ಶೇ.75 ಕ್ಕೆ ಇಳಿಸಿದ್ದೇನೆ. ಒಂದಷ್ಟು ಭಾಗ ಆಯೋಗದ ಮುಂದಿದೆ. ಇದು ಇತ್ಯರ್ಥವಾದ ನಂತರ ಕಾನೂನಾತ್ಮಕವಾಗಿ ಹೇಗೆ ಸಹಾಯ ಮಾಡಲಾಗುವುದೋ ಆ ರೀತಿ ಅವರ ನೆರವಿಗೆ ನಿಲ್ಲಲಾಗುವುದು. ಗುತ್ತಿಗೆದಾರರು ಪ್ರತಿಭಟನೆ ಮಾಡುತ್ತೇನೆ. ಕೆಲಸ ಮಾಡುವುದಿಲ್ಲ ಎಂದರೆ ಮತ್ತೊಬ್ಬ ಬಂದು ಕೆಲಸ ನಿರ್ವಹಿಸುತ್ತಾನೆ. ಇವರು ಮಾಡುವುದಿಲ್ಲ ಎಂದರೆ ಮತ್ತೊಬ್ಬ. ಸರ್ಕಾರವನ್ನು ಬ್ಲಾಕ್ ಮೇಲ್ ಮಾಡಬಾರದು” ಎಂದು ಗುತ್ತಿಗೆದಾರರಿಗೆ ಪರೋಕ್ಷವಾಗಿ ಎಚ್ಚರಿಕೆ ನೀಡಿದರು.

ಕೆ.ಆರ್.ಪುರಂ ವಾರ್ಡಿನಲ್ಲಿ ನೀರಿನ ಸಮಸ್ಯೆ ಬಗೆಹರಿದಿಲ್ಲ ಎನ್ನುವುದರ ಬಗ್ಗೆ ಕೇಳಿದಾಗ “ಇನ್ನೊಂದು ವಾರದಲ್ಲಿ ಐದನೇ ಹಂತದ ನೀರು ಸರಬರಾಜು ಯೋಜನೆ ಪ್ರಾರಂಭ ಮಾಡಲಾಗುವುದು. ಇದರ ಬಗ್ಗೆ ಆ ಭಾಗದ ಶಾಸಕರು ಗಮನ ಸೆಳೆದಿದ್ದಾರೆ. ಆದಷ್ಟು ಬೇಗ ಬಗೆಹರಿಸಲಾಗುವುದು” ಎಂದರು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

ಬಾಹ್ಯಾಕಾಶ ಕನ್ನಡಿಯಿಂದ ರಾತ್ರಿ ವೇಳೆ ಭೂಮಿ ಮೇಲೆ ಸೌರವಿದ್ಯುತ್ ಉತ್ಪಾದನೆ ಹೆಚ್ಚಳ!! 2025ರಿಂದ ಜಾರಿ

Next Post

BIG NEWS | ಡೆಂಗ್ಯೂ ಸಾಂಕ್ರಾಮಿಕ ರೋಗವೆಂದು ಅಧಿಕೃತ ಘೋಷಣೆ : ಕಾನೂನು ಉಲ್ಲಂಘಿಸಿದರೆ ನಿಮಗೆ ಬೀಳುತ್ತೆ ದಂಡ

Next Post

BIG NEWS | ಡೆಂಗ್ಯೂ ಸಾಂಕ್ರಾಮಿಕ ರೋಗವೆಂದು ಅಧಿಕೃತ ಘೋಷಣೆ : ಕಾನೂನು ಉಲ್ಲಂಘಿಸಿದರೆ ನಿಮಗೆ ಬೀಳುತ್ತೆ ದಂಡ

ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಮೊದಲ ಸಭೆ : ತಾಯಿ ಸನ್ನಿಧಿಯಲ್ಲೇ ಸಭೆ ನಡೆಸಿದ ಸಿದ್ದರಾಮಯ್ಯ

Please login to join discussion

Like Us on Facebook

Follow Us on Twitter

Recent News

Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

September 19, 2026

ಗ್ರಾಮಠಾಣಾ ಆಸ್ತಿಗಳಿಗೆ ನ.1ರಿಂದ ಮನೆ ಬಾಗಿಲಿಗೇ ಇ-ಸ್ವತ್ತು ಖಾತೆ: ಈಶ್ವರ ಖಂಡ್ರೆ ಸೂಚನೆ

September 19, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

September 19, 2026

ಗ್ರಾಮಠಾಣಾ ಆಸ್ತಿಗಳಿಗೆ ನ.1ರಿಂದ ಮನೆ ಬಾಗಿಲಿಗೇ ಇ-ಸ್ವತ್ತು ಖಾತೆ: ಈಶ್ವರ ಖಂಡ್ರೆ ಸೂಚನೆ

September 19, 2026

​ಜೆ.ಪಿ. ನಗರದಿಂದ ಗೊಟ್ಟಿಗೆರೆವರೆಗೆ ಶೇ. 34 ರಷ್ಟು ಬೀದಿ ದೀಪ ಬಂದ್; ​ಕತ್ತಲಲ್ಲಿ ರಸ್ತೆಗಳು; ಸಚಿವ ಕೃಷ್ಣ ಬೈರೇಗೌಡ ದಿಢೀರ್ ರಾತ್ರಿ ರೌಂಡ್ಸ್

September 19, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d