Saturday, June 13, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

    ಡಿಎಲ್ ಎಂಎಸ್ ಸ್ಟಾಟಿಕ್ ಡಿಜಿಟಲ್ ಮೀಟರ್ ಚಿತ್ರ

    ಬೆಂಗಳೂರಿಗರಿಗೆ ಭರ್ಜರಿ ಕೊಡುಗೆ: ಹೊಸ ವಿದ್ಯುತ್ ಸಂಪರ್ಕಕ್ಕೆ ಒಸಿ ಕಡ್ಡಾಯವಲ್ಲ, ಆದರೆ…

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

ಕನ್ನಡದಲ್ಲಿ ಔಷಧಿ ಚೀಟಿ : “ವೈದ್ಯಕೀಯ ಕ್ಷೇತ್ರದಲ್ಲಿ ಕನ್ನಡ ತಪ್ಪಾಗಿ ಅರ್ಥೈಸಿಕೊಂಡರೆ ರೋಗಿಗಳ ಜೀವನ್ಮರಣ ಪ್ರಶ್ನೆಯಾಗಲಿದೆ”

by Bengaluru Wire Desk
September 12, 2024
in News Wire, Public interest
Reading Time: 1 min read
0

ಬೆಂಗಳೂರು, ಸೆ.12 www.bengaluruwire.com : ವೈದ್ಯರು ಕನ್ನಡದಲ್ಲಿ ಔಷಧಿ ಚೀಟಿ (Prescriptions in Kannada) ಬರೆಯುವುದನ್ನು ಕಡ್ಡಾಯಗೊಳಿಸಬೇಕು ಎಂಬ ಸಲಹೆ ಅನುಷ್ಠಾನದ ಬಗ್ಗೆ ಇರುವ ತಾಂತ್ರಿಕ ತೊಂದರೆಗಳ ಕುರಿತು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಪುರುಷೋತ್ತಮ ಬಿಳಿಮಲೆ ಅವರಿಗೆ ಪತ್ರ ಬರೆದು ವಿವರಿಸಿದ್ದಾರೆ.

ಇತ್ತೀಚೆಗಷ್ಟೇ ಕನ್ನಡ ಅಭಿವೃದ್ಧಿ ಪ್ರಾಧಿಕಾರ, ಸರ್ಕಾರಿ ಆರೋಗ್ಯ ಕೇಂದ್ರಗಳು ಮತ್ತು ಆಸ್ಪತ್ರೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ವೈದ್ಯರು ರಾಜ್ಯದ ಅಧಿಕೃತ ಭಾಷೆಯಾದ ಕನ್ನಡದಲ್ಲಿ ಔಷಧಿ ಚೀಟಿ ಬರೆಯುವುದನ್ನು ಕಡ್ಡಾಯಗೊಳಿಸಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರನ್ನು ಒತ್ತಾಯಿಸಿತ್ತು. ಈ ಹಿನ್ನಲೆಯಲ್ಲಿ ಆರೋಗ್ಯ ಸಚಿವರು ಪ್ರಾಧಿಕಾರಕ್ಕೆ ಬರೆದಿರುವ ಪತ್ರವು ಮಹತ್ವ ಪಡೆದುಕೊಂಡಿದೆ.

“ವೈದ್ಯರು ಕನ್ನಡದಲ್ಲಿಯೇ ಔಷಧಿ ಚೀಟಿ ಬರೆಯಬೇಕೆಂದು ತಾವು ಮಾಡಿರುವ ಸಲಹೆ ಅತ್ಯಂತ ಮಹತ್ವಪೂರ್ಣ ವಿಷಯ ಎನಿಸಿತು. ನೂರಾರು ವೈದ್ಯರು ತಮ್ಮ ಮಾತುಗಳಿಂದ ಪ್ರೇರಿತರಾಗಿ ಕನ್ನಡದಲ್ಲಿ ಬರೆದ ಔಷಧಿ ಚೀಟಿಗಳನ್ನು ತಮ್ಮಲ್ಲಿ ಹಂಚಿಕೊಂಡಿದ್ದಾರೆ ಎನ್ನುವುದು ಸಹ ನಿಜಕ್ಕೂ ಸಂತಸದ ಸಂಗತಿ” ಎಂದು ದಿನೇಶ್ ಗುಂಡೂರಾವ್ ಹೇಳಿದ್ದಾರೆ.

Dinesh Gundu Rao
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಸಾಂದರ್ಭಿಕ ಚಿತ್ರ.

“ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ ಎಂಬುದರಲ್ಲಿ ಎರಡು ಮಾತಿಲ್ಲ. ಆದರೆ ವೈದ್ಯರು ಕನ್ನಡದಲ್ಲಿಯೇ ಔಷಧಿ ಚೀಟಿ ಬರೆಯುವುದನ್ನು ಕಡ್ಡಾಯಗೊಳಿಸುವ ವಿಚಾರದಲ್ಲಿ ಸಾಕಷ್ಟು ತಾಂತ್ರಿಕ ಸಂಗತಿಗಳು ಮಿಳಿತವಾಗಿದೆ. ವೈದ್ಯರು, ರೋಗಿಗಳು, ಶುಶ್ರೂಷಕರು, ಔಷಧಿ ವರ್ತಕರು ಮುಂತಾದ ಹತ್ತು ಹಲವರು ಈ ವ್ಯವಸ್ಥೆಯಲ್ಲಿ ಒಂದು ಕೊಂಡಿಯಾಗಿದ್ದು, ಸರಿಯಾಗಿ ಕನ್ನಡವನ್ನು ಅರ್ಥೈಸಿಕೊಳ್ಳುವುದರಲ್ಲಿ ಎಡವಿದರೂ ರೋಗಿಗಳ ಜೀವನ್ಮರಣದ ಪ್ರಶ್ನೆಯಾಗುವ ಸಾಧ್ಯತೆಯೂ ಇದೆ” ಎಂಬ ಗಂಭೀರ ಅಂಶವನ್ನು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ವೈದ್ಯ ವಿಜ್ಞಾನ ಸಾಕಷ್ಟು ವಿಶಾಲ ಮತ್ತು ಸಂಕೀರ್ಣ ಕ್ಷೇತ್ರ :

“ಜನರ ಆರೋಗ್ಯವನ್ನು ಕಾಯುವ ವೈದ್ಯಕೀಯ ವಿಜ್ಞಾನ ಕ್ಷೇತ್ರ ಅತ್ಯಂತ ವಿಶಾಲ ಮತ್ತು ಸಂಕೀರ್ಣವಾಗಿದ್ದು, ಪ್ರಮುಖ ಬದಲಾವಣೆಗಳ ಮುನ್ನ ಎಲ್ಲ ಭಾಗಿದಾರರುಗಳ ಜೊತೆಗೆ ಪೂರ್ವಸಂವಾದ ಅಗತ್ಯ ಎನ್ನುವುದು ನನ್ನ ಭಾವನೆ. ಇದು ಕೇವಲ ಒಂದು ಆದೇಶದ ಮೂಲಕ ಜಾರಿಗೆ ಬರುವ ವಿಚಾರವಲ್ಲ. ಕನ್ನಡದಲ್ಲಿ ವೈದ್ಯಕೀಯ ವ್ಯವಹಾರದ ಅನುಷ್ಠಾನ ಪೂರ್ವದಲ್ಲಿ ಸಾಧಕ ಬಾಧಕಗಳ ಬಗ್ಗೆ ವಿಸ್ತ್ರತ ಚರ್ಚೆ ಅತ್ಯಗತ್ಯ ಎನ್ನುವುದನ್ನು ತಾವೂ ಒಪ್ಪಿಕೊಳ್ಳುತ್ತೀರಿ ಎಂದು ನಾನು ಭಾವಿಸುತ್ತೇನೆ.”

ಈ ಕ್ಷೇತ್ರದಲ್ಲಿ ತೊಡಗಿಸಿಕೊಂಡ ಭಾಗೀದಾರರ ಸಹಮತಿಯೊಂದಿಗೆ ಜಾರಿಗೆ ಕ್ರಮ :

“ಈ ಹಿನ್ನೆಲೆಯಲ್ಲಿ ಪ್ರಾಧಿಕಾರದ ಔಚಿತ್ಯಪೂರ್ಣ ಸಲಹೆಯನ್ನು ಮುಖ್ಯಮಂತ್ರಿಗಳ ಅವಗಾಹನೆಗೆ ತಂದು ಆಸಕ್ತರ ಸಹಮತಿಯೊಂದಿಗೆ ಜಾರಿಗೊಳಿಸಲು ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಮಗೆ ತಿಳಿಯಬಯಸುತ್ತೇನೆ” ಎಂದು ಪತ್ರದಲ್ಲಿ ಹೇಳಿದ್ದಾರೆ.

ಈ ಪತ್ರ ಬರೆಯುವುದಕ್ಕೂ ಮುನ್ನ, ವೈದ್ಯಕೀಯ ಪರಿಭಾಷೆ ಮತ್ತು ಔಷಧ ಚೀಟಿ ಬರೆಯುವ ವಿಷಯವು ಹೊಂದಿಕೊಳ್ಳುವಂತಿರಬೇಕು. ಕನ್ನಡ ತಿಳಿದ ವೈದ್ಯರು ಔಷಧಿ ಚೀಟಿಯನ್ನು ಕನ್ನಡದಲ್ಲಿ ಬರೆದುಕೊಟ್ಟರೆ ಸಂತೋಷ. ಆದರೆ ಆ ರೀತಿ ಬರೆಯುವಂತೆ ಕಡ್ಡಾಯಗೊಳಿಸುವುದು ಪ್ರಾಯೋಗಿಕವಾಗಿ ಸೂಕ್ತವಾದ ಕ್ರಮವಲ್ಲ ಎಂದು ಇನ್ನೊಂದು ಕಡೆ ಆರೋಗ್ಯ ಸಚಿವರು ಪ್ರತಿಕ್ರಿಯೆ ನೀಡಿದ್ದರು.

ಕನ್ನಡದಲ್ಲಿ ಔಷಧ ಚೀಟಿ ಬರೆಯುವ ವೈದ್ಯರನ್ನು ಸನ್ಮಾನಿಸಿ :

ಡಾ.ಪುರುಷೋತ್ತಮ ಬಿಳಿಮಲೆ.

ಕೆಡಿಎ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಅವರು, ಕನ್ನಡದಲ್ಲಿ ಔಷಧಿ ಚೀಟಿ ಬರೆದು ಕನ್ನಡ ಅಭಿಮಾನ ಮೆರೆಯುವ ವೈದ್ಯರನ್ನು ಗುರ್ತಿಸಿ ಪ್ರತಿ ವರ್ಷ ವೈದ್ಯರ ದಿನಾಚರಣೆಯಂದು ತಾಲೂಕು, ಜಿಲ್ಲೆ ಹಾಗೂ ರಾಜ್ಯ ಮಟ್ಟದಲ್ಲಿ ವೈದ್ಯರಿಗೆ ಸನ್ಮಾನ ಮಾಡುವಂತೆ ಸಲಹೆ ನೀಡಿದ್ದರು. ಇದರಿಂದ ಕನ್ನಡ ಭಾಷೆಯ ಪ್ರಗತಿಗೆ ಹೆಚ್ಚಿನ ಸಹಕಾರಿಯಾಗಲಿದ್ದು, ಈ ನಿಟ್ಟಿನಲ್ಲಿ ಗಮನ ಹರಿಸುವಂತೆ ಈ ಮೂಲಕ ಮನವಿ ಮಾಡುತ್ತೇನೆ ಎಂದು ಸಚಿವರಿಗೆ ಬರೆದ ಪತ್ರದಲ್ಲಿ ಈ ಹಿಂದೆ ತಿಳಿಸಿದ್ದರು. 

ಇದಲ್ಲದೆ ಡಾ.ಪುರುಷೋತ್ತಮ ಬಿಳಿಮಲೆ ‘ಮಾಧ್ಯಮಗಳಲ್ಲಿ ಓದಿದ ನೂರಾರು ವೈದ್ಯರು ಸ್ವಯಂಪ್ರೇರಿತರಾಗಿ ಕನ್ನಡದಲ್ಲಿ ಔಷಧ ಚೀಟಿ ಬರೆಯುವ ಮೂಲಕ ಭಾಷೆ ಉಳಿಸಲು ಮುಂದಾಗುತ್ತೇವೆ’ ಎಂದಿದ್ದಾರೆ. ಅವರಲ್ಲಿ ಹಲವರು ಕನ್ನಡದಲ್ಲಿ ಬರೆದ ಪ್ರಿಸ್ಕ್ರಿಪ್ಷನ್‌ಗಳನ್ನು ತಮ್ಮೊಂದಿಗೆ ಹಂಚಿಕೊಂಡಿದ್ದಾರೆ ಎಂದು ಅವರು ಹೇಳಿದ್ದರು. 

WhatsApp Join our WhatsApp Channel
Previous Post

Video News | ಬಿಜೆಪಿ ಆಡಳಿತ ಅವಧಿಯ ಹಗರಣಗಳ ತನಿಖೆಗೆ  ಸಚಿವಸಂಪುಟ ಉಪ ಸಮಿತಿ ರಚಿಸಿದ ಸರ್ಕಾರ

Next Post

ಸ್ವಾತಂತ್ರ್ಯ ಉದ್ಯಾನವನದಲ್ಲಿ ಪ್ರತಿಭಟನೆ ನಿರ್ಬಂಧಕ್ಕೆ ರಾಮಚಂದ್ರ ಗುಹಾ ಖಂಡನೆ : ಸೆ.15 ಒಳಗೆ ಆದೇಶ ಹಿಂಪಡೆಯಲು ಸರ್ಕಾರಕ್ಕೆ ಒತ್ತಾಯ

Next Post
Protest Press Meet

ಸ್ವಾತಂತ್ರ್ಯ ಉದ್ಯಾನವನದಲ್ಲಿ ಪ್ರತಿಭಟನೆ ನಿರ್ಬಂಧಕ್ಕೆ ರಾಮಚಂದ್ರ ಗುಹಾ ಖಂಡನೆ : ಸೆ.15 ಒಳಗೆ ಆದೇಶ ಹಿಂಪಡೆಯಲು ಸರ್ಕಾರಕ್ಕೆ ಒತ್ತಾಯ

Karnataka Assembly

ಆಪರೇಷನ್ ಕಮಲ ಪ್ರಕರಣದಲ್ಲಿ ಲೋಕಾಯುಕ್ತ ತನಿಖೆಗೆ ಅನುಮತಿ ಕೋರಿ ವಿಧಾನಸಭಾಧ್ಯಕ್ಷರಿಗೆ ಅರ್ಜಿ ಸಲ್ಲಿಕೆ

Please login to join discussion

Like Us on Facebook

Follow Us on Twitter

Recent News

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

June 13, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

June 13, 2026

ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

June 12, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group