ಮಂಡ್ಯ, ಸೆ.15 www.bengaluruwire.com : ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಕೋಮುಗಲಭೆಯಲ್ಲಿ ಪಿಎಫ್ ಐ (PFI), ಕೆಎಫ್ ಡಿ (KFD) ಅಂತಹ ನಿಷೇಧಿತ ಸಂಘಟನೆಗಳ ನಂಟು ಹೊಂದಿರುವ ಕೇರಳ ಮೂಲದ ವ್ಯಕ್ತಿಗಳ ಕೈವಾಡವಿದೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅನುಮಾನ ವ್ಯಕ್ತಪಡಿಸಿದ್ದಾರೆ.
“ನಾಗಮಂಗಲದಲ್ಲಿ ನಡೆದ ಘಟನೆಯು ಪೂರ್ವಯೋಜಿತ ಎಂದು ಸ್ಥಳೀಯರು ಶಂಕೆ ವ್ಯಕ್ತಪಡಿಸಿದ್ದು, ಈ ದುರುಳರು ಗಲಭೆಗೊ ಮುನ್ನ 150 ಮಾಸ್ಕ ಖರೀದಿಸಿದ್ದಾರೆ, ಸಿಸಿಟಿವಿಗಳನ್ನ ನಾಶ ಮಾಡಿದ್ದಾರೆ ಮತ್ತು ಈ ದುಷ್ಕೃತ್ಯ ಸಂಪೂರ್ಣ ಪ್ರಾಯೋಜಿತ ಮತ್ತು ಪೂರ್ವನಿಯೋಜಿವಾಗಿದೆ ಎಂಬುದು ಸ್ಥಳೀಯರ ಅನುಮಾನವಾಗಿದೆ” ಎಂದು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೊಲೀಸರು ದಾಖಲಿಸಿರುವ ಎಫ್ ಐಆರ್ (FIR)ನಲ್ಲಿ ಆರೋಪಿಗಳ ಪಟ್ಟಿಯನ್ನು ಹಂಚಿಕೊಂಡಿದ್ದಾರೆ.
ನಿಷೇಧಿತ ಸಂಘಟನೆಗಳ ಒತ್ತಡಲ್ಲಿದ್ದಾರೆಯೇ ಪೊಲೀಸರು?:
“ಸರ್ಕಾರ ದಾಖಲಿಸಿರುವ ಎಫ್ ಐಆರ್ ನಲ್ಲಿ ಮೊದಲ 23 ಆರೋಪಿಗಳು ಹಿಂದೂಗಳೇ ಆಗಿರುವುದರಿಂದ ಪೋಲಿಸರು ನಿಷೇಧಿತ ಸಂಘಟನೆಗಳ ಒತ್ತಡದಲ್ಲಿದ್ದಾರೆಯೇ ಎಂಬ ಸಂದೇಹ ಮೂಡುತ್ತಿದೆ” ಎಂದು ಅಶೋಕ್ ಹೇಳಿದ್ದಾರೆ.
ಈ ಕೋಮುಗಲಭೆಯಲ್ಲಿ ನಿಷೇಧಿತ ಸಂಘಟನೆಗಳು ಮತ್ತು ಮತೀಯ ಮೂಲಭೂತವಾದಿಗಳ ಕೈವಾಡವಿರುವ ಬಲವಾದ ಸಂದೇಹವಿರುವುದರಿಂದ ಸ್ಥಳೀಯ ಪೋಲಿಸರು ಈ ಪ್ರಕರಣವನ್ನ ಬೇಧಿಸುವುದು ಕಷ್ಟಸಾಧ್ಯವಾಗಿದ್ದು, ಈ ನಿಟ್ಟಿನಲ್ಲಿ ಈ ಪ್ರಕರಣವನ್ನ ರಾಷ್ಟ್ರೀಯ ತನಿಖಾ ಸಂಸ್ಥೆ (NIA)ಗೆ ವಹಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರನ್ನು ಸ್ಥಳೀಯರ ಪರವಾಗಿ ಒತ್ತಾಯಿಸುವುದಾಗಿ ತಿಳಿಸಿದ್ದಾರೆ.
ಈ ಮಧ್ಯೆ ಈ ಪ್ರಕರಣದಲ್ಲಿ ಬಂಧಿತರಾದ ಎ-44ನೇ ಆರೋಪಿ ಯೂಸೆಫ್, ಎ-61 ಆರೋಪಿ ನಾಸಿರ್ ಕೇರಳದ ಮಲ್ಲಪುರಂನವರಾಗಿದ್ದು, ಈ ಇಬ್ಬರೂ ನಿಷೇಧಿತ ಪಿಎಫ್ ಐ ಸಂಘಟನೆಯ ಸದಸ್ಯರು ಎಂದು ವಿಹೆಚ್ಪಿ ಗಂಭೀರ ಆರೋಪ ಮಾಡಿದೆ.