Sunday, August 2, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

  • Bengaluru Focus

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

BW FOCUS | ದುರಸ್ತಿ ಹೆಸರಲ್ಲಿ ಮುಚ್ಚಿದೆ ಬಿಬಿಎಂಪಿ ಪೂರ್ ಹೌಸ್ ಹೆರಿಗೆ ಆಸ್ಪತ್ರೆ : ಮೂರು ವರ್ಷ ಕಳೆದರೂ ಸೇವೆಗೆ ಅಲಭ್ಯ

"ಬ್ರಾಂಡ್ ಬೆಂಗಳೂರು ಯೋಜನೆಯಡಿ ನೂತನ ಆಸ್ಪತ್ರೆ ನಿರ್ಮಾಣಕ್ಕೆ ಆರ್ಥಿಕ ಸಂಪನ್ಮೂಲದ ಕೊರತೆ" - ಬಿಬಿಎಂಪಿ ವಿಶೇಷ ಆಯುಕ್ತ ಸೂರಳ್ಕರ್ ವಿಕಾಸ್ ಕಿಶೋರ್

by Bengaluru Wire Desk
September 16, 2024
in Bengaluru Focus
Reading Time: 1 min read
0

ಬೆಂಗಳೂರು, ಸೆ.16 www.bengaluruwire.com : ವಾರ್ಡ್ ನಂಬರ್ 91ರ ಭಾರತಿ ನಗರದ ತಿಮ್ಮಯ್ಯ ರಸ್ತೆಯಲ್ಲಿ ಇರುವ ಬಿಬಿಎಂಪಿಯ ಹೆರಿಗೆ ಆಸ್ಪತ್ರೆಯನ್ನು (ಅಥವಾ ಪೂರ್ ಹೌಸ್) ದುರಸ್ತಿ ಹೆಸರಿನಲ್ಲಿ ಕಳೆದ ಮೂರು ವರ್ಷಗಳಿಂದ ಮುಚ್ಚಲಾಗಿದೆ. 

ಇದರಿಂದ ಹೆಚ್ಚಿನ ಜನಸಾಂದ್ರತೆ, ಬಹುದೊಡ್ಡ ಸಂಖ್ಯೆಯಲ್ಲಿ ಕೆಳ ಮಾಧ್ಯಮ ಮತ್ತು ಬಡ ಕೂಲಿ ಕಾರ್ಮಿಕರು ಹೆಚ್ಚಿರುವ ಪ್ರದೇಶದಲ್ಲಿ ಗರ್ಭಿಣಿ ಸ್ತ್ರೀಯರು, ಬಾಣಂತಿಯರು, ಮಕ್ಕಳು ತೊಂದರೆಗೊಳಗಾಗಿದ್ದಾರೆ.

ಶಿವಾಜಿನಗರದ ಬಳಿಯಿರುವ ಈ ವಾರ್ಡಿನಲ್ಲಿ ಬಡ ಮಧ್ಯಮ ವರ್ಗದವರೇ ಹಲವು ವರ್ಷಗಳಿಂದ ನೆಲೆಸಿರುತ್ತಾರೆ. ಇಲ್ಲಿನ ಸುತ್ತ ಮುತ್ತಲಿನ ವಾರ್ಡಿನ ಗರ್ಭಿಣಿ ಸ್ತ್ರೀಯರು, ಬಾಣಂತಿಯರು ಹಾಗೂ ಮಕ್ಕಳ ತುರ್ತು ಚಿಕಿತ್ಸೆಗಾಗಿ ಇದೇ ಆಸ್ಪತ್ರೆಯನ್ನು ದೀರ್ಘ ಕಾಲದಿಂದ ಅವಲಂಬಿಸಿದ್ದರು.‌ ಎಲ್ಲಾ ರೀತಿಯಲ್ಲೂ ಅತ್ಯಂತ ಅನುಕೂಲಕರವಾಗಿದ್ದ ಈ ಆಸ್ಪತ್ರೆಯನ್ನು ದುರಸ್ತಿ ಹೆಸರಿನಲ್ಲಿ ಮುಚ್ಚಿ ಈಗ ಮೂರು ವರ್ಷಗಳೇ ಕಳೆದಿದೆ. ಹೀಗಾಗಿ ಶಿವಾಜಿನಗರದ ತಿಮ್ಮಯ್ಯ ರಸ್ತೆಯಲ್ಲಿರುವ ಹೆರಿಗೆ ಆಸ್ಪತ್ರೆಯನ್ನು (ಪೂರ್ ಹೌಸ್) ಶೀಘ್ರವಾಗಿ ಪುನರಾರಂಭಿಸಿಬೇಕೆಂದು ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ ಬೆಂಗಳೂರು ಜಿಲ್ಲಾ ಸಮಿತಿ (AIMSS) ಬಿಬಿಎಂಪಿ ಆರೋಗ್ಯ ಇಲಾಖೆಗೆ ಮನವಿ ಮಾಡಿದೆ.

ಎಐಎಂಎಸ್ ಎಸ್ ನಿಯೋಗ ಆಸ್ಪತ್ರೆ ಶೀಘ್ರ ಆರಂಭಿಸುವಂತೆ ಬಿಬಿಎಂಪಿ ವಿಶೇಷ ಆಯುಕ್ತ ಸೂರಳ್ಕರ್ ವಿಕಾಸ್ ಕಿಶೋರ್ ರವರನ್ನು ಭೇಟಿಮಾಡಿ ಮನವಿ ಸಲ್ಲಿಸಿತು.

ಇಲ್ಲಿನ ಜನಸಾಮಾನ್ಯರು ತುರ್ತು ಸಮಯಲ್ಲಿ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿ ಕೊಟ್ಟು ಖಾಸಗಿ ಆಸ್ಪತ್ರೆಗೆ ಹೋಗುವ ಸ್ಥಿತಿವಂತರಲ್ಲ. ಸ್ವಲ್ಪ ಹತ್ತಿರದ ಬೌರಿಂಗ್ ಆಸ್ಪತ್ರೆಯಲ್ಲಿಯೂ ಸಹ ಹಲವು ಕಾರಣಗಳಿಂದ ಹೆರಿಗೆಯ ಸೌಕರ್ಯಗಳನ್ನು ತೆರವುಗೊಳಿಸಿದೆ. ಹಾಗಾಗಿ ದೂರದ ಘೋಷ ಆಸ್ಪತ್ರೆ, ಹಲಸೂರಿನ ಆಸ್ಪತ್ರೆ ಅಥವಾ ಸಾಲ ಮಾಡಿ ಖಾಸಗಿ ಆಸ್ಪತ್ರೆಗೆ ತೆರಳಬೇಕಾಗಿದೆ. ಹೆರಿಗೆಯ ನೋವಿನಿಂದ ಬಳಲುವ ಗರ್ಭಿಣಿಯು ಸರ್ಕಾರಿ ಆಸ್ಪತ್ರೆಗಾಗಿ ಅಲೆಯಬೇಕಾದ ಪರಿಸ್ಥಿತಿ ಅತ್ಯಂತ ಶೋಚನೀಯವಾಗಿದೆ ಎಂದು ಬೆಂಗಳೂರು ಜಿಲ್ಲಾ ಕಾರ್ಯದರ್ಶಿ ಎ.ಶಾಂತಾ ಅವರು ಪರಿಸ್ಥಿತಿಯ ತೆರೆದಿಟ್ಟಿದ್ದಾರೆ.

ಇದನ್ನೂ ಓದಿ : 1) Small Savings | ಗಮನಿಸಿ : ನಿಮ್ಮ ಸಣ್ಣ ಉಳಿತಾಯ ಖಾತೆಯಲ್ಲಿನ ಹಣದ ಮೇಲೆ ಪರಿಣಾಮ ಬೀರುತ್ತದೆ ಈ 5 ಹೊಸ ನಿಯಮಗಳು

2) Bangalore Rents Hike | ಬೆಂಗಳೂರಿನಲ್ಲಿ ಮನೆ ಬಾಡಿಗೆ ಹೆಚ್ಚಳದ ಹೊರೆಯಿಂದ ಸಾಮಾನ್ಯ ಜನ ಕಂಗಾಲು : ಎಲ್ಲಿ? ಎಷ್ಟು ಏರಿಕೆ?

ಈ ಎಲ್ಲಾ ಕಾರಣಗಳಿಂದ ಪೂರ್ ಹೌಸ್ ಹೆರಿಗೆ ಆಸ್ಪತ್ರೆಯ ಜೊತೆಗೆ ನಗರದ ಬಿಬಿಎಂಪಿ ವಲಯದ ಹಲವು ಹೆರಿಗೆ ಆಸ್ಪತ್ರೆಗಳನ್ನು (ಉದಾ. ಯಶವಂತಪುರ ಹೆರಿಗೆ ಆಸ್ಪತ್ರೆ) ಶೀಘ್ರವಾಗಿ ಪುನರಾರಂಭಿಸಬೇಕೆಂದು ಎಐಎಂಎಸ್ಎಸ್ ಶಾಂತ ಎ ನೇತೃತ್ವದ ನಿಯೋಗವು ಇತ್ತೀಚೆಗೆ ನಗರದ ಮಹಾನಗರ ಪಾಲಿಕೆಯ ವಿಶೇಷ ಆಯುಕ್ತ (ಆರೋಗ್ಯ ಮತ್ತು  ನೈರ್ಮಲ್ಯ) ಸೂರಳ್ಕರ್ ವಿಕಾಸ್ ಕಿಶೋರ್ ರವರನ್ನು ಭೇಟಿಮಾಡಿ ಸ್ಥಳೀಯ ನಾಗರಿಕರ ಸಹಿ ಸಂಗ್ರಹದೊಂದಿಗಿನ ಮನವಿ ಪತ್ರವನ್ನು ಸಲ್ಲಿಸಿತು.  

ಮನವಿ ಸ್ವೀಕರಿಸಿ ಮಾತನಾಡಿದ ವಿಶೇಷ ಆಯುಕ್ತರು ‘ತಿಮ್ಮಯ್ಯ ರೋಡ್ ನಲ್ಲಿರುವ ಪೂರ್ ಹೌಸ್  ಹೆರಿಗೆ ಆಸ್ಪತ್ರೆಯು ಬ್ರಾಂಡ್ ಬೆಂಗಳೂರು ಅಡಿಯಲ್ಲಿ ನಿರ್ಮಾಣವಾಗಲು ತೆಗೆದುಕೊಳ್ಳಲಾಗಿದೆ.  ಆದರೆ ಅದಕ್ಕೆ ಆರ್ಥಿಕ ನೆರವು ಸರ್ಕಾರದಿಂದ ಇನ್ನು ಲಭ್ಯವಾಗಿಲ್ಲ. ಹಾಗೆಯೇ ಯಶವಂತಪುರ ಹೆರಿಗೆ ಆಸ್ಪತ್ರೆಯ ಸಂಬಂಧಪಟ್ಟ ನಿರ್ಧಾರಿತ ಕಡತ ಬಿಬಿಎಂಪಿ ಮತ್ತು ರಾಜ್ಯ ಸರ್ಕಾರದ ಮಧ್ಯೆ ಸಿಲುಕಿಕೊಂಡಿದೆ. ಆದ್ದರಿಂದ ಕೆಲಸವು ನಿಂತಿದೆ. ರಾಜ್ಯ ಸರ್ಕಾರವು ಸೂಕ್ತ ರೀತಿಯಲ್ಲಿ ತ್ವರಿತವಾಗಿ ಸ್ಪಂದಿಸಿದರೆ  ಕೆಲಸವು ಮುಂದುವರೆಯುವುದು. ಅದಕ್ಕಾಗಿ ನಾವು ಕಾಯುತ್ತಿದ್ದೇವೆ’ ಎಂದು ಉತ್ತರಿಸಿದರು. 

ಸಂಘಟನೆಯ ಪರವಾಗಿ ಹೇಮಾವತಿ, ಅನುರಾಧ, ನಿರ್ಮಲ ಮತ್ತು ಸ್ಥಳೀಯರು ಇದೇ ಸಂದರ್ಭದಲ್ಲಿ ಉಪಸ್ಥಿತರಿದ್ದರು.

“ಬೆಂಗಳೂರು ವೈರ್” ಡಿಜಿಟಲ್ ವೆಬ್ ನ್ಯೂಸ್ ಪೋರ್ಟೆಲ್ಲಿನ ಸೋಶಿಯಲ್ ಮೀಡಿಯಾ ಪೇಜ್ ಹಾಗೂ Google News ಗಳಿಗೆ ಉಚಿತವಾಗಿ Subscribe ಆಗಲು Facebook, Telegram, Twitter, Youtube, Whatsup Channel ಗೆ ಜಾಯಿನ್ ಆಗಲು ಇವುಗಳ ಲಿಂಕ್ ಮೇಲೆ ಕ್ಲಿಕ್ ಮಾಡಿ.

WhatsApp Join our WhatsApp Channel
Previous Post

ನಾಗಮಂಗಲ ಗಲಭೆ ಪ್ರಕರಣ : ಕೇರಳದ ನಿಷೇಧಿತ ಸಂಘಟನೆ ಕೈವಾಡ, ಒತ್ತಡದಲ್ಲಿ ಪೊಲೀಸರು – ಆರ್.ಅಶೋಕ್

Next Post

World Skills Competition | ವಿಶ್ವ ಕೌಶಲ್ಯ ಸ್ಪರ್ಧೆಯಲ್ಲಿ ಕರ್ನಾಟಕದ ನಾಲ್ವರಿಗೆ ಶ್ರೇಷ್ಠತಾ ಪದಕ

Next Post

World Skills Competition | ವಿಶ್ವ ಕೌಶಲ್ಯ ಸ್ಪರ್ಧೆಯಲ್ಲಿ ಕರ್ನಾಟಕದ ನಾಲ್ವರಿಗೆ ಶ್ರೇಷ್ಠತಾ ಪದಕ

ಬಿಬಿಎಂಪಿ ಕೇಂದ್ರ ಕಚೇರಿ, ಸಾಂದರ್ಭಿಕ ಚಿತ್ರ

BBMP NEWS | ಬಿಬಿಎಂಪಿಯ 13 ಸಾಧಕ ಎಂಜಿನಿಯರ್ ಗಳಿಗೆ ನಾಳೆ ಪ್ರಶಸ್ತಿ ಪ್ರದಾನ

Please login to join discussion

Like Us on Facebook

Follow Us on Twitter

Recent News

ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

August 1, 2026

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

August 1, 2026

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026

Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

August 1, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group