ಬೆಂಗಳೂರು, ಸೆ.20 www.bengaluruwire.com : ತಿರುಪತಿ ಲಡ್ಡು ತಯಾರಿಕೆಯಲ್ಲಿ ಕಲಬೆರಕೆ ತುಪ್ಪ ಬಳಕೆ ದೊಡ್ಡ ವಿವಾದದ ಸ್ವರೂಪ ಒಡೆದು, ಈ ಪ್ರಕರಣ ತೀವ್ರ ಚರ್ಚೆಗೆ ಗ್ರಾಸವಾಗಿರುವ ಮಧ್ಯೆ, ಎಚ್ಚೆತ್ತಕೊಂಡಿರುವ ರಾಜ್ಯ ಸರ್ಕಾರ ರಾಜ್ಯದ ಮುಜರಾಯಿ ದೇವಸ್ಥಾನಗಳಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪ ಬಳಕೆ ಮಾಡುವಂತೆ ಆದೇಶ ಹೊರಡಿಸಿದೆ.
ಮುಜರಾಯಿ ದೇವಾಲಯಗಳಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪವನ್ನೇ ಬಳಸುವಂತೆ ಸೂಚನೆ ನೀಡಿದೆ. ಈ ಬಗ್ಗೆ ಧಾರ್ಮಿಕ ದತ್ತಿ ಇಲಾಖೆ ದೇವಾಲಗಳಿಗೆ ಸೆ.20ರಂದು ಸುತ್ತೋಲೆ ಹೊರಡಿಸಿದೆ.
ಇನ್ನುಮುಂದೆ ದೇವಸ್ಥಾದ ಸೇವೆಗಳಿಗೆ, ದೀಪಗಳಿಗೆ, ಪ್ರಸಾದ ತಯಾರಿಕೆಗೆ, ದಾಸೋಹ ಭವನಗಳಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪವನ್ನೇ ಬಳಕೆ ಮಾಡಬೇಕು. ಪ್ರಸಾದ ತಯಾರಿಕೆಯಲ್ಲಿ ಗುಣಮಟ್ಟ ಕಾಪಾಡುವಂತೆ ಎಂದು ಕಟ್ಟಪ್ಪಣೆ ಮಾಡಿದೆ.