ನವದೆಹಲಿ.24, www.bengaluruwire.com : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿಗೆ ಉದ್ಯಮದ ಬೇಡಿಕೆ ಆಧಾರಿತ ಎನ್ಎಸ್ಐಸಿ (NSIC) ಬಹು ಕೌಶಲ್ಯ ಅಭಿವೃದ್ಧಿ ಕೇಂದ್ರವನ್ನು ಮಂಜೂರು ಮಾಡುವಂತೆ ರಾಜ್ಯ ಆಹಾರ ಮತ್ತು ನಾಗರೀಕ ಪೂರೈಕೆ ಸಚಿವ ಕೆ.ಎಚ್.ಮುನಿಯಪ್ಪ ಕೇಂದ್ರದ ಸಣ್ಣ ,ಮದ್ಯಮ ಕೈಗಾರಿಕೆ ಹಾಗೂ ಕಾರ್ಮಿಕ ಸಚಿವರಾದ ಶೋಭಾ ಕರಂದ್ಲಾಜೆ ಅವರಿಗೆ ಮನವಿ ಮಾಡಿದ್ದಾರೆ.
ಮಂಗಳವಾರ ನವದೆಹಲಿಯ ಇಎಸ್ಐಸಿ ಭವನದಲ್ಲಿ ಕೇಂದ್ರದ ಸೂಕ್ಷ್ಮ ಮತ್ತು ಸಣ್ಣ ,ಮದ್ಯಮ ಕೈಗಾರಿಕೆ ಹಾಗೂ ಕಾರ್ಮಿಕ ಸಚಿವರಾದ ಶೋಭಾ ಕರಂದ್ಲಾಜೆ ಅವರನ್ನು ಭೇಟಿ ಮಾಡಿದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಉಸ್ತುವಾರಿ ಸಚಿವರಾದ ಕೆ.ಹೆಚ್. ಮುನಿಯಪ್ಪ ಅವರು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ವ್ಯಾಪ್ತಿಯಲ್ಲಿ ಉದ್ಯಮ ಪೋರ್ಟಲ್ ಅಡಿಯಲ್ಲಿ 45,000 ನೋಂದಾಯಿಸಲಾದ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕಾ (MSME) ಘಟಕಗಳು ನಾಲ್ಕು ಲಕ್ಷ ಉದ್ಯೋಗಾವಕಾಶದೊಂದಿಗೆ ಕಾರ್ಯನಿರ್ವಹಿಸುತ್ತಿದೆ.
ಹೀಗಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯು ನುರಿತ ಮತ್ತು ಕೌಶಲ್ಯ ರಹಿತ ಯುವಕರನ್ನು ಹೊಂದಿದ್ದು, ಬೇಡಿಕೆ ಆಧಾರಿತ ಕೌಶಲ್ಯ ತರಬೇತಿಗಳನ್ನು ನೀಡುವ ಮೂಲಕ ಈ ವಲಯಗಳಲ್ಲಿ ಕೌಶಲ್ಯ ತರಬೇತಿ ಹೆಚ್ಚಿಸುವ ಸಲುವಾಗಿ, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಬಹು ಕೌಶಲ್ಯ ತರಬೇತಿಯನ್ನು ನೀಡಲು ಕೌಶಲ್ಯ ಅಭಿವೃದ್ಧಿ ಕೇಂದ್ರ ಸ್ಥಾಪನೆ ಮಾಡುವಂತೆ ಮನವಿ ಮಾಡಿದ ಸಚಿವ ಕೆ.ಎಚ್.ಮುನಿಯಪ್ಪ, ಉತ್ತಮ ಕೈಗಾರಿಕೆಗಳ ನಿರ್ಮಾಣಕ್ಕಾಗಿ ಅಗತ್ಯವಿರುವ ಭೂಮಿ ಮತ್ತು ಇತರ ಮೂಲಸೌಕರ್ಯಗಳಾದ ರಸ್ತೆ, ವಿದ್ಯುತ್ ಮತ್ತು ನೀರಿನ ಪೂರೈಕೆಯನ್ನು ಒದಗಿಸಲು ಸಿದ್ದವಿರುವುದಾಗಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ಮನವರಿಕೆ ಮಾಡಿಕೊಟ್ಟರು.
.