Saturday, March 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

#Save Uliya Island | ಅವಧಿ ಮುಗಿದ ಪರ್ಮಿಟ್, ಹೊಸ ಅಕ್ರಮ ಮರಳು ದಂಧೆ?  ‘ಉಳಿಯ’ ದ್ವೀಪದ ಅಳಿವಿಗೆ ಅಧಿಕಾರಿಗಳ ಸಾಥ್? ಮುಖ್ಯ ಕಾರ್ಯದರ್ಶಿಗೆ ದೂರು

by Bengaluru Wire Desk
September 30, 2024
in News Wire, Public interest
Reading Time: 1 min read
0
Nethravathi River Bed

ದಕ್ಷಿಣ ಕನ್ನಡ ಜಿಲ್ಲೆಯ ನೇತ್ರಾವತಿ ನದಿ ತಟದ ಸಾಂದರ್ಭಿಕ ಚಿತ್ರ.

ಮಂಗಳೂರು, ಸೆ.30 www.bengaluruwire.com : ಕರಾವಳಿ ಜಿಲ್ಲೆಗಳಲ್ಲಿ ತಾಂಡವವಾಡುತ್ತಿರುವ ಮರಳು ಮಾಫಿಯಾ ವಿರುದ್ಧ ರಣಕಹಳೆ ಮೊಳಗಿದೆ. ಮಂಗಳೂರು ಹೊರವಲಯದ ‘ಉಳಿಯ’ ದ್ವೀಪದಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆ ಹಾಗೂ ಮರಳು ಮಾಫಿಯಾ ಜೊತೆಗೆ ದಕ್ಷಿಣ ಕನ್ನಡ ಜಿಲ್ಲೆಯ ಅಧಿಕಾರಿಗಳು ಶಾಮೀಲಾಗಿರುವ ಬಗ್ಗೆ ಸೋಮವಾರ ಸರ್ಕಾರದ ಮುಖ್ಯಕಾರ್ಯದರ್ಶಿಗೆ ದೂರು ಸಲ್ಲಿಕೆಯಾಗಿದೆ.

ಕರಾವಳಿಯಲ್ಲಿ ಎಗ್ಗಿಲ್ಲದೆ ನಡೆಯುತ್ತಿರುವ ಗಣಿಕಾರಿಗೆಯಿಂದಾಗಿ ನೇತ್ರಾವತಿ ನದಿಯ ನಡುಗಡ್ಡೆಯಾಗಿರುವ ಉಳ್ಳಾಲ ತಾಲೂಕಿನ ಪಾವೂರು ಸಮೀಪದ ‘ಉಳಿಯ ದ್ವೀಪ’ ಅವನತಿಯ ಅಂಚಿನಲ್ಲಿದೆ. ಇದೇ ವೇಳೆ, ದಕ್ಷಿಣ ಕನ್ನಡ ಜಿಲ್ಲೆ (Dakshina Kannada) ಸೇರಿದಂತೆ ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ ಮರಳುಗಣಿಗಾರಿಕೆಯನ್ನು ಸಂಪೂರ್ಣವಾಗಿ ನಿಷೇಧಿಸಬೇಕು. ಈ ದಂಧೆಗೆ ನೇರ, ಪರೋಕ್ಷ ಅವಕಾಶ ನೀಡುವ, ಅಕ್ರಮ ಮರಳು ಸಾಗಾಟಕ್ಕೆ ಅವಕಾಶ ಮಾಡಿಕೊಡುವ ಅಧಿಕಾರಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕೆಂದು ಆಗ್ರಹಿಸಿ ಹಿರಿಯ ಪತ್ರಕರ್ತರೂ ಆದ ಪರಿಸರ ಹೋರಾಟಗಾರ ಆಲ್ವಿನ್ ಮೆಂಡೋನ್ಸಾ ಅವರು ಈ ದೂರನ್ನು ಸಲ್ಲಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯು, ನದಿಯನ್ನು ಆವರಿಸಿಕೊಂಡಿರುವ ಪ್ರದೇಶವಾಗಿದೆ. ಕುಮಾರಧಾರ, ನೇತ್ರಾವತಿ, ಫಲ್ಗುಣಿ, ನಂದಿನಿ ಸಹಿತ ಹಲವಾರು ನದಿಗಳು ಕರಾವಳಿ ಜನರ ಜೀವನಾಡಿಯಾಗಿದ್ದು, ಇದೀಗ ಸರ್ಕಾರ ಹಾಗೂ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಜಲಮೂಲಕ್ಕೆ ಸಂಚಕಾರ ಎದುರಾಗಿದೆ. ಕರ್ನಾಟಕ ಕರಾವಳಿಯ ದೊಡ್ಡ ನದಿಗಳಲ್ಲಿ ಒಂದಾಗಿರುವ ನೇತ್ರಾವತಿ ನದಿಯಲ್ಲಿ ಅಕ್ರಮ ಮರಳು ಗಣಿಗಾರಿಕೆ ನಡೆಯುತ್ತಿದ್ದು, ಮರಳು ಮಾಫಿಯಾದ ದಂಧೆಯಿಂದಾಗಿ ನೇತ್ರಾವತಿ ನದಿಯ ನಡುಗಡ್ಡೆಯಾಗಿರುವ ಉಳ್ಳಾಲ ತಾಲೂಕಿನ ಪಾವೂರು ಸಮೀಪದ ‘ಉಳಿಯ ದ್ವೀಪ’ ಅವನತಿಯ ಅಂಚಿನಲ್ಲಿದೆ.

ಈ ಬಗ್ಗೆ ಪೊಲೀಸರು, ಗಣಿ ಇಲಾಖೆಯ ಅಧಿಕಾರಿಗಳು, ಕಂದಾಯ ಇಲಾಖೆಯ ಅಧಿಕಾರಿಗಳು ತಮಗೇನೂ ಗೊತ್ತಿಲ್ಲ ಎಂಬಂತಿದ್ದಾರೆ. ಈ ಕುರಿತಂತೆ, ಜಿಲ್ಲಾ ಉಸ್ತುವಾರಿ ಸಚಿವರಿಗೂ ದೂರು ಸಲ್ಲಿಕೆಯಾಗಿದೆ. ಆದರೂ ಪ್ರಯೋಜನವಾಗಿಲ್ಲ ಎಂದು ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದು, ಈ ಕುರಿತ ಸಮಗ್ರ ವರದಿಯೊಂದಿಗೆ ಪರಿಸರ ಹೋರಾಟಗಾರ ಆಲ್ವಿನ್ ಮೆಂಡೋನ್ಸಾ, ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ದೂರು ನೀಡಿದ್ದಾರೆ.

ಅಧಿಕಾರಿಗಳ ಹಾಗೂ ಸ್ಥಳೀಯ ರಾಜಕಾರಣಿಗಳ ಕುಮ್ಮಕ್ಕಿನಿಂದಾಗಿ ಮರಳು ಮಾಫಿಯಾ ದಂಧೆಕೋರರು ಉಳಿಯ ದ್ವೀಪದಲ್ಲಿ ನಿರಂತರವಾಗಿ ಮರಳು ಗಣಿಗಾರಿಕೆ ನಡೆಸುತ್ತಿದ್ದು, ನಡುಗಡ್ಡೆಯ ಬಹುಪಾಲು ನೆಲ ನದಿಯ ಪಾಲಾಗಿದೆ. ಇದರಿಂದಾಗಿ ಉಳಿಯ ದ್ವೀಪದಲ್ಲಿನ ನಿವಾಸಿಗಳಲ್ಲಿ ಆತಂಕ ಹೆಚ್ಚಾಗಿದೆ. ಈ ಬಗ್ಗೆ ದ್ವೀಪದ ನಿವಾಸಿಗಳು ಸ್ಥಳೀಯ ಅಧಿಕಾರಿಗಳ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ. ಪೊಲೀಸರಿಗೆ ದೂರು ನೀಡಿದರೂ ಪೊಲೀಸರು ಅಕ್ರಮವನ್ನು ತಡೆಯುವ ಬದಲು, ದೂರು ನೀಡಿದವರ ಬಗ್ಗೆ ದಂಧೆಕೋರರಿಗೆ ಮಾಹಿತಿ ನೀಡಿ ಬೆದರಿಕೆ ಒಡ್ಡುವ ಪ್ರಕರಣಗಳು ನಡೆಯುತ್ತಿದೆ.

ಉಳಿಯ ದ್ವೀಪ ಸಮೀಪ ನಡೆಯುತ್ತಿರುವ ಅಕ್ರಮ ಮರಳುಗಾರಿಕೆ ನಡೆಯುತ್ತಿರುವ ಕುರಿತ ಚಿತ್ರ. (ಚಿತ್ರಕೃಪೆ : ದೂರುದಾರರು ಒದಗಿಸಿದ ಚಿತ್ರ)

“ಬಹುತೇಕ ಮರಳು ದಂಧೆಕೋರರು ಸ್ಥಳೀಯ ಶಾಸಕರೇ ತಮಗೆ ಬೆಂಗಾವಲಾಗಿ ನಿಂತಿದ್ದಾರೆ ಎಂದು ಹೇಳಿ ಸ್ಥಳೀಯರನ್ನು ಬೆದರಿಕೆಯೊಡ್ಡುತ್ತಿದ್ದಾರೆ” ಎಂದು ಆಲ್ವಿನ್ ಮೆಂಡೋನ್ಸಾ ಅವರು ತಮ್ಮ ದೂರಿನಲ್ಲಿ ಕಳವಳ ವ್ಯಕ್ತಪಡಿಸಿದ್ದಾರೆ.

“ಕೆಲವು ದಿನಗಳಿಂದ ಉಳಿಯ ದ್ವೀಪದ ನಿವಾಸಿಗಳು ಪ್ರತಿಭಟನೆಗಳನ್ನು ನಡೆಸುತ್ತಿದ್ದಾರೆ. ಸರ್ಕಾರ ಯಾವುದೇ ಕ್ರಮ ಕೈಗೊಳ್ಳದಿರುವುದರಿಂದ ದ್ವೀಪ ಪ್ರದೇಶದ ನಿವಾಸಿಗಳು ಮಂಗಳೂರಿನಲ್ಲೂ ಬೃಹತ್ ಪ್ರತಿಭಟನೆ ನಡೆಸಿ, ಉಳಿಯ ದ್ವೀಪದ ಸುತ್ತಮುತ್ತ ನಡೆಯುತ್ತಿರುವ ಅಕ್ರಮ ಮರಳುಗಾರಿಕೆಯನ್ನು ನಿಲ್ಲಿಸುವಂತೆ ಆಗ್ರಹಿಸಿದ್ದರು. ಮಂಗಳೂರಿನ ಮಿನಿ ವಿಧಾನಸೌಧದ ಎದುರು ಪ್ರತಿಭಟನಾ ಸಮಾವೇಶ ನಡೆಸಿ ಜಿಲ್ಲಾಡಳಿತ, ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ಹಲವು ಬಾರಿ ಮನವಿ ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ.”

“ಪಾವೂರು ಉಳಿಯ, ರಾಣಿಪುರ, ಉಳ್ಳಾಲ ಹೊಯಿಗೆ ದ್ವೀಪದಲ್ಲಿ ಅಕ್ರಮ ಮರಳುಗಾರಿಕೆ ಅವ್ಯಾಹತವಾಗಿದ್ದು, ರಾಣಿಪುರ ಉಳಿಯದಲ್ಲಿ ಮನೆಗಳು ಅಪಾಯದಲ್ಲಿವೆ. ಜಿಲ್ಲಾಡಳಿತ ಮರಳುಗಾರಿಕೆ ನಿಷೇಧಿಸಬೇಕೆಂದು ಆಗ್ರಹಿಸಿದ್ದಾರೆ. ಉಳ್ಳಾಲ, ಕೋಣಾಜೆ, ವಾಮಂಜೂರು ಠಾಣೆಗಳ ವ್ಯಾಪ್ತಿಯ ಪೊಲೀಸರು ಅಕ್ರಮ ಮರಳುಗಾರರ ಜತೆ ಶಾಮೀಲಾಗಿರುವ ಕಾರಣ ದ್ವೀಪ ನಾಶವಾಗುತ್ತಿದೆ. ರಾತ್ರೋರಾತ್ರಿ ಸಾಲುಗಟ್ಟಲೆ ಟಿಪ್ಪರ್‌ಗಳು ಪೊಲೀಸರೆದುರೇ ಸಾಗುತ್ತಿದ್ದರೂ ಕ್ರಮ ಆಗುತ್ತಿಲ್ಲ ಎಂದು ಮುಖಂಡರು ಆರೋಪಿಸಿದ್ದಾರೆ” ಎಂದು ಸರ್ಕಾರದ ಗಮನ ಸೆಳೆದಿದ್ದಾರೆ.

“ಈ ಮರಳು ಮಾಫಿಯಾದ ಕರಾಳ ಬಾಹು ನೇತ್ರಾವತಿ ನದಿಯನ್ನಷ್ಟೇ ಅಲ್ಲ, ದಕ್ಷಿಣ ಕನ್ನಡ ಜಿಲ್ಲೆಯ ಫಲ್ಗುಣಿ, ನಂದಿನಿ, ಕುಮಾರಧಾರ, ಗುಂಡ್ಯ ಹೊಳೆ ಸಹಿತ ಇತರ ನದಿಗಳನ್ನೂ ಆವರಿಸಿದ್ದು, ಈ ಬಗ್ಗೆ ಜಿಲ್ಲಾಧಿಕಾರಿಗಳೂ ತಮಗೇನೂ ಸಂಬಂಧವೇ ಇಲ್ಲ ಎಂಬಂತಿದ್ದಾರೆ. ಹಿಂದಿನ ಜಿಲ್ಲಾಧಿಕಾರಿಗಳು ಆಗಾಗ್ಗೆ ದಾಳಿ ನಡೆಸಿ ಅಕ್ರಮ ಮರಳು ದಂಧೆಕೋರರನ್ನು ಎಚ್ಚರಿಸುವ ಪ್ರಯತ್ನ ಮಾಡುತ್ತಿದ್ದರಾದರೂ, ಹಾಲಿ ಜಿಲ್ಲಾಧಿಕಾರಿಗಳು ಈ ಬಗ್ಗೆ ಗಮನ ಕೊಡದಿರುವುದು ವಿಷಾದದ ಸಂಗತಿ” ಎಂದು ಆಲ್ವಿನ್ ಮೆಂಡೋನ್ಸಾ ಅವರು ದೂರಿನಲ್ಲಿ ವಿಷದ ವ್ಯಕ್ತಪಡಿಸಿದ್ದಾರೆ.

ಅವಧಿ ಮುಗಿದ “ಪರ್ಮಿಟ್” ಹೆಸರಲ್ಲಿ ಹೊಸ ದಂಧೆ? :

“ಮರಳು ಗಣಿಗಾರಿಕೆ ಬಗ್ಗೆ ಅಧಿಕಾರಿಗಳನ್ನು ಪ್ರಶ್ನಿಸಿದರೆ, ದಕ್ಷಿಣಕನ್ನಡ ಜಿಲ್ಲೆಯ ವಿವಿಧೆಡೆ ಮೀನುಗಾರಿಕೆಗೆ ಅಡ್ಡಿಯಾಗುವ ಮರಳಿನ ದಿಬ್ಬಗಳನ್ನು ಹಾಗೂ ಬೃಹತ್ ದೋಣಿಗಳ ಸಂಚಾರಕ್ಕೆ ಅಡ್ಡಿಯಾಗುವ ದಿಬ್ಬಗಳನ್ನು ತೆರವು ಮಾಡಲು ಅವಕಾಶ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ಸಮುಜಾಯಿಷಿ ನೀಡುತ್ತಿದ್ದಾರೆ. ಆದರೆ ದಕ್ಷಿಣ ಕನ್ನಡ ಜಿಲ್ಲೆಯ ನದಿಗಳಲ್ಲಿ ಆ ರೀತಿಯ ದಿಬ್ಬಗಳೇ ಇಲ್ಲ. ಆದಾಗಿಯೂ, 2023ರಿಂದ 2025ರ ವರೆಗೆ ಫಲ್ಗುಣಿ, ಕುಮಾರಧಾರ, ನೇತ್ರಾವತಿ, ಗುಂಡ್ಯಹೊಳೆ ಸಹಿತ ಕಡಲ ನಿಯಂತ್ರಣ ರಹಿತ ಪ್ರದೇಶ ( NON CRZ)ದ ಸುಮಾರು 27 ಕಡೆ 6,55,376 ಮೆಟ್ರಿಕ್ ಟನ್ ಮರಳು ಬ್ಲಾಕ್’ಗಳಿಗೆ ಟೆಂಡರ್ ಮೂಲಕ ಮರಳುಗಾರಿಕೆಗೆ ಅವಕಾಶ ನೀಡಲಾಗಿದೆ.”

“ಈ ಪರವಾನಗಿಯ ಹೊರತಾಗಿಯೂ ನೂರಾರು ಕಡೆ ಅಕ್ರಮ ಮರಳು ಗಣಿಗಾರಿಕೆ ನಡೆಯುತ್ತಿವೆ. 2023ಕ್ಕೆ ಮೊದಲು ಪಡೆದ ಪರವಾನಗಿಯನ್ನೇ ನೆಪವಾಗಿಟ್ಟು ಮಾಫಿಯಾಗಳು ಈ ಅಕ್ರಮಗಳನ್ನು ನಡೆಸುತ್ತಿವೆ. ಇದನ್ನು ಹೊರತುಪಡಿಸಿ ಹಲವೆಡೆ 167 ಮಂದಿಗೆ ಸಿಆರ್ ಜೆಡ್ ವ್ಯಾಪ್ತಿಯಲ್ಲಿ ತಲಾ 1000 ಮೆಟ್ರಿಕ್ ಟನ್ ಮರಳು ಗಣಿಗಾರಿಕೆಗೆ 2022-23 ರವರೆಗೆ ಅನುಮತಿ ನೀಡಲಾಗಿತ್ತು. ಈ ಪರವಾನಗಿ ನವೀಕರಣಗೊಳ್ಳದಿದ್ದರೂ, ಮರಳು ಸಾಗಿಸುವ ದಂಧೆ ನಡೆಯುತ್ತಿದೆ ಎಂದರೆ, ಅದಕ್ಕೆ ಅಧಿಕಾರಿಗಳ ಕೃಪೆ ಇರದೇ ನಡೆಯಲು ಸಾಧ್ಯವೇ?” ಎಂದು ಆಲ್ವಿನ್ ಅವರು ಅನುಮಾನ ವ್ಯಕ್ತಪಡಿಸಿದ್ದಾರೆ.

ಈಗಾಗಲೇ ನದಿ ತಿರುವು ಯೋಜನೆಯಿಂದಾಗಿ ನೇತ್ರಾವತಿ ನದಿಯಲ್ಲಿ ಮೀನು ಹಾಗೂ ಜಲಚರಗಳು ಅವನತಿಯ ಅಂಚಿನಲ್ಲಿವೆ. ಮರಳು ಅಕ್ರಮಗಳಿಂದಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಕುಸಿದಿದ್ದು, ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಂಡಿದೆ. ಹಲವಾರು ಸೇತುವೆಗಳಿಗೂ ಹಾನಿಯಾಗಿವೆ. ಅಕ್ರಮ ದಂಧೆಕೋರರಿಂದಾಗಿ ಸರ್ಕಾರದ ಬೊಕ್ಕಸಕ್ಕೂ ಸಾವಿರಾರು ಕೋಟಿ ರಾಜಸ್ವವೂ ವಂಚನೆಯಾಗಿರುವ ಅನುಮಾನ ಇದೆ ಎಂದಿರುವ ದೂರುದಾರರು, ಮರಳು ಗಣಿಗಾರಿಕೆ ಸಂಬಂಧ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರೂಪಿಸಿರುವ ನಿಯಮಗಳು ಹಾಗೂ ಮಾನದಂಡಗಳನ್ನು (OFFICIAL MEMORANDUM, Ministry of Environment & Forests, No.11-83/2005-IA-III(Pt.III) Dated, 9 JUNE 2011 ಹಾಗೂ ಕರ್ನಾಟಕ ಉಪ ಖನಿಜಗಳ ರಿಯಾಯಿತಿ ನಿಯಮಗಳು,1994) ಪಾಲಿಸಲಾಗುತ್ತಿಲ್ಲ ಎಂಬ ಆರೋಪಗಳೂ ಕೇಳಿಬರುತ್ತಿವೆ. 

ರಾಜ್ಯಾದ್ಯಂತ ಅಕ್ರಮ ಮರಳು ಗಣಿಗಾರಿಕೆ ನಿಷೇಧಕ್ಕೆ ಆಗ್ರಹ :

ಅಷ್ಟೇ ಅಲ್ಲ, ಮರಳು ಗಣಿಗಾರಿಕೆಯ ನಿರ್ವಹಣೆಗಾಗಿ ಜಿಲ್ಲಾಧಿಕಾರಿ, ಸಹಾಯಕ ಆಯುಕ್ತರು, ಪೊಲೀಸ್ ಅಧಿಕಾರಿಗಳು, ತಹಸೀಲ್ದಾರರು ಸಹಿತ ವಿವಿಧ ಇಲಾಖೆಗಳ ಅಧಿಕಾರಿಗಳನ್ನು ಒಳಗೊಂಡ ‘ಮೇಲ್ವಿಚಾರಣಾ ಸಮಿತಿಗಳು’ ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಪರಿಶೀಲನೆ ನಡೆಸಬೇಕು, ಎರಡು ತಿಂಗಳಿಗೊಮ್ಮೆ ಸಭೆ ನಡೆಸಿ ಪರಾಮರ್ಶೆ ನಡೆಸಬೇಕೆಂಬ ನಿಯಮವಿದ್ದರೂ ಅಧಿಕಾರಿಗಳು ಈ ವಿಚಾರದಲ್ಲಿ ಆಸಕ್ತಿ ವಹಿಸದಿರುವುದು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ ಎಂದು ಸರ್ಕಾರದ ಗಮನಸೆಳೆದಿದ್ದಾರೆ. ಇದೇ ವೇಳೆ, ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ ಮರಳು ಗಣಿಗಾರಿಕೆಯನ್ನು ಸಂಪೂರ್ಣವಾಗಿ ನಿಷೇಧಿಸಬೇಕು. ಈ ದಂಧೆಗೆ ನೇರ, ಪರೋಕ್ಷ ಅವಕಾಶ ನೀಡುವ, ಅಕ್ರಮ ಮರಳು ಸಾಗಾಟಕ್ಕೆ ಅವಕಾಶ ಮಾಡಿಕೊಡುವ ಅಧಿಕಾರಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕೆಂದು ಅವರು ಆಗ್ರಹಿಸಿದ್ದಾರೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

ರಫೇಲ್ ಮೆರೈನ್ ಜೆಟ್ ಖರೀದಿಗೆ ಅಂತಿಮ ಆಫರ್ ನೀಡಿದ ಬೆನ್ನಲ್ಲೇ ಅಜಿತ್ ದೋವಲ್ ಫ್ರಾನ್ಸ್ ಗೆ ಇಂದಿನಿಂದ ಎರಡು ದಿನಗಳ ಭೇಟಿ

Next Post

ಬಿಬಿಎಂಪಿ ವ್ಯಾಪ್ತಿಯಲ್ಲಿ ಇಂದಿನಿಂದ ಪರೀಕ್ಷಾರ್ಥ, ಸ್ವತ್ತಿನ ಇ-ಖಾತಾ ವಿತರಣೆ ಆರಂಭ : ಹೀಗೆ ಡೌನ್ ಲೋಡ್ ಮಾಡಿಕೊಳ್ಳಿ

Next Post
GBA Head Office Image

ಬಿಬಿಎಂಪಿ ವ್ಯಾಪ್ತಿಯಲ್ಲಿ ಇಂದಿನಿಂದ ಪರೀಕ್ಷಾರ್ಥ, ಸ್ವತ್ತಿನ ಇ-ಖಾತಾ ವಿತರಣೆ ಆರಂಭ : ಹೀಗೆ ಡೌನ್ ಲೋಡ್ ಮಾಡಿಕೊಳ್ಳಿ

Su-30MKI

ಎಚ್ಎಎಲ್ ನಿಂದ ಭಾರತೀಯ ವಾಯುಪಡೆಗೆ ಸುಖೋಯ್-30ಎಂಕೆಐ ಯುದ್ಧ ವಿಮಾನದ ಮೊದಲ AL-31FP ಏರೋ ಎಂಜಿನ್ ಹಸ್ತಾಂತರ

Please login to join discussion

Like Us on Facebook

Follow Us on Twitter

Recent News

ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026

Karnataka Budget 2026-27 | ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ: 4.48 ಲಕ್ಷ ಕೋಟಿ ಮೊತ್ತದ ‘ಸರ್ವೋದಯ’ ಆಯವ್ಯಯದ ಕಂಪು

March 6, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d