ಬೆಂಗಳೂರು, ಅ.08 www.bengaluruwire.com : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘಕ್ಕೆ ಕೆಎಎಸ್ ಅಧಿಕಾರಿ ಸಿ.ಎನ್ ಮಂಜುನಾಥ್ ಅವರನ್ನು ಆಡಳಿತಾಧಿಕಾರಿಯನ್ನಾಗಿ ನೇಮಿಸಿ ರಾಜ್ಯ ಸರ್ಕಾರ ಆದೇಶಿಸಿದೆ.
ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘವು ಬೃಹತ್ ಸಂಘವಾಗಿದ್ದು, ಸಂಘದ ಆಡಳಿತ ಮಂಡಳಿ ಅವಧಿ ಮುಗಿದಿರುವುದರಿಂದ ಸಂಘದ ಸದಸ್ಯರ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ಸಂಘದ ಹೊಸ ಆಡಳಿತ ಮಂಡಳಿ ರಚನೆಯಾಗುವವರೆಗೆ ಆಡಳಿತಾಧಿಕಾರಿಯನ್ನು ನೇಮಿಸಲು ಸರ್ಕಾರವು ತೀರ್ಮಾನಿಸಿದೆ ಎಂದು ಸಹಕಾರ ಇಲಾಖೆಯ ಸರ್ಕಾರದ ನಡುವಳಿಯಲ್ಲಿ ತಿಳಿಸಲಾಗಿದೆ.
ಕರ್ನಾಟಕ ಸಂಘಗಳ ನೋಂದಣಿ ಕಾಯ್ದೆ 1960 ರ ಕಲಂ 27-ಎ ರನ್ವಯ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘಕ್ಕೆ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಪ್ರಧಾನ ವ್ಯವಸ್ಥಾಪಕ ಸಿ.ಎನ್. ಮಂಜುನಾಥ್ ಅವರನ್ನು ಈ ಆದೇಶ ಹೊರಡಿಸಿದ ದಿನಾಂಕದಿಂದ ಹೊಸ ಆಡಳಿತ ಮಂಡಳಿ ರಚನೆಯಾಗುವವರೆಗೆ ಆಡಳಿತಾಧಿಕಾರಿಯಾಗಿ ನೇಮಿಸಿ ಸರ್ಕಾರ ಆದೇಶಿಸಿದೆ.