ಬೆಂಗಳೂರು, ಅ.14 www.bengaluruwire.com : ಕಿಚ್ಚ ಸುದೀಪ್ ಅವರು ‘ಬಿಗ್ ಬಾಸ್ ಕನ್ನಡ’ ಕಾರ್ಯಕ್ರಮದ ನಿರೂಪಕನ ಸ್ಥಾನವನ್ನು ತ್ಯಜಿಸುವುದಾಗಿ ತಿಳಿಸಿದ್ದಾರೆ.
ಬಿಗ್ ಬಾಸ್ ಕನ್ನಡ ಸೀಸನ್ 11, ತಮ್ಮ ಕೊನೆಯ ನಿರೂಪಣೆ ಎಂದು ಅಧಿಕೃತವಾಗಿ ತಮ್ಮ ಎಕ್ಸ್ ಖಾತೆಯಲ್ಲಿ ಘೋಷಿಸಿದ್ದಾರೆ. 10 ವರ್ಷ ಪೂರೈಸಿ 11 ನೇ ವರ್ಷಕ್ಕೆ ಕಾಲಿಟ್ಟಿರುವ ಬಿಗ್ಬಾಸ್ ಕಾರ್ಯಕ್ರಮವನ್ನು ಇಷ್ಟು ವರ್ಷ ನಡೆಸಿ ಕೊಟ್ಟ ಸುದೀಪ್ ಈಗ ಏಕಾ ಏಕಿ ಅಧಿಕೃತವಾಗಿ ಘೋಷಣೆ ಮಾಡಿ ತನ್ನ ಸೋಷಿಯಲ್ ಮೀಡಿಯಾದಲ್ಲಿ ತಮ್ಮ ನಿರ್ಧಾರವನ್ನು ಫ್ರಕಟಿಸಿದ್ದಾರೆ.
“#BBK11 ಗೆ ತೋರಿದ ಉತ್ತಮ ಪ್ರತಿಕ್ರಿಯೆಗಾಗಿ ಎಲ್ಲರಿಗೂ ಧನ್ಯವಾದಗಳು. ನೀವೆಲ್ಲರೂ ನನಗೆ ಮತ್ತು ಕಾರ್ಯಕ್ರಮಕ್ಕೆ ತೋರಿದ ಪ್ರೀತಿಯ ಬಗ್ಗೆ ಟಿವಿಆರ್ (ಸಂಖ್ಯೆ)ಯಲ್ಲಿ ಕಾಣುತ್ತಿದೆ. ಈ 10 ಪ್ಲಸ್ 1 ವರ್ಷ ನಿಮ್ಮೊಂದಿಗೆ ಪಯಣ ಮಾಡಿದ್ದು ಉತ್ತಮವಾಗಿತ್ತು. ನಾನು ಈಗ ಬೇರೆ ಕಡೆಗೆ ನನ್ನ ನಡೆಯನ್ನು ಮುಂದುವರಿಸಲು ಇದು ಸಮಯವಾಗಿದೆ.”
“ಇದು BBK ಗೆ ಹೋಸ್ಟ್ ಆಗಿ ನನ್ನ ಕೊನೆಯ ಸೀಸನ್ ಆಗಿರುತ್ತದೆ ಮತ್ತು ನನ್ನ ನಿರ್ಧಾರವನ್ನು ನನ್ನ ಕಲರ್ಸ್ ಮತ್ತು ಇಷ್ಟು ವರ್ಷಗಳಿಂದ ಬಿಗ್ಬಾಸ್ ಅನ್ನು ಅನುಸರಿಸಿದ ಎಲ್ಲರೂ ಗೌರವಿಸುತ್ತಾರೆ ಎಂದು ನಾನು ನಂಬುತ್ತೇನೆ. ಈ ಸೀಸನ್ ಅನ್ನು ಅತ್ಯುತ್ತಮವಾಗಿ ಮಾಡೋಣ, ಮತ್ತು ನಾನು ಕೂಡ ಅತ್ಯುತ್ತಮವಾಗಿ ನಿಮ್ಮೆಲ್ಲರನ್ನು ರಂಜಿಸುತ್ತೇನೆ. ಇದಕ್ಕಾಗಿ ಎಲ್ಲರಿಗೂ ಧನ್ಯವಾದಗಳು, ಲವ್ ಮತ್ತು ಹಗ್” ಎಂದು ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.
ಕಿಚ್ಚ ಅವರ ಈ ನಿರ್ಧಾರ ಅವರ ಫ್ಯಾನ್ಸ್ ಗಳಿಗೆ ನಿಜಕ್ಕೂ ಶಾಕಿಂಗ್ ಸುದ್ದಿಯಾಗಿದೆ.