ಬೆಂಗಳೂರು, ನ.03 www.bengaluruwire.com : ಮಠ, ಎದ್ದೇಳು ಮಂಜುನಾಥದಂತಹ ಉತ್ತಮ ಚಲನಚಿತ್ರಗಳನ್ನು ಕನ್ನಡಕ್ಕೆ ನೀಡಿದ ಜನಪ್ರಿಯ ನಟ, ನಿರ್ದೇಶಕ ಗುರುಪ್ರಸಾದ್ (Guruprasad) ಆತ್ಮಹತ್ಯೆಗೆ ಶರಣಾಗಿದ್ದಾರೆ. ಅವರಿಗೆ 52 ವರ್ಷ ವಯಸ್ಸಾಗಿತ್ತು.
ಬೆಂಗಳೂರಿನ ಮಾದನಾಯಕಹಳ್ಳಿ ಅಪಾರ್ಟ್‌ಮೆಂಟ್‌ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಅವರ ಮೃತದೇಹ ಅಪಾರ್ಟ್‌ಮೆಂಟ್ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ನ. 2ರಂದು ಗುರುಪ್ರಸಾದ್ ಅವರ ಹುಟ್ಟು ಹಬ್ಬವಿತ್ತು. ಇದಾದ ಬಳಿಕ ಅವರ ಸಾವಿನ ಸುದ್ದಿ ಚಿತ್ರರಂಗದ ಮಂದಿಗೆ ದೊಡ್ಡ ಶಾಕ್ ನೀಡಿದೆ.
ಸಾಲದಿಂದಾಗಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಶಂಕೆ ವ್ಯಕ್ತವಾಗಿದೆ. ಸದಾ ಒಂದಿಲ್ಲೊಂದು ವಿವಾದಗಳಿಂದಲೇ ಸುದ್ದಿಯಾಗುತ್ತಿದ್ದ ನಿರ್ದೇಶಕ ಗುರುಪ್ರಸಾದ್ ಅವರು 3 ದಿನಗಳ ಹಿಂದೆ ನೇಣಿಗೆ ಶರಣಾಗಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ.
ಮೂರು ದಿನಗಳ ಹಿಂದೆ ಗುರುಪ್ರಸಾದ್ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಇಂದು ಬೆಳಗ್ಗೆಯಿಂದ ಅವರಿದ್ದ ಅಪಾರ್ಟ್ ಮೆಂಟ್ ಸುತ್ತಮುತ್ತ ಇರುವ ಸ್ಥಳೀಯ ನಿವಾಸಿಗಳಿಗೆ ವಾಸನೆ ಬಂದಿದೆ. ಈ ಹಿನ್ನೆಲೆಯಲ್ಲಿ ಪೊಲೀಸರಿಗೆ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಸ್ಥಳಕ್ಕೆ ಬಂದು ಬಾಗಿಲು ಒಡೆದು ಒಳಬಂದು ನೋಡಿದಾಗ ವಿಷಯ ಬೆಳಕಿಗೆ ಬಂದಿದೆ.
1972ರಲ್ಲಿ ಕನಕಪುರದಲ್ಲಿ ಜನಿಸಿದ ಗುರುಪ್ರಸಾದ್ ರಾಮಚಂದ್ರ ಶರ್ಮಾ 2006 ರಲ್ಲಿ ತೆರೆಕಂಡ ‘ಮಠ’ ಚಿತ್ರದ ಮೂಲಕ ನಿರ್ದೇಶಕನಾಗಿ ಕನ್ನಡ ಚಿತ್ರರಂಗದಲ್ಲಿ ಸಿನಿ ಪಯಣ ಆರಂಭಿಸಿದ್ದರು. 2009 ರಲ್ಲಿ ‘ಎದ್ದೇಳು ಮಂಜುನಾಥ’ ಚಿತ್ರದ ಮೂಲಕ ಮತ್ತೊಂದು ಸಾಮಾಜಿಕ ಚಿತ್ರ ಯಶಸ್ವಿಯಾಗಿ ನೀಡಿದ್ದರು. ಈ ಚಿತ್ರಕ್ಕೆ ಫಿಲ್ಮಫೇರ್ ಪ್ರಶಸ್ತಿ ದೊರಕಿತ್ತು. ಆನಂತರ ‘ರಂಗನಾಯಕ’, ‘ಡೈರೆಕ್ಟರ್ ಸ್ಪೆಷಲ್’, ‘ಎರಡನೇ ಸಲ’, ಸಿನಿಮಾಗಳನ್ನು ನಿರ್ದೇಶನ ಮಾಡಿದ್ದರು. ಅಲ್ಲದೆ 10ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಗುರುಪ್ರಸಾದ್ ನಟಿಸಿದ್ದರು. ನಿರ್ದೇಶನ, ಸಂಭಾಷಣೆ, ನಟನೆಯಲ್ಲಿಯೂ ಅವರು ಮಿಂಚಿದ್ದರು. ರಿಯಾಲಿಟಿ ಶೋಗಳಲ್ಲಿಯೂ ಭಾಗವಹಿಸಿದ್ದರು. ‘ ಬಿಗ್ ಬಾಸ್’ ಸೀಸನ್ 2ರಲ್ಲಿ ಸ್ಪರ್ಧಿಯಾಗಿದ್ದರು.
ಚೆಕ್ ಬೌನ್ಸ್ ಪ್ರಕರಣ ಒಂದರಲ್ಲಿ ಅವರನ್ನು ಕಳೆದ ವರ್ಷ ಪೊಲೀಸರು ವರ್ಷಕ್ಕೆ ಪಡೆದುಕೊಂಡಿದ್ದರು. ಚೆಕ್ ಬೌನ್ಸ್ ಪ್ರಕರಣದಲ್ಲಿ ಕೋರ್ಟ್ ಕಚೇರಿಗೆ ಅಲೆಯುತ್ತಿದ್ದರು. ಇದರ ನಡುವೆ ಜಯನಗರದಲ್ಲಿಯೂ ಪುಸ್ತಕ ಖರೀದಿ ಮಾಡಿ ಹಣ ಕೊಟ್ಟಿಲ್ಲವೆಂದು ದೂರು ದಾಖಲಾಗಿತ್ತು. ಅವರ ಆತ್ಮಹತ್ಯೆ ಹಿಂದೆ ಪೊಲೀಸರಿಗೆ ಹಲವು ಅನುಮಾನಗಳಿದ್ದು ಎಲ್ಲಾ ಆಯಾಮಗಳಲ್ಲಿಯೂ ತನಿಖೆ ಕೈಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಬೆಂಗಳೂರು ಗ್ರಾಮಾಂತರ ಸೂಪರಿಟೆಂಡೆಂಟ್ ಆಫ್ ಪೊಲೀಸ್ ಸಿ.ಕೆ.ಬಾವ, ನಿರ್ದೇಶಕ ಗುರುಪ್ರಸಾದ್ ಮಾದನಾಯಕನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಅಪಾರ್ಟ್ ಮೆಂಟ್ ನಲ್ಲಿ ಐದಾರು ದಿನಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿರುವುದು ಪತ್ತೆಯಾಗಿದೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದೇವೆ ಎಂದು ಹೇಳಿದರು.