Saturday, June 13, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

    ಡಿಎಲ್ ಎಂಎಸ್ ಸ್ಟಾಟಿಕ್ ಡಿಜಿಟಲ್ ಮೀಟರ್ ಚಿತ್ರ

    ಬೆಂಗಳೂರಿಗರಿಗೆ ಭರ್ಜರಿ ಕೊಡುಗೆ: ಹೊಸ ವಿದ್ಯುತ್ ಸಂಪರ್ಕಕ್ಕೆ ಒಸಿ ಕಡ್ಡಾಯವಲ್ಲ, ಆದರೆ…

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Namma Metro | ನಾಳೆಯಿಂದ ನಾಗಸಂದ್ರ ಮಾದಾವರ ನಡುವೆ ಮೆಟ್ರೊ ಸಂಚಾರ ಆರಂಭ : ಸಾರ್ವಜನಿಕ ಸೇವೆಗೆ ಲಭ್ಯ

2026 ರ ವೇಳೆಗೆ 175 ಕಿಮೀ ನೂತನ ಮೆಟ್ರೊ ಮಾರ್ಗಗಳು ಸಾರ್ವಜನಿಕರ ಸೇವೆಗೆ : ಡಿಸಿಎಂ ಡಿ‌.ಕೆ.ಶಿವಕುಮಾರ್ | "ಮಾದಾವರ ಮೆಟ್ರೋ ನಿಲ್ದಾಣದ ಬಳಿಯೂ ಅಂಡರ್ ಪಾಸ್ ನಿರ್ಮಾಣಕ್ಕಾಗಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಬಳಿ ಮಾತುಕತೆ ನಡೆಸಲಾಗುತ್ತಿದೆ‌"

by Bengaluru Wire Desk
November 6, 2024
in Bengaluru Focus
Reading Time: 2 mins read
0

ಬೆಂಗಳೂರು, ನ.06 www.bengaluruwire.com : ನಾಗಸಂದ್ರದಿಂದ ತುಮಕೂರು ರಸ್ತೆಯ ಮಾದಾವರ ವರೆಗಿನ ನೂತನ ಹಸಿರು ಮಾರ್ಗದ ವಿಸ್ತರಿತ ಭಾಗದಲ್ಲಿ ಗುರುವಾರದಿಂದ ನಮ್ಮ ಮೆಟ್ರೊ ಸೇವೆ ಸಾರ್ವಜನಿಕರಿಗೆ ಲಭ್ಯವಾಗಲಿದೆ ಎಂದು ನಮ್ಮ ಮೆಟ್ರೊ ತಿಳಿಸಿದೆ.

“2025 ರ ವೇಳೆಗೆ ಸುಮಾರು 30 ಕಿಮೀ ಹಾಗೂ 2026 ರ ವೇಳೆಗೆ 175 ಕಿಮೀ ನೂತನ ಮೆಟ್ರೊ ಮಾರ್ಗಗಳನ್ನು ಸಾರ್ವಜನಿಕರ ಸೇವೆಗೆ ಸಮರ್ಪಿಸಲಾಗುತ್ತದೆ” ಎಂದು ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ಅಭಿವೃದ್ಧಿ ಸಚಿವ ಡಿ‌.ಕೆ.ಶಿವಕುಮಾರ್ ಅವರು ಹೇಳಿದರು.

ಮೆಟ್ರೋ ಹಸಿರು ಮಾರ್ಗದಲ್ಲಿ ಬುಧವಾರ, ನಾಗಸಂದ್ರದಿಂದ ತುಮಕೂರು ರಸ್ತೆಯ ಮಾದಾವರ ( ಬೆಂಗಳೂರು ಅಂತರರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರ)ದ ತನಕ ವಿಸ್ತರಣೆ ಮಾಡಿರುವ ನೂತನ ಮಾರ್ಗದಲ್ಲಿ ಪ್ರಾಯೋಗಿಕ ಮೆಟ್ರೊ ರೈಲು ಸಂಚಾರವನ್ನು ಪರಿಶೀಲನೆ ಮಾಡಿದರು.

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮೆಟ್ರೊ ನೂತನ ಮಾರ್ಗದಲ್ಲಿ ಸಂಸದ ತೇಜಸ್ವಿ ಸೂರ್ಯ ಅವರೊಂದಿಗೆ ಪರಿಶೀಲನೆ ನಡೆಸಿದರು.

ಸಂಸದ ತೇಜಸ್ವಿ ಸೂರ್ಯ, ನೆಲಮಂಗಲ ಶಾಸಕ ಶ್ರೀನಿವಾಸಯ್ಯ, ದಾಸರಹಳ್ಳಿ ಶಾಸಕ ಮುನಿರಾಜು ಅವರ ಜೊತೆ ಯಶವಂತರಪುರ ಮೆಟ್ರೊ ರೈಲು ನಿಲ್ದಾಣದಿಂದ ಮಾದಾವರದ ತನಕ ರೈಲಿನಲ್ಲಿ ಪ್ರಯಾಣಿಸಿದರು. ಇದೇ ವೇಳೆ ಬಿಎಂಆರ್ ಸಿಎಲ್ ಅಧಿಕಾರಿಗಳಿಂದ ಮಾಹಿತಿ ಪಡೆದರು. ನಂತರ ಮಾದಾವರ ಮೆಟ್ರೊ ನಿಲ್ದಾಣದಲ್ಲಿ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.

ಶೀಘ್ರ ನಾಗಸಂದ್ರ- ಮಾದಾವರ ನಡುವಿನ ಮಾರ್ಗ ಅಧಿಕೃತ ಉದ್ಘಾಟನೆ :

ಚಿಕ್ಕಬಿದರಕಲ್ಲು ಮೆಟ್ರೊ ನಿಲ್ದಾಣದ ಪ್ಲಾಟ್ ಫಾರ್ಮ್ ಚಿತ್ರ.

“ನಾಗಸಂದ್ರದಿಂದ ಮೂರು ಕಿಮೀ ದೂರವಿರುವ ಮಾದಾವರದ ಬೆಂಗಳೂರು ಅಂತರರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದ ವರೆಗೆ ನೂತನ ವಿಸ್ತರಿತ ಮಾರ್ಗವನ್ನು ಸಾರ್ವಜನಿಕರ ಅನುಕೂಲಕ್ಕಾಗಿ ಪ್ರಾಯೋಗಿಕವಾಗಿ ಉದ್ಘಾಟನೆ ಮಾಡಲಾಗಿದೆ‌. ನಾನು ಈ ಹಿಂದೆ ನಗರಾಭಿವೃದ್ಧಿ ಸಚಿವನಾಗಿದ್ದಾಗ ಈ ಅಂತರರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರ ಯೋಜನೆಗೆ ಒಪ್ಪಿಗೆ ನೀಡಿದ್ದೆ. ಮುಂದಿನ ದಿನಗಳಲ್ಲಿ ಎಲ್ಲ ಸಂಸದರು ಹಾಗೂ ಇತರೇ ಜನಪ್ರತಿನಿಧಿಗಳನ್ನು ಆಹ್ವಾನಿಸಿ ವಿಸ್ತರಿತ ಮೆಟ್ರೋ ಮಾರ್ಗವನ್ನು ಅಧಿಕೃತವಾಗಿ ಉದ್ಘಾಟನೆ ಮಾಡಲಾಗುವುದು” ಎಂದು ವಿವರಿಸಿದರು.

ಮಂಜುನಾಥ ನಗರ ಮೆಟ್ರೊ ನಿಲ್ದಾಣದ ಪಕ್ಷಿನೋಟ.

ಪ್ರಸ್ತುತ ಮೆಟ್ರೋ ಹಸಿರು ಮಾರ್ಗವು 33.46 ಕಿಮೀ ಉದ್ದವಿದೆ. ನೇರಳೆ ಮಾರ್ಗ 40.5 ಕಿಮೀ ಉದ್ದವಿದೆ. ಈ ಮಹತ್ತರವಾದ ಕಾರ್ಯ ಸಾಕಾರಗೊಳ್ಳಲು ಸಹಕಾರ ನೀಡಿದ ಕೇಂದ್ರ ಸರ್ಕಾರಕ್ಕೆ ಹಾಗೂ ಕೈ ಜೋಡಿಸಿದ ಎಲ್ಲರಿಗೂ ಹಾಗೂ ವಿಶೇಷವಾಗಿ ಬೆಂಗಳೂರಿನ ಜನತೆಗೆ ಅಭಿನಂದನೆಗಳನ್ನು ತಿಳಿಸುತ್ತೇನೆ” ಎಂದು ಹೇಳಿದರು. 

ಮೆಟ್ರೊ ಮೂರನೇ ಹಂತಕ್ಕೆ ಕೇಂದ್ರದ ಒಪ್ಪಿಗೆ :

“ಈಗಾಗಲೇ ₹ 1,130 ಕೋಟಿ ವೆಚ್ಚದಲ್ಲಿ 21 ಹೊಸ ರೈಲುಗಳಿಗೆ ಹರಾಜು ಪ್ರಕ್ರಿಯೆ ನಡೆಸಿ ಹಣ ಕಟ್ಟಲಾಗಿದೆ. ಹೊಸ ರೈಲುಗಳು ಆದಷ್ಟು ಬೇಗ ಸೇವೆಗೆ ಲಭ್ಯವಾಗಲಿವೆ. ಮೆಟ್ರೊ ಮಾರ್ಗದ ಒಂದು ಹಾಗೂ ಎರಡನೇ ಹಂತಗಳನ್ನು ನಾವು ಪೂರ್ಣಗೊಳಿಸಿದ್ದು, ಮೂರನೇ ಹಂತಕ್ಕೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ” ಎಂದರು.

ಪಾದಚಾರಿ ಮೇಲ್ಸೇತುವೆ, ಅಂಡರ್ ಪಾಸ್ ನಿರ್ಮಾಣ :

ನೈಸ್ ರಸ್ತೆಯನ್ನು ಹಾದು ಹೋಗಿರುವ ನಾಗಸಂದ್ರ – ಮಾದಾವರ ಮೆಟ್ರೊ ಹಸಿರು ಮಾರ್ಗದ ಚಿತ್ರ.

 “ಮಂಜುನಾಥ ನಗರ ನಿಲ್ದಾಣದಲ್ಲಿ ರಸ್ತೆ ದಾಟಲು ಪಾದಚಾರಿ ಮೇಲ್ಸೆತುವೆ ನಿರ್ಮಿಸಿ ಅನುಕೂಲ ಮಾಡಿಕೊಡಲಾಗುತ್ತಿದೆ‌. ಯಶವಂತಪುರ ನಿಲ್ದಾಣದಲ್ಲಿ ಸಾರ್ವಜನಿಕರು ಯಾವುದೇ ಅಡಚಣೆಯಿಲ್ಲದೆ ಸಂಚರಿಸಲು ಭಾರತೀಯ ರೈಲ್ವೇ ಹಾಗೂ ನಮ್ಮ ಮೆಟ್ರೋ ಸಂಸ್ಥೆ ಪಾದಚಾರಿ ಮೇಲ್ಸೆತುವೆ ಸೇರಿದಂತೆ ಇತರೇ ಅನುಕೂಲಗಳನ್ನು ಮಾಡಲು ಜಂಟಿಯಾಗಿ ಒಪ್ಪಂದ ಮಾಡಿಕೊಂಡಿವೆ” ಎಂದು ತಿಳಿಸಿದರು.

“ಚಿಕ್ಕಬಿದರಕಲ್ಲು ನಿಲ್ದಾಣದ ಬಳಿ ರಾಷ್ಟ್ರೀಯ ಹೆದ್ದಾರಿ ಸಂಸ್ಥೆಯೊಟ್ಟಿಗೆ ಸೇರಿ ಅಂಡರ್ ಪಾಸ್ ನಿರ್ಮಾಣ ಮಾಡುವ ಯೋಜನೆ ರೂಪಿಸಲಾಗಿದೆ. ಮಾದಾವರ ಮೆಟ್ರೋ ನಿಲ್ದಾಣದ ಬಳಿಯೂ ಅಂಡರ್ ಪಾಸ್ ನಿರ್ಮಾಣಕ್ಕಾಗಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಬಳಿ ಮಾತುಕತೆ ನಡೆಸಲಾಗುತ್ತಿದೆ‌” ಎಂದರು.

“ತುಮಕೂರು ಮಾರ್ಗವಾಗಿ ಬೆಂಗಳೂರಿಗೆ ಬರುವವರು ಅಂತರರಾಷ್ಟ್ರೀಯ ವಸ್ತುಪ್ರದರ್ಶನ ಮೈದಾನದಲ್ಲಿ ವಾಹನ ನಿಲುಗಡೆ ಮಾಡಿ ಸಂಚಾರ ದಟ್ಟಣೆ ರಹಿತವಾಗಿ ನಗರ ಪ್ರದಕ್ಷಿಣೆ ಮಾಡಬಹುದು ಹಾಗೂ ಅವರ ಕೆಲಸಗಳನ್ನು ತ್ವರಿತವಾಗಿ ಮುಗಿಸಿಕೊಳ್ಳಬಹುದು” ಎಂದು ಹೇಳಿದರು.

ದೇಶದಲ್ಲಿಯೇ ಹೆಚ್ಚು ಪ್ರಯಾಣಿಕರ ಸಂಚಾರ :

“ದೆಹಲಿ, ಮುಂಬೈ ಸೇರಿದಂತೆ ದೇಶದ ಇತರೆಡೆಗಳಲ್ಲಿ ಇರುವ ಮೆಟ್ರೋಗಳಲ್ಲಿ ಪ್ರಯಾಣ ಮಾಡುವ ಪ್ರಯಾಣಿಕರಿಗಿಂತ ಬೆಂಗಳೂರಿನಲ್ಲಿರುವ 76.95 ಕಿಮೀ ಉದ್ದದ ಮೆಟ್ರೋ ಮಾರ್ಗದಲ್ಲಿ ಹೆಚ್ಚು ಪ್ರಯಾಣಿಕರು ಪ್ರತಿನಿತ್ಯ ಸಂಚರಿಸುತ್ತಿದ್ದಾರೆ. ನಮ್ಮ ಮೆಟ್ರೊನಿಂದ ಬೆಂಗಳೂರಿನ ನಾಗರಿಕರಿಗೆ ಉತ್ತಮ ಸೇವೆ ದೊರೆಯುತ್ತಿದೆ ಎಂಬುದಕ್ಕೆ ಇದು ಸಾಕ್ಷಿ” ಎಂದು ಹೇಳಿದರು.

ನೆಲಮಂಗಲ ಹಾಗೂ ತುಮಕೂರು ತನಕ ಮೆಟ್ರೋ ಮಾರ್ಗ ವಿಸ್ತರಣೆ ಬಗ್ಗೆ ಕೇಳಿದಾಗ “ಬೇರೆ ಸಮಯದಲ್ಲಿ ಇದರ ಬಗ್ಗೆ ಮಾತನಾಡುತ್ತೇನೆ” ಎಂದು ಹೇಳಿದರು.

WhatsApp Join our WhatsApp Channel
Previous Post

E-Shram | ಇ-ಶ್ರಮ ನೋಂದಾಯಿತ ಕಾರ್ಮಿಕರಿಗೆ ಬಿಪಿಎಲ್ ಕಾರ್ಡ್ ವಿತರಣೆ : ಇಲ್ಲಿದೆ ಸಂಪೂರ್ಣ ಮಾಹಿತಿ

Next Post

ನ.8ರಿಂದ ಮಂಗಳೂರಿನಲ್ಲಿ ಭಾರತೀಯ ಸಾರ್ವಜನಿಕ ಸಂಪರ್ಕ ಮಂಡಳಿ 18ನೇ ಜಾಗತಿಕ ಸಂವಹನ ಸಮಾವೇಶ

Next Post

ನ.8ರಿಂದ ಮಂಗಳೂರಿನಲ್ಲಿ ಭಾರತೀಯ ಸಾರ್ವಜನಿಕ ಸಂಪರ್ಕ ಮಂಡಳಿ 18ನೇ ಜಾಗತಿಕ ಸಂವಹನ ಸಮಾವೇಶ

Waqf Land Row | ರೈತರಿಗೆ ವಕ್ಪ್ ಬೋರ್ಡ್ ನೊಟೀಸ್ ನೀಡಿರುವ ಕುರಿತು ಜೆಪಿಸಿಗೆ ಮಾಹಿತಿ ನೀಡಿದ್ದೇವೆ: ಬಸವರಾಜ ಬೊಮ್ಮಾಯಿ

Please login to join discussion

Like Us on Facebook

Follow Us on Twitter

Recent News

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

June 13, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

June 13, 2026

ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

June 12, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group