ಬೆಂಗಳೂರು, ನ.06 www.bengaluruwire.com : ಇ-ಶ್ರಮ ಪೋರ್ಟಲ್ನಲ್ಲಿ ನೋಂದಾಯಿಸಿಕೊಂಡಿರುವ ಎಲ್ಲಾ ಕಾರ್ಮಿಕರಿಗೆ ಬಿಪಿಎಲ್ (ಆದ್ಯತಾ ಪಡಿತರ ಚೀಟಿ) ಚೀಟಿ ವಿತರಣೆ ಕಾರ್ಯಕ್ಕೆ ಆಹಾರ ಇಲಾಖೆ ಪ್ರಾರಂಭಿಸಿದೆ.
ಇ-ಶ್ರಮದಲ್ಲಿ ನೋಂದಾಯಿತ ಕಾರ್ಮಿಕರಿಗೆ ಬಿಪಿಎಲ್ ಚೀಟಿ ವಿತರಣೆ ಮಾಡಬೇಕು ಎಂದು ಸುಪ್ರೀಂ ಕೋರ್ಟ್ ಸೂಚನೆ ನೀಡಿತ್ತು. ಈ ಪ್ರಕಾರ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಈ ಕಾರ್ಯವನ್ನು ಆರಂಭಿಸ ಲಾಗಿದೆ ಎಂದು ಇಲಾಖೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
ಅರ್ಹ ಮತ್ತು ಇ-ಶ್ರಮದಲ್ಲಿ ನೋಂದಾಯಿಸಿಕೊಂಡಿರುವ ಕಾರ್ಮಿಕರು ತಮ್ಮ ಹತ್ತಿರದ ಆಹಾರ ಇಲಾಖೆಯ ಕಚೇರಿಯನ್ನು ಸಂಪರ್ಕಿಸಬೇಕು ಎಂದು ಇಲಾಖೆ ಹೇಳಿದೆ. ಹೆಚ್ಚಿನ ಮಾಹಿತಿಗೆ ಶುಲ್ಕರಹಿತ ದೂರವಾಣಿ ಸಂಖ್ಯೆ: 1800- 425-9339 ಅಥವಾ ಇಲಾಖೆಯ ಸಹಾಯವಾಣಿ 1967ಕ್ಕೆ, ಕೆಲಸದ ದಿನಗಳಲ್ಲಿ ಬೆಳಗ್ಗೆ 10ರಿಂದ ಸಂಜೆ 5ರ ಒಳಗೆ ಕರೆ ಸಂಪರ್ಕ ಮಾಡಬಹುದು. ಇದನ್ನೂ ಓದಿ : Labour Card | ಒಂದು ಕಾರ್ಮಿಕ ಕಾರ್ಡ್ ಇದ್ದರೆ 19 ಸ್ಕೀಮ್ ಗಳ ಲಾಭ….!! ಕಟ್ಟಡ ಕೂಲಿ ಕಾರ್ಮಿಕರಿಗೆ ಇಲ್ಲಿದೆ ಭರ್ಜರಿ ಅನುಕೂಲ : ಆ ಸೌಲಭ್ಯಗಳನ್ನು ಪಡೆಯೋದು ಹೇಗೆ ಗೊತ್ತಾ? ಇಲ್ಲಿದೆ ಮಾಹಿತಿ