Friday, June 19, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    Vidhana Soudha

    IAS Transfer | ರಾಜ್ಯದಲ್ಲಿ 13 ಐಎಎಸ್ ಅಧಿಕಾರಿಗಳ ವರ್ಗಾವಣೆ

    Viral Video | 25 ಸಾವಿರದ ಆಫೀಸ್ ಕೆಲಸಕ್ಕೆ ಗುಡ್‌ಬೈ ಹೇಳಿ ಕ್ಯಾಬ್ ಡ್ರೈವರ್ ಆದ ಯುವಕ; ಈಗ ಈತನ ತಿಂಗಳ ಗಳಿಕೆ 1 ಲಕ್ಷ ರೂ.!

    ಎನ್‌ಎಸ್‌ಇಯಿಂದ ₹30,000 ಕೋಟಿ ಮೊತ್ತದ ಐಪಿಒ ಸಲ್ಲಿಕೆ: ಇದು ಭಾರತದ ಅತಿದೊಡ್ಡ ಸಾರ್ವಜನಿಕ ಷೇರು ವಿತರಣೆ

    ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    Kartavya App | ರಾಜ್ಯ ಸರ್ಕಾರದಿಂದ ಎಐ ಕ್ರಾಂತಿ: ನೌಕರರ ಪಕ್ಕಾ ಹಾಜರಾತಿಗೆ ಬಂತು ‘ಕರ್ತವ್ಯ’ ಆ್ಯಪ್: ಕೆಲಸಕ್ಕೆ ಚಕ್ಕರ್ ಹಾಕಲು ಬ್ರೇಕ್

    ಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ: ಇಂದು ಪಡಿಪೂಜೆ, ಪುಷ್ಪಾಭಿಷೇಕ

    Breaking News | ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದ: ಜೂ. 19ರಂದು ಜಿನೇವಾದಲ್ಲಿ ಅಧಿಕೃತ ಸಹಿ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

  • Bengaluru Focus

    BWSSB News | ವರ್ತೂರು ಎಸ್‌ಟಿಪಿ ದುರ್ಘಟನೆ: 40 ಅಡಿ ಆಳದ ಟ್ಯಾಂಕ್‌ಗೆ ಬಿದ್ದು ಇಬ್ಬರು ಕಾರ್ಮಿಕರು ಸಾವು, ಕಾರ್ಯಾಚರಣೆಗೆ ಎನ್‌ಡಿಆರ್‌ಎಫ್ ಸಾಥ್

    Vidhana Soudha

    IAS Transfer | ರಾಜ್ಯದಲ್ಲಿ 13 ಐಎಎಸ್ ಅಧಿಕಾರಿಗಳ ವರ್ಗಾವಣೆ

    GBA News | ಗ್ರೇಟರ್ ಬೆಂಗಳೂರು: ಕಸದ ಸಮಸ್ಯೆ ನಿವಾರಣೆಗೆ ಕಟ್ಟುನಿಟ್ಟಿನ ಕ್ರಮ, ವಾರ್ಡ್ ರಸ್ತೆಗಳ ಅಭಿವೃದ್ಧಿಗೆ ₹2000 ಕೋಟಿ ಅನುದಾನ

    ಬೆಂಗಳೂರಿನಲ್ಲಿ ಬೇಕರಿ ಮತ್ತು ಬೀದಿ ಬದಿ ವ್ಯಾಪಾರಿಗಳ ಪ್ರತಿಭಟನೆ: ಅಧಿಕಾರಿಗಳ ಕಿರುಕುಳಕ್ಕೆ ತೀವ್ರ ಆಕ್ರೋಶ

    ಕೆ.ಆರ್. ಮಾರುಕಟ್ಟೆಯಲ್ಲಿ ವಿಶೇಷ ವಿನ್ಯಾಸದ ಮಾರಾಟ ಸ್ಥಳ ನಿಗದಿ; ಮಧ್ಯವರ್ತಿಗಳಿಗೆ ಬಾಡಿಗೆ ನೀಡದಿರಿ, ಆಯುಕ್ತ ಜಗದೀಶ್ ಖಡಕ್ ಎಚ್ಚರಿಕೆ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    ಖ್ಯಾತ ಗಾಯಕಿ ಸೂರ್ಯಗಾಯತ್ರಿ ಸಂಗೀತ ಕಾರ್ಯಾಗಾರ ಯಶಸ್ವಿ: 45 ಕಲಾಭಿಮಾನಿಗಳಿಗೆ ಒಲಿದ ಅಪೂರ್ವ ಗಾಯನಾನುಭವ

    #OpenStreetsBengaluru | ಬೆಂಗಳೂರು ವಾಹನಗಳಿಗಷ್ಟೇ ಅಲ್ಲ, ಜನರಿಗಾಗಿಯೂ ಇದೆ: ‘ಓಪನ್ ಸ್ಟ್ರೀಟ್ಸ್’ ಅಭಿಯಾನಕ್ಕೆ ಸಂಸದ ತೇಜಸ್ವಿ ಸೂರ್ಯ ಕರೆ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಬೆಂಗಳೂರಿನ ಸಿಲಿಕಾನ್ ವ್ಯಾಲಿ ಪ್ರವರ್ತಕ ಮಾಜಿ ಕೇಂದ್ರ ಸಚಿವ ಎಸ್.ಎಂ.ಕೃಷ್ಣ ನಿಧನ : ನಾಳೆ ರಾಜ್ಯಾದ್ಯಂತ ಶಾಲಾ ಕಾಲೇಜಿಗೆ ರಜೆ

ಮೃತರ ಪಾರ್ಥಿವ ಶರೀರವನ್ನು ಸಾರ್ವಜನಿಕರ ಅಂತಿಮ ದರ್ಶನಕ್ಕೆ ಸದಾಸಶಿವನಗರದ ನಿವಾಸದಲ್ಲಿ ಇಂದು ಇಡೀ ದಿನ ಇಡಲಾಗುತ್ತೆ. ನಾಳೆ ಬೆಳಗ್ಗೆ ಅವರ ಹುಟ್ಟೂರು ಮಂಡ್ಯ ಜಿಲ್ಲೆ ಮದ್ದೂರಿನ ಸೋಮನಹಳ್ಳಿಯಲ್ಲಿ ಅಂತಿಮ ಸಂಸ್ಕಾರ ನೆರವೇರಿಸಲಾಗುತ್ತಿದೆ.

by Bengaluru Wire Desk
December 10, 2024
in Bengaluru Focus, News Wire
Reading Time: 2 mins read
0

ಬೆಂಗಳೂರು, ಡಿ.10 www.bengaluruwire.com : ಕರ್ನಾಟಕ ಕಂಡ ಅಪ್ರತಿಮ ರಾಜಕಾರಣಗಳಲ್ಲಿ ಒಬ್ಬರಾದ ಮಾಜಿ ವಿದೇಶಾಂಗ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ (SM Krishna) ದೀರ್ಘಕಾಲದ ಅನಾರೋಗ್ಯದ ನಂತರ ಬೆಂಗಳೂರಿನ ಸದಾಶಿವನಗರದ ತಮ್ಮ ನಿವಾಸದಲ್ಲಿ ಇಂದು ಬೆಳಗಿನ ಜಾವ 2.30ಕ್ಕೆ ನಿಧನರಾದರು. 

ಕೃಷ್ಣ ಅವರ ನಿಧನ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (Deputy CM DK Shivakumar) ಸೇರಿದಂತೆ ಅವರ ಅನುಯಾಯಿಗಳು ಹಾಗೂ ಅಭಿಮಾನಿಗಳಿಗೆ ತುಂಬಲಾರದ ನಷ್ಟ ಉಂಟುಮಾಡಿದೆ. ಮಾಜಿ ರಾಜ್ಯಪಾಲರಾದ ಎಸ್.ಎಂ.ಕೃಷ್ಣ ಅವರಿಗೆ 92 ವರ್ಷ ವಯಸ್ಸಾಗಿತ್ತು. ಕೃಷ್ಣ ಅವರು ಪತ್ನಿ ಪ್ರೇಮಾ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ ಮರಳಿದ್ದರು. ಇಂದು ಬೆಳಗಿನ ಜಾವ ಕೊನೆಯುಸಿರು ಎಳೆದಿದ್ದಾರೆ. 

ಮೃತರ ಪಾರ್ಥಿವ ಶರೀರವನ್ನು ಸಾರ್ವಜನಿಕರ ಅಂತಿಮ ದರ್ಶನಕ್ಕೆ ಸದಾಸಶಿವನಗರದ ನಿವಾಸದಲ್ಲಿ ಇಂದು ಇಡೀ ದಿನ ಇಡಲಾಗುವುದು. ಅವರ ಹುಟ್ಟೂರಾದ ಮಂಡ್ಯ ಜಿಲ್ಲೆ (Mandya District) ಮದ್ದೂರಿನ ಸೋಮನಹಳ್ಳಿಯಲ್ಲಿ ನಾಳೆ ಬೆಳಗ್ಗೆ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತಿಮ ಸಂಸ್ಕಾರ ನೆರವೇರಿಸಲಾಗುತ್ತದೆ. ನಾಳೆ ರಾಜ್ಯಾದ್ಯಂತ ಸರ್ಕಾರಿ ಕಚೇರಿಗಳಿಗೆ, ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಡಿ.10 ರಿಂದ ಮೂರು ದಿನಗಳ ಕಾಲ ರಾಜ್ಯ ವ್ಯಾಪಿ ಶೋಕ ಆಚರಿಸಲಾಗುತ್ತದೆ. ಈ ಸಂದರ್ಭದಲ್ಲಿ ಸಾರ್ವಜನಿಕ ಮನೋರಂಜನಾ ಕಾರ್ಯಕ್ರಮಗಳು ಇರುವುದಿಲ್ಲ.‌ ಎಲ್ಲಾ ಸರ್ಕಾರಿ ಕಟ್ಟಡಗಳ ಮೇಲೆ ರಾಷ್ಟ್ರ ಧ್ವಜವನ್ನು ಅರ್ಧ ಮಟ್ಟದಲ್ಲಿ ಹಾರಿಸಲಾಗುವುದು ಎಂದು ರಾಜ್ಯ ಸರ್ಕಾರ ಅಧಿಸೂಚನೆಯಲ್ಲಿ ತಿಳಿಸಿದೆ.

ಮೇ 1, 1932 ರಂದು ಮಂಡ್ಯ ಜಿಲ್ಲೆಯಲ್ಲಿ ಜನಿಸಿದ ಕೃಷ್ಣ ಅವರು ಭಾರತದ ರಾಜಕೀಯದಲ್ಲಿ ಪ್ರಮುಖ ವ್ಯಕ್ತಿಯಾಗಿದ್ದರು, 1999 ರಿಂದ 2004 ರವರೆಗೆ ಕರ್ನಾಟಕದ ಮುಖ್ಯಮಂತ್ರಿಯಾಗಿ ಮತ್ತು ನಂತರ 2009 ರಿಂದ 2012 ರವರೆಗೆ ವಿದೇಶಾಂಗ ಸಚಿವರಾಗಿ ಸೇವೆ ಸಲ್ಲಿಸಿದರು.

ಎಸ್ ಎಂ ಕೃಷ್ಣ ಅವರ ರಾಜಕೀಯ ಜೀವನ ಬಿಂಬಿಸುವ ಕೆಲವು ಅಪರೂಪದ ಛಾಯಾಚಿತ್ರಗಳು :

 ಕೃಷ್ಣ ಅವರ ರಾಜಕೀಯ ಪ್ರಯಾಣವು 1960 ರ ದಶಕದಲ್ಲಿ ಪ್ರಜಾ ಸೋಷಿಯಲಿಸ್ಟ್ ಪಕ್ಷ (Praja Socialist Party)ದೊಂದಿಗೆ ಪ್ರಾರಂಭವಾಯಿತು. ಆನಂತರ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ (Congress) ಸೇರಿದರು. ಅಲ್ಲಿ ಅವರು 2017 ರಲ್ಲಿ ಬಿಜೆಪಿಗೆ ಸೇರುವ ಮೊದಲು ವಿವಿಧ ಪ್ರಮುಖ ಸ್ಥಾನಗಳನ್ನು ಹೊಂದಿದ್ದರು. ಅವರ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ತಮ್ಮ ಮಹತ್ವದ ನಿರ್ಧಾರಗಳಿಂದ ಐಟಿ ಕ್ಷೇತ್ರದ ಉನ್ನತಿಗೆ ಹಾಗೂ ನಗರದ ಮೂಲಸೌಕರ್ಯ ಕಲ್ಫಿಸಲು ಬಹುವಾಗಿ ಶ್ರಮಿಸಿ ಬೆಂಗಳೂರನ್ನು ಭಾರತದ ಸಿಲಿಕಾನ್ ವ್ಯಾಲಿ ಎಂದು ಅಂತರರಾಷ್ಟ್ರೀಯ ಮಟ್ಟದಲ್ಲಿ ಕೀರ್ತಿ ತರಲು ಕಾರಣಕರ್ತರಾದರು. 

ರಾಜಕೀಯ ವಲಯದ ಸಾವಿರಾರು ಗಣ್ಯರು, ಕೇಂದ್ರ ಹಾಗೂ ರಾಜ್ಯ ಸಚಿವರು, ಅಗಲಿದ ನಾಯಕರಿಗೆ ಸಂತಾಪ ಸೂಚಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯಕ್ಕೆ ಕೃಷ್ಣ ಅವರ ಅಪ್ರತಿಮ ಸೇವೆಯನ್ನು ಸ್ಮರಿಸಿದರೆ, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ಎಸ್.ಎಂ.ಕೃಷ್ಣ ಅವರ ದೂರದೃಷ್ಟಿಯ ನಾಯಕತ್ವವನ್ನು ಶ್ಲಾಘಿಸಿದ್ದಾರೆ. 

ನನ್ನ ರಾಜಕೀಯ ಬದುಕಿನ ಮಾರ್ಗದರ್ಶಕ ಎಸ್ ಎಂ ಕೃಷ್ಣ ಅವರ ಅಗಲಿಕೆ ಅಪಾರ ನೋವು ತಂದಿದೆ. ಕರ್ನಾಟಕ ರಾಜಕೀಯ ರಂಗದ ಧೃವ ನಕ್ಷತ್ರ ಕಳಚಿ ಬಿದ್ದಿದೆ ಎಂದು ಡಿ ಕೆ ಶಿವಕುಮಾರ್ ಅವರು ಹೇಳಿದ್ದಾರೆ.

“ಎಸ್ ಎಂ ಕೃಷ್ಣ ಅವರು ಸಜ್ಜನ, ಸುಶಿಕ್ಷಿತ ರಾಜಕಾರಣಿ, ಅಜಾತಶತ್ರು. ದೂರದೃಷ್ಟಿಯ ಕನಸುಗಾರ. ರಾಜಕೀಯದ ಒಂದೊಂದೇ ಮೆಟ್ಟಿಲುಗಳನ್ನು ಸಾವಧಾನವಾಗಿ ಏರಿದವರು. ಕೆಂಪೇಗೌಡರು ನಿರ್ಮಿಸಿದ ಬೆಂಗಳೂರನ್ನು ಇಡೀ ಜಗತ್ತೇ ತಿರುಗಿನೋಡುವಂತೆ ಮಾರ್ಪಡಿಸಿದವರು. ಬೆಂಗಳೂರನ್ನು ಸಿಲಿಕಾನ್ ಸಿಟಿ, ಐಟಿ- ಬಿಟಿ ನಗರಿಯನ್ನಾಗಿಸಿ ದೇಶದ ಆರ್ಥಿಕತೆಗೆ ಅತಿದೊಡ್ದ ಹಾಗೂ ದೂರದೃಷ್ಟಿಯ ಕೊಡುಗೆ ನೀಡಿದವರು ಎಂದು ಡಿಸಿಎಂ ಅವರು ಸ್ಮರಿಸಿದ್ದಾರೆ.

ಅವರ ಪರಂಪರೆಯು ಭವಿಷ್ಯದ ಪೀಳಿಗೆಗೆ, ವಿಶೇಷವಾಗಿ ಕರ್ನಾಟಕದ ಅಭಿವೃದ್ಧಿ ನಿರೂಪಣೆಯಲ್ಲಿ ಸ್ಫೂರ್ತಿ ನೀಡುತ್ತದೆ. (ಚಿತ್ರಕೃಪೆ : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ)

Previous Post

“ರಾಜ್ಯದ ಜನಸಂಖ್ಯೆಯ ಶೇ.65-75 ಮಂದಿ ಬಳಿ ಬಿಪಿಎಲ್ ಕಾರ್ಡಿದೆ : ಇದನ್ನು ಪರಿಷ್ಕರಿಸಿ ಅರ್ಹರಿಗೆ ನೀಡಲು ಕ್ರಮ”

Next Post

ಭಾರತೀಯ ಸೇನೆಯ ಟೊರ್ನಾಡೋಸ್ ಮೋಟಾರ್ ಸೈಕಲ್ ಪ್ರದರ್ಶನ ತಂಡದಿಂದ 3 ಹೊಸ ವಿಶ್ವದಾಖಲೆ

Next Post

ಭಾರತೀಯ ಸೇನೆಯ ಟೊರ್ನಾಡೋಸ್ ಮೋಟಾರ್ ಸೈಕಲ್ ಪ್ರದರ್ಶನ ತಂಡದಿಂದ 3 ಹೊಸ ವಿಶ್ವದಾಖಲೆ

BDA News | ಬಿಡಿಎ ವಸತಿ ಸಮುಚ್ಛಯಗಳ ಹಂಚಿಕೆಗಾಗಿ ಡಿ.14ರಂದು ಫ್ಲಾಟ್ ಮೇಳ

Please login to join discussion

Like Us on Facebook

Follow Us on Twitter

Recent News

BWSSB News | ವರ್ತೂರು ಎಸ್‌ಟಿಪಿ ದುರ್ಘಟನೆ: 40 ಅಡಿ ಆಳದ ಟ್ಯಾಂಕ್‌ಗೆ ಬಿದ್ದು ಇಬ್ಬರು ಕಾರ್ಮಿಕರು ಸಾವು, ಕಾರ್ಯಾಚರಣೆಗೆ ಎನ್‌ಡಿಆರ್‌ಎಫ್ ಸಾಥ್

June 19, 2026
Vidhana Soudha

IAS Transfer | ರಾಜ್ಯದಲ್ಲಿ 13 ಐಎಎಸ್ ಅಧಿಕಾರಿಗಳ ವರ್ಗಾವಣೆ

June 19, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BWSSB News | ವರ್ತೂರು ಎಸ್‌ಟಿಪಿ ದುರ್ಘಟನೆ: 40 ಅಡಿ ಆಳದ ಟ್ಯಾಂಕ್‌ಗೆ ಬಿದ್ದು ಇಬ್ಬರು ಕಾರ್ಮಿಕರು ಸಾವು, ಕಾರ್ಯಾಚರಣೆಗೆ ಎನ್‌ಡಿಆರ್‌ಎಫ್ ಸಾಥ್

June 19, 2026
Vidhana Soudha

IAS Transfer | ರಾಜ್ಯದಲ್ಲಿ 13 ಐಎಎಸ್ ಅಧಿಕಾರಿಗಳ ವರ್ಗಾವಣೆ

June 19, 2026

GBA News | ಗ್ರೇಟರ್ ಬೆಂಗಳೂರು: ಕಸದ ಸಮಸ್ಯೆ ನಿವಾರಣೆಗೆ ಕಟ್ಟುನಿಟ್ಟಿನ ಕ್ರಮ, ವಾರ್ಡ್ ರಸ್ತೆಗಳ ಅಭಿವೃದ್ಧಿಗೆ ₹2000 ಕೋಟಿ ಅನುದಾನ

June 18, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group