Saturday, August 1, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

  • Bengaluru Focus

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

ರಾಜ್ಯದಲ್ಲಿ ತಾಯಿ – ಮಗುವಿನ ಆರೋಗ್ಯದ ಹಿತದೃಷ್ಟಿಯಿಂದ ಸಿಸೇರಿಯನ್ ಹೆರಿಗೆಗಳಿಗೆ ಕಡಿವಾಣ ಹಾಕಲು ನೂತನ ಕಾರ್ಯಕ್ರಮ ಜಾರಿ

ಪ್ರಸ್ತುತ ರಾಜ್ಯದಲ್ಲಿ ಸಿಸೇರಿಯನ್‌ ಹೆರಿಗೆ ಪ್ರಮಾಣ ಶೇ.46 ಇದೆ. ವಿಶೇಷವಾಗಿ ಖಾಸಗಿ ಆಸ್ಪತ್ರೆಗಳಲ್ಲಿ ಶೇ.61 ರಷ್ಟು ಸಿಸೇರಿಯನ್ ಗಳನ್ನು ಮಾಡಲಾಗುತ್ತಿದೆ - ಆರೋಗ್ಯ ಸಚಿವ ದಿನೇಶ್ ಗುಂಡೂರಾವ್.

by Bengaluru Wire Desk
December 16, 2024
in News Wire, Public interest
Reading Time: 1 min read
0
Cesarean surgery

ಗರ್ಭಿಣಿ ಸ್ತ್ರೀಯೊಬ್ಬರಿಗೆ ಸಿಸೇರಿಯನ್ ಶಸ್ತ್ರಚಿಕಿತ್ಸೆ ನಡೆಸುತ್ತಿರುವ ಸಾಂದರ್ಭಿಕ ಚಿತ್ರ.

ಬೆಳಗಾವಿ, ಡಿ.16 www.bengaluruwire.com : ರಾಜ್ಯದಲ್ಲಿ ಸಿಸೇರಿಯನ್ (Caesarean) ಹೆರಿಗೆಗಳನ್ನ ನಿಯಂತ್ರಿಸುವ ನಿಟ್ಟಿನಲ್ಲಿ ಮುಂದಿನ ತಿಂಗಳು ನೂತನ ಕಾರ್ಯಕ್ರಮ ಜಾರಿಗೊಳಿಸುತ್ತಿರುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬೆಳಗಾವಿಯ ಸುವರ್ಣಸೌಧದಲ್ಲಿ ಸೋಮವಾರ ವಿಧಾನ ಪರಿಷತ್ ಕಲಾಪದಲ್ಲಿ ಪರಿಷತ್ ಸದಸ್ಯ  ಜಗದೇವ ಗುತ್ತೇದಾರ ಅವರ ಪ್ರಶ್ನೆಗೆ ಉತ್ತರಿಸುವ ವೇಳೆ ಸಚಿವರು ಈ ವಿಷಯ ತಿಳಿಸಿದರು.

ರಾಜ್ಯದಲ್ಲಿ ಪ್ರತಿ ವರ್ಷ ಸಿಸೇರಿಯನ್‌ ಹೆರಿಗೆ ಪ್ರಮಾಣ ಹೆಚ್ಚಾಗುತ್ತಿದೆ. 2021-2022 ರಲ್ಲಿ ಶೇ.35ರಷ್ಟು ಇದ್ದ ಸಿಸೇರಿಯನ್‌ ಪ್ರಮಾಣ, 2022-23 ಕ್ಕೆ ಶೇ.38 ಕ್ಕೆ ಏರಿಕೆಯಾಗಿತ್ತು. ಪ್ರಸ್ತುತ ರಾಜ್ಯದಲ್ಲಿ ಸಿಸೇರಿಯನ್‌ ಹೆರಿಗೆ ಪ್ರಮಾಣ ಶೇ.46 ಇದೆ. ವಿಶೇಷವಾಗಿ ಖಾಸಗಿ ಆಸ್ಪತ್ರೆ (Private Hospitals)ಗಳಲ್ಲಿ  ಶೇ.61 ರಷ್ಟು ಸಿಸೇರಿಯನ್ ಗಳನ್ನು ಮಾಡಲಾಗುತ್ತಿದೆ. ಸಿಸೇರಿಯನ್ ಗಳಿಂದ ಹೆಚ್ಚು ಆದಾಯ ಬರುತ್ತದೆ ಮತ್ತು ಸುಲಭವಾಗಿ ಹೆರಿಗೆ ಮಾಡಿಸಬಹುದು ಎಂಬ ಕಾರಣಕ್ಕೆ ಖಾಸಗಿ ಆಸ್ಪತ್ರೆಗಳು ಸಿಸೇರಿಯನ್ ಹೆರಿಗೆಗಳನ್ನೇ ಹೆಚ್ಚು ಮಾಡುತ್ತಿದ್ದಾರೆ. ತಾಯಿ ಮತ್ತು ಮಗುವಿನ‌ ಆರೋಗ್ಯ ದೃಷ್ಟಿಯಿಂದ ಇದಕ್ಕೆ ಕಡಿವಾಣ ಹಾಕುವುದು ಅತ್ಯಗತ್ಯವಾಗಿದೆ. ಈ ನಿಟ್ಟಿನಲ್ಲಿ ಮಹಿಳೆಯರನ್ನ ಸಹಜ ಹೆರಿಗೆ ಮಾಡಿಸಿಕೊಳ್ಳಲು ಮಾನಸಿಕವಾಗಿ ಸಜ್ಜುಗೊಳಿಸಿಬೇಕಿದೆ. ಇದಕ್ಕಾಗಿ ನೂತನ ಕಾರ್ಯಕ್ರಮ ಜಾರಿಗೊಳಿಸುತ್ತಿರುವುದಾಗಿ ಸದನಕ್ಕೆ ತಿಳಿಸಿದರು.

ಭ್ರೂಣ ಹತ್ಯೆ ವಿರುದ್ಧ ಯಶಸ್ವಿ ಕಾರ್ಯಾಚರಣೆ – 46 ಜನರ ಬಂಧನ :

ರಾಜ್ಯದಲ್ಲಿ 2023-24 ರಿಂದ ಇಲ್ಲಿಯವರೆಗೆ  ಭ್ರೂಣಹತ್ಯೆ (Feticide) ಸಂಬಂಧಿಸಿದಂತೆ 8 ಪ್ರಕರಣ ದಾಖಲಿಸಿ 46 ಜನರನ್ನು ಬಂಧಿಸಲಾಗಿದೆ ಎಂದು  ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಇದೇ ವೇಳೆ ಸದನಕ್ಕೆ ಮಾಹಿತಿ ನೀಡಿದರು. ರಾಜ್ಯದಲ್ಲಿ ಸ್ಕ್ಯಾನಿಂಗ್ ಸೆಂಟರ್ ಮತ್ತು ಆಸ್ಪತ್ರೆಗಳ ಮೇಲೆ ತಪಾಸಣೆಗಳನ್ನು ಜಾಸ್ತಿ ಮಾಡಿರುವುದರಿಂದ ಹೆಚ್ಚಿನ ಸಂಖ್ಯೆಯ ಭ್ರೂಣ ಹತ್ಯೆ ಪ್ರಕರಣಗಳು ಕಂಡುಹಿಡಿಯಲಾಗಿದೆ. ಅಲ್ಲದೇ ಆಪರೇಷನ್‌ಗಳ ಯಶಸ್ವಿ ಕಾರ್ಯಾಚರಣೆಗಳನ್ನ ನಡೆಸಿ ಭ್ರೂಣ ಹತ್ಯೆ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.‌

ಭ್ರೂಣದ ಆರೋಗ್ಯ ಪರೀಕ್ಷೆ ನಡೆಸುತ್ತಿರುವ ಸಾಂದರ್ಭಿಕ ಚಿತ್ರ.

ರಾಜ್ಯದಲ್ಲಿ ಭ್ರೂಣ ಹತ್ಯೆ ತಡೆಯಲು  ಸರ್ಕಾರವು ಗರ್ಭ ಪೂರ್ವ ಮತ್ತು ಪ್ರಸವ ಪೂರ್ವ ಭ್ರೂಣ ಲಿಂಗ ಪತ್ತೆ ತಂತ್ರ ವಿಧಾನಗಳ (ಲಿಂಗ ಆಯ್ಕೆ ನಿಷೇಧ) ಕಾಯ್ದೆ 1994 (Pre-Conception and Pre-Natal Diagnostic Techniques Act – PCPNDT Act) ಕಾಯ್ದೆಯಡಿ ಬರುವ ಎಲ್ಲಾ ಶಾಸನಬದ್ದ ಸಮಿತಿಗಳನ್ನು ರಾಜ್ಯ ಮತ್ತು ಜಿಲ್ಲೆಗಳಲ್ಲಿ ರಚನೆ ಮಾಡಲಾಗಿದೆ. 2018 ರಿಂದ ರಾಜ್ಯದಲ್ಲಿ ‘ಬಾಲಿಕಾ’ ಆನ್ಲೈನ್ ಸಾಪ್ಟ್ವೇರ್ (Balika Online Software)  ಮುಖಾಂತರ ಎಲ್ಲಾ ಸ್ಕ್ಯಾನಿಂಗ್ ಸೆಂಟರ್ ಗಳನ್ನು ಕಡ್ಡಾಯವಾಗಿ ನೋಂದಣಿ ಮತ್ತು ನವೀಕರಣ ನಡೆಸಲಾಗುತ್ತಿದೆ.

ರಾಜ್ಯ ಮಟ್ಟದಲ್ಲಿ ಶೇ.100 ರಷ್ಟು ಗರ್ಭಿಣಿಯರ ನೊಂದಣಿ ಪ್ರಕ್ರಿಯೆಯು ಚಾಲ್ತಿಯಲ್ಲಿದ್ದು, ಗ್ರಾಮ ಮಟ್ಟದಲ್ಲಿ ಜನನ ಸಮಯದ ಲಿಂಗಾನುಪಾತದ ದತ್ತಾಂಶಗಳನ್ನು ಮಾಹಿತಿ ತಂತ್ರಜ್ಞಾನದ ಮುಖಾಂತರ ಮೇಲ್ವಿಚಾರಣೆ ಮಾಡುವ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ರಾಜ್ಯದಲ್ಲಿ ಇದುವರೆಗೂ ಪಿಸಿ ಮತ್ತು ಪಿಎನ್ ಡಿಟಿ ಕಾಯ್ದೆ ಉಲ್ಲಂಘಿಸಿರುವ ಸ್ಕ್ಯಾನಿಂಗ್ ಸೆಂಟರ್, ಮಾಲೀಕರು ಹಾಗೂ ವೈದ್ಯರ ವಿರುದ್ಧ ಒಟ್ಟು 136 ಪ್ರಕರಣಗಳನ್ನು ನ್ಯಾಯಾಲಯದಲ್ಲಿ ದಾವೆ ಹೂಡಲಾಗಿದ್ದು, 74 ಪ್ರಕರಣಗಳಲ್ಲಿ ದಂಡ ವಿಧಿಸಿ ಖುಲಾಸೆಗೊಂಡಿದ್ದು, 65 ಪ್ರಕರಣಗಳು ಕೋರ್ಟಿನಲ್ಲಿ ವಿವಿಧ ಹಂತದಲ್ಲಿ ಬಾಕಿಯಿರುತ್ತದೆ ಎಂದು ತಿಳಿಸಿದರು.

ಹೆಣ್ಣು ಭ್ರೂಣ ಪತ್ತೆ ಮತ್ತು ಹತ್ಯೆ ಪ್ರಕರಣದಲ್ಲಿ ಮಾಹಿತಿದಾರರ ಬಹುಮಾನ ಮೊತ್ತ ಏರಿಕೆ :

ಹೆಣ್ಣು ಭ್ರೂಣ ಪತ್ತೆ ಮತ್ತು ಹತ್ಯೆ ಮಾಡುವಂತಹ ಸ್ಕ್ಯಾನಿಂಗ್ ಸೆಂಟರ್, ಆಸ್ಪತ್ರೆ, ವೈದ್ಯರು, ದಲ್ಲಾಳಿಗಳು ಹಾಗೂ ಗರ್ಭಿಣಿಯರ ಸಂಬಂಧಿಕರ ವಿರುದ್ಧ ಮಾಹಿತಿ ನೀಡಿ, ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಲು ಸಹಕರಿಸುವ ಮಾಹಿತಿದಾರರಿಗೆ ಕರ್ನಾಟಕ ಸರ್ಕಾರದಿಂದ ನೀಡುತ್ತಿದ್ದ ಬಹುಮಾನವನ್ನು ರೂ.50 ಸಾವಿರದಿಂದ 1 ಲಕ್ಷ ರೂ.ವರೆಗೆ ಹೆಚ್ಚಿಸಲಾಗಿದೆ. ಪಿ.ಸಿ. & ಪಿ.ಎನ್.ಡಿ.ಟಿ. ಕಾಯ್ದೆಯ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಆಯುಕ್ತರ ಅಧ್ಯಕ್ಷತೆಯಲ್ಲಿ ರಾಜ್ಯ ಕಾರ್ಯಪಡೆಯನ್ನು ರಚಿಸಲಾಗಿದ್ದು, ರಾಜ್ಯ ಮಟ್ಟದಿಂದ ಬೆಂಗಳೂರು ಗ್ರಾಮಾಂತರ, ಬೆಳಗಾವಿ, ಮಂಡ್ಯ, ಕೋಲಾರ ಜಿಲ್ಲೆಗಳಲ್ಲಿ  ಗುಪ್ತ ಕಾರ್ಯಚರಣೆ ನಡೆಸಲಾಗಿದೆ. ಹೆಣ್ಣು ಭ್ರೂಣ  ಹತ್ಯೆ ಮಾಡದಂತೆ ರಾಜ್ಯಾದ್ಯಂತ ಜನ ಜಾಗೃತಿ ಹಾಗೂ ಅರಿವು ಮೂಡಿಸುವಂತಹ ಕಾರ್ಯಕ್ರಮಗಳನ್ನು  ನಡೆಸಲಾಗುತ್ತಿದೆ ಎಂದು ಸಚಿವ ದಿನೇಶ್ ಗುಂಡೂರಾವ್  ವಿವರಿಸಿದರು.

“ಬೆಂಗಳೂರು ವೈರ್” ಡಿಜಿಟಲ್ ವೆಬ್ ನ್ಯೂಸ್ ಪೋರ್ಟೆಲ್ಲಿನ ಸೋಶಿಯಲ್ ಮೀಡಿಯಾ ಪೇಜ್ ಹಾಗೂ Google News ಗಳಿಗೆ ಉಚಿತವಾಗಿ Subscribe ಆಗಲು Facebook, Telegram, Twitter, Youtube, Whatsup Channel ಗೆ ಜಾಯಿನ್ ಆಗಲು ಇವುಗಳ ಲಿಂಕ್ ಮೇಲೆ ಕ್ಲಿಕ್ ಮಾಡಿ.

WhatsApp Join our WhatsApp Channel
Previous Post

ಕನ್ನಡಿಗರೇ ದೇಶದ ಯಾವುದೇ ಮೂಲೆಯಲ್ಲಿದ್ದರೂ ಅಲ್ಲಿನ ಸ್ಥಳೀಯ ಭಾಷೆಯಲ್ಲಿ ನೀವು ಮಾತನಾಡಬಹುದು : “ಭಾಷಿಣಿ” Android ಆಪ್ ಕಮಾಲ್ ಇದು!!

Next Post

2024ನೇ ಸಾಲಿನ ಬೃಹತ್ ಬೆಂಗಳೂರು ನಗರ ಪಾಲಿಕೆ ಎರಡನೇ ತಿದ್ದುಪಡಿ ವಿಧೇಯಕ ಅಂಗೀಕಾರ

Next Post

2024ನೇ ಸಾಲಿನ ಬೃಹತ್ ಬೆಂಗಳೂರು ನಗರ ಪಾಲಿಕೆ ಎರಡನೇ ತಿದ್ದುಪಡಿ ವಿಧೇಯಕ ಅಂಗೀಕಾರ

ಬಿಬಿಎಂಪಿಯಿಂದ ಸಮುದಾಯ ಪ್ರಾಣಿಗಳ ಮಾರ್ಗಸೂಚಿ ಜಾರಿಗೆ ಜ.15ರ ಗಡುವು : ಸಾಕು ಪ್ರಾಣಿಗಳ ಮೇಲೆ ದೌರ್ಜನ್ಯ ನಡೆಸಿದರೆ ಕಾನೂನು ಕ್ರಮ

Please login to join discussion

Like Us on Facebook

Follow Us on Twitter

Recent News

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026

Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

August 1, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026

Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

August 1, 2026

BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

July 31, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group