ಬೆಂಗಳೂರು, ಡಿ.24 www.bengaluruwire.com : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ (KSRTC) 20 ಹೊಸ ಅಂಬಾರಿ ಉತ್ಸವ ಸ್ಲೀಪರ್ ಬಸ್ಗಳು (Ambari Utsav Sleeper Buses) ಸೇರ್ಪಡೆಗೊಂಡಿದ್ದು, ಮಂಗಳವಾರದಿಂದಲೇ (ಡಿ.24) ರಸ್ತೆಗೆ ಇಳಿದಿವೆ. 20 ಹೊಸ ಅಂಬಾರಿ ಉತ್ಸವ ಸ್ಲೀಪರ್ ಬಸ್ಗಳಿಗೆ ಮೆಜೆಸ್ಟಿಕ್ನ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಮುಂಭಾಗ ಸಚಿವರಾದ ರಾಮಲಿಂಗರೆಡ್ಡಿ ಮತ್ತು ದಿನೇಶ್ ಗುಂಡೂರಾವ್ ಚಾಲನೆ ನೀಡಿದರು.
ಇದೇ ಸಂದರ್ಭದಲ್ಲಿ ಮಾತನಾಡಿದ ಸಚಿವ ರಾಮಲಿಂಗರೆಡ್ಡಿ, ಎರಡು ತಿಂಗಳ ಹಿಂದೆ ವೋಲ್ವೋ 20 ಬಸ್ಗಳಿಗೆ ಚಾಲನೆ ನೀಡಲಾಗಿತ್ತು. ಅಂಬಾರಿ ಉತ್ಸವ ಸ್ಲೀಪರ್ ಬಸ್ಗಳಿಗೆ ಇವತ್ತು ಚಾಲನೆ ನೀಡಿದ್ದೇವೆ. ಬೆಂಗಳೂರಿನಿಂದ ವಿವಿಧ ಜಿಲ್ಲೆಗಳಿಗೆ ಹಾಗೂ ಅಂತರರಾಜ್ಯಗಳಿಗೆ ಈ ಬಸ್ಗಳು ಸಂಚಾರ ಮಾಡುತ್ತವೆ ಎಂದು ಹೇಳಿದರು.
ಒಂಭತ್ತು ಸಾವಿರ ನೌಕರರ ನೇಮಕಾತಿಗೆ ಸರ್ಕಾರ ಅನುಮತಿ ಕೊಟ್ಟಿತ್ತು. ನಾಲ್ಕೂ ನಿಗಮಗಳಿಗೆ ನೇಮಕ ಆದವರಿಗೆ ನೇಮಕಾತಿ ಪತ್ರ ಕೊಡುತ್ತಿದ್ದೇವೆ. ಎಲ್ಲಾ ನೇಮಕಾತಿಗಳು ಪಾರದರ್ಶಕವಾಗಿ ಆಗುತ್ತಿವೆ. 750 ವಿದ್ಯುತ್ ಚಾಲಿತ ಬಸ್ಗಳಿಗೆ ಕ್ಯಾಬಿನೆಟ್ ಅನುಮತಿ ನೀಡಿದೆ. ಅವು ದಾವಣಗೆರೆ, ಶಿವಮೊಗ್ಗ ಸೇರಿದಂತೆ ಹಲವು ಭಾಗಗಳಲ್ಲಿ ಓಡಾಟ ನಡೆಸಲಿವೆ. ಟೆಂಡರ್ನಲ್ಲಿ ಭಾಗಿಯಾದ ಖಾಸಗಿ ಕಂಪನಿಗಳಿಗೆ ಕೇಂದ್ರ ಸರ್ಕಾರ ಸಬ್ಸಿಡಿ ನೀಡುತ್ತಿದೆ. ಅದೇ ರೀತಿ ನಮಗೂ ಕೇಂದ್ರ ಸರ್ಕಾರ ಸಬ್ಸಿಡಿ ನೀಡಿದರೆ ಬಸ್ಗಳನ್ನ ರಸ್ತೆಗೆ ಇಳಿಸುತ್ತೇವೆ ಎಂದು ತಿಳಿಸಿದರು.
ಅಂಬಾರಿ ಉತ್ಸವ ಸೀಪ್ಲರ್ ವಿಶೇಷತೆಯೇನು? :
* ಅಂಬಾರಿ ಉತ್ಸವ ಸೀಪ್ಲರ್ ಬಸ್ಗಳು 15 ಮೀಟರ್ ಉದ್ದವಿದ್ದು, 40 ಬರ್ತ್ 2×1 ಸಂರಚನೆಯೊಂದಿಗೆ ಪ್ರಯಾಣಿಕರಿಗೆ ಆರಾಮದಾಯಕ ಪ್ರಯಾಣವನ್ನು ನೀಡುತ್ತವೆ.
* ಇದು ಶಕ್ತಿಯುತ ಹಾಲೋಜನ್ ಹೆಡ್ಲೈಟ್ಗಳು ಮತ್ತು ಬೆಳಿಗನ ಸಮಯದಲ್ಲಿ ರನ್ನಿಂಗ್ ಲೈಟ್ ಗಳನ್ನು (DRL) ಹೊಂದಿವೆ.
* ಹೊಸ ಪ್ಲಶ್ ಇಂಟೀರಿಯರ್ಸ್ ಮತ್ತು ಸ್ಕ್ಯಾಂಡಿನೇವಿಯನ್ ಶೈಲಿಯ ಎರಿಯರ್ಸ್ ಹೊಂದಿವೆ.
* ಇದು ದೃಶ್ಯಾವಳಿಯಲ್ಲಿ ಆಕರ್ಷಕ ಎಸ್ಥೆಟಿಕ್ಸ್ ಅನ್ನು ನೀಡುತ್ತದೆ.
* ವಾಯುಗತಿ ಶಾಸ್ತ್ರದ ವಿನ್ಯಾಸವು ಉತ್ತಮ ಇಂಧನ ದಕ್ಷತೆಯನ್ನು ಒದಗಿಸುತ್ತದೆ.
* ನೂತನ ಆವಿಷ್ಕಾರದ ಎಂಜಿನ್ ತಂತ್ರಜ್ಞಾನವು ಶ್ರೇಷ್ಠ ಕಾರ್ಯಕ್ಷಮತೆಯನ್ನು ಮತ್ತು ಸುಧಾರಿತ ಇಂಧನ ದಕ್ಷತೆಯನ್ನು (KMPL) ಒದಗಿಸುತ್ತವೆ.
* ಬಸ್ ಮುಂಭಾಗದ ಗಾಜು ಶೇ.9.5 ಅಗಲವಾಗಿವೆ.
* ಯು.ಎಸ್.ಬಿ ಮತ್ತು ಸಿ-ಟೈಪ್ ಮೊಬೈಲ್ ಚಾರ್ಜಿಂಗ್ ಪಾಯಿಂಟ್ಗಳ ಅಳವಡಿಸಲಾಗಿದೆ.
* ದೊಡ್ಡ ಏರ್ ಡಕ್ಟ್ ಹೊಂದಿರುವುದರಿಂದ ಹೆಚ್ಚಿನ ಏರ್ ಕಂಡೀಷನಿಂಗ್ ವ್ಯವಸ್ಥೆ ಮಾಡಲಾಗಿದೆ.
* ಪ್ರಯಾಣಿಕರಿಗೆ ಪ್ರೀಮಿಯಂ ಅನುಭವ ಮತ್ತು ಉತ್ತಮ ಆಸನಗಳ ವ್ಯವಸ್ಥೆ ಮಾಡಲಾಗಿದೆ.
* ಪ್ಯಾಂಟೊಗ್ರಾಫಿಕ್ ವಿನ್ಯಾಸವು ವಾಹನ ನಿರ್ವಹಣೆಯನ್ನು ಸುಲಭಗೊಳಿಸುತ್ತದೆ.
* ರಾತ್ರಿ ವೇಳೆ ಚಾಲನೆ ಮಾಡುವಾಗ ಸುರಕ್ಷತೆಗಾಗಿ ಹಿಂಬದಿ ಫಾಗ್ ಲೈಟ್ ಗಳನ್ನು ಅಳವಡಿಸಲಾಗಿದೆ.
* ಚಾಲಕರ ಅನುಕೂಲತೆಗಾಗಿ ಸುಲಭವಾಗಿ ಕೈಗೆಟುಕುವ ನಿಯಂತ್ರಕಗಳು ಮತ್ತು ಸ್ವಿಚ್ಚುಗಳನ್ನು ಹೊಂದಿವೆ.
* ತುರ್ತು ಪರಿಸ್ಥಿತಿಗಳಲ್ಲಿ ಪ್ರಯಾಣಿಕರ ಸುರಕ್ಷತೆಗಾಗಿ ಫೈರ್ ಅಲಾರ್ಮ್ ಮತ್ತು ಪ್ರೊಟೆಕ್ಷನ್ ಸಿಸ್ಟಮ್ ಅಳವಡಿಸಲಾಗಿದೆ.
* ಚಾಲಕರು, ಪ್ರಯಾಣಿಕರ ಬಾಗಿಲಿನಿಂದ ಪಾದಚಾರಿಗಳನ್ನು ಸುಲಭವಾಗಿ ನೋಡಬಹುದಾಗಿದೆ.
ಎಲ್ಲೆಲ್ಲಿ ಬಸ್ ಸಂಚಾರ?
– ಕುಂದಾಪುರ-ಬೆಂಗಳೂರು ಮಧ್ಯೆ 2 ಬಸ್ಗಳು ಸಂಚರಿಸುತ್ತವೆ.
– ಮಂಗಳೂರು-ಬೆಂಗಳೂರು ಮಧ್ಯೆ 2 ಬಸ್ಗಳು
– ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ-ಕುಂದಾಪುರ ನಡುವೆ 2 ಬಸ್ಗಳು
– ಬೆಂಗಳೂರು-ನೆಲ್ಲೂರು ನಡುವೆ 2 ಬಸ್ಗಳು
– ಬೆಂಗಳೂರು-ಹೈದಾರಬಾದ್ ನಡುವೆ 2 ಬಸ್ಗಳು
– ಬೆಂಗಳೂರು-ವಿಜಯವಾಡ ನಡುವೆ 4 ಬಸ್ಗಳು
– ಬೆಂಗಳೂರು-ಎರ್ನಾಕುಲಂ ನಡುವೆ 2 ಬಸ್ಗಳು
– ಬೆಂಗಳೂರು-ತ್ರಿಶೂರು ನಡುವೆ 2 ಬಸ್ಗಳು
– ಬೆಂಗಳೂರು-ಕಲ್ಲಿಕೋಟೆ ನಡುವೆ 2 ಬಸ್ಗಳು ಸಂಚರಿಸಲಿವೆ.
ಕಾರ್ಯಕ್ರಮದಲ್ಲಿ ಗುಬ್ಬಿ ಶಾಸಕರು ಹಾಗೂ ಕೆಎಸ್ ಆರ್ ಟಿಸಿ ಅಧ್ಯಕ್ಷ ಎಸ್.ಆರ್.ಶ್ರೀನಿವಾಸ್ ಮತ್ತು ಉಪಾಧ್ಯಕ್ಷರಾದ ಮಹಮ್ಮದ್ ರಿಜ್ವಾನ್ ನವಾಬ್, ಕೆಎಸ್ ಆಟಿಸಿಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.