ಬೆಂಗಳೂರು, ಡಿ.29 www.bengaluruwire.com : ನೂತನ ವರ್ಷದ ಆಚರಣೆಗೆ ಬಿಎಂಟಿಸಿ (BMTC) ಯು ಡಿ.31 ರಂದು ಹೊಸ ವರ್ಷಾಚರಣೆಯಲ್ಲಿ ಭಾಗವಹಿಸುವ ಸಾರ್ವಜನಿಕರ ಅನುಕೂಲಕ್ಕಾಗಿ ಎಂ.ಜಿ.ರಸ್ತೆಯಿಂದ ನಗರದ ವಿವಿಧ ಭಾಗಗಳಿಗೆ ಹೆಚ್ಚಿನ ಬಸ್ ಗಳನ್ನು ನಿಯೋಜಿಸುತ್ತಿದೆ.
ಈ ಸಾರಿಗೆ ಸೌಲಭ್ಯವು ರಾತ್ರಿ 11 ಗಂಟೆಯಿಂದ ನಂತರ ತಡರಾತ್ರಿ 2 ಗಂಟೆಯವರೆಗೆ ಪ್ರಯಾಣಿಕರ ಸಂಚಾರದ ಒತ್ತಡಕ್ಕನುಗುಣವಾಗಿ ಈ ಕೆಳಕಂಡ ಮಾರ್ಗಗಳಲ್ಲಿ ಹೆಚ್ಚುವರಿ ಬಿಎಂಟಿಸಿ ಬಸ್ ಗಳನ್ನು ಕಾರ್ಯಾಚರಣೆಗೊಳಿಸಲು ಕ್ರಮ ಕೈಗೊಂಡಿದೆ.
ಕ್ರ.ಸಂ —ಮಾರ್ಗ ಸಂಖ್ಯೆ—ಎಲ್ಲಿಂದ—-ಎಲ್ಲಿಗೆ
1 ) G-3 ಬ್ರಿಗೇಡ್ ರಸ್ತೆ ಎಲೆಕ್ಟ್ರಾನಿಕ್ಸ್ ಸಿಟಿ
2) G-4 ಜಿಗಣಿ
3) G-2 ಎಂ.ಜಿ. ರಸ್ತೆ ಮೆಟ್ರೋ ನಿಲ್ದಾಣ ಸರ್ಜಾಪುರ
4) G-6 ಕೆಂಗೇರಿ ಕೆ.ಹೆಚ್.ಬಿ. ಕ್ವಾರ್ಟ್ರ್ಸ್
5) G-7 ಜನಪ್ರಿಯ ಟೌನ್ ಶಿಪ್
6) G-8 ನೆಲಮಂಗಲ
7) G-9 ಯಲಹಂಕ ಉಪನಗರ 5ನೇ ಹಂತ
8) G-10 ಯಲಹಂಕ
9) G-11 ಬಾಗಲೂರು
10) 317-G ಹೊಸಕೋಟೆ
11 ) SBS-13K ಚನ್ನಸಂದ್ರ
12) SBS-1K ಕಾಡುಗೋಡಿ
13) 13 ಬನಶಂಕರಿ
ಇದಲ್ಲದೆ, ಜನದಟ್ಟಣೆ ಇರುವ ಪ್ರಮುಖ ಬಸ್ ನಿಲ್ದಾಣ/ಜಂಕ್ಷನ್ ಗಳಾದ ಕೆಂಪೇಗೌಡ ಬಸ್ ನಿಲ್ದಾಣ, ಕೃ.ರಾ.ಮಾರುಕಟ್ಟೆ, ಶಿವಾಜಿನಗರ, ಕೋರಮಂಗಲ, ಕಾಡುಗೋಡಿ, ಕೆಂಗೇರಿ, ಸುಮನಹಳ್ಳಿ, ಗೊರಗುಂಟೆಪಾಳ್ಯ, ಯಶವಂತಪುರ, ಯಲಹಂಕ, ಶಾಂತಿನಗರ, ಬನಶಂಕರಿ, ಹೆಬ್ಬಾಳ ಮತ್ತು ಸೆಂಟ್ರಲ್ ಸಿಲ್ಕ್ ಬೋರ್ಡ್ ಗಳಿಂದ ಪ್ರಯಾಣಿಕರ ದಟ್ಟಣೆ ಅಥವಾ ಬೇಡಿಕೆಗೆ ಅನುಗುಣವಾಗಿ ಸಾರಿಗೆ ಸೌಲಭ್ಯವನ್ನು ಕಲ್ಪಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಬಿಎಂಟಿಸಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.