Sunday, September 20, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಎಲ್ ಪಿಜಿ ಸಿಲಿಂಡರ್ ಸಾಂದರ್ಭಿಕ ಚಿತ್ರ

    ​ಎಲ್‌ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ಅಕ್ಟೋಬರ್ 1ರಿಂದ ಹೊಸ ನಿಯಮ ಜಾರಿ

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ಗ್ರಾಮಠಾಣಾ ಆಸ್ತಿಗಳಿಗೆ ನ.1ರಿಂದ ಮನೆ ಬಾಗಿಲಿಗೇ ಇ-ಸ್ವತ್ತು ಖಾತೆ: ಈಶ್ವರ ಖಂಡ್ರೆ ಸೂಚನೆ

    ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ: ₹32,611 ಕೋಟಿ ಯೋಜನೆಗಳಿಗೆ ಅನುಮೋದನೆ: ತುಳು ಎರಡನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ಘೋಷಣೆ

    Breaking News | ನವೆಂಬರ್ ಅಂತ್ಯಕ್ಕೆ ತುಮಕೂರಿಗೆ ಎತ್ತಿನಹೊಳೆ ನೀರು: ಸಚಿವ ಚಲುವರಾಯಸ್ವಾಮಿ ಭರವಸೆ

    ಮೆಕ್ಕಾ ವಾಯುಪ್ರದೇಶದ ಬಳಿ ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ: ಪವಿತ್ರ ಕ್ಷೇತ್ರಗಳ ರಕ್ಷಣೆ ‘ರೆಡ್ ಲೈನ್’ ಎಂದ ರಿಯಾದ್

    ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

    UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

  • Bengaluru Focus

    ಕೇವಲ 30 ನಿಮಿಷದಲ್ಲಿ ಕಟ್ಟಡ ನಕ್ಷೆ ಮಂಜೂರಾತಿ: ‘ನಂಬಿಕೆ ನಕ್ಷೆ 2.0’ ಲೋಕಾರ್ಪಣೆ!

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ​ಜೆ.ಪಿ. ನಗರದಿಂದ ಗೊಟ್ಟಿಗೆರೆವರೆಗೆ ಶೇ. 34 ರಷ್ಟು ಬೀದಿ ದೀಪ ಬಂದ್; ​ಕತ್ತಲಲ್ಲಿ ರಸ್ತೆಗಳು; ಸಚಿವ ಕೃಷ್ಣ ಬೈರೇಗೌಡ ದಿಢೀರ್ ರಾತ್ರಿ ರೌಂಡ್ಸ್

    GBA Head Office Image

    GBA News | ಬೆಂಗಳೂರು : ಜಿಬಿಎ ವ್ಯಾಪ್ತಿಯಲ್ಲಿ ಇ-ಖಾತಾ ಸೇವೆಗಳು ಮತ್ತಷ್ಟು ಸುಲಭ; ಸೆ. 21ರಿಂದ ‘ಇ-ಆಸ್ತಿ 2.0’ ನೂತನ ಇ-ಖಾತಾ ವ್ಯವಸ್ಥೆ ಜಾರಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

  • Public interest
  • BW Special
  • Life Style
  • Photo Gallery
  • Video
No Result
View All Result

Home Public interest

ರೈತರೇ ಮಾರುಕಟ್ಟೆಯಲ್ಲಿ ರಸಗೊಬ್ಬರ ಖರೀಸುವಾಗ ಇರಲಿ ಎಚ್ಚರ : ಕಲಬೆರಕೆ ರಸಗೊಬ್ಬರ ಕಂಡು ಹಿಡಿಯುವುದು ಹೇಗೆ?

by Bengaluru Wire Desk
January 1, 2025
in Public interest
Reading Time: 3 mins read
0
Agriculture Farming

ರೈತನೊಬ್ಬ ಕೃಷಿ ಭೂಮಿಯಲ್ಲಿ ಬೆಳೆಗೆ ರಸಗೊಬ್ಬರ ಎರಚುತ್ತಿರುವ ಸಾಂದರ್ಭಿಕ ಚಿತ್ರ.

ಕಳಪೆ ರಸಗೊಬ್ಬರ (Poor fertilizer) ಹಾಗೂ ಗುಣಮಟ್ಟವಲ್ಲದ ಬೀಜಗಳು (Substandard seeds) ಮಾರುಕಟ್ಟೆಯಲ್ಲಿ ಹೇರಳವಾಗಿ ಲಗ್ಗೆಯಿಡುತ್ತಿರುವುದರಿಂದ ಸಾಲ ಸೋಲ ಮಾಡಿ ತಮಗರಿವಿಲ್ಲದೆ ಅವುಗಳನ್ನು ಖರೀದಿಸುವ ರೈತರು ಉತ್ತಮ ಬೆಳೆ ಬರದೆ ನಷ್ಟಕ್ಕೊಳಗಾಗಿ ತೊಂದರೆಗೊಳಗಾಗುತ್ತಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರ ಎಷ್ಟೇ ಕಳಪೆ ಗುಣಮಟ್ಟದ ಸಾಮಗ್ರಿಗಳು ಮಾರುಕಟ್ಟೆ ಬರದಂತೆ ಕ್ರಮ ಕೈಗೊಂಡರೂ, ನಕಲಿ ಉತ್ಪನ್ನ ತಯಾಕರು ಲಾಭದಾಸೆಗೆ ತಮ್ಮ ಕಳಪೆ ಉತ್ಪನ್ನಗಳನ್ನು ರೈತರಿಗೆ ಮಾರುವ ಸಂಚು ರೂಪಿಸುತ್ತಲೇ ಇರುತ್ತಾರೆ.

ಈ ಹಿನ್ನಲೆಯಲ್ಲಿ ನಕಲಿ ಹಾಗೂ ಕಳಪೆ ರಸಗೊಬ್ಬರವನ್ನು ಕಂಡು ಹಿಡಿಯುವ ಸುಲಭ ವಿಧಾನ ಹಾಗೂ ಈ ಕುರಿತಂತೆ ಇರುವ ಪರೀಕ್ಷೆಗಳ ಬಗ್ಗೆ  ಶಿವಮೊಗ್ಗದ ಶಿಕಾರಿಪುರ ತಾಲೂಕು ಇರುವಕ್ಕಿ ಕೃಷಿ ವಿಜ್ಞಾನಗಳ ಮಹಾ ವಿದ್ಯಾಲಯದ ಮಣ್ಣು ವಿಜ್ಞಾನ ಪ್ರಾಧ್ಯಪಕರಾದ ಡಾ.ಗಣಪತಿಯವರು ರೈತರು ಮತ್ತು ಕೃಷಿ ವಿದ್ಯಾರ್ಥಿಗಳಿಗೆ ತಿಳಿಸಿದ್ದಾರೆ.

ಇತ್ತೀಚೆಗೆ ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ (Keladi Shivappa Nayaka University of Agricultural and Horticultural Sciences) ಹಾಗೂ ಇರುವಕ್ಕಿಯ ಕೃಷಿ ವಿಜ್ಞಾನಗಳ ಮಹಾ ವಿದ್ಯಾಲಯ (College of Agricultural Sciences Iruvakki) ಸಹಯೋಗದಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳ ಗ್ರಾಮೀಣ ಕೃಷಿ ಕಾರ್ಯಾನುಭವ ಕಾರ್ಯಕ್ರಮದಲ್ಲಿ “ರಸಗೊಬ್ಬರಗಳ ಕಲಬೆರಕೆ ಪತ್ತೆ ಹಚ್ಚುವುದು ಹೇಗೆ?” (How to detect adulteration of fertilizers?) ಎಂಬ ಗುಂಪು ಚರ್ಚೆ ಹಾಗೂ ಪದ್ಧತಿ ಪ್ರಾತ್ಯಕ್ಷಿಕೆಯಲ್ಲಿ ವಿವರಿಸಿದ್ದಾರೆ.

ರಸಗೊಬ್ಬರಗಳ ಕಲಬೆರಕೆ ಪತ್ತೆ ಹಚ್ಚುವುದು ಹೇಗೆ? ಕುರಿತು ಪ್ರಾಧ್ಯಪಕರಾದ ಡಾ.ಗಣಪತಿಯವರು ರೈತರು ಮತ್ತು ಕೃಷಿ ವಿದ್ಯಾರ್ಥಿಗಳಿಗೆ ಪ್ರಾತ್ಯಕ್ಷಿಕೆ ನೀಡಿದರು.

ರಸಗೊಬ್ಬರ ಕೊಳ್ಳುವಾಗ ರೈತರು ಗಮನಿಸಬೇಕಾದ ಅಂಶಗಳು (Factors to be observed by farmers while buying fertilizers)  :

* ರಸಗೊಬ್ಬರ ಚೀಲದ ಬಾಯಿ ಹೊಲೆದಿರಬೇಕು. ಕೈಯಿಂದ ಹೊಲೆದಿದ್ದರೆ ಅದಕ್ಕೆ ಸೀಸದ ಮೊಹರಿರಬೇಕು.

* ಚೀಲವನ್ನು ತೂಕ ಮಾಡಿಸಿಯೇ ಕೊಳ್ಳಬೇಕು.

* ಚೀಲದ ಮೇಲೆ ನಮೂದಿಸಿರುವ ಗರಿಷ್ಠ ಬೆಲೆಗಿಂತ ಹೆಚ್ಚಿನ ಬೆಲೆ ನೀಡಬಾರದು.

* ರಸಗೊಬ್ಬರ ಖರೀದಿಸಿದ್ದಕ್ಕೆ ನಮೂನೆ ಎಂ.ನಲ್ಲಿ ರಸೀತಿ ಪಡೆಯಬೇಕು. ಇದರಲ್ಲಿ ಖರೀದಿಯ ವಿವರಗಳನ್ನು ಸ್ಪಷ್ಟವಾಗಿ ನಮೂದಿಸಿದ್ದು ರೈತರ ಮತ್ತು ಮಾರಾಟಗಾರರ ಸಹಿಯಿರಬೇಕು.

* ಚೀಲದ ಮೇಲೆ ರಸಗೊಬ್ಬರದ ಹೆಸರು, ತಯಾರಕರ ಹೆಸರು ಮತ್ತು ವಿಳಾಸ, ಬ್ರಾಂಡ್, ಪೋಷಕಾಂಶಗಳ ವಿವರ, ಗರಿಷ್ಠ ಮಾರಾಟ ಬೆಲೆ, ಗರಿಷ್ಠ ಮತ್ತು ನಿವ್ವಳ ತೂಕ, ಬ್ಯಾಚ್ ಸಂಖ್ಯೆ ಮತ್ತು ರಿಜಿಸ್ಟ್ರೇಷನ್ ಸಂಖ್ಯೆ ಇರುವುದನ್ನು ಗಮನಿಸಬೇಕು.

* ಪ್ರಾಥಮಿಕ ಹಂತದಲ್ಲಿಯೇ ಈ ವಿವರ ಪರೀಕ್ಷಿಸಿ ಅಧಿಕೃತ ಮಾರಾಟಗಾರರಿಂದ ಮಾತ್ರ ಕೊಂಡರೆ ನಕಲಿ ಹಾಗೂ ಕಲಬೆರಕೆ ಹಾವಳಿಯನ್ನು ಸ್ವಲ್ಪ ಮಟ್ಟಿಗೆ ತಡೆಯಬಹುದು.

* ಕಡ್ಡಾಯವಾಗಿ ಆಧಾರ್ ಆಧಾರಿತ ಪಿ.ಓ.ಎಸ್ ಯಂತ್ರದ ಮೂಲಕ ಹೆಬ್ಬೆಟ್ಟು ಮುದ್ರೆ ಪಡೆದು ಬಿಲ್ ನೀಡಬೇಕು.

ರಸಗೊಬ್ಬರ ಖರೀದಿಸಿದ ನಂತರ ಕೆಲವು ಸರಳ ಪರೀಕ್ಷೆಗಳಿಂದ ಅವು ನಕಲಿಯೇ ಅಥವಾ ಕಲಬೆರಕೆಯಾಗಿದೆಯೇ ಎಂಬುದನ್ನು ಪತ್ತೆ ಹಚ್ಚಬಹುದು.  ಪರೀಕ್ಷೆ ಮಾಡುವುದು ಹೇಗೆ?

ಭೌತಿಕ ಪರೀಕ್ಷೆ : ಹರಳು ರೂಪದ ರಸಗೊಬ್ಬರಗಳು ಒಂದೇ ಬಣ್ಣ, ಆಕಾರ, ಗಾತ್ರದಿಂದ ಕೂಡಿದ್ದು ಕಣ್ಣಿಗೆ ಕಾಣುವಂತಹ ಇತರೆ ಪದಾರ್ಥಗಳು ಇರಬಾರದು. ಹೆಚ್ಚು ಪುಡಿ ಮತ್ತು ಹೆಚ್ಚಿನ ತೇವಾಂಶ ಹೊಂದಿರಬಾರದು. ಹರಳು ರೂಪದ ರಂಜಕ ಗೊಬ್ಬರ ಮತ್ತು ಜಿಪ್ಸಂ ಹರಳುಗಳು ಮೃದುವಾಗಿದ್ದು ಬೇರೆ ರಸಗೊಬ್ಬರದ ಹರಳುಗಳು ಗಟ್ಟಿಯಾಗಿರುತ್ತವೆ.

ಹರಳು ರೂಪದ ರಸಗೊಬ್ಬರವೊಂದರ ಚಿತ್ರ.

ನೀರಿನಲ್ಲಿ ಕರಗುವ ಪರೀಕ್ಷೆ : ಕೆಲವು ರಸಗೊಬ್ಬರಗಳು (ಯೂರಿಯ, ಅಮೋನಿಯಂ ಸಲ್ವೇಟ್, ಅಮೋನಿಯಂ ಕ್ಲೋರೈಡ್, ಮ್ಯೂರಿಯೇಟ್ ಆಫ್ ಪೊಟ್ಯಾಷ್, ಕ್ಯಾಲ್ಸಿಯಂ ಅಮೋನಿಯಂ ನೈಟ್ರೇಟ್) ನೀರಿನಲ್ಲಿ ಸಂಪೂರ್ಣ ಕರಗುತ್ತವೆ. ಅವನ್ನು ಪರೀಕ್ಷೆಗಾಗಿ ನೀರಿನಲ್ಲಿ ಹಾಕಿದಾಗ ಕರಗದೆ ಇರುವ ಪದಾರ್ಥ ಉಳಿದರೆ ಅದು ಕಲಬೆರಕೆ.  ಕೆಲವು ರಸಗೊಬ್ಬರಗಳು ನೀರಿನಲ್ಲಿ ಕರಗಿಸಿದಾಗ ತಣ್ಣನೆ ಅನುಭವ ನೀಡುತ್ತವೆ (ಯೂರಿಯ, ಅಮೋನಿಯಂ ಕ್ಲೋರೈಡ್, ಎಂಒಪಿ, ಸಿಎಎನ್, ನೈಟ್ರೋ ಫಾಸ್ಪೇಟ್ 20:20, 15:15:15, 19:19:19 ಇತ್ಯಾದಿ). ಹಾಗಿರದಿದ್ದಲ್ಲಿ ಅವು ಕಲಬೆರಕೆಯಾಗಿರುವ ಸಾಧ್ಯತೆಗಳಿರುತ್ತವೆ.

ನೀರಿನಲ್ಲಿ ರಸಗೊಬ್ಬರ ಕರಗುವ ಪರೀಕ್ಷೆಯ ಸಾಂದರ್ಭಿಕ ಚಿತ್ರ.

ಬಿಸಿ ಮಾಡುವ ಪರೀಕ್ಷೆ : ಯೂರಿಯವನ್ನು ಬಿಸಿ ಮಾಡಿದಾಗ ಸಂಪೂರ್ಣವಾಗಿ ಕರಗುತ್ತದೆ. ಕರಗದೇ ಇರುವ ವಸ್ತುಗಳು ಉಳಿದರೆ ಕಲಬೆರಕೆಯಾಗಿದೆ ಎಂದು ತಿಳಿಯಬೇಕು. ಡಿಎಪಿಯನ್ನು ಒಂದು ತಗಡಿನ ಮೇಲೆ ಬಿಸಿ ಮಾಡಿದಾಗ ಹರಳುಗಳು ಸುಣ್ಣದಂತೆ ಅರಳುತ್ತವೆ ಮತ್ತು ತಳಕ್ಕೆ ಅಂಟಿಕೊಳ್ಳುತ್ತವೆ.

ಸಾರಜನಕದ ಪರೀಕ್ಷೆ: ಅಮೋನಿಯ ರೂಪದ ಸಾರಜನಕವಿರುವ ರಸಗೊಬ್ಬರಗಳನ್ನು ತೇವ ಮಾಡಿ ಸುಟ್ಟ ಸುಣ್ಣದಿಂದ ತೀಡಿದಾಗ ಅಮೋನಿಯ ಘಾಟು ವಾಸನೆ ಬರುತ್ತದೆ. ಅದು ಬರದಿದ್ದರೆ ನಕಲಿ ಎಂದು ತಿಳಿಯಬಹುದು. ಹೀಗೆ 30 ರಸಗೊಬ್ಬರಗಳ ಪರೀಕ್ಷೆ ಮಾಡಬಹುದು.

ಅಮೋನಿಯಾ ರೂಪದ ಸಾರಜನಕ ವಿರುವ ರಸಗೊಬ್ಬರ ಪರೀಕ್ಷೆ (ಸಾಂದರ್ಭಿಕ ಚಿತ್ರ)

ರಂಜಕದ ಪರೀಕ್ಷೆ : ಸ್ವಲ್ಪ ರಸಗೊಬ್ಬರವನ್ನು ನೀರಿನಲ್ಲಿ ಕರಗಿಸಿ. ಸೂಪರ್ ಫಾಸ್ಪೇಟ್ ಮತ್ತು ಡಿಎಪಿ ರಸಗೊಬ್ಬರಗಳಾದಲ್ಲಿ ಸಿಲ್ವ‌ರ್ ನೈಟ್ರೇಟ್ ದ್ರಾವಣ, ಇತರೆ ಸಾರಜನಕ, ರಂಜಕ ಮತ್ತು ಸಾರಜನಕ, ರಂಜಕ ಹಾಗೂ ಪೊಟ್ಯಾಷ್ ರಸಗೊಬ್ಬರಗಳಿಗೆ ಫೆರಿ ಕ್ಲೋರೈಡ್ ದ್ರಾವಣ ಹಾಕಿದಾಗ ಹಳದಿ, ಬಿಳಿ ಮಿಶ್ರಿತ ಹಳದಿ ಬಣ್ಣ ಬರಬೇಕು.

ಪೊಟ್ಯಾಷ್ ಪರೀಕ್ಷೆ: ಪೊಟ್ಯಾಷ್ ಅಂಶವನ್ನು ಕೋಬಾಲ್ಟ್ ನೈಟ್ರೇಟ್ ದ್ರಾವಣದಿಂದ ಕಂಡು ಹಿಡಿಯಬಹುದು. ನಕಲಿ ಗೊಬ್ಬರ ಕೊಬಾಲ್ಟ್ ನೈಟ್ರೇಟ್‌ನೊಂದಿಗೆ ಬೆರೆತರೂ ಹಳದಿ ಬಣ್ಣವನ್ನು ಕೊಡುವುದಿಲ್ಲ.

ಪೊಟ್ಯಾಷ್ ಪರೀಕ್ಷೆಯ ಸಾಂದರ್ಭಿಕ ಚಿತ್ರ.

ರೈತರು ಈ ಕುರಿತು ಹೆಚ್ಚಿನ ಮಾಹಿತಿಗಾಗಿ ತಮ್ಮ ಸಮೀಪದ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿಗಳು ಅಥವಾ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರನ್ನು ಸಂಪರ್ಕಿಸಬಹುದು. ಕಿಸಾನ್ ಕಾಲ್ ಸೆಂಟರ್ (1800 180 1551) ಅಥವಾ ರೈತ ಸಹಾಯವಾಣಿ (1800 425 3553)ಗೆ ಶುಲ್ಕ ರಹಿತ ಕರೆ ಮಾಡಿ ಮಾಹಿತಿಯನ್ನು ಪಡೆದುಕೊಳ್ಳಬಹುದು.

“ಬೆಂಗಳೂರು ವೈರ್” ಡಿಜಿಟಲ್ ವೆಬ್ ನ್ಯೂಸ್ ಪೋರ್ಟೆಲ್ಲಿನ ಸೋಶಿಯಲ್ ಮೀಡಿಯಾ ಪೇಜ್ ಹಾಗೂ Google News ಗಳಿಗೆ ಉಚಿತವಾಗಿ Subscribe ಆಗಲು Facebook, Telegram, Twitter, Youtube, Whatsup Channel ಗೆ ಜಾಯಿನ್ ಆಗಲು ಇವುಗಳ ಲಿಂಕ್ ಮೇಲೆ ಕ್ಲಿಕ್ ಮಾಡಿ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

ಲಾಲ್ ಬಾಗ್ ಗಣರಾಜ್ಯೋತ್ಸವ ಫಲಪುಷ್ಪ ಪ್ರದರ್ಶನ- 2025 : ಹೂಗಳಲ್ಲಿ ಅರಳಲಿದ್ದಾರೆ “ಮಹರ್ಷಿ ವಾಲ್ಮೀಕಿ”

Next Post

ಬೆಂಗಳೂರಿನಲ್ಲಿ ನಿನ್ನೆ ಒಂದೇ ದಿನ ಪಾರ್ಟಿ ಮೂಡ್ ನಲ್ಲಿ ಕುಡಿದು ಗಾಡಿ ಓಡಿಸಿದವರ ವಿರುದ್ಧ 513 ಪ್ರಕರಣ ದಾಖಲು

Next Post
Drunk And Drive Checking

ಬೆಂಗಳೂರಿನಲ್ಲಿ ನಿನ್ನೆ ಒಂದೇ ದಿನ ಪಾರ್ಟಿ ಮೂಡ್ ನಲ್ಲಿ ಕುಡಿದು ಗಾಡಿ ಓಡಿಸಿದವರ ವಿರುದ್ಧ 513 ಪ್ರಕರಣ ದಾಖಲು

ಬೆಂಗಳೂರಿನ ವಿಶ್ವೇಶ್ವರ ಪುರದಲ್ಲಿನ ತಿಂಡಿ ಬೀದಿಯ ಪಾದಚಾರಿ ಮಾರ್ಗವನ್ನು ಅಂಗಡಿ, ತಳ್ಳುಗಾಡಿಗಳು ಒತ್ತುವರಿ ಮಾಡಿಕೊಂಡಿರುವ ಚಿತ್ರ ಒಂದು ಕಡೆ. ಮತ್ತೊಂದು ಕಡೆ ಕಸ, ಆಹಾರದ ತಟ್ಟೆಗಳನ್ನು ಎಲ್ಲೆಂದರಲ್ಲಿ ಎಸೆದಿರುವ ಚಿತ್ರ.

BW SPECIAL | ಇಲ್ಲಿ ಮೂಗು ಮುಚ್ಚಿ ತಿಂಡಿ ತಿನ್ನಿ!! ಇದು ವಿವಿ ಪುರಂ Food Street : ಅವ್ಯವಸ್ಥೆಯ ಅಗರವಾಗಿದೆ ನವೀಕರಣವಾದ ತಿಂಡಿ ಬೀದಿ

Please login to join discussion

Like Us on Facebook

Follow Us on Twitter

Recent News

BW SPECIAL | ಕಸ್ತೂರಿರಂಗನ್ ವರದಿ: ಪಶ್ಚಿಮ ಘಟ್ಟ ಸಂರಕ್ಷಣೆಗೆ ‘ಕರ್ನಾಟಕ ಪರ್ಯಾಯ ಮಾದರಿ’ ಮಂಡಿಸಿದ ಡಾ. ಪ್ರಕಾಶ್ ಕಮ್ಮರಡಿ

September 20, 2026

ಕೇವಲ 30 ನಿಮಿಷದಲ್ಲಿ ಕಟ್ಟಡ ನಕ್ಷೆ ಮಂಜೂರಾತಿ: ‘ನಂಬಿಕೆ ನಕ್ಷೆ 2.0’ ಲೋಕಾರ್ಪಣೆ!

September 20, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BW SPECIAL | ಕಸ್ತೂರಿರಂಗನ್ ವರದಿ: ಪಶ್ಚಿಮ ಘಟ್ಟ ಸಂರಕ್ಷಣೆಗೆ ‘ಕರ್ನಾಟಕ ಪರ್ಯಾಯ ಮಾದರಿ’ ಮಂಡಿಸಿದ ಡಾ. ಪ್ರಕಾಶ್ ಕಮ್ಮರಡಿ

September 20, 2026

ಕೇವಲ 30 ನಿಮಿಷದಲ್ಲಿ ಕಟ್ಟಡ ನಕ್ಷೆ ಮಂಜೂರಾತಿ: ‘ನಂಬಿಕೆ ನಕ್ಷೆ 2.0’ ಲೋಕಾರ್ಪಣೆ!

September 20, 2026
ಎಲ್ ಪಿಜಿ ಸಿಲಿಂಡರ್ ಸಾಂದರ್ಭಿಕ ಚಿತ್ರ

​ಎಲ್‌ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ಅಕ್ಟೋಬರ್ 1ರಿಂದ ಹೊಸ ನಿಯಮ ಜಾರಿ

September 20, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d