Monday, September 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

    ಉಡುಪಿ ಶ್ರೀಕೃಷ್ಣ ಮಠ, ಬೆಂಗಳೂರು ಇಸ್ಕಾನ್ ಸೇರಿ ದೇಶಾದ್ಯಂತ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

    ​ಬೆಂಗಳೂರು ಆಗಸದಲ್ಲಿ ಮತ್ತೆ ಲೋಹದ ಹಕ್ಕಿಗಳ ಕಲರವ: ಫೆಬ್ರವರಿ 8 ರಿಂದ 16ನೇ ‘ಏರೋ ಇಂಡಿಯಾ 2027’ ಸಂಭ್ರಮ

    Hebbal Short Tunnel IISC Study Report | ಹೆಬ್ಬಾಳ ಕಿರು ಸುರಂಗ ಯೋಜನೆ ಅವೈಜ್ಞಾನಿಕ: ರಾಜ್ಯಪಾಲರಿಗೆ ಐಐಎಸ್ಸಿ ವರದಿ ಸಲ್ಲಿಕೆ

    ಕೆಪಿಎಸ್ ಸ್ಸಿ ಕೇಂದ್ರ ಕಚೇರಿ ಕಟ್ಟಡ

    KPSC KAS Recruitment 2026 | ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ಸೆಪ್ಟೆಂಬರ್ 7ರವರೆಗೆ ವಿಸ್ತರಣೆ

    IST | ಒನ್ ನೇಷನ್, ಒನ್ ಟೈಮ್: 6 ತಿಂಗಳಲ್ಲಿ ದೇಶಾದ್ಯಂತ ಕಡ್ಡಾಯವಾಗಲಿದೆ ‘ಭಾರತೀಯ ಪ್ರಮಾಣಿತ ಸಮಯ’

    ಗ್ರಾ.ಪಂ ಸೇವೆ, ಇ-ಸ್ವತ್ತು ಅಹವಾಲಿಗೆ ಶೀಘ್ರವೇ ಆನ್‌ಲೈನ್ ಆ್ಯಪ್: ಸಚಿವ ಈಶ್ವರ ಖಂಡ್ರೆ ಸೂಚನೆ

    Kudremukh Neelakurinji | ​ಕುದುರೆಮುಖ ಬೆಟ್ಟಗಳಲ್ಲಿ ನೀಲಕುರಿಂಜಿ ವೈಭವ

    NEET PG-2026 | ನೀಟ್ ಪಿಜಿ-2026 ಪರೀಕ್ಷೆ ಯಶಸ್ವಿ: 2.65 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಭಾಗಿ

  • Bengaluru Focus
    Namma Metro Purple Line

    Namma Metro News | ನಮ್ಮ ಮೆಟ್ರೋ ನೇರಳೆ, ಹಸಿರು ಮಾರ್ಗಕ್ಕೆ 4 ಹೊಸ ರೈಲುಗಳು ಶೀಘ್ರದಲ್ಲೇ ಸೇರ್ಪಡೆ

    ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

    ಬೆಂಗಳೂರಿಗೆ ಬಿಗ್ ಗಿಫ್ಟ್: ಬಿಎಂಟಿಸಿಗೆ ಹಂತ ಹಂತವಾಗಿ 4,500 ಹೊಸ ಎಲೆಕ್ಟ್ರಿಕ್ ಬಸ್‌ಗಳ ಸೇರ್ಪಡೆ

    ​ಬೆಂಗಳೂರು ಆಗಸದಲ್ಲಿ ಮತ್ತೆ ಲೋಹದ ಹಕ್ಕಿಗಳ ಕಲರವ: ಫೆಬ್ರವರಿ 8 ರಿಂದ 16ನೇ ‘ಏರೋ ಇಂಡಿಯಾ 2027’ ಸಂಭ್ರಮ

    2021ರ ಪಾರ್ಕಿಂಗ್ ನೀತಿಯಡಿ ಹೊಸ ಕರಡು ನಿಯಮ ಪ್ರಕಟ: ಕಟ್ಟಡದಲ್ಲಿ ಪಾರ್ಕಿಂಗ್ ಜಾಗ ವಾಣಿಜ್ಯ ಉದ್ದೇಶಕ್ಕೆ ಬಳಸಿದ್ರೆ ಕಠಿಣ ಕ್ರಮ

    Hebbal Short Tunnel IISC Study Report | ಹೆಬ್ಬಾಳ ಕಿರು ಸುರಂಗ ಯೋಜನೆ ಅವೈಜ್ಞಾನಿಕ: ರಾಜ್ಯಪಾಲರಿಗೆ ಐಐಎಸ್ಸಿ ವರದಿ ಸಲ್ಲಿಕೆ

    ಕಲಾಗ್ರಾಮದ ಸಮಾಧಿಗಳನ್ನು ತಕ್ಷಣ ತೆರವುಗೊಳಿಸಿ: ಹೈಕೋರ್ಟ್ ವಕೀಲ ಎನ್.ಪಿ. ಅಮೃತೇಶ್ ಸರ್ಕಾರಕ್ಕೆ ನೋಟಿಸ್

    ಬೆಂಗಳೂರಿನ ಇಸ್ಕಾನ್ ದೇವಸ್ಥಾನ

    Temple News | ​ಬೆಂಗಳೂರಿನ ಇಸ್ಕಾನ್ ದೇವಾಲಯಗಳಲ್ಲಿ ನಾಳೆಯಿಂದ ಅದ್ಧೂರಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

    ಕೆಪಿಎಸ್ ಸ್ಸಿ ಕೇಂದ್ರ ಕಚೇರಿ ಕಟ್ಟಡ

    KPSC KAS Recruitment 2026 | ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ಸೆಪ್ಟೆಂಬರ್ 7ರವರೆಗೆ ವಿಸ್ತರಣೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ರಾಜ್ಯದಲ್ಲಿ ಎಚ್​ಎಂಪಿವಿ ವೈರಸ್ ನ ಎರಡು ಪ್ರಕರಣ ಪತ್ತೆ : ಸೋಂಕು ಹರಡದಂತೆ ಮುಂಜಾಗ್ರತಾ ಕ್ರಮ : ಮುಖ್ಯಮಂತ್ರಿ ಸಿದ್ದರಾಮಯ್ಯ

ಕೇಂದ್ರಕ್ಕೆ ಮಾಹಿತಿ ನೀಡಿದ ರಾಜ್ಯ ಆರೋಗ್ಯ ಇಲಾಖೆ | HMPV ಹೊಸ ವೈರಸ್ ಅಲ್ಲ ಎಂದು ಆರೋಗ್ಯ ತಜ್ಞರು ಸ್ಪಷ್ಟಪಡಿಸಿದ್ದಾರೆ ಎಂದ ಕೇಂದ್ರ ಆರೋಗ್ಯ ಸಚಿವ ಜೆಪಿ ನಡ್ಡಾ

by Bengaluru Wire Desk
January 6, 2025
in Bengaluru Focus, News Wire, Public interest
Reading Time: 1 min read
0
ಕರೋನಾ ವೈರಸ್ ಗ್ರಾಫಿಕ್ ಚಿತ್ರ

ಕರೋನಾ ವೈರಸ್ ಗ್ರಾಫಿಕ್ ಚಿತ್ರ

ಬೆಂಗಳೂರು, ಜ.06 www.bengaluruwire.com : ರಾಜ್ಯದಲ್ಲಿ ಎಚ್​ಎಂಪಿವಿ ವೈರಸ್ (Human metapneumovirus – HMPV Virus) ನ ಎರಡು ಪ್ರಕರಣ ಪತ್ತೆಯಾದ ಹಿನ್ನಲೆಯಲ್ಲಿ , ಸೋಂಕು ಹರಡದಂತೆ ಸರ್ಕಾರ  ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲಿದೆ  ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಾ, ಚೈನಾ ದೇಶದಲ್ಲಿ ಎಚ್​ಎಂಪಿವಿ ವೈರಸ್ ಕಾಣಿಸಿಕೊಂಡಿದ್ದು, ಕರ್ನಾಟಕದಲ್ಲಿ  ಈ ವೈರಸ್ ಪತ್ತೆಯಾಗಿರುವ ಮಾಹಿತಿ ದೊರೆತಿದೆ. ಆದ್ದರಿಂದ ಈ ವೈರಸ್ ಹರಡದಂತೆ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲು ಆರೋಗ್ಯ ಇಲಾಖೆಗೆ ಸೂಚನೆ ನೀಡಲಾಗಿದೆ. ಆರೋಗ್ಯ ಸಚಿವರು ಈಗಾಗಲೇ ಸಭೆ ನಡೆಸುತ್ತಿದ್ದು, ವೈರಸ್ ತಡೆಗೆ ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಗಳು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲಿದೆ ಎಂದರು.

ಸೋಂಕು ತಡೆಯ ಕ್ರಮವಾಗಿ ವಿಮಾನ ನಿಲ್ದಾಣಗಳಲ್ಲಿ ಸ್ಕ್ರೀನಿಂಗ್ ಪುನ: ಪ್ರಾರಂಭಿಸುವ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, ಈ ಬಗ್ಗೆ ಆರೋಗ್ಯ ಸಚಿವರು ಸಭೆ ನಡೆಸುತ್ತಿದ್ದು, ರಾಜ್ಯದಲ್ಲಿ ತೆಗೆದುಕೊಳ್ಳಬಹುದಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ತೀರ್ಮಾನಿಸಲಾಗುವುದು ಎಂದು ಅವರು ಹೇಳಿದರು.

ಬೆಂಗಳೂರಿನಲ್ಲಿ 8 ತಿಂಗಳ ಹಾಗೂ 3 ತಿಂಗಳ ಮಗುವಿನಲ್ಲಿ ಎಚ್​ಎಂಪಿವಿ ವೈರಸ್ ದೃಢಪಟ್ಟಿದೆ. ಮೊದಲನೆಯ ಪ್ರಕರಣದಲ್ಲಿ 8 ತಿಂಗಳ ಮಗುವಿಗೆ ಜ್ವರ ಬಂದ ಕಾರಣ ಕೆಲವು ದಿನಗಳ ಹಿಂದೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ದಾಖಲು ಮಾಡಲಾಗಿತ್ತು. ರಕ್ತ ಪರೀಕ್ಷೆ ಮಾಡಿಸಿದಾಗ ಎಚ್​ಎಂಪಿವಿ ವೈರಸ್ ಇರುವುದು ಪತ್ತೆಯಾಗಿದೆ. ಆದರೆ, ಈ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಹರ್ಷಗುಪ್ತ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

ಇನ್ನೊಂದು ಪ್ರಕರಣದಲ್ಲಿ, ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾದ ಮೂರು ತಿಂಗಳ ಹೆಣ್ಣು ಶಿಶುವಿನಲ್ಲಿಯೂ ವೈರಸ್ ದೃಢಪಟ್ಟಿದೆ. ಆದರೆ, ಶಿಶುವನ್ನು ಈಗಾಗಲೇ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಎಚ್​ಎಂಪಿವಿ ವೈರಸ್ ಭಾರತದಲ್ಲೂ ಇದೆ. ಆದರೆ, ಅದು ಮ್ಯೂಟೆಷನ್ ಆಗಿದೆಯಾ ಎಂಬ ಬಗ್ಗೆ ಇನ್ನೂ ಸ್ಪಷ್ಟನೆ ಇಲ್ಲ. ನಮಗೆ ಚೀನಾದಲ್ಲಿ ಮ್ಯುಟೇಟ್ ಆಗಿರುವ ವೈರಸ್​ ಹೇಗಿದೆ ಎಂದು ತಿಳಿದಿಲ್ಲ. ಹೀಗಾಗಿ ಇಲ್ಲಿ ಪತ್ತೆಯಾಗಿರುವುದು ಸಾಮಾನ್ಯ ಎಚ್​ಎಂಪಿವಿ ವೈರಸ್ ಭಾರತದಲ್ಲೂ ಇದೆ. ಆದರೆ, ಅದು ಮ್ಯೂಟೆಷನ್ ಆಗಿದೆಯಾ ಎಂಬ ಬಗ್ಗೆ ಇನ್ನೂ ಸ್ಪಷ್ಟನೆ ಇಲ್ಲ. ನಮಗೆ ಚೀನಾದಲ್ಲಿ ಮ್ಯುಟೇಟ್ ಆಗಿರುವ ವೈರಸ್​ ಹೇಗಿದೆ ಎಂದು ತಿಳಿದಿಲ್ಲ. ಹೀಗಾಗಿ ಇಲ್ಲಿ ಪತ್ತೆಯಾಗಿರುವುದು ಸಾಮಾನ್ಯ ಎಚ್​ಎಂಪಿವಿ ವೈರಸ್ಸೇ ಅಥವಾ ಚೀನಾದ ತಳಿಯಾ ಎಂಬ ಗೊಂದಲ ಇದೆ. ಭಾರತದಲ್ಲೂ ಸಾಮಾನ್ಯ ಎಚ್​ಎಂಪಿವಿ ವೈರಸ್ ಶೇ 0.78 ರಷ್ಟು ಕಾಣಿಸುತ್ತದೆ ಎಂದು ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಹರ್ಷಗುಪ್ತ ತಿಳಿಸಿದ್ದಾರೆ.

ಸದ್ಯ ಸೋಂಕು ಪತ್ತೆಯಾಗಿರುವ ಮಗುವಿಗೆ ಮತ್ತು ಕುಟುಂಬದವರಿಗೆ ಟ್ರಾವೆಲ್ ಹಿಸ್ಟರಿ ಇಲ್ಲ. ಈ ಹಿನ್ನೆಲೆಯ ಬಗ್ಗೆ ಆರೋಗ್ಯ ಇಲಾಖೆ ಕೂಡಾ ಪರಿಶೀಲನೆ ನಡೆಸುತ್ತಿದೆ. ಯಾರೂ ಆತಂಕ ಪಡುವ ಅಗತ್ಯವಿಲ್ಲ ಎಂದು ಹರ್ಷಗುಪ್ತ ತಿಳಿಸಿದ್ದಾರೆ.

ಕೇಂದ್ರಕ್ಕೆ ಮಾಹಿತಿ ನೀಡಿದ ರಾಜ್ಯ ಆರೋಗ್ಯ ಇಲಾಖೆ :

ಮಗುವಿನಲ್ಲಿ ವೈರಸ್ ಪತ್ತೆಯಾದ ಬಗ್ಗೆ ಕೇಂದ್ರ ಆರೋಗ್ಯ ಇಲಾಖೆಗೆ ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಕೇಂದ್ರ ಆರೋಗ್ಯ ಇಲಾಖೆ ಅಧಿಕಾರಿಗಳ ಜತೆ ನಿರಂತರ ಸಂಪರ್ಕದಲ್ಲಿದ್ದೇವೆ ಎಂದೂಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಸೂಕ್ತ ಮುನ್ನೆಚ್ಚರಿಕೆ ವಹಿಸಿ ಎಂದು ಕೇಂದ್ರ ಆರೋಗ್ಯ ಇಲಾಖೆ ರಾಜ್ಯಕ್ಕೆ ಸೂಚಿಸಿದೆ

ಎಚ್​ಎಂಪಿವಿ ವೈರಸ್ ಎಂದರೇನು? :

ಸದ್ಯ ಚೀನಾದಲ್ಲಿ ಆತಂಕಕ್ಕೆ ಕಾರಣವಾಗಿದೆ ಎನ್ನಲಾಗಿರುವ ಹ್ಯೂಮನ್ ಮೆಟಾಪ್ನ್ಯೂಮೋ ವೈರಸ್ ಅಥವಾ ಎಚ್​ಎಂಪಿವಿ ಹೊಸದೇನಲ್ಲ. ಇದನ್ನು ಮೊದಲು 2001 ರಲ್ಲಿ ಕಂಡುಹಿಡಿಯಲಾಯಿತು ಎಂದು ಯುಎಸ್ ಸೆಂಟರ್ಸ್ ಫಾರ್ ಡಿಸೀಸ್ ಕಂಟ್ರೋಲ್ ಅಂಡ್ ಪ್ರಿವೆನ್ಷನ್ ಹೇಳಿದೆ. ಆದಾಗ್ಯೂ, ಕೆಲವು ಸೆರೋಲಾಜಿಕ್ ಪುರಾವೆಗಳು ವೈರಸ್ 1958 ರಿಂದಲೇ ವ್ಯಾಪಕವಾಗಿ ಹರಡಿತ್ತು ಎಂಬುದನ್ನು ನಿರೂಪಿಸಿರುವುದಾಗಿ ತಜ್ಞರು ವಿವರಿಸಿದ್ದಾರೆ.

ಇದು ಕೊರೊನಾ ವೈರಸ್​ಗಿಂತ ಭಿನ್ನವಾಗಿದ್ಯಾ? :

ಕೊರೊನಾವೈರಸ್ ಅಥವಾ COVID-19 ಒಂದು ಸಾಂಕ್ರಾಮಿಕ ಕಾಯಿಲೆಯಾಗಿದೆ. ಇದು SARS-CoV-2 ವೈರಸ್‌ನಿಂದ ಉಂಟಾಗುತ್ತದೆ. ಎಚ್​ಎಂಪಿವಿ ವೈರಸ್ ಮತ್ತು ಕೊರೊನಾ ವೈರಸ್ ಕೆಲವು ರೀತಿಯಲ್ಲಿ ಹೋಲಿಕೆಯನ್ನು ಒಳಗೊಂಡಿವೆ. ಉದಾಹರಣೆಗೆ : ಎರಡೂ ವೈರಸ್‌ಗಳು ಎಲ್ಲಾ ವಯಸ್ಸಿನ ಜನರಲ್ಲಿ ಉಸಿರಾಟದ ತೊಂದರೆಗೆ ಕಾರಣವಾಗುತ್ತವೆ. ಚಿಕ್ಕ ಮಕ್ಕಳು, ಹಿರಿಯ ವಯಸ್ಕರು ಮತ್ತು ದುರ್ಬಲ ರೋಗನಿರೋಧಕ ಶಕ್ತಿ ಹೊಂದಿರುವ ಜನರು ಹೆಚ್ಚು ಅಪಾಯಕ್ಕೆ ಒಳಗಾಗುತ್ತಾರೆ.

ಸದ್ಯ ಎಚ್​ಎಂಪಿವಿ ವೈರಸ್ ಹರಡುವಿಕೆ ತಡೆಗೆ ಯಾವುದೇ ಲಸಿಕೆ ಇಲ್ಲ. ಭಾರತದಲ್ಲಿ ಸದ್ಯ ಯಾವುದೇ ರೀತಿಯಲ್ಲಿ ಆತಂಕ ಪಡಬೇಕಾದ ಅಗತ್ಯ ಇಲ್ಲ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. 

ಕೇಂದ್ರ ಆರೋಗ್ಯ ಸಚಿವ ಜೆಪಿ ನಡ್ಡಾ ಏನಂತಾರೆ?:

ಕೇಂದ್ರ ಆರೋಗ್ಯ ಸಚಿವ ಜೆಪಿ ನಡ್ಡಾ ಅವರು ಭಾರತದಲ್ಲಿ ವರದಿಯಾಗಿರುವ HMPV ಯ ಮೂರು ಪ್ರಕರಣಗಳ ಬಗ್ಗೆ ಇರುವ ಭಯವನ್ನು ನಿವಾರಿಸಿದ್ದಾರೆ.  “HMPV ಹೊಸ ವೈರಸ್ ಅಲ್ಲ ಎಂದು ಆರೋಗ್ಯ ತಜ್ಞರು ಸ್ಪಷ್ಟಪಡಿಸಿದ್ದಾರೆ. ಇದನ್ನು ಮೊದಲು 2001 ರಲ್ಲಿ ಗುರುತಿಸಲಾಯಿತು ಮತ್ತು ಇದು ಹಲವು ವರ್ಷಗಳಿಂದ ಇಡೀ ಪ್ರಪಂಚದಲ್ಲಿ ಹರಡುತ್ತಿದೆ. HMPV ಗಾಳಿಯ ಮೂಲಕ, ಉಸಿರಾಟದ ಮೂಲಕ ಹರಡುತ್ತದೆ. ಇದು ಎಲ್ಲಾ ವಯಸ್ಸಿನ ಜನರ ಮೇಲೆ ಪರಿಣಾಮ ಬೀರಬಹುದು” ಅವರು ಹೇಳಿದರು. 

ಚೀನಾದ ಪ್ರಸ್ತುತ ಪರಿಸ್ಥಿತಿಯ ಬಗ್ಗೆ ಸರ್ಕಾರವು ನಿಕಟವಾಗಿ ನಿಗಾ ಇರಿಸುತ್ತಿದೆ ಎಂದು ಅವರು ತಿಳಿಸಿದರು. 

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

Photo Gallery | ಕುಮಾರಕೃಪ ರಸ್ತೆಯಲ್ಲಿ ಅರಳಿತ್ತು ಕಲಾಲೋಕ : ಚಿತ್ರ ಸಂತೆಯ ಸೊಬಗಿನ ಝಲಕ್ ಇಲ್ಲಿದೆ

Next Post

Aero India 2025 | ಬೆಂಗಳೂರಿನಲ್ಲಿ ಫೆ.10ರಿಂದ ಏರೋ ಇಂಡಿಯಾ ಪ್ರದರ್ಶನ : ಸಾರ್ವಜನಿಕರಿಗೆ ಈ ದಿನಗಳಲ್ಲಿ ಮಾತ್ರ ಅವಕಾಶ

Next Post

Aero India 2025 | ಬೆಂಗಳೂರಿನಲ್ಲಿ ಫೆ.10ರಿಂದ ಏರೋ ಇಂಡಿಯಾ ಪ್ರದರ್ಶನ : ಸಾರ್ವಜನಿಕರಿಗೆ ಈ ದಿನಗಳಲ್ಲಿ ಮಾತ್ರ ಅವಕಾಶ

Nehru Planetarium

ನೆಹರು ತಾರಾಲಯದಿಂದ ಜ.10 ರಂದು ರಾತ್ರಿ ಆಕಾಶ ವೀಕ್ಷಣೆ ಅವಕಾಶ : ನೀವು ಭಾಗವಹಿಸಬೇಕೆ? ಹೀಗೆ ಮಾಡಿ

Please login to join discussion

Like Us on Facebook

Follow Us on Twitter

Recent News

ವಿಧಾನಸೌಧದ ಸಾಂದರ್ಭಿಕ ಚಿತ್ರ

“ವೈದ್ಯರಂತೆ ಶಿಕ್ಷಕರ ಹೆಸರಿನ ಮುಂದೆ ‘Tr’ ಗೌರವನಾಮ ಬಳಸಲು ಸರ್ಕಾರ ಅಧಿಕೃತ ಆದೇಶ”

September 6, 2026
Namma Metro Purple Line

Namma Metro News | ನಮ್ಮ ಮೆಟ್ರೋ ನೇರಳೆ, ಹಸಿರು ಮಾರ್ಗಕ್ಕೆ 4 ಹೊಸ ರೈಲುಗಳು ಶೀಘ್ರದಲ್ಲೇ ಸೇರ್ಪಡೆ

September 5, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ವಿಧಾನಸೌಧದ ಸಾಂದರ್ಭಿಕ ಚಿತ್ರ

“ವೈದ್ಯರಂತೆ ಶಿಕ್ಷಕರ ಹೆಸರಿನ ಮುಂದೆ ‘Tr’ ಗೌರವನಾಮ ಬಳಸಲು ಸರ್ಕಾರ ಅಧಿಕೃತ ಆದೇಶ”

September 6, 2026
Namma Metro Purple Line

Namma Metro News | ನಮ್ಮ ಮೆಟ್ರೋ ನೇರಳೆ, ಹಸಿರು ಮಾರ್ಗಕ್ಕೆ 4 ಹೊಸ ರೈಲುಗಳು ಶೀಘ್ರದಲ್ಲೇ ಸೇರ್ಪಡೆ

September 5, 2026

ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

September 4, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d