ತಿರುಪತಿ, ಜ.08 www.bengaluruwire.com : ಇಲ್ಲಿನ ವಿಷ್ಣು ನಿವಾಸದಲ್ಲಿ ವೈಕುಂಠ ದ್ವಾರ ಸರ್ವ ದರ್ಶನ ಟೋಕನ್ ವಿತರಣೆ ವೇಳೆ ಬುಧವಾರ ರಾತ್ರಿ ಕಾಲ್ತುಳಿತ ಸಂಭವಿಸಿ ನಾಲ್ವರು ಮೃತಪಟ್ಟು ಹಲವರು ಗಾಯಗೊಂಡಿದ್ದಾರೆ.
ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಗಾಯಗೊಂಡವರಿಗೆ ಪರಿಹಾರ ಕ್ರಮಗಳಿಗೆ ಆದೇಶ ನೀಡಿದ್ದಾರೆ. ಅಧಿಕಾರಿಗಳೊಂದಿಗೆ ದೂರವಾಣಿ ಮೂಲಕ ಮಾತನಾಡಿದ ನಾಯ್ಡು, ಘಟನೆಯಲ್ಲಿ ಗಾಯಗೊಂಡವರಿಗೆ ನೀಡುತ್ತಿರುವ ಚಿಕಿತ್ಸೆ ಕುರಿತು ವಿಚಾರಿಸಿದರು.
ಜನವರಿ 10ರಿಂದ ಆರಂಭವಾಗುವ 10 ದಿನಗಳ ವೈಕುಂಠ ದ್ವಾರ ದರ್ಶನಕ್ಕೆ ದೇಶ ವಿದೇಶಗಳಿಂದ ನೂರಾರು ಭಕ್ತರು ಆಗಮಿಸಿದ್ದರು. ಕಾಲ್ತುಳಿತದಲ್ಲಿ ಮೂವರು ಮಹಿಳೆಯರು ಮತ್ತು ಒಬ್ಬ ಪುರುಷ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಯೊಬ್ಬರು ಪಿಟಿಐಗೆ ಖಚಿತಪಡಿಸಿದ್ದಾರೆ.
ಏತನ್ಮಧ್ಯೆ, ಪೊಲೀಸರು ಒಂದೆರಡು ಭಕ್ತರಿಗೆ ಪ್ರಥಮ ಚಿಕಿತ್ಸೆ ನಿರ್ವಹಿಸುವ ಮತ್ತು ಗಾಯಗೊಂಡ ವ್ಯಕ್ತಿಗಳನ್ನು ಆಂಬ್ಯುಲೆನ್ಸ್‌ಗಳಲ್ಲಿ ಸ್ಥಳಾಂತರಿಸುವ ವಿಡಿಯೊಗಳು ವೈರಲ್ ಆಗಿವೆ. ಗಾಯಗೊಂಡವರನ್ನು ಹತ್ತಿರದ ಆಸ್ಪತ್ರೆಗೆ ಚಿಕಿತ್ಸೆಗಾಗಿ ಆಂಬುಲೆನ್ಸ್ ನಲ್ಲಿ ಕೊಂಡೊಯ್ಯಲಾಗಿದೆ.
“ಬೆಂಗಳೂರು ವೈರ್” ಪ್ರತಿ ಸುದ್ದಿ ನಿತ್ಯ ನಿರಂತರವಾಗಿ, ಉಚಿತವಾಗಿ ನಿಮಗೆ ಲಭ್ಯವಾಗಲಿದೆ. ಇದಕ್ಕಾಗಿ ಇಂದೇ ನಿಮಿಷದೊಳಗಾಗಿ Subscribe ಆಗಿ. ಈ ಡಿಜಿಟಲ್ ವೆಬ್ ನ್ಯೂಸ್ ಪೋರ್ಟೆಲ್ಲಿನ ಸೋಶಿಯಲ್ ಮೀಡಿಯಾ ಪೇಜ್ ಹಾಗೂ Google News ಗಳಿಗೆ ಉಚಿತವಾಗಿ Subscribe ಆಗಲು Facebook, Telegram, Twitter, Youtube, Whatsup Channel ಗೆ ಜಾಯಿನ್ ಆಗಲು ಇವುಗಳ ಲಿಂಕ್ ಮೇಲೆ ಕ್ಲಿಕ್ ಮಾಡಿ.