ಬೆಂಗಳೂರು: ಜ.18 www.bengaluruwire.com : ಯಲಹಂಕ ವಾಯುನೆಲೆಯಲ್ಲಿ “ಏರ್ ಶೋ-2025” ಪ್ರಯುಕ್ತ 23ನೇ ಜನವರಿಯಿಂದ 17ನೇ ಫೆಬ್ರವರಿವರೆಗೆ ವಾಯುನೆಲೆ ಸುತ್ತಮುತ್ತಲ ಪ್ರದೇಶದಲ್ಲಿ ಮಾಂಸ ಮಾರಾಟವನ್ನು ನಿಷೇಧಿಸಲಾಗಿದೆ ಎಂದು ಬಿಬಿಎಂಪಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಯಲಹಂಕ ಏರ್ ಪೋರ್ಸ್ ಸ್ಟೇಷನ್ ನಲ್ಲಿ ಫೆ.10 ರಿಂದ 14 ರವರೆಗೆ ಅಂತರರಾಷ್ಟ್ರೀಯ ಏರ್ ಶೋ ನಡೆಯಲಿದೆ. ಈ ಸಂಬಂಧ ಯಲಹಂಕ ವಲಯದ ಏರ್‌ಪೋರ್ಸ್ ಸ್ಟೇಷನ್ ನಿಂದ 13 ಕಿ.ಮೀ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಮಾಂಸದ ಅಂಗಡಿ ಹಾಗೂ ಮಾಂಸ ಮಾರಾಟದ ಉದ್ದಿಮೆಗಳನ್ನು ಮುಚ್ಚುವಂತೆ ಹಾಗೂ ಹೋಟೆಲ್ ಮತ್ತು ಡಾಬಾಗಳಲ್ಲಿ ಮಾಂಸಾಹಾರ ತಯಾರಿಕೆ ಮತ್ತು ಮಾರಾಟವನ್ನು ನಿಷೇಧಿಸಲಾಗಿದೆ ಎಂದು ಯಲಹಂಕ ವಲಯ ಜಂಟಿ ಆಯುಕ್ತರಾದ ಮೊಹ್ಮದ್ ನಯೀಮ್ ಮೊಮಿನ್ ರವರು ವಿವರಿಸಿದ್ದಾರೆ.
ಆದ್ದರಿಂದ ಜ.23 ರಿಂದ ಫೆ.17 ರವರೆಗೆ ಎಲ್ಲಾ ಮಾಂಸಾಹಾರ ಮಾರಾಟ ಉದ್ದಿಮೆಗಳನ್ನು ಮುಚ್ಚಲು ಸೂಚಿಸಲಾಗಿದೆ. ಇದನ್ನು ಉಲ್ಲಂಘಿಸಿದಲ್ಲಿ ಬಿಬಿಎಂಪಿ ಕಾಯ್ದೆ 2020 ಮತ್ತು ಏರ್ ಕ್ರಾಫ್ಟ್ ರೂಲ್ಸ್ 1937 ರ ರೂಲ್ 91 ರಂತೆ ಮತ್ತು ಇತರ ಕಾನೂನು ರೀತ್ಯಾ ಕ್ರಮ ಜರುಗಿಸಲಾಗುವುದು ಎಂದು ಆವರು ಎಚ್ಚರಿಕೆ ನೀಡಿದ್ದಾರೆ.
ಹೆಚ್ಚಿನ ಸಂಪರ್ಕಕ್ಕಾಗಿ ಬಿಬಿಎಂಪಿಯ ಯಲಹಂಕ ವಲಯದ ಪಶುಪಾಲನಾ ವಿಭಾಗದ ಸಹಾಯಕ ನಿರ್ದೇಶಕರಾದ ಡಾ.ಮನೋಹರ್ ಅವರನ್ನು ಮೊ.ಸಂ: 9845588227
“ಬೆಂಗಳೂರು ವೈರ್” ಪ್ರತಿ ಸುದ್ದಿ ನಿತ್ಯ ನಿರಂತರವಾಗಿ, ಉಚಿತವಾಗಿ ನಿಮಗೆ ಲಭ್ಯವಾಗಲಿದೆ. ಇದಕ್ಕಾಗಿ ಇಂದೇ ನಿಮಿಷದೊಳಗಾಗಿ Subscribe ಆಗಿ. ಈ ಡಿಜಿಟಲ್ ವೆಬ್ ನ್ಯೂಸ್ ಪೋರ್ಟೆಲ್ಲಿನ ಸೋಶಿಯಲ್ ಮೀಡಿಯಾ ಪೇಜ್ ಹಾಗೂ Google News ಗಳಿಗೆ ಉಚಿತವಾಗಿ Subscribe ಆಗಲು Facebook, Telegram, Twitter, Youtube, Whatsup Channel ಗೆ ಜಾಯಿನ್ ಆಗಲು ಇವುಗಳ ಲಿಂಕ್ ಮೇಲೆ ಕ್ಲಿಕ್ ಮಾಡಿ.