ಬೆಂಗಳೂರು, ಜ..19 www.bengaluruwire.com : ಕೈಗಾರಿಕಾ ತರಬೇತಿ ಉದ್ಯೋಗ ಇಲಾಖೆ ವತಿಯಿಂದ ಯುವನಿಧಿ ಯೋಜನೆ (Yuvanidhi Scheme)ಗೆ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಅರ್ಹ ಅಭ್ಯರ್ಥಿಗಳನ್ನು ನೋದಾಯಿಸಲು “ಯುವನಿಧಿ ವಿಶೇಷ ನೋಂದಣಿ ಅಭಿಯಾನ” (Yuvanidhi Special Registration Campaign) ಜನವರಿ 6 ರಿಂದ ಆರಂಭವಾಗಿದ್ದು 20ನೇ ತಾರೀಖು ಕಡೆಯ ದಿನವಾಗಿದೆ.
ಹೀಗೆ ನೋಂದಣಿ ಆಗುವ ಪದವೀಧರರಿಗೆ ಅಥವಾ ಸ್ನಾತಕೋತ್ತರ ಪದವೀಧರರಿಗೆ ಪ್ರತಿ ತಿಂಗಳು 3000 ರೂ. ಮತ್ತು ಡಿಪ್ಲೋಮಾ ತೇರ್ಗಡೆಯಾದವರಿಗೆ ತಿಂಗಳಿಗೆ 1500 ರೂ. ನಿರುದ್ಯೋಗ ಭತ್ಯೆಯವನ್ನು ನೇರ ನಗದು ವರ್ಗಾವಣೆ ಮೂಲಕ ಪಾವತಿಸಲಾಗುತ್ತಿದೆ.
ಯುವನಿಧಿ ಯೋಜನೆಗೆ ಬೆಂಗಳೂರು ವಿಶ್ವವಿದ್ಯಾಲಯ (Bangalore University), ಜ್ಞಾನಭಾರತಿ ಆವರಣ, ಬೆಂಗಳೂರು ನಗರ ವಿಶ್ವವಿದ್ಯಾಲಯ, ನಗರದ ಸೆಂಟ್ರಲ್ ಕಾಲೇಜು ಆವರಣ, ಪೀಣ್ಯದ ತುಮಕೂರು ರಸ್ತೆಯಲ್ಲಿನ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಆವರಣದಲ್ಲಿನ ಸಿಇಒ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವ ಉದ್ಯೋಗ ವಿನಿಮಯ ಕಛೇರಿ (Employment Exchange Office) ಮತ್ತು ಬೆಂಗಳೂರು ನಗರ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಯುವನಿಧಿ ಸಹಾಯವಾಣಿ (Help line) ಹಾಗೂ ನೋಂದಣಿ ಕೇಂದ್ರಗಳನ್ನು ತರೆಯಲಾಗಿದೆ. ಈ ಕೇಂದ್ರಗಳಲ್ಲಿ ಅಥವಾ ವೆಬ್ ಸೈಟ್ www.sevasindhugs.karnataka.gov.in ನಲ್ಲಿಯೂ ನೋಂದಾಯಿಸಿಕೊಳ್ಳಬಹುದಾಗಿದೆ.
ಯೋಜನೆಗೆ ಅರ್ಹತೆಯೇನು?:
ಕರ್ನಾಟದಲ್ಲಿ ವಾಸವಿರುವವರು (ಕರ್ನಾಟಕದಲ್ಲಿ ಕನಿಷ್ಠ 06 ವರ್ಷಗಳ ವರೆಗೆ ಪದವಿ / ಸ್ನಾತಕೋತ್ತರ ಪದವಿ ಮತ್ತು ಡಿಪ್ಲೋಮಾ ಅಧ್ಯಯನ ಮಾಡಿದವರು). ಸ್ವಯಂ ಉದ್ಯೋಗ ಕೈಗೊಳ್ಳದಿರುವ ಅಭ್ಯರ್ಥಿಗಳು ಮತ್ತು ಉನ್ನತ ವ್ಯಾಸಂಗ ಮುಂದುವರಿಸದೇ ಇರುವ ಅಭ್ಯರ್ಥಿಗಳಾಗಿರಬೇಕು.
ಅಭ್ಯರ್ಥಿಗಳು ನಿರುದ್ಯೋಗ ಭತ್ಯೆಯನ್ನು ಪಡೆಯಲು ತಿಂಗಳ 01 ರಿಂದ 25ನೇ ತಾರೀಖಿನೊಳಗೆ ನಿರುದ್ಯೋಗಿ ಎಂದು ಸ್ವಯಂ ಘೋಷಣೆಯನ್ನು ಆನ್ ಲೈನ್ ನಲ್ಲಿ ದಾಖಲು ಮಾಡುವುದು ಕಡ್ಡಾಯವಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ವೆಬ್ ಸೈಟ್ ಅಥವಾ ಸಹಾಯವಾಣಿ ಸಂಖ್ಯೆ: 1800-599-7154 ಗೆ ಸಂಪರ್ಕಿಸಬಹುದು ಎಂದು ಬೆಂಗಳೂರು ಉದ್ಯೋಗ ವಿನಿಮಯ ಕಛೇರಿಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
“ಬೆಂಗಳೂರು ವೈರ್” ಪ್ರತಿ ಸುದ್ದಿ ನಿತ್ಯ ನಿರಂತರವಾಗಿ, ಉಚಿತವಾಗಿ ನಿಮಗೆ ಲಭ್ಯವಾಗಲಿದೆ. ಇದಕ್ಕಾಗಿ ಇಂದೇ ನಿಮಿಷದೊಳಗಾಗಿ Subscribe ಆಗಿ. ಈ ಡಿಜಿಟಲ್ ವೆಬ್ ನ್ಯೂಸ್ ಪೋರ್ಟೆಲ್ಲಿನ ಸೋಶಿಯಲ್ ಮೀಡಿಯಾ ಪೇಜ್ ಹಾಗೂ Google News ಗಳಿಗೆ ಉಚಿತವಾಗಿ Subscribe ಆಗಲು Facebook, Telegram, Twitter, Youtube, Whatsup Channel ಗೆ ಜಾಯಿನ್ ಆಗಲು ಇವುಗಳ ಲಿಂಕ್ ಮೇಲೆ ಕ್ಲಿಕ್ ಮಾಡಿ.