ಬೆಂಗಳೂರು, ಜ.21 www.bengaluruwire.com : ಆಡಳಿತಾತ್ಮಕ ವಿಷಯಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಲಗೈ ಎಂದೇ ಪರಿಗಣಿಸಲ್ಪಡುವ ಹಿರಿಯ ಐಎಎಸ್ ಅಧಿಕಾರಿ ಲುತ್ಫುಲ್ಲಾ ಖಾನ್ ಅತೀಕ್ (LK Atheeq) ಅವರು ಇದೇ ಜ.31 ರಂದು ನಿವೃತ್ತಿ ಹೊಂದುತ್ತಿದ್ದು, ಅವರ ಸೇವಾವಧಿಯನ್ನು ನಿವೃತ್ತಿ ಹೊಂದುವ ಮುನ್ನವೇ ರಾಜ್ಯ ಸರ್ಕಾರ ವಿಸ್ತರಿಸಿದೆ.
ಹೊರಗುತ್ತಿಗೆಯಡಿ ಸರ್ಕಾರ ಸಿಎಂ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ (Chief Minister Additional Chief Secretary) ಯಾಗಿ ಫೆ.1ರಿಂದ ಜಾರಿಗೆ ಬರುವಂತೆ ನೇಮಕ ಮಾಡಿದ್ದು, ಮುಂದಿನ ಆದೇಶದವರೆಗೆ ಅದೇ ಹುದ್ದೆಯಲ್ಲಿ ಮುಂದುವರೆಯಲಿದ್ದಾರೆ. 1991ನೇ ಬ್ಯಾಚಿನ ಐಎಎಸ್ ಅಧಿಕಾರಿಯಾಗಿರುವ ಎಲ್.ಕೆ.ಅತೀಕ್ ಅವರಿಗೆ ನಿವೃತ್ತಿ ನಂತರ ಹೊರಗುತ್ತಿಗೆಯಡಿ ಎಸಿಎಸ್ ಹುದ್ದೆ ನೀಡಿ ಅವರ ಸೇವೆಯನ್ನು ವಿಸ್ತರಿಸಿರುವುದು ಅಪರೂಪದ ಪ್ರಕರಣವಾಗಿದೆ ಎನ್ನಲಾಗುತ್ತಿದೆ.
ಅವರು ಪ್ರಸ್ತುತ ಮುಖ್ಯಮಂತ್ರಿಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮತ್ತು ಹಣಕಾಸು ಇಲಾಖೆಯ ಪ್ರಧಾನ ಕಾರ್ಯದರ್ಶಿ ಆಗಿದ್ದಾರೆ.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಲ್ಲಿ ಸರ್ಕಾರದ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿರುವ ರಿತೇಶ್ ಕುಮಾರ್ ಸಿಂಗ್ ಅವರನ್ನು ಹಣಕಾಸು ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ವರ್ಗಾಯಿಸಲಾಗಿದೆ. ಹೆಚ್ಚುವರಿಯಾಗಿ, ಸಿಂಗ್ ಅವರಿಗೆ ಹಣಕಾಸು ಇಲಾಖೆಯ ವಿಶೇಷ ಕರ್ತವ್ಯ ಅಧಿಕಾರಿಯೆಂದು ಹೊಸದಾಗಿ ಸ್ಥಾಪಿಸಲಾದ ತಾತ್ಕಾಲಿಕ ಹುದ್ದೆಯ ಏಕಕಾಲಿಕ ಉಸ್ತುವಾರಿಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ನೀಡಲಾಗಿದೆ.
“ಬೆಂಗಳೂರು ವೈರ್” ಪ್ರತಿ ಸುದ್ದಿ ನಿತ್ಯ ನಿರಂತರವಾಗಿ, ಉಚಿತವಾಗಿ ನಿಮಗೆ ಲಭ್ಯವಾಗಲಿದೆ. ಇದಕ್ಕಾಗಿ ಇಂದೇ ನಿಮಿಷದೊಳಗಾಗಿ Subscribe ಆಗಿ. ಈ ಡಿಜಿಟಲ್ ವೆಬ್ ನ್ಯೂಸ್ ಪೋರ್ಟೆಲ್ಲಿನ ಸೋಶಿಯಲ್ ಮೀಡಿಯಾ ಪೇಜ್ ಹಾಗೂ Google News ಗಳಿಗೆ ಉಚಿತವಾಗಿ Subscribe ಆಗಲು Facebook, Telegram, Twitter, Youtube, Whatsup Channel ಗೆ ಜಾಯಿನ್ ಆಗಲು ಇವುಗಳ ಲಿಂಕ್ ಮೇಲೆ ಕ್ಲಿಕ್ ಮಾಡಿ.