Monday, June 15, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

  • Bengaluru Focus

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಮೆಟ್ರೋ ಪ್ರಯಾಣ ದರ ಹೆಚ್ಚಳ ಸಮಿತಿ ತೀರ್ಮಾನ ; ಸರ್ಕಾರ ಹಸ್ತಕ್ಷೇಪ ಇಲ್ಲ : ಡಿಸಿಎಂ ಡಿ.ಕೆ.ಶಿವಕುಮಾರ್

by Bengaluru Wire Desk
February 6, 2025
in Bengaluru Focus
Reading Time: 2 mins read
0

ಬೆಂಗಳೂರು, ಫೆ.06 www.bengaluruwire.com : “ಮೆಟ್ರೋ ಪ್ರಯಾಣ ದರ ಹೆಚ್ಚಳದ ಬಗ್ಗೆ ಬಿಎಂಆರ್ ಸಿಎಲ್ ತೀರ್ಮಾನ ಮಾಡುತ್ತದೆ. ಇದಕ್ಕಾಗಿ ನ್ಯಾಯಮೂರ್ತಿ ನೇತೃತ್ವದಲ್ಲಿ ಕೇಂದ್ರದ ಸಮಿತಿ ರಚಿಸಲಾಗಿದ್ದು, ಸರ್ಕಾರ ಇದರಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು.

ಬೆಂಗಳೂರು ಅಭಿವೃದ್ದಿಗೆ ಸಂಬಂಧಿಸಿದ ಇಲಾಖೆಗಳು, ಪ್ರಾಧಿಕಾರದ ಅಧಿಕಾರಿಗಳ ಜೊತೆ ಗುರುವಾರ ನಗರ ಪ್ರದಕ್ಷಿಣೆ ನಡೆಸಿದ ನಂತರ ಬಿಎಂಆರ್ ಸಿಎಲ್ ಕಚೇರಿಯಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಶಿವಕುಮಾರ್ ಅವರು ಮಾತನಾಡಿದರು.

ಮೆಟ್ರೋ ಪ್ರಯಾಣ ಟಿಕೆಟ್ ಹಾಗೂ ಕುಡಿಯುವ ನೀರಿನ ದರ ಹೆಚ್ಚಳದ ಬಗ್ಗೆ ಕೇಳಿದಾಗ, “ಮೆಟ್ರೋ ಪ್ರಯಾಣ ದರ ಏರಿಕೆ ಬಗ್ಗೆ ಸಮಿತಿ ವರದಿ ಸಲ್ಲಿಕೆ ಮಾಡಿದೆ. ಈಗಾಗಲೇ ನಿಗಮವು ಒಂದು ತೀರ್ಮಾನ ತೆಗೆದುಕೊಂಡಿದೆ. ನಾನು ಆ ವರದಿಯಲ್ಲಿ ಏನಿದೆ ಎಂದು ಮೂಗು ತೂರಿಸಲು ಹೋಗುವುದಿಲ್ಲ” ಎಂದರು.

ನೀರಿನ ದರ ಏರಿಕೆ ಬಗ್ಗೆ ಸಂಪುಟದಲ್ಲಿ ಚರ್ಚೆ :

ನೀರಿನ ದರ ಏರಿಕೆ ಬಗ್ಗೆ ಕೇಳಿದಾಗ, “ಕುಡಿಯುವ ನೀರಿನ ದರ ಏರಿಕೆ ವಿಚಾರವನ್ನು ಸಚಿವ ಸಂಪುಟ ಸಭೆಯ ಮುಂದೆ ಇಡಲಾಗುವುದು. ನೀರಿನ ದರ ಏರಿಕೆಯಾಗಿ 14 ವರ್ಷಗಳಾಗುತ್ತಾ ಬಂದಿದೆ. ಮಂಡಳಿಗೆ ವರ್ಷಕ್ಕೆ ₹ 1 ಸಾವಿರ ಕೋಟಿ ನಷ್ಟವಾಗುತ್ತಿರುವ ಕಾರಣಕ್ಕೆ ದರ ಏರಿಕೆ ಅನಿವಾರ್ಯವಾಗಿದೆ. ಬಿಡ್ಲ್ಯೂ ಎಸ್ ಎಸ್ ಬಿ ಅವರು ಈಗಾಗಲೇ ವರದಿ ನೀಡಿದ್ದು ಇದನ್ನು ಕ್ಯಾಬಿನೆಟ್ ಮುಂದೆ ಇಡಲಾಗುವುದು” ಎಂದು ಹೇಳಿದರು.

ವಿದ್ಯುತ್ ದರ ಏರಿಕೆ ವಿಚಾರವಾಗಿ ಕೇಳಿದಾಗ, ಕಳೆದ ಬಾರಿ ವಿದ್ಯುತ್ ದರ ಕಡಿಮೆ ಮಾಡಿದ್ದೇವೆ. ಇದನ್ನು ಒಮ್ಮೆಯೂ ಮಾಧ್ಯಮಗಳು ತೋರಿಸುವುದಿಲ್ಲ. ಕೇವಲ ದರ ಏರಿಕೆ ಬಗ್ಗೆ ಮಾತ್ರ ಸುದ್ದಿ ಮಾಡುತ್ತೀರಿ” ಎಂದರು.

ಸಂಚಾರ ದಟ್ಟಣೆ ನಿವಾರಣೆಗೆ ಡಬಲ್ ಡೆಕ್ಕರ್ :

“ಬೆಂಗಳೂರು ನಗರದ ಸಂಚಾರ ದಟ್ಟಣೆ ನಿವಾರಣೆಗೆ ಕ್ರಮ, ನೂತನ ಮೆಟ್ರೋ ಮಾರ್ಗಗಳು ಹೋಗುವ ಕಡೆ ಡಬಲ್ ಡೆಕ್ಕರ್ ನಿರ್ಮಾಣ ಸೇರಿದಂತೆ ನಗರ ಸೌಂದರ್ಯೀಕರಣಕ್ಕೆ ಬೇಕಾದ ಕ್ರಮಗಳನ್ನು ತೆಗೆದುಕೊಳ್ಳಲು ತೀರ್ಮಾನ ತೆಗೆದುಕೊಳ್ಳಲಾಗಿದೆ” ಎಂದು ತಿಳಿಸಿದರು.

ಗುರುಗುಂಟೆಪಾಳ್ಯದ ಬಳಿ ಅಂಡರ್ ಪಾಸ್ ಹಾಗೂ ಡಬಲ್ ಡೆಕರ್ ನಿರ್ಮಾಣದ ಬಗ್ಗೆ ನಕ್ಷೆಯಲ್ಲಿನ ಮಾಹಿತಿಯನ್ನು ಡಿಸಿಎಂಗೆ ವಿವರಿಸುತ್ತಿರುವ ಮೆಟ್ರೊ ಎಂಡಿ ಮಹೇಶ್ವರ ರಾವ್. ಈ ವೇಳೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಜೊತೆಗಿದ್ದರು.

“ಹೆಬ್ಬಾಳ, ಗೊರಗುಂಟೆಪಾಳ್ಯ, ಬಿಇಎಲ್ ಕಡೆಯ ರಸ್ತೆ, ಲೊಟ್ಟೆಗೊಲ್ಲಹಳ್ಳಿ, ಸುಮನಹಳ್ಳಿ ಭಾಗದಲ್ಲಿ ಬಿಬಿಎಂಪಿ ಮುಖ್ಯ ಆಯುಕ್ತರು, ಬಿಎಂಆರ್ ಸಿಎಲ್, ಬಿಡಿಎ ಕಮಿಷನರ್ ಗಳು ಒಟ್ಟಿಗೆ ನಗರ ಪ್ರದಕ್ಷಿಣೆ ಹಾಕಿ ಸಂಚಾರ ದಟ್ಟಣೆ ಹೆಚ್ಚಿರುವ ಕಡೆ ಅನುಕೂಲವಾಗುವಂತೆ ಎಲ್ಲೆಲ್ಲಿ ಮೇಲ್ಸೇತುವೆ, ಅಂಡರ್ ಪಾಸ್ ಗಳು, ಸುರಂಗ ರಸ್ತೆಗಳು ಬರಬೇಕು ಎಂಬ ಬಗ್ಗೆ ಯೋಜನೆ ಹಾಕಿಕೊಂಡಿದ್ದೇವೆ” ಎಂದು ವಿವರಿಸಿದರು.

“ಈ ಹಿಂದೆಯೇ ಅಧಿಕಾರಿಗಳಿಗೆ ಈ ಬಗ್ಗೆ ಸಮೀಕ್ಷೆ ನಡೆಸುವಂತೆ ಸೂಚನೆ ನೀಡಲಾಗಿತ್ತು. ಅವರು ವರದಿ ತಯಾರು ಮಾಡಿದ್ದರು. ಆದರೆ ನಾನೇ ಖುದ್ದಾಗಿ ಕಣ್ಣಾರೇ ನೋಡಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳು, ತಾಂತ್ರಿಕ ಸಿಬ್ಬಂದಿಗಳ ಜೊತೆ ನಗರ ಪ್ರದಕ್ಷಿಣೆ ಮಾಡಿದೆ. ಈ ವೇಳೆ ಎಲ್ಲೆಲ್ಲಿ ಭೂ ಸ್ವಾಧೀನ ಮಾಡಬೇಕು ಎನ್ನುವ ಬಗ್ಗೆಯೂ ಚರ್ಚೆ ಮಾಡಿದ್ದೇನೆ” ಎಂದು ಉಪಮುಖ್ಯಮಂತ್ರಿ ಡಿಕೆಶಿ ತಿಳಿಸಿದರು.

ನಾಯಂಡಹಳ್ಳಿಯಲ್ಲಿ ಡಬಲ್ ನಿರ್ಮಾಣ ಸಂಬಂಧ ಡಿಸಿಎಂ ಸ್ಥಳ ಪರಿಶೀಲಿಸಿದರು.

“ಭವಿಷ್ಯದಲ್ಲಿ ಮೆಟ್ರೋ ನಿಲ್ದಾಣಗಳು ಇರುವ ಕಡೆ ಹೆಚ್ಚಿನ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಬೇಕು. ಪ್ರಸ್ತುತ ಅನೇಕ ಕಡೆ ರಸ್ತೆ ಬದಿ, ಖಾಸಗಿ ಜಾಗಗಳಲ್ಲಿ ವಾಹನಗಳನ್ನು ನಿಲ್ಲಿಸಿ ಮೆಟ್ರೋ ಪ್ರಯಾಣ ಮಾಡುತ್ತಿದ್ದಾರೆ. ಇದನ್ನು ತಪ್ಪಿಸಲು ಸೂಚನೆ ನೀಡಲಾಗಿದೆ.  ಮೂರನೇ ಹಂತದ ಮೆಟ್ರೋ ಮಾರ್ಗ ಅನುಷ್ಠಾನದ ವೇಳೆ ಡಬಲ್ ಡೆಕ್ಕರ್ ವ್ಯವಸ್ಥೆ ಇರಲೇಬೇಕು ಎನ್ನುವ ಪ್ರಮುಖ ತೀರ್ಮಾನ ತೆಗೆದುಕೊಳ್ಳಲಾಗಿದೆ”.

“ದಿನ ಕಳೆದಂತೆ ಮುಂದಕ್ಕೆ ರಸ್ತೆಗಳನ್ನು ಅಗಲೀಕರಣ ಮಾಡಲು ಕಷ್ಟವಾಗುತ್ತದೆ. ಜೊತೆಗೆ ಭೂ ಸ್ವಾಧೀನ ಪರಿಹಾರವು ಹೆಚ್ಚಳವಾದ ಕಾರಣಕ್ಕೆ ಈ ಪ್ರಮುಖ ತೀರ್ಮಾನ ಮಾಡಲಾಗಿದೆ. ನನಗೆ ಏರ್ ಪೋರ್ಟ್ ರಸ್ತೆಯ ಮೆಟ್ರೋ ಮಾರ್ಗವನ್ನು ಈ ರೀತಿ ಮಾಡಬೇಕು ಎನ್ನುವ ಆಲೋಚನೆಯಿತ್ತು. ಈಗಾಗಲೇ ಪಿಲ್ಲರ್ ಗಳನ್ನು ಹಾಕಿರುವ ಕಾರಣಕ್ಕೆ ಸಾಧ್ಯವಿಲ್ಲ” ಎಂದು ಹೇಳಿದರು.

ಮೆಟ್ರೋ ಪಿಲ್ಲರ್ ಗಳಲ್ಲಿ ಜಾಹೀರಾತಿಗೆ ಅವಕಾಶ :

“ಬ್ರಾಂಡ್ ಬೆಂಗಳೂರು ಯೋಜನೆಯಡಿ ನಗರವನ್ನು ಸೌಂದರ್ಯೀಕರಣ ಮಾಡುವ ಸಲುವಾಗಿ ಬಿಬಿಎಂಪಿ, ಬಿಎಂಆರ್ ಸಿಎಲ್ ಒಟ್ಟಿಗೆ ಸೇರಿ ತೀರ್ಮಾನ ಮಾಡಬೇಕು ಎಂದು ಸೂಚನೆ ನೀಡಲಾಗಿದೆ. ಜೊತೆಗೆ ಮೆಟ್ರೋ ಪಿಲ್ಲರ್ ಗಳಲ್ಲಿ ಜಾಹೀರಾತಿಗೆ ಅವಕಾಶ ಮಾಡಿಕೊಡಬೇಕು. ಎರಡೂ ಸಂಸ್ಥೆಗಳು ಶೇ 50:50 ಅನುಪಾತದಲ್ಲಿ ಕೆಲಸ ಮಾಡಬೇಕು, ಆದಾಯವನ್ನು ಇದೇ ಮಾದರಿಯಲ್ಲಿ ಹಂಚಿಕೊಳ್ಳಬೇಕು ಎಂದು ಸೂಚಿಸಲಾಗಿದೆ” ಎಂದರು.

ಬೆಂಗಳೂರು ಅಭಿವೃದ್ಧಿ; ಅನುದಾನದ ಬಗ್ಗೆ ಸಿಎಂಗೆ ವರದಿ ಸಲ್ಲಿಕೆ :

“ಹೆಬ್ಬಾಳ ಮೇಲ್ಸೆತುವೆ ಬಳಿ ಇರುವ ಬಿಡಿಎ ಜಾಗದಲ್ಲಿ ಅಲ್ಲಿ ಪರ್ಯಾಯ ರಸ್ತೆ ಮಾಡಲಾಗುತ್ತಿದೆ. ಇದು ಏಪ್ರಿಲ್ 30 ಕ್ಕೆ ಕಾಮಗಾರಿ ಮುಗಿಸಬೇಕು ಮೇ ಹೊತ್ತಿಗೆ ಉದ್ಘಾಟನೆಯಾಗಬೇಕು ಎಂದು ಸೂಚಿಸಲಾಗಿದೆ. ಈ ಕಾರಣಕ್ಕೆ ಗುತ್ತಿಗೆದಾರರನ್ನು ಕರೆಸಿ ಸೂಚನೆ ನೀಡಲಾಗಿದೆ. 

ಹೆಬ್ಬಾಳ ಬಳಿ ಫ್ಲೈಓವರ್ ಕಾಮಗಾರಿ ಪರಿಶೀಲನೆ ನಡೆಸುತ್ತಿರುವ ಡಿಸಿಎಂ. ಬಿಬಿಎಂಪಿ ವಿಶೇಷ ಆಯುಕ್ತ ಮುನೀಶ್ ಮೌದ್ಗಿಲ್, ಬಿಡಿಎ ಎಂಜಿನಿಯರ್ ಸದಸ್ಯ ಶಾಂತರಾಜಣ್ಣ ಜೊತೆಗಿದ್ದರು.

ತುಮಕೂರಿನಿಂದ ಕೆ.ಆರ್ ಪುರಂಗೆ ಹೋಗುವ ರಸ್ತೆ ಬಳಿ ಸಂಚಾರ ದಟ್ಟಣೆಯನ್ನು ತಪ್ಪಿಸಲು ಅಂಡರ್ ಪಾಸ್ ನಿರ್ಮಾಣಕ್ಕೆ ಬಿಡಿಎ, ಮೆಟ್ರೋ, ಬಿಬಿಎಂಪಿ ಸೇರಿ ಅಲ್ಲಿ ಒಗ್ಗಟ್ಟಿನಿಂದ ಕೆಲಸ ಮಾಡಬೇಕು ಎಂದು ತಿಳಿಸಲಾಗಿದೆ. ಈ ಕಾಮಗಾರಿಯನ್ನು ಬಿಡಿಎ ನಿರ್ವಹಿಸಲಿದೆ. ರಾಜ್ಯ ಬಜೆಟ್ ಇರುವ ಕಾರಣಕ್ಕೆ ಬೆಂಗಳೂರು ಅಭಿವೃದ್ದಿ ಹಾಗೂ ನೀರಾವರಿ ಇಲಾಖೆಗೆ ಬೇಕಾದ ಅನುದಾನಗಳ ಬಗ್ಗೆ ಅಧಿಕಾರಿಗಳ ಬಳಿ ಚರ್ಚೆ ಮಾಡಿ ಶುಕ್ರವಾರ ಮುಖ್ಯಮಂತ್ರಿಗಳಿಗೆ ನೀಡಲಾಗುವುದು” ಎಂದು ಹೇಳಿದರು.

ಒಟ್ಟು ಎಷ್ಟು ಕಡೆ ಡಬಲ್ ಡೆಕ್ಕರ್ ನಿರ್ಮಾಣ ಮಾಡಲಾಗುವುದು ಎಂದು ಕೇಳಿದಾಗ, “ಹೊಸದಾಗಿ ನಿರ್ಮಾಣ ಮಾಡುವ ಎಲ್ಲಾ ಮೆಟ್ರೋ ಮಾರ್ಗಗಳಲ್ಲಿ ಡಬಲ್ ಡೆಕ್ಕರ್ ನಿರ್ಮಾಣ ಮಾಡಲಾಗುವುದು. ಸುಮಾರು 40 ಕಿ.ಮೀ ಮಾರ್ಗದಲ್ಲಿ ನಿರ್ಮಾಣ ಮಾಡುವ ಆಲೋಚನೆಯಿದೆ. ನಾವು ಇಂದಿಗೆ ಮಾತ್ರ ಯೋಚನೆ ಮಾಡುತ್ತಿಲ್ಲ. ಮುಂದಿನ 30 – 40 ವರ್ಷದ ಭವಿಷ್ಯವನ್ನು ಇಟ್ಟುಕೊಂಡು ಆಲೋಚನೆ ಮಾಡಲಾಗುವುದು. ಇದರ ಖರ್ಚು ವೆಚ್ಚವನ್ನು ಶೇ.50: 50 ಅನುಪಾತದಲ್ಲಿ ಬಿಬಿಎಂಪಿ, ಬಿಎಂಆರ್ ಸಿಎಲ್ ವಹಿಸಿಕೊಳ್ಳುವುದು” ಎಂದರು.

ಡಬಲ್ ಡೆಕ್ಕರ್ ಗೆ ₹ 9,800 ಕೋಟಿ ರೂ. ವೆಚ್ಚ :

“ಡಬಲ್ ಡೆಕ್ಕರ್ ಮಾಡಲು ಹೆಚ್ಚುವರಿ ₹ 9,800 ಕೋಟಿ ವೆಚ್ಚವಾಗುತ್ತದೆ. ಈಗ ಪಶ್ಚಿಮ ಭಾಗದಲ್ಲಿ ಮಾತ್ರ ಮಾಡಲಾಗುತ್ತಿದೆ. ಈಗಾಗಲೇ ರಾಗಿಗುಡ್ಡ ಭಾಗದಲ್ಲಿ ಈ ಪ್ರಯೋಗ ನಡೆಸಿ ಯಶಸ್ವಿಯಾಗಿದ್ದೇವೆ. ಇನ್ನೂ ಒಂದಷ್ಟು ಸುಧಾರಣೆಗಳನ್ನು ಮಾಡಿಕೊಳ್ಳಬೇಕಿದೆ. ಎಲ್ಲವನ್ನು ಬಗೆಹರಿಸಿ ಮುಂದುವರೆಯಲಾಗುವುದು” ಎಂದರು.

ಮೆಟ್ರೋ ಹಳಿಗೆ ಹಾರಿ ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಿರುವ ಬಗ್ಗೆ ಕೇಳಿದಾಗ, “ಎರಡು ಪ್ರಕರಣಗಳು ನಡೆದಿದ್ದವು” ಎಂದರು. 

ಬಜೆಟ್ ಅಲ್ಲಿ ಗ್ರೇಟರ್ ಬೆಂಗಳೂರು ಘೋಷಣೆ ಮಾಡಲಾಗುವುದೇ ಎಂದು ಕೇಳಿದಾಗ, “ಈ ವಿಚಾರದ ಬಗ್ಗೆ ಕ್ಯಾಬಿನೆಟಲ್ಲಿ ಬಿಡದಿ ಬಳಿ ಟೌನ್ ಶಿಪ್ ನಿರ್ಮಾಣ ಮಾಡಲು ಒಪ್ಪಿಗೆ ನೀಡಲಾಗಿದೆ ಎಂದು ಕಾನೂನು ಸಚಿವರು ತಿಳಿಸಿದ್ದಾರೆ. ಈಗಾಗಲೇ ಸಾರ್ವಜನಿಕರ ಸಲಹೆ, ಸೂಚನೆಗಳನ್ನು ಪಡೆಯಲು ಆಹ್ವಾನ ನೀಡಲಾಗಿದೆ.  ರಿಜ್ವಾನ್ ಅವರ ಅಧ್ಯಕ್ಷೆತಯಲ್ಲಿ ಸರ್ವಪಕ್ಷಗಳ ಶಾಸಕರ ಅಭಿಪ್ರಾಯ ಪಡೆಯಲಾಗಿದೆ. ಬೆಂಗಳೂರಿನ ಎಲ್ಲಾ ಶಾಸಕರ ಸಲಹೆ ಪಡೆಯಿರಿ ಎಂದು ನಾನೇ ಹೇಳಿದ್ದೇನೆ. ಮಾಧ್ಯಮಗಳ ಸಲಹೆಯನ್ನೂ ಸಹ ಪಡೆಯಲಾಗುವುದು” ಎಂದು ಹೇಳಿದರು.

ಎರಡನೇ ವಿಮಾನ ನಿಲ್ದಾಣದ ಬಗ್ಗೆ ಕೇಳಿದಾಗ, “ಇದರ ಬಗ್ಗೆ ಚರ್ಚೆ ನಡೆಯುತ್ತಿದೆ. ನನಗೆ ಮತ್ತು ಮುಖ್ಯಮಂತ್ರಿಗಳಿಗೆ ವರದಿ ಸಲ್ಲಿಕೆಯಾಗುತ್ತದೆ. ನಂತರ ವಿಮಾನ ನಿಲ್ದಾಣ ಪ್ರಾಧಿಕಾರದ ಅಭಿಪ್ರಾಯ ಕೇಳಲಾಗುವುದು. ಅವರ ತೀರ್ಮಾನ ನಂತರ ಮಾಹಿತಿ ನೀಡಲಾಗುವುದು” ಎಂದು ತಿಳಿಸಿದರು.

ಬಿಡದಿ ಬಳಿ ಎರಡನೇ ವಿಮಾನ ನಿಲ್ದಾಣ ನಿರ್ಮಾಣವಾಗಲಿದೆ ಎನ್ನುವ ಬಗ್ಗೆ ಕೇಳಿದಾಗ, “ಇದರ ಬಗ್ಗೆ ನನ್ನ ಬಳಿ ಮಾಹಿತಿಯಿಲ್ಲ” ಎಂದರು.

ವ್ಯವಸ್ಥಿತ ನಗರ ಮಾಡುವ ಗುರಿ :

ಬೆಂಗಳೂರಿನ ಬಗ್ಗೆ ಡಿ.ಕೆ.ಶಿವಕುಮಾರ್ ಅವರ ಪರಿಕಲ್ಪನೆ ಏನು ಎಂದು ಕೇಳಿದಾಗ, “ಬೆಂಗಳೂರನ್ನು ಇಡೀ ವಿಶ್ವ ನೋಡುತ್ತಿದೆ. ಆದರೆ ಇದು ವ್ಯವಸ್ಥಿತವಾದ ನಗರವಾಗಲಿಲ್ಲ. ಆದ ಕಾರಣ ಇದನ್ನು ಇನ್ನೂ ವ್ಯವಸ್ಥಿತ ನಗರವನ್ನಾಗಿ ಮಾಡುವುದೇ ನನ್ನ ಗುರಿ. ಎಲ್ಲೆಲ್ಲಿ ಸಂಚಾರ ದಟ್ಟಣೆ ಕಡಿಮೆ ಮಾಡಬಹುದೋ ಅದು ನನ್ನ ಗುರಿ. ಭವಿಷ್ಯದ ಬೆಂಗಳೂರು ಉತ್ತಮವಾಗಿರಬೇಕು ಎಂಬುದು ನನ್ನ ಕನಸು” ಎಂದರು.

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಜಾರಿಗೆ ಬರುವುದೇ ಎಂದು ಕೇಳಿದಾಗ, “ಈಗಾಗಲೇ ಇದರ ಬಗ್ಗೆ ಜಂಟಿ ಸದನ ಸಮಿತಿ ಚರ್ಚೆ ನಡೆಸುತ್ತಿದೆ. ಬಿಲ್ ಅನ್ನು ಸದನದಲ್ಲಿ ಮಂಡಿಸಲಾಗಿದೆ. ಮಾಧ್ಯಮಗಳು ಚರ್ಚೆ ನಡೆಸಿ” ಎಂದರು. 

ಟನಲ್ ರಸ್ತೆಯ ಬಗ್ಗೆ ಹೆಚ್ಚಿನ ವಿರೋಧ ವ್ಯಕ್ತವಾಗುತ್ತಿರುವ ಬಗ್ಗೆ ಕೇಳಿದಾಗ, “ಯಾವುದೇ ಟೀಕೆಗಳು ಇಲ್ಲದೇ ನೀವು ಬೆಳೆಯಲು ಸಾಧ್ಯವಿಲ್ಲ. ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ” ಎಂದರು.

ಬೆಂಗಳೂರಿನಲ್ಲಿ ಅನಧಿಕೃತ 17 ಲಕ್ಷ ಆಸ್ತಿಗಳು ಇರುವ ಬಗ್ಗೆ ಕೇಳಿದಾಗ, “25 ಲಕ್ಷ ಖಾತೆಗಳನ್ನು ತಯಾರು ಮಾಡಲಾಗಿದೆ. ಇನ್ನೂ 7 ಲಕ್ಷ ಖಾತೆಗಳನ್ನು ನೀಡುವುದು ಬಾಕಿಯಿದೆ. ಇದಕ್ಕೂ ಒಂದು ವ್ಯವಸ್ಥೆ ಮಾಡಲಾಗಿದ್ದು ಈಗ ಅದನ್ನು ಬಹಿರಂಗಗೊಳಿಸುವುದಿಲ್ಲ” ಎಂದು ಹೇಳಿದರು.

WhatsApp Join our WhatsApp Channel
Previous Post

ಬೆಂಗಳೂರು : ಬಾನಲ್ಲಿ ಮಾರ್ಧನಿಸಲಿವೆ ಯುದ್ಧ ವಿಮಾನಗಳು ; Airshow 2025ಕ್ಕೆ ಕ್ಷಣಗಣನೆ

Next Post

ಹಳೆಯ ಕೊಲೆ ಪ್ರಕರಣದಲ್ಲಿ ಡಾರ್ಜಿಲಿಂಗ್ ನಿಂದ ಬೆಂಗಳೂರಿಗೆ ಬಂದು ತಲೆಮರೆಸಿಕೊಂಡಿದ್ದ ಕೊಲೆ ಆರೋಪಿ ಬಂಧಿಸಿದ ಸಿಬಿಐ

Next Post
ಸಿಬಿಐ ಲಾಂಛನ (ಸಾಂದರ್ಭಿಕ  ಚಿತ್ರ)

ಹಳೆಯ ಕೊಲೆ ಪ್ರಕರಣದಲ್ಲಿ ಡಾರ್ಜಿಲಿಂಗ್ ನಿಂದ ಬೆಂಗಳೂರಿಗೆ ಬಂದು ತಲೆಮರೆಸಿಕೊಂಡಿದ್ದ ಕೊಲೆ ಆರೋಪಿ ಬಂಧಿಸಿದ ಸಿಬಿಐ

Mahakumbh 2025 | BW- 5 ಮಹಾಕುಂಭ ಮೇಳ ಸಂದರ್ಭದಲ್ಲಿ ಶ್ರೀ ಕಾಶಿ ವಿಶ್ವನಾಥನ ಸನ್ನಿಧಿಯ ದಿವ್ಯಾನುಭವ!!

Please login to join discussion

Like Us on Facebook

Follow Us on Twitter

Recent News

ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

June 14, 2026

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

June 14, 2026

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group