ಯಲಹಂಕ ವಾಯುನೆಲೆ (ಬೆಂಗಳೂರು) ಫೆ.10 www.bengaluruwire.com : ನಗರದಲ್ಲಿ ಇಂದಿನಿಂದ ಯುದ್ಧ ವಿಮಾನಗಳ ಸ್ವಚ್ಛಂದ ಹಾರಾಟ ಆಗಸದಲ್ಲಿ ದಾಂಗುಡಿಯಿಟ್ಟಿದ್ದು, ಫೆ.14ರ ತನಕ ಮುಂದುವರೆಯಲಿದೆ.
ಉದ್ಘಾಟನಾ ಕಾರ್ಯಕ್ರಮದ ಭಾಗವಾಗಿ ಯುದ್ಧ ವಿಮಾನಗಳ ಆಕರ್ಷಕ ಕಸರತ್ತು ಎಲ್ಲರನ್ನು ರಂಜಿಸಿತು. ಆಕಾಶಗಂಗೆ ತಂಡದಿಂದ ಪ್ಯಾರಾಚೂಟ್ ಗಳಿಂದ ಸೈನಿಕರು ವಾಯುನೆಲೆಯ ರನ್ ವೇ ಬಳಿ ತ್ರಿವರ್ಣ ಧ್ವಜ ಹೊತ್ತು ಇಳಿದರು. ತೇಜಸ್ ಯುದ್ಧವಿಮಾನ ಫಾರ್ಮೇಶನ್, ಸುಖೋಯ್ ಎಂಕೆ35 ಆಗಸದಲ್ಲಿ ತ್ರಿಶೂಲ್ ವಿನ್ಯಾಸ ಮೂಡಿಸಿತು, ದ್ರೋಣಿಯರ್, ಜಾಗ್ವಾರ್ ಯುದ್ಧ ವಿಮಾನ, ಹಗು ಯುದ್ಧ ಹೆಲಿಕಾಪ್ಟರ್, ಜಾಗ್ವಾರ್ ಫಾರ್ಮೇಶನ್, ಎಂಬ್ರಿಯರ್ ಸಂವಹನ ವಿಮಾನ ಸೇರಿದಂತೆ ಹಲವು ವಿಮಾನ, ಹೆಲಿಕಾಪ್ಟರ್ ಗಳು ನೀಲಿ ಆಗಸದಲ್ಲಿ ಪ್ರದರ್ಶನ ತೋರಿದವು.