Saturday, March 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

    Video News | ದೇವರಿಗೆ ಕೈಮುಗಿದು ‘ಕೈಕೊಟ್ಟ’ ಕಳ್ಳರು: ದೇವಸ್ಥಾನದ ಹುಂಡಿ ಹೊತ್ತೊಯ್ದ ಖದೀಮರ ವಿಚಿತ್ರ ಭಕ್ತಿ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಡಿಸಿಎಂ ಡಿಕೆ ಶಿವಕುಮಾರ್ ಒಂದು ದಿನದ ವೈಟ್ ಟಾಪಿಂಗ್ ಕಾಮಗಾರಿಗಳ ಪರಿಶೀಲನೆ ಶಾಸ್ತ್ರ = ಮೌಲ್ಯ 1700 ಕೋಟಿ ರೂ.!!

ಗುಂಡಿ ಬಿದ್ದ ರಸ್ತೆ, ಕಳಪೆ ಗುಣಮಟ್ಟದ ತೇಪೆ ಹಾಕಿದ ರೋಡ್, ಟ್ರಾಫಿಕ್ ಜಾಮ್ ಗೆ ಕಾರಣವಾಗುವ ಅರ್ಧಕ್ಕೇ ನಿಂತ ಮೇಲ್ಸೇತುವೆ, ಗ್ರೇಡ್ ಸಪರೇಟರ್ ಕಾಮಗಾರಿಗಳಿನ್ನೂ ಡಿಸಿಎಂ ಕಣ್ಣಿಗೆ ಬಿದ್ದಿಲ್ವಾ? | ಸ್ಯಾಂಪಲ್ ಗೆ 10 ಕಡೆ ಕೆಲವೇ ಗಂಟೆಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರು, ಬಿಬಿಎಂಪಿ‌ ಅಧಿಕಾರಿಗಳ ಜೊತೆ ನಡೆದಿತ್ತು ಕಾಮಗಾರಿ ಪರಿಶೀಲನೆ

by Bengaluru Wire Desk
February 16, 2025
in Bengaluru Focus, Public interest
Reading Time: 1 min read
0

ಬೆಂಗಳೂರು, ಫೆ.16 www.bengaluruwire.com : ನಗರದಲ್ಲಿ ಹೊಂಡ ಬಿದ್ದ ವಾರ್ಡ್ ರಸ್ತೆ, ಪ್ರಮುಖ ರಸ್ತೆ, ಹೊರವರ್ತುಲ ರಸ್ತೆಗಳಲ್ಲಿ ವಾಹನ ಸವಾರರು ವಾಹನ ಚಲಾಯಿಸುತ್ತಾ ಹೈರಾಣಾಗಿದ್ದಾರೆ. ನಗರದಲ್ಲಿ ಪ್ರಮುಖ ಹೊರವರ್ತುಲ ರಸ್ತೆಗಳಲ್ಲಿ ಗ್ರೇಡ್ ಸಪರೇಟರ್, ಮೇಲ್ಸೇತುವೆ ಕಾಮಗಾರಿ ಕೆಲಸ ಅರ್ಧಕ್ಕೆ ನಿಂತು ಒಂದೂವರೆ ಎರಡು ವರ್ಷಗಳಾಗಿವೆ. ಇದರಿಂದ ಟ್ರಾಫಿಕ್ ಸಮಸ್ಯೆ ಹೆಚ್ಚಾಗಿದೆ.

ತೀರ ಹದಗೆಟ್ಟ ರಸ್ತೆಗಳಿಗೆ ಕಾಯಕಲ್ಪ ಕಲ್ಪಿಸುವ, ರಸ್ತೆ ಗುಂಡಿ ಮುಚ್ಚುವ ಕಾರ್ಯ ಬಹುತೇಕ ನಿಂತು ಹೋಗಿದೆ. ಈ ಮಧ್ಯೆ ನಗರಕ್ಕೆ ದುಬಾರಿಯಾಗಿರುವ ವೈಟ್ ಟಾಪಿಂಗ್ ಯೋಜನೆ (White topping project)ಯನ್ನು ನಗರದೆಲ್ಲೆಡೆ ವಿಸ್ತರಿಸುವ ಯೋಜನೆಗೆ ಬಿಬಿಎಂಪಿ ಈಗಾಗಲೇ ಕೈ ಹಾಕಿದೆ. 

ಇನ್ನೊಂದೆಡೆ ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ.ಶಿವಕುಮಾರ್ (Deputy Chief Minister and bangalore Development minister DK Shivakumar) 1700 ಕೋಟಿ ರೂ. ವೆಚ್ಚದ ತೆರಿಗೆದಾರರ ಹಣದಲ್ಲಿ 97 ರಸ್ತೆಗಳಲ್ಲಿ 14 ಪ್ಯಾಕೇಜ್ ಗಳಲ್ಲಿ ನಡೆಯುತ್ತಿರುವ 150 ಕಿ.ಮೀ ಉದ್ದದಲ್ಲಿ ಕೈಗೊಂಡಿರುವ ಯೋಜನೆಯನ್ನು ಕೇವಲ ಇಂದು ಒಂದೇ ದಿನದಲ್ಲಿ ಕೆಲವು ಗಂಟೆಗಳಲ್ಲಿ ಪರಿವೀಕ್ಷಣೆ ಮಾಡುವ ಶಾಸ್ತ್ರ ಮಾಡಿ ಮುಗಿಸಿದ್ದಾರೆ.

ರಾಜಾಜಿನಗರ 10ನೇ ಕ್ರಾಸ್ ನಿಂದ ಆರಂಭವಾದ ಡಿಸಿಎಂ ಡಿಕೆಶಿ ಹಾಗೂ ಬಿಬಿಎಂಪಿ‌ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ವಿಶೇಷ ಆಯುಕ್ತರಾದ ಮುನೀಷ್ ಮುದ್ಗಿಲ್, ಪಾಲಿಕೆ ಮುಖ್ಯ ಪ್ರಧಾನ ಎಂಜಿನಿಯರ್ ಹಾಗೂ ರಸ್ತೆ ಮೂಲ ಸೌಕರ್ಯ, ಬೃಹತ್ ನೀರುಗಾಲುವೆ ಎರಡೂ ವಿಭಾಗಗಳ ಚೀಫ್ ಎಂಜಿನಿಯರ್ ಕೂಡ ಆಗಿರುವ ಬಿ.ಎಸ್.ಪ್ರಹ್ಲಾದ್ ಅವರ ಟೀಮ್ ಜೊತೆಗೆ ಬಹುತೇಕ ಕಡೆ ಕಾಂಗ್ರೆಸ್ ಕಾರ್ಯಕರ್ತರು, ಮಾಜಿ ಕಾಂಗ್ರೆಸ್ ಕಾರ್ಪೊರೇಟರ್ ಗಳು, ಆಯಾ ವಿಧಾನಸಭಾ ಕ್ಷೇತ್ರಗಳ ಶಾಸಕರ ಜೊತೆಗೆ ವೈಟ್ ಟಾಪಿಂಗ್ ಕಾಮಗಾರಿ ಪರಿಶೀಲನೆ ನಡೆಯಿತು.

150 ಉದ್ದದ ಸುದೀರ್ಘ ಮಾರ್ಗದ ವೈಟ್ ಟಾಪಿಂಗ್ ಕಾಮಗಾರಿಯ ಪೈಕಿ ಜನಜಂಗುಳಿಯ ನಡುವೆ ಕೇವಲ ಕೆಲವೇ ಗಂಟೆಗಳಲ್ಲಿ ವಿವಿಧ 10 ಕಡೆಗಳಲ್ಲಿ ಸಾಗಿದ ಡಿಸಿಎಂ, ಕಾಮಗಾರಿ ಗುಣಮಟ್ಟ, ಸ್ಥಳ ಪರೀಕ್ಷೆಯನ್ನು ಮಾಡಿ ಮುಗಿಸಿದ್ದಾರೆ. ಇದೊಂದು ಐವಾಷ್ ನಗರ ಪ್ರದಕ್ಷಿಣೆ ಎಂಬ ಟೀಕೆಗಳು ಸಾರ್ವಜನಿಕ ವಲಯದಿಂದ ವ್ಯಕ್ತವಾಗಿದೆ. 

ಹತ್ತಿರದಲ್ಲೇ ರಾಜ್ಯ ಬಜೆಟ್ ಮಂಡನೆಯಾಗಲಿದೆ, ಯಾವಾಗ ಬೇಕಾದರೂ ಕೋರ್ಟ್ ನಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸಲು ಸೂಚನೆ ಬರಬಹುದು, ಗ್ರೇಟರ್ ಬೆಂಗಳೂರು ವಿಚಾರವಾಗಿ ಶಿವಾಜಿನಗರ ವಿಧಾನಸಭಾ ಕ್ಷೇತ್ರದ ಶಾಸಕ ರಿಜ್ವಾನ್ ಅರ್ಷದ್ ನೇತೃತ್ವದ ಸಮಿತಿ ಜನರಿಂದ ಅಭಿಪ್ರಾಯ ಸಂಗ್ರಹ ಮಾಡುತ್ತಿದ್ದಾರೆ.

ಇದೇ ಸಂದರ್ಭವನ್ನು ಗಮನದಲ್ಲಿಟ್ಟುಕೊಂಡು ಆದಷ್ಟು ಶೀಘ್ರದಲ್ಲಿ ಕಾಮಗಾರಿ ಮುಗಿಸಿದರೆ ರಾಜ್ಯ ಸರ್ಕಾರದ ಅನುದಾನವಾದ್ದರಿಂದ ಗುತ್ತಿಗೆದಾರರಿಗೆ ಬಿಲ್ ಪಾವತಿ ಆದಷ್ಟು ಶೀಘ್ರದಲ್ಲಿ ಆಗಲಿದೆ. ಇದೆಲ್ಲದೆ ಹಲವು “ಲೆಕ್ಕಾಚಾರ”ಗಳನ್ನು ಗಮನದಲ್ಲಿಟ್ಟುಕೊಂಡು ಈ ನಗರ ಪ್ರದಕ್ಷಿಣೆ ಕಾರ್ಯ ನಡೆದಿದೆ ಎಂಬ ಮಾತುಗಳು ರಾಜಕೀಯ ಪಡಸಾಲೆಯಲ್ಲಿ ಕೇಳಿಬಂದಿದೆ.

ಬೆಂಗಳೂರಿನ ವಿವಿಧ ಭಾಗಗಳಲ್ಲಿ ನಡೆಯುತ್ತಿರುವ ವೈಟ್ ಟ್ಯಾಪಿಂಗ್ ಕಾಮಗಾರಿಗಳ ಬಗ್ಗೆ ಭಾನುವಾರ ಪರಿಶೀಲನೆ ನಡೆಸಿದ ನಂತರ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮಾಧ್ಯಮಗಳ ಜೊತೆ ಮಾತನಾಡುತ್ತಾ, “ಬ್ರ್ಯಾಂಡ್ ಬೆಂಗಳೂರು ಸುಗಮ ಸಂಚಾರ ಯೋಜನೆ ಅಡಿಯಲ್ಲಿ ನಗರದಲ್ಲಿ ಅಂತರರಾಷ್ಟ್ರೀಯ ಗುಣಮಟ್ಟದ ರಸ್ತೆಗಳನ್ನು ನಿರ್ಮಿಸಲು ವೈಟ್ ಟ್ಯಾಪಿಂಗ್ ಮಾಡಲಾಗುತ್ತಿದೆ. 30 ವರ್ಷಗಳ ಬಾಳಿಕೆ ಬರುವ ಶಾಶ್ವತ ರಸ್ತೆ ನಿರ್ಮಿಸುವ ಈ ಯೋಜನೆಗೆ ₹ 1700 ಕೋಟಿ ಹಣ ವೆಚ್ಚ ಮಾಡಲಾಗುತ್ತಿದೆ” ಎಂದು ತಿಳಿಸಿದರು.

“ನಮಗೆ ಗುಣಮಟ್ಟದ ಕಾಮಗಾರಿ ಮುಖ್ಯ. ಕಾಮಗಾರಿ ಶೀಘ್ರಗತಿಯಲ್ಲಿ ಸಾಗಬೇಕು ಎಂದು ಇಂದು ಪರಿಶೀಲನೆ ಮಾಡಿದ್ದೇನೆ. ಈ ಯೋಜನೆ ಕಾಮಗಾರಿ ಪೂರ್ಣಗೊಳಿಸಲು 11 ತಿಂಗಳು ಕಾಲಮಿತಿ ನಿಗದಿಪಡಿಸಲಾಗಿದೆ. ಈ ಯೋಜನೆಯ ಎರಡನೇ ಹಂತದಲ್ಲಿ 450 ಕಿ.ಮೀ ಉದ್ದದ ರಸ್ತೆ ವೈಟ್ ಟ್ಯಾಪಿಂಗ್ ಮಾಡಲಾಗುವುದು. ಈ ಎಲ್ಲಾ ಹಂತಗಳ ಕಾಮಗಾರಿ ಮುಕ್ತಾಯವಾದರೆ ಬೆಂಗಳೂರಿನಲ್ಲಿ ಒಟ್ಟಾರೆ 1,700 ಕಿ.ಮೀ ಉದ್ದದ ರಸ್ತೆ ವೈಟ್ ಟ್ಯಾಪಿಂಗ್ ಮುಕ್ತಾಯಗೊಳ್ಳಲಿದೆ” ಎಂದು ಅವರು ಹೇಳಿದರು.

“ರಸ್ತೆ ಗುಣಮಟ್ಟ ಪರೀಕ್ಷೆಗೆ ನಾನು ಇಂದು ಭೇಟಿ ನೀಡಿದ್ದೇನೆ. ಪಾದಚಾರಿ ಮಾರ್ಗಗಳನ್ನು ನೋಡಿದ್ದೇನೆ. ಭಾನುವಾರ ವಾಹನ ದಟ್ಟಣೆ ಕಡಿಮೆ ಇರುವ ಕಾರಣ ಇಂದು ಕಾಮಗಾರಿ ಪರಿಶೀಲನೆ ಮಾಡುತ್ತಿದ್ದು, ಕಾಮಗಾರಿ ನಡೆಯುತ್ತಿರುವ ಎಲ್ಲಾ ಭಾಗಗಳಿಗೆ ಭೇಟಿ ನೀಡುತ್ತಿದ್ದೇನೆ” ಎಂದು ತಿಳಿಸಿದರು. 

“ಇದರ ಜತೆಗೆ ಬೆಂಗಳೂರಿನಾದ್ಯಂತ ಸಂಪೂರ್ಣವಾಗಿ ಮಳೆನೀರುಗಾಲುವೆ ಕಾಮಗಾರಿಗಳನ್ನು ಪೂರ್ಣಗೊಳಿಸಲು ಮುಂದಾಗಿದ್ದೇವೆ. ನಾವು ಒಂದೇ ದಿನದಲ್ಲಿ ಎಲ್ಲಾ ಬದಲಾವಣೆ ಮಾಡುತ್ತೇವೆ ಎಂದು ಹೇಳುವುದಿಲ್ಲ. ಹಂತ ಹಂತವಾಗಿ ಆರ್ಥಿಕ ಪರಿಸ್ಥಿತಿ ಗಮನದಲ್ಲಿಟ್ಟುಕೊಂಡು ಯೋಜನೆ ಮಾಡುತ್ತಿದ್ದೇವೆ” ಎಂದರು.

ಸುದ್ದಿಗಾರರು, ಇಂದು ನೀವೇ ಗುಣಮಟ್ಟ ಪರಿಶೀಲನೆ ಮಾಡಿದ್ದೀರಿ ಎಂದು ಕೇಳಿದಾಗ, “ಈ ಯೋಜನೆಗೆ ಮೀಸಲಿಟ್ಟಿರುವ ₹1700 ಕೋಟಿ ಹಣ ರಸ್ತೆಗೆ ವೆಚ್ಚವಾಗಬೇಕಲ್ಲವೇ? ಈ ರಸ್ತೆ ನಿರ್ದಿಷ್ಟ ಪ್ರಮಾಣದಲ್ಲಿ ದಪ್ಪ ಇರಬೇಕು, ಈ ರಸ್ತೆಗಳಲ್ಲಿ ಬಿಡಬ್ಲೂ ಎಸ್ ಎಸ್ ಬಿ ಕೆಲಸಗಳು ಒಟ್ಟಿಗೆ ಮುಗಿಯಬೇಕು. ಹೀಗಾಗಿ ಪರಿಶೀಲನೆ ಮಾಡಿದ್ದೇನೆ. ಕಾಮಗಾರಿ ಮುಗಿದ ನಂತರವೂ ಗುಣಮಟ್ಟ ಪರಿಶೀಲನೆ ಮಾಡಲಾಗುವುದು. ಎಲ್ಲಾ ಕಡೆಗಳಲ್ಲಿ ಉತ್ತಮ ಗುಣಮಟ್ಟದ ಕಾಮಗಾರಿ ನಡೆಯುತ್ತಿದೆ. ಒಂದು ಕಡೆ ನನಗೆ ಸ್ವಲ್ಪ ವ್ಯತ್ಯಾಸ ಕಂಡುಬಂದಿದೆ. ತಾಂತ್ರಿಕ ತಂಡವನ್ನು ಅಲ್ಲಿಗೆ ಕಳುಹಿಸಿ ಮತ್ತೊಮ್ಮೆ ಪರಿಶೀಲನೆ ನಡೆಸುತ್ತೇವೆ” ಎಂದು ತಿಳಿಸಿದರು.

ಟನಲ್ ರಸ್ತೆ ಸರಿಯಿಲ್ಲ ಎಂಬ ಕೇಂದ್ರ ರೈಲ್ವೆ ಸಚಿವರ ಹೇಳಿಕೆ ಬಗ್ಗೆ ಕೇಳಿದಾಗ, “ಹಾಗಿದ್ದರೆ ಅವರು ಮಹಾರಾಷ್ಟ್ರದಲ್ಲಿ ಯಾಕೆ ಟನಲ್ ರಸ್ತೆ ಮಾಡಿಸುತ್ತಿದ್ದಾರೆ? ಅವರಿಗೂ ಇದಕ್ಕೂ ಏನು ಸಂಬಂಧ? ಅವರ ಇಲಾಖೆ ಕೆಲಸ ಅವರು ಮಾಡಲಿ” ಎಂದು ತಿಳಿಸಿದರು.

ಬೇಸಿಗೆ ಆರಂಭವಾಗುತ್ತಿದ್ದು, ನೀರಿನ ಅಭಾವ ಎದುರಾಗದಂತೆ ಯಾವ ಕ್ರಮ ಕೈಗೊಂಡಿದ್ದೀರಿ ಎಂದು ಕೇಳಿದಾಗ, “ಬೆಂಗಳೂರಿನಲ್ಲಿ ನೀರಿನ ಅಭಾವ ಎದುರಾಗಬಾರದು ಎಂಬ ಕಾರಣಕ್ಕೆ ಕಾವೇರಿ 5ನೇ ಹಂತದ ಕುಡಿಯುವ ನೀರಿನ ಯೋಜನೆ ಜಾರಿ ಮಾಡಿದ್ದೇವೆ. ಜನರು ಮುಂದೆ ಬಂದು ನೀರಿನ ಸಂಪರ್ಕ ಪಡೆಯಬೇಕು” ಎಂದು ಪ್ರತಿಕ್ರಿಯಿಸಿದರು.

ಪಾಲಿಕೆಯ ಆರ್ ಓ ಘಟಕಗಳು ದುರಸ್ತಿಗೆ ಬಂದಿವೆ ಎಂದು ಮಾಧ್ಯಮದವರು ಪ್ರಶ್ನಿಸಿದಾಗ, “ಎಲ್ಲಾ ಘಟಕಗಳ ಪರಿಶೀಲನೆ ಮಾಡಲಾಗುವುದು” ಎಂದು ತಿಳಿಸಿದರು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

ನವದೆಹಲಿಯ ರೈಲು ದುರ್ಘಟನೆ ಸಂಭವಿಸಲು ಅಸಲಿಗೆ ಆಗಿದ್ದೇನು?  ತನಿಖಾ ವರದಿ ಏನು ಹೇಳುತ್ತೆ?

Next Post

ಡೈರಿ ವೃತ್ತದಿಂದ ನಾಗವಾರ ಫೇಸ್-2 ಸುರಂಗಮಾರ್ಗ ಸಿವಿಲ್ ಕಾಮಗಾರಿ ಬಹುತೇಕ ಪೂರ್ಣ : ಟನಲ್ ನಿರ್ಮಾಣಕ್ಕೆ 15000 ಸಲ ಬ್ಲಾಸ್ಟಿಂಗ್!!

Next Post

ಡೈರಿ ವೃತ್ತದಿಂದ ನಾಗವಾರ ಫೇಸ್-2 ಸುರಂಗಮಾರ್ಗ ಸಿವಿಲ್ ಕಾಮಗಾರಿ ಬಹುತೇಕ ಪೂರ್ಣ : ಟನಲ್ ನಿರ್ಮಾಣಕ್ಕೆ 15000 ಸಲ ಬ್ಲಾಸ್ಟಿಂಗ್!!

Linemen Recruitment | ಏಪ್ರಿಲ್‌ನೊಳಗೆ 3,000 ಲೈನ್‌ಮನ್‌ಗಳ ನೇಮಕ ಪ್ರಕ್ರಿಯೆ ಪೂರ್ಣ : ಸಚಿವ ಕೆ.ಜೆ.ಜಾರ್ಜ್‌

Please login to join discussion

Like Us on Facebook

Follow Us on Twitter

Recent News

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026

Karnataka Budget 2026-27 | ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ: 4.48 ಲಕ್ಷ ಕೋಟಿ ಮೊತ್ತದ ‘ಸರ್ವೋದಯ’ ಆಯವ್ಯಯದ ಕಂಪು

March 6, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026

Karnataka Budget 2026-27 | ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ: 4.48 ಲಕ್ಷ ಕೋಟಿ ಮೊತ್ತದ ‘ಸರ್ವೋದಯ’ ಆಯವ್ಯಯದ ಕಂಪು

March 6, 2026

AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

March 5, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d