Friday, October 16, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಪ್ರತಿವರ್ಷ ಅಕ್ಟೋಬರ್ 21ಕ್ಕೆ ‘ಶ್ರೀ ಮಧ್ವಾಚಾರ್ಯ ಜಯಂತಿ’: ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ

    ಭಾರತೀಯ ನ್ಯಾಯಾಂಗ ವ್ಯವಸ್ಥೆಯಲ್ಲಿ ನವೀನ ಕ್ರಾಂತಿ: ಕ್ರಿಮಿನಲ್ ಕೇಸ್ ಇತ್ಯರ್ಥಕ್ಕೆ ಕೇಂದ್ರದ ಮಾಸ್ಟರ್ ಪ್ಲ್ಯಾನ್ ಏನು ಗೊತ್ತಾ?

    ಜೆಡಿಎಸ್ ಸೋಶಿಯಲ್ ಮೀಡಿಯಾ ಹುಡುಗನನ್ನು ಪೊಲೀಸ್ ವಶಕ್ಕೆ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕಿಡಿ

    Railway News | ಹಾಸನಾಂಬ ಜಾತ್ರೆ: ಬೆಂಗಳೂರು-ಹಾಸನ ನಡುವೆ ವಿಶೇಷ ರೈಲು ಸೇವೆ ಆರಂಭ

    CREATOR: gd-jpeg v1.0 (using IJG JPEG v62), quality = 82?

    ಬಿಹಾರದಲ್ಲಿ ಭೀಕರ ದುರಂತ: ಗಂಗಾ ನದಿಯಲ್ಲಿ ದೋಣಿ ಮುಳುಗಿ 14 ಮಕ್ಕಳು ಜಲಸಮಾಧಿ?

    ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

    ಎಸ್‌ಸಿ-ಎಸ್‌ಟಿ ಮೀಸಲಾತಿ ರದ್ದು: ಬಿಜೆಪಿ ಅವಸರವೇ ಕಾರಣ ಎಂದ ಮಾಜಿ ಸಿಎಂ ಸಿದ್ದರಾಮಯ್ಯ

    ಕರ್ನಾಟಕದ ನೂತನ ರಾಜ್ಯಪಾಲರಾಗಿ ಸುಧಾ ಯಾದವ್ ನೇಮಕ

    Excise News | ಬೆಳಗಾವಿಯಲ್ಲಿ ಭರ್ಜರಿ ಕಾರ್ಯಾಚರಣೆ: ₹32.40 ಲಕ್ಷ ಮೌಲ್ಯದ 24,000 ಲೀಟರ್ ಅಕ್ರಮ ಮದ್ಯಸಾರ ಜಪ್ತಿ

    Defence News | ಭಾರತೀಯ ಸೇನೆಗೆ ‘ಭಾರತ್ ರೈಸ್’ ಪೂರೈಕೆ ಆರಂಭ: ಈ ಯೋಜನೆ ವಿಶೇಷತೆಯೇನು?

  • Bengaluru Focus

    ಆಸ್ಪತ್ರೆ ಬಿಲ್ ಬಾಕಿ: ಮೃತದೇಹ ನೀಡದಿದ್ದರೆ ಕಠಿಣ ಕಾನೂನು ಕ್ರಮ

    BW Special | ಖಜಾನೆ ಖಾಲಿ, ಜನರಿಗೆ ಬೆಲೆ ಏರಿಕೆ ಬರೆ; ಸಚಿವರು-ಸಂಸದರ ಐಷಾರಾಮಿ ಕಾರಿಗೆ ₹31 ಲಕ್ಷ ಗಿಫ್ಟ್!

    ದೇವನಹಳ್ಳಿ ತಹಶೀಲ್ದಾರ್ ಕಚೇರಿಗೆ ಡಿಸಿಎಂ ಪರಮೇಶ್ವರ್ ದಿಢೀರ್ ಭೇಟಿ: ದಾಖಲೆ ನಿರ್ವಹಣೆ ನಿರ್ಲಕ್ಷಿಸಿದ ಅಧಿಕಾರಿ ಅಮಾನತು

    KSRTC News | ದಸರಾ ಹಬ್ಬಕ್ಕೆ ಕೆಎಸ್‌ಆರ್‌ಟಿಸಿಯಿಂದ 3,000ಕ್ಕೂ ಹೆಚ್ಚು ಹೆಚ್ಚುವರಿ ಬಸ್ ಸೇವೆ

    ಕರ್ನಾಟಕದಲ್ಲಿ ಹುಲಿಗಳ ಸಂತತಿ ಹೆಚ್ಚಳ: 700ರ ಗಡಿ ದಾಟಿದ ವ್ಯಾಘ್ರಗಳ ಸಂಖ್ಯೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಬೇಸಿಗೆಯಲ್ಲಿ 19 ಸಾವಿರ ಮೆ.ವ್ಯಾ. ವಿದ್ಯುತ್ ಬೇಡಿಕೆ  ನಿರೀಕ್ಷೆ : ಲೋಡ್ ಶೆಡ್ಡಿಂಗ್ ಇಲ್ಲದೆ ಕರೆಂಟ್ ಕೊಡ್ತೀವಿ ಎಂದ ಸಚಿವ ಕೆಜೆ ಜಾರ್ಜ್

by Bengaluru Wire Desk
February 28, 2025
in Bengaluru Focus, News Wire, Public interest
Reading Time: 1 min read
0

ಬೆಂಗಳೂರು, ಫೆ.28 www.bengaluruwire.com : ಬೇಸಿಗೆಯಲ್ಲಿ 19,000 ಮೆಗಾ ವ್ಯಾಟ್‌ನಷ್ಟು ವಿದ್ಯುತ್ (Electricity) ಬೇಡಿಕೆಯನ್ನು ಈಡೇರಿಸಲು ಇಂಧನ ಇಲಾಖೆ ಸಿದ್ಧವಾಗಿದ್ದು, ಯಾವುದೇ ಸಂದರ್ಭದಲ್ಲೂ ಲೋಡ್ ಶೆಡ್ಡಿಂಗ್ ಮಾಡುವುದಿಲ್ಲ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ (KJ George) ಹೇಳಿದ್ದಾರೆ.

ಬೇಸಿಗೆಯಲ್ಲಿ ವಿದ್ಯುತ್ ಪೂರೈಕೆಗೆ ಸಂಬಂಧಿಸಿದಂತೆ ಶುಕ್ರವಾರ ಎಸ್ಕಾಂಗಳ ಅಧ್ಯಕ್ಷರು ಸೇರಿದಂತೆ ಇಂಧನ ಇಲಾಖೆ ಹಿರಿಯ ಅಧಿಕಾರಿಗಳೊಂದಿಗಿನ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ರಾಜ್ಯದಲ್ಲಿ ಬೇಡಿಕೆ ಇರುವಷ್ಟು ವಿದ್ಯುತ್ ಲಭ್ಯವಿದೆ. ಸ್ಥಳೀಯವಾಗಿ ತಾಂತ್ರಿಕ ಕಾರಣಗಳಿಂದ ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳಬಹುದೇ ಹೊರತು ಲೋಡ್ ಶೆಡ್ಡಿಂಗ್ ಮಾಡುವ ಸಂದರ್ಭ ಉದ್ಭವವಾಗುವುದಿಲ್ಲ. ವಿದ್ಯುತ್ ಬೇಡಿಕೆ ಹೆಚ್ಚುತ್ತಿದೆ ಎಂದರೆ, ರಾಜ್ಯವು ಅಭಿವೃದ್ಧಿ ಪಥದಲ್ಲಿ ಮುಂದುವರಿಯುತ್ತಿದೆ. ಹೆಚ್ಚಿನ ಅಭಿವೃದ್ಧಿ ಕೆಲಸಗಳು ನಡೆಯುತ್ತಿವೆ ಎಂದು ಅರ್ಥ”ಎಂದು ತಿಳಿಸಿದರು.

“ಬೇಸಿಗೆಯಲ್ಲಿ ರೈತರ ಕೃಷಿ ಪಂಪ್ ಸೆಟ್‌ಗಳಿಗೆ ದಿನ 7 ಗಂಟೆ ಮತ್ತು ಇತರ ಉದ್ದೇಶಗಳಿಗೆ ದಿನದ 24 ಗಂಟೆ ವಿದ್ಯುತ್ ಪೂರೈಸುವ ವಾಗ್ಧಾನವನ್ನು ಈಡೇರಿಸಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ” ಎಂದು ಅವರು ಹೇಳಿದರು.

ಇಂಧನ ಭದ್ರತೆಗೆ ಪಂಪ್ಡ್‌ ಸ್ಟೋರೇಜ್‌, ಬ್ಯಾಟರಿ ಸ್ಟೋರೇಜ್ :

“ರಾಜ್ಯದಲ್ಲಿ ಬೇಡಿಕೆಗಿಂತ ಹೆಚ್ಚು ವಿದ್ಯುತ್‌ ಉತ್ಪಾದನೆ ಆದರೂ, ಸಂಗ್ರಹಣೆಗೆ ಅವಕಾಶ ಇಲ್ಲ. ಹೀಗಾಗಿ, ಶರಾವತಿ ಪಂಪ್ಡ್‌ ಸ್ಟೋರೇಜ್‌ ಮೂಲಕ 2000 ಮೆ.ವ್ಯಾ, ವಾರಾಹಿ ಪಂಪ್ಡ್‌ ಸ್ಟೋರೇಜ್‌ ಮೂಲಕ 1600 ಮೆ.ವ್ಯಾ., ಪಾವಗಡದಲ್ಲಿ 1000 ಮೆ.ವ್ಯಾ.ಸಾಮರ್ಥ್ಯ ಹಾಗೂ ರ‍್ಯಾಪ್ಟೆಯಲ್ಲಿ 2000 ಮೆ.ವ್ಯಾ. ಸಾಮರ್ಥ್ಯದ ಬ್ಯಾಟರಿ ಸ್ಟೋರೇಜ್‌ ಯೋಜನೆಗಳನ್ನು ಅನುಷ್ಠಾನಗೊಳಿಸಲು ತೀರ್ಮಾನಿಸಿದೆ. ಇದರಿಂದ ರಾಜ್ಯದಲ್ಲಿ ವಿದ್ಯುತ್‌ ಕೊರತೆಯಾಗದಂತೆ ನೋಡಿಕೊಳ್ಳಬಹುದು”ಎಂದರು. 

ವಿದ್ಯುತ್‌ ಉತ್ಪಾದನೆ ವಿವರ :

“ಫೆಬ್ರವರಿ 27ರ ಮಾಹಿತಿ ಪ್ರಕಾರ, ಕೆಪಿಸಿಎಲ್ ನ ಉಷ್ಣ ವಿದ್ಯುತ್ ಸ್ಥಾವರಗಳಲ್ಲಿ 3,300 ಮೆ.ವ್ಯಾ., ಜಲ ವಿದ್ಯುತ್ ಘಟಕಗಳಲ್ಲಿ 2000 ಮೆ.ವ್ಯಾ. ವಿದ್ಯುತ್ ಉತ್ಪಾದನೆಯಾಗಿದೆ. ಅದೇ ರೀತಿ ಯುಪಿಸಿಎಲ್ ನಿಂದ 1,026 ಮೆ.ವ್ಯಾ., ಸೋಲಾರ್ ಮೂಲಕ 6,655 ಮೆ.ವ್ಯಾ., ಪವನ ವಿದ್ಯುತ್ ಮೂಲಕ 1940 ಮೆ.ವ್ಯಾ. ವಿದ್ಯುತ್ ಉತ್ಪಾದನೆ ಮಾಡಲಾಗಿದೆ. ಇದಲ್ಲದೆ, ಸಿಜಿಎಸ್ (ಸೆಂಟ್ರಲ್ ಜೆನರೇಟಿಂಗ್ ಸ್ಟೇಷನ್ಸ್)ನಿಂದ 6,183 ಮೆ.ವ್ಯಾ. ವಿದ್ಯುತ್ ಬಂದಿದ್ದರೆ, ಕೇಂದ್ರ ಗ್ರಿಡ್ ನಿಂದ 600 ಮೆಗಾವ್ಯಾಟ್ ವಿದ್ಯುತ್ ಖರೀದಿಸಲಾಗಿದೆ. ಪಂಜಾಬ್ ಮತ್ತು ಉತ್ತರಪ್ರದೇಶದಿಂದ ವಿನಿಮಯ ಆಧಾರದ ಮೇಲೆ 700 ಮೆಗಾ ವ್ಯಾಟ್ ವಿದ್ಯುತ್ ಪಡೆಯಲಾಗಿದೆ” ಎಂದು ತಿಳಿಸಿದರು. 

“ಇದಲ್ಲದೆ, ವಿದ್ಯುತ್ ಬೇಡಿಕೆ ಪೂರೈಸಲು ಶನಿವಾರ (ಮಾ. 1)ದಿಂದ ಕೂಡ್ಗಿಯಿದ ಹೆಚ್ಚುವರಿಯಾಗಿ 310 ಮೆಗಾವ್ಯಾಟ್ ವಿದ್ಯುತ್ ಪಡೆಯಲಾಗುತ್ತದೆ. ಜತೆಗೆ  ಬೇಡಿಕೆ ಆಧರಿಸಿ ವಿನಿಮಯ ಆಧಾರದ ಮೇಲೆ ಉತ್ತರ ಪ್ರದೇಶದಿಂದ  ದಿನಕ್ಕೆ 100ರಿಂದ 1,275 ಮೆ.ವ್ಯಾ. ಮತ್ತು ಪಂಜಾಬ್‌ನಿಂದ 300 ಮೆ.ವ್ಯಾ. ವಿದ್ಯುತ್ ತೆಗೆದುಕೊಳ್ಳಲಾಗುವುದು. ಅಲ್ಲದೆ, ಜೂನ್ ಮೊದಲ ವಾರದವರೆಗೆ ಪ್ರತಿನಿತ್ಯ 1000 ಮೆ.ವ್ಯಾ. ವಿದ್ಯುತ್ ಖರೀದಿಸಲಾಗುವುದು” ಎಂದು ಇಂಧನ ಸಚಿವ ಕೆಜೆ ಜಾರ್ಜ್ ಅವರು ಮಾಹಿತಿ ನೀಡಿದರು.

ಲಿಂಕ್‌ಲೈನ್ ಮೂಲಕ ವಿದ್ಯುತ್ ಬೇಡಿಕೆ ಈಡೇರಿಸಲು ಕ್ರಮ :

“ರಾಜ್ಯದ ಕೆಲವು ಸಬ್ ಸ್ಟೇಷನ್ ಗಳ ವ್ಯಾಪ್ತಿಯಲ್ಲಿ ವಿದ್ಯುತ್ ಬೇಡಿಕೆ ಹೆಚ್ಚಾಗಿ ಓವರ್ ಲೋಡ್ ಆಗುತ್ತಿದೆ. ಇನ್ನು ಕೆಲವು ಉಪ ಕೇಂದ್ರಗಳ ವ್ಯಾಪ್ತಿಯಲ್ಲಿ ಬೇಡಿಕೆಗಿಂತ ಹೆಚ್ಚು ವಿದ್ಯುತ್ ಲಭ್ಯವಿದ್ದು, ಅಂಡರ್ ಲೋಡ್ ಆಗುತ್ತಿದೆ. ಈ ಸಮಸ್ಯೆ ತಪ್ಪಿಸಲು ಅಂಡರ್ ಲೋಡ್ ಇರುವ ಉಪಕೇಂದ್ರಗಳಿಂದ ಓವರ್ ಲೋಡ್ ಇರುವ ಉಪಕೇಂದ್ರಗಳಿಗೆ ವಿದ್ಯುತ್ ಒದಗಿಸಲು ಲಿಂಕ್ ಲೈನ್ ವ್ಯವಸ್ಥೆಗೆ ಆದ್ಯತೆ ನೀಡಲಾಗುತ್ತಿದೆ. ಈಗಾಗಲೇ ಕೆಲವು ಕಡೆ ಲಿಂಕ್ ಲೈನ್ ಕಲ್ಪಿಸುವ ಪ್ರಕ್ರಿಯೆ ಪೂರ್ಣಗೊಂಡಿದೆ” ಎಂದು ಹೇಳಿದರು.

“ರಾಜ್ಯದಲ್ಲಿ ಸಾಕಷ್ಟು ವಿದ್ಯುತ್ ಲಭ್ಯವಿದ್ದರೂ ಅದರ ಪ್ರಸರಣ ಮತ್ತು ವಿತರಣೆಯೇ ಸಮಸ್ಯೆಯಾಗಿದೆ. ಇದನ್ನು ತಪ್ಪಿಸಲು ಸಬ್ ಸ್ಟೇಷನ್ ಗಳ ಸಂಖ್ಯೆ ಹೆಚ್ಚಿಸಲಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿ 100 ಹೊಸ ಸಬ್ ಸ್ಟೇಷನ್ ಗಳನ್ನು ಸ್ಥಾಪಿಸಲು ನಿರ್ಧರಿಸಲಾಗಿದೆ. ಮುಂದಿನ ಎರಡು ವರ್ಷದಲ್ಲಿ ಪ್ರಸರಣ ಮತ್ತು ವಿತರಣೆಯಲ್ಲಿ ಇರುವ ಸಮಸ್ಯೆಗಳನ್ನು ಬಹುತೇಕ ಬಗೆಹರಿಸಲು ಕ್ರಮ ವಹಿಸಲಾಗುತ್ತಿದೆ”, ಎಂದು ತಿಳಿಸಿದರು.

ಸಿಂಗಲ್ ಫೇಸ್ ನಲ್ಲಿ ಐಪಿ ಸೆಟ್ ಹಾಕಬೇಡಿ :

“ಗೃಹ ಬಳಕೆಗೆ ದಿನದ 24 ಗಂಟೆಯೂ ವಿದ್ಯುತ್ ಪೂರೈಸಬೇಕು ಎಂಬ ಉದ್ದೇಶದಿಂದ ಸಿಂಗಲ್ ಫೇಸ್ ವಿದ್ಯುತ್ ಒದಗಿಸಲು ರಾಜ್ಯ ಸರ್ಕಾರ ನಿರಂತರ ಜ್ಯೋತಿ ಯೋಜನೆ ಜಾರಿಗೆ ತಂದಿದೆ. ಅಲ್ಲದೆ, ತೋಟದ ಮನೆಗಳಲ್ಲಿ ವಾಸಿಸುವವರು ಅನುಕೂಲಕ್ಕಾಗಿ ರಾತ್ರಿ ವೇಳೆ ಸಿಂಗಲ್ ಫೇಸ್ ವಿದ್ಯುತ್ ಪೂರೈಸಲಾಗುತ್ತಿದೆ. 

ಆದರೆ, ಸಿಂಗಲ್ ಫೇಸ್ ವಿದ್ಯುತ್ ಪೂರೈಸುವ ಸಂದರ್ಭದಲ್ಲಿ ರೈತರು ಕನ್ವರ್ಟರ್‌ಗಳನ್ನು ಬಳಸಿ ಕೃಷಿ ಪಂಪ್‌ಸೆಟ್‌ಗಳನ್ನು ಬಳಸುತ್ತಿದ್ದಾರೆ. ಇದರಿಂದ ಟ್ರಿಪ್ ಆಗಿ ಇಡೀ ಪ್ರದೇಶದಲ್ಲೇ ವಿದ್ಯುತ್ ಪೂರೈಕೆ ಸ್ಥಗಿತಗೊಂಡು ಜನರು ತೊಂದರೆಗೊಳಗಾಗುತ್ತಾರೆ. ಆದ್ದರಿಂದ ಯಾವುದೇ ಕಾರಣಕ್ಕೂ ಸಿಂಗಲ್ ಫೇಸ್ ವಿದ್ಯುತ್ ಪೂರೈಕೆಗೆ ಕನ್ವರ್ಟರ್ ಅಳವಡಿಸಿ ಐಪಿ ಸೆಟ್ ಗಳನ್ನು ಬಳಸಬಾರದು” ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಕ್ರೆಡಲ್‌ ಅಧ್ಯಕ್ಷ ಟಿ.ಡಿ ರಾಜೇಗೌಡ, ಇಂಧನ ಇಲಾಖೆಯ ಅಪರ ಮುಖ್ಯಕಾರ್ಯದರ್ಶಿ ಗೌರವ್‌ ಗುಪ್ತ, ಕೆಪಿಟಿಸಿಎಲ್‌ ವ್ಯವಸ್ಥಾಪಕ ನಿರ್ದೇಶಕ ಪಂಕಜ್‌ ಕುಮಾರ್‌ ಪಾಂಡೆ, ಪಿಸಿಕೆಎಲ್‌ ವ್ಯವಸ್ಥಾಪಕ ನಿರ್ದೇಶಕ ಲೋಖಂಡೆ ಸ್ನೇಹಲ್‌ ಸುಧಾಕರ, ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಡಾ.ಎನ್‌. ಶಿವಶಂಕರ್‌ ಸೇರಿದಂತೆ ಎಲ್ಲ ಎಸ್ಕಾಂಗಳ ವ್ಯವಸ್ಥಾಪಕ ನಿರ್ದೇಶಕರು, ಕ್ರೆಡಲ್‌ ವ್ಯವಸ್ಥಾಪಕ ನಿರ್ದೇಶಕ ಕೆ.ಪಿ.ರುದ್ರಪ್ಪಯ್ಯ ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

“ಕಳೆದ ವರ್ಷಕ್ಕೆ ಹೋಲಿಸಿದರೆ ವಿದ್ಯುತ್ ಬೇಡಿಕೆ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದೆ. ಕಳೆದ ವರ್ಷದ ಫೆ. 27ರಂದು 16,214 ಮೆ.ವ್ಯಾ. ಬೇಡಿಕೆ ಇದ್ದರೆ ಈ ವರ್ಷ ಅದೇ ದಿನ 17,874 ಮೆ.ವ್ಯಾ. ಬೇಡಿಕೆ ಇತ್ತು. ಈ ಬೇಡಿಕೆಯನ್ನು ಸಮರ್ಪಕವಾಗಿ ಪೂರೈಸಲಾಗಿದೆ. ಜೂನ್ ಮೊದಲ ವಾರದವರೆಗೆ ಯಾವುದೇ ಸಮಸ್ಯೆ ಇಲ್ಲದಂತೆ ವಿದ್ಯುತ್ ಪೂರೈಸಲು ಕ್ರಮ ವಹಿಸಲಾಗಿದೆ”.

– ಗೌರವ್ ಗುಪ್ತ, ಇಂಧನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

ದಾಸರಹಳ್ಳಿ ವಲಯದ IKEA ಟ್ರೇಡ್ ಲೈಸೆನ್ಸ್ : ದಂಡ ಸಮೇತ 65 ಲಕ್ಷ ರೂ. ಶುಲ್ಕ ವಸೂಲಿ ಮಾಡಿದ ಬಿಬಿಎಂಪಿ

Next Post

ಹೆಬ್ಬಾಳ : ಕೆಐಡಿಬಿ ಭೂಮಿ ನಾ ಕೊಡೆ…ಬಿಎಂಆರ್ ಸಿಎಲ್ ನಾ ಬಿಡೆ, ಎಂಬಂತಾಗಿದೆ : ಉನ್ನತ ಮಟ್ಟದ ಸಭೆಯಲ್ಲಿ ಇನ್ನೂ ಇತ್ಯರ್ಥವಾಗದ ಭೂ ವ್ಯಾಜ್ಯ

Next Post

ಹೆಬ್ಬಾಳ : ಕೆಐಡಿಬಿ ಭೂಮಿ ನಾ ಕೊಡೆ...ಬಿಎಂಆರ್ ಸಿಎಲ್ ನಾ ಬಿಡೆ, ಎಂಬಂತಾಗಿದೆ : ಉನ್ನತ ಮಟ್ಟದ ಸಭೆಯಲ್ಲಿ ಇನ್ನೂ ಇತ್ಯರ್ಥವಾಗದ ಭೂ ವ್ಯಾಜ್ಯ

Technology News | ಐಐಟಿಯ ಅರವಿಂದ್ ಶ್ರೀನಿವಾಸ್ AI ಲೋಕದಲ್ಲಿ ಉಂಟು ಮಾಡಿದ ಸಂಚಲನವೇನು?

Please login to join discussion

Like Us on Facebook

Follow Us on Twitter

Recent News

ಪ್ರತಿವರ್ಷ ಅಕ್ಟೋಬರ್ 21ಕ್ಕೆ ‘ಶ್ರೀ ಮಧ್ವಾಚಾರ್ಯ ಜಯಂತಿ’: ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ

October 15, 2026

ಭಾರತೀಯ ನ್ಯಾಯಾಂಗ ವ್ಯವಸ್ಥೆಯಲ್ಲಿ ನವೀನ ಕ್ರಾಂತಿ: ಕ್ರಿಮಿನಲ್ ಕೇಸ್ ಇತ್ಯರ್ಥಕ್ಕೆ ಕೇಂದ್ರದ ಮಾಸ್ಟರ್ ಪ್ಲ್ಯಾನ್ ಏನು ಗೊತ್ತಾ?

October 15, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಪ್ರತಿವರ್ಷ ಅಕ್ಟೋಬರ್ 21ಕ್ಕೆ ‘ಶ್ರೀ ಮಧ್ವಾಚಾರ್ಯ ಜಯಂತಿ’: ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ

October 15, 2026

ಭಾರತೀಯ ನ್ಯಾಯಾಂಗ ವ್ಯವಸ್ಥೆಯಲ್ಲಿ ನವೀನ ಕ್ರಾಂತಿ: ಕ್ರಿಮಿನಲ್ ಕೇಸ್ ಇತ್ಯರ್ಥಕ್ಕೆ ಕೇಂದ್ರದ ಮಾಸ್ಟರ್ ಪ್ಲ್ಯಾನ್ ಏನು ಗೊತ್ತಾ?

October 15, 2026

ಜೆಡಿಎಸ್ ಸೋಶಿಯಲ್ ಮೀಡಿಯಾ ಹುಡುಗನನ್ನು ಪೊಲೀಸ್ ವಶಕ್ಕೆ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕಿಡಿ

October 14, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d