Sunday, September 20, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಎಲ್ ಪಿಜಿ ಸಿಲಿಂಡರ್ ಸಾಂದರ್ಭಿಕ ಚಿತ್ರ

    ​ಎಲ್‌ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ಅಕ್ಟೋಬರ್ 1ರಿಂದ ಹೊಸ ನಿಯಮ ಜಾರಿ

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ಗ್ರಾಮಠಾಣಾ ಆಸ್ತಿಗಳಿಗೆ ನ.1ರಿಂದ ಮನೆ ಬಾಗಿಲಿಗೇ ಇ-ಸ್ವತ್ತು ಖಾತೆ: ಈಶ್ವರ ಖಂಡ್ರೆ ಸೂಚನೆ

    ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ: ₹32,611 ಕೋಟಿ ಯೋಜನೆಗಳಿಗೆ ಅನುಮೋದನೆ: ತುಳು ಎರಡನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ಘೋಷಣೆ

    Breaking News | ನವೆಂಬರ್ ಅಂತ್ಯಕ್ಕೆ ತುಮಕೂರಿಗೆ ಎತ್ತಿನಹೊಳೆ ನೀರು: ಸಚಿವ ಚಲುವರಾಯಸ್ವಾಮಿ ಭರವಸೆ

    ಮೆಕ್ಕಾ ವಾಯುಪ್ರದೇಶದ ಬಳಿ ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ: ಪವಿತ್ರ ಕ್ಷೇತ್ರಗಳ ರಕ್ಷಣೆ ‘ರೆಡ್ ಲೈನ್’ ಎಂದ ರಿಯಾದ್

    ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

    UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

  • Bengaluru Focus

    ಕೇವಲ 30 ನಿಮಿಷದಲ್ಲಿ ಕಟ್ಟಡ ನಕ್ಷೆ ಮಂಜೂರಾತಿ: ‘ನಂಬಿಕೆ ನಕ್ಷೆ 2.0’ ಲೋಕಾರ್ಪಣೆ!

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ​ಜೆ.ಪಿ. ನಗರದಿಂದ ಗೊಟ್ಟಿಗೆರೆವರೆಗೆ ಶೇ. 34 ರಷ್ಟು ಬೀದಿ ದೀಪ ಬಂದ್; ​ಕತ್ತಲಲ್ಲಿ ರಸ್ತೆಗಳು; ಸಚಿವ ಕೃಷ್ಣ ಬೈರೇಗೌಡ ದಿಢೀರ್ ರಾತ್ರಿ ರೌಂಡ್ಸ್

    GBA Head Office Image

    GBA News | ಬೆಂಗಳೂರು : ಜಿಬಿಎ ವ್ಯಾಪ್ತಿಯಲ್ಲಿ ಇ-ಖಾತಾ ಸೇವೆಗಳು ಮತ್ತಷ್ಟು ಸುಲಭ; ಸೆ. 21ರಿಂದ ‘ಇ-ಆಸ್ತಿ 2.0’ ನೂತನ ಇ-ಖಾತಾ ವ್ಯವಸ್ಥೆ ಜಾರಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire
    ಎಲ್ ಪಿಜಿ ಸಿಲಿಂಡರ್ ಸಾಂದರ್ಭಿಕ ಚಿತ್ರ

    ​ಎಲ್‌ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ಅಕ್ಟೋಬರ್ 1ರಿಂದ ಹೊಸ ನಿಯಮ ಜಾರಿ

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ಗ್ರಾಮಠಾಣಾ ಆಸ್ತಿಗಳಿಗೆ ನ.1ರಿಂದ ಮನೆ ಬಾಗಿಲಿಗೇ ಇ-ಸ್ವತ್ತು ಖಾತೆ: ಈಶ್ವರ ಖಂಡ್ರೆ ಸೂಚನೆ

    ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ: ₹32,611 ಕೋಟಿ ಯೋಜನೆಗಳಿಗೆ ಅನುಮೋದನೆ: ತುಳು ಎರಡನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ಘೋಷಣೆ

    Breaking News | ನವೆಂಬರ್ ಅಂತ್ಯಕ್ಕೆ ತುಮಕೂರಿಗೆ ಎತ್ತಿನಹೊಳೆ ನೀರು: ಸಚಿವ ಚಲುವರಾಯಸ್ವಾಮಿ ಭರವಸೆ

    ಮೆಕ್ಕಾ ವಾಯುಪ್ರದೇಶದ ಬಳಿ ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ: ಪವಿತ್ರ ಕ್ಷೇತ್ರಗಳ ರಕ್ಷಣೆ ‘ರೆಡ್ ಲೈನ್’ ಎಂದ ರಿಯಾದ್

    ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

    UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

  • Bengaluru Focus

    ಕೇವಲ 30 ನಿಮಿಷದಲ್ಲಿ ಕಟ್ಟಡ ನಕ್ಷೆ ಮಂಜೂರಾತಿ: ‘ನಂಬಿಕೆ ನಕ್ಷೆ 2.0’ ಲೋಕಾರ್ಪಣೆ!

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ​ಜೆ.ಪಿ. ನಗರದಿಂದ ಗೊಟ್ಟಿಗೆರೆವರೆಗೆ ಶೇ. 34 ರಷ್ಟು ಬೀದಿ ದೀಪ ಬಂದ್; ​ಕತ್ತಲಲ್ಲಿ ರಸ್ತೆಗಳು; ಸಚಿವ ಕೃಷ್ಣ ಬೈರೇಗೌಡ ದಿಢೀರ್ ರಾತ್ರಿ ರೌಂಡ್ಸ್

    GBA Head Office Image

    GBA News | ಬೆಂಗಳೂರು : ಜಿಬಿಎ ವ್ಯಾಪ್ತಿಯಲ್ಲಿ ಇ-ಖಾತಾ ಸೇವೆಗಳು ಮತ್ತಷ್ಟು ಸುಲಭ; ಸೆ. 21ರಿಂದ ‘ಇ-ಆಸ್ತಿ 2.0’ ನೂತನ ಇ-ಖಾತಾ ವ್ಯವಸ್ಥೆ ಜಾರಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

ವಿಧಾನಸಭೆಯಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆಗೆ ಮಸೂದೆ ಅಂಗೀಕಾರ : ಸಾಮಾನ್ಯ ಜನರಿಗೆ ಹೇಗೆ ಅನುಕೂಲ?

ಬೆಂಗಳೂರನ್ನು ಛಿದ್ರಗೊಳಿಸುತ್ತಿಲ್ಲ, ಇನ್ನಷ್ಟು ಗಟ್ಟಿಗೊಳಿಸುತ್ತಿದ್ದೇವೆ : ಡಿಸಿಎಂ ಡಿ.ಕೆ. ಶಿವಕುಮಾರ್ | ಆರ್ಥಿಕವಾಗಿ ಹಿಂದುಳಿದ ಪಾಲಿಕೆಗಳಿಗೆ ಸರ್ಕಾರದಿಂದಲೇ ನೆರವು

by Bengaluru Wire Desk
March 11, 2025
in Bengaluru Focus, Public interest
Reading Time: 2 mins read
0

ಬೆಂಗಳೂರು, ಮಾ.11 www.bengaluruwire.com : ಆಡಳಿತ ವೀಕೆಂದ್ರಿಕರಣ ದೃಷ್ಟಿಯಿಂದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಸಂಖ್ಯೆಯನ್ನು ಏಳು ನಗರ ಪಾಲಿಕೆ ಮಾಡುವ ಉದ್ದೇಶದ ‘ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ 2024’ (Greater Bengaluru Administration Bill 2024)ವನ್ನು ವಿಧಾನಸಭೆಯಲ್ಲಿ ಪ್ರತಿಪಕ್ಷಗಳ ವಿರೋಧ ಹಾಗೂ ಸಭಾತ್ಯಾಗದ ನಡುವೆಯೇ ಸೋಮವಾರ ಅಂಗೀಕರಿಸಲಾಯಿತು.

ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆದ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ 2024 ಅನ್ನು ಸದನದಲ್ಲಿ ಮಂಡಿಸಿ, ಅದರ ಉದ್ದೇಶವನ್ನು ವಿವರಿಸಿದರು. ನಂತರ ಪ್ರತಿಪಕ್ಷಗಳ ಸದಸ್ಯರು ತಮ್ಮ ಅಭಿಪ್ರಾಯ, ಆಕ್ಷೇಪ ಹಾಗೂ ಕಾರಣಗಳನ್ನು ತಿಳಿಸಿದರು. 

ಇದಕ್ಕೆ ಪ್ರತಿಕ್ರಿಯೆ ಕೊಟ್ಟ ಡಿ ಕೆ ಶಿವಕುಮಾರ್ ಅವರು, “ಚರ್ಚೆಯಲ್ಲಿ ಭಾಗವಹಿಸಿದ ಎಲ್ಲಾ ಶಾಸಕರನ್ನು ಅಭಿನಂದಿಸುತ್ತೇನೆ. ವಿರೋಧ ಪಕ್ಷಗಳ ನಾಯಕರು ತಮ್ಮದೇ ಆದ ಅಭಿಪ್ರಾಯ ತಿಳಿಸಿದ್ದಾರೆ. ಅವರು ಅಭಿಪ್ರಾಯವನ್ನು ನಾನು ವಿರೋಧಿಸುವುದಿಲ್ಲ. ಅವರಲ್ಲಿ ಕೆಲವರಿಗೆ ರಾಜಕೀಯ ಇಚ್ಚಾಶಕ್ತಿಯೂ ಇದೆ. ಅದರಲ್ಲಿ ತಪ್ಪಿಲ್ಲ. ಈಗಿರುವ ವ್ಯವಸ್ಥೆಯಲ್ಲಿಯೇ ಬೆಂಗಳೂರು ನಗರವನ್ನು ಮುನ್ನಡೆಸುವುದು ಅಸಾಧ್ಯ ಎಂದು ಅವರು ಆತ್ಮಸಾಕ್ಷಿ ಮೂಲಕ ಒಪ್ಪಿದ್ದಾರೆ. 

ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ಅಭಿವೃದ್ಧಿ ಡಿ.ಕೆ.ಶಿವಕುಮಾರ್ ಸದನದಲ್ಲಿ ಗ್ರೇಟರ್ ಬೆಂಗಳೂರು ಮಸೂದೆ ಮಂಡಿಸಿದರು.

ತ್ಯಾಜ್ಯ ನಿರ್ವಹಣೆ, ಕುಡಿಯುವ ನೀರು ಆಡಳಿತಕ್ಕೆ ದೊಡ್ಡ ಸಮಸ್ಯೆ ಎಂಬ ಅರಿವು ಅವರಿಗಿದೆ. ಬೆಂಗಳೂರು ನಗರ ಕೆಂಪೇಗೌಡರು ಕಟ್ಟಿಸಿದ ಗೋಪುರ ಮೀರಿ ಬೆಳೆದಿದೆ. ಈಗಲೂ ಅದನ್ನು ನಿಲ್ಲಿಸಲು ಆಗುವುದಿಲ್ಲ, ಮುಂದೆಯೂ ಆಗುವುದಿಲ್ಲ. ಯಲಹಂಕ, ಕೆಂಗೇರಿ ಉಪನಗರಗಳು ಈಗ ಪಾಲಿಕೆ ವ್ಯಾಪ್ತಿಗೆ ಸೇರಿವೆ. ಹೀಗೆ ಬೆಳೆದಿರುವ ಬೆಂಗಳೂರಿನ ಆಡಳಿತವನ್ನು ನಾವು ವಿಕೇಂದ್ರೀಕರಣ ಮಾಡಲು ಮುಂದಾಗಿದ್ದೇವೆ” ಎಂದು ತಿಳಿಸಿದರು.

“ದೆಹಲಿ ಪರಿಸ್ಥಿತಿಯೇ ಬೇರೆ. ಇನ್ನು ಮುಂಬೈಯಲ್ಲಿ ಮೊದಲೇ ಅವರು ಅಧಿಕಾರ ನೀಡಿದ್ದರು. ಈಗ ಇಲ್ಲಿ ನಾವು ಹಣಕಾಸಿನ ವಿಚಾರ ಚರ್ಚೆ ಮಾಡುತ್ತಿದ್ದೇವೆ. ನಾವು ಬೆಂಗಳೂರನ್ನು ಛಿದ್ರ ಮಾಡಲು ಹೋಗುತ್ತಿಲ್ಲ, ಬೆಂಗಳೂರನ್ನು ಗಟ್ಟಿ ಮಾಡುತ್ತಿದ್ದೇವೆ. ಬೆಂಗಳೂರಿನ ಗೌರವ ಉಳಿಸಬೇಕು. ಮಾಜಿ ಪ್ರಧಾನಿ ವಾಜಪೇಯಿ ಅವರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆಗಾಗಿ ಬೆಂಗಳೂರಿಗೆ ಬಂದಾಗ, “ಇಷ್ಟು ದಿನ ವಿಶ್ವ ನಾಯಕರು ಮೊದಲು ದೆಹಲಿಗೆ ಬಂದು, ನಂತರ ದೇಶದ ಇತರ ನಗರಗಳಿಗೆ ಹೋಗುತ್ತಿದ್ದರು. ಆದರೆ ಈಗ ಪರಿಸ್ಥಿತಿ ಬದಲಾಗಿದೆ. ವಿಶ್ವದ ನಾಯಕರು ಮೊದಲು ಬೆಂಗಳೂರಿಗೆ ಬಂದು, ನಂತರ ದೇಶದ ಇತರ ನಗರಗಳಿಗೆ ಹೋಗುತ್ತಿದ್ದಾರೆ” ಎಂದು ಹೇಳಿದ್ದರು. 

ಇದಕ್ಕೆ ಕಾರಣ ಇಲ್ಲಿನ ಆಡಳಿತ. ಕೇವಲ ಎಸ್.ಎಂ.ಕೃಷ್ಣ ಅವರ ಸರ್ಕಾರ ಅಥವಾ ಮತ್ತೊಂದು ಸರ್ಕಾರ ಮಾತ್ರ ಇದಕ್ಕೆ ಕಾರಣವಲ್ಲ. ಇಲ್ಲಿನ ಜನ ಅಷ್ಟರ ಮಟ್ಟಿಗೆ ವಿದ್ಯಾವಂತರು, ಬುದ್ದಿವಂತರು, ಪ್ರಜ್ಞಾವಂತರಿದ್ದಾರೆ. ನೆಹರೂ ಅವರು ಇಲ್ಲಿಯೇ ಇಸ್ರೋ, ಹೆಚ್ಎಂಟಿ, ಹೆಚ್ಎಎಲ್, ಐಟಿಐ ಆರಂಭಿಸಿದ್ದು ಏಕೆ? ಅನೇಕ ಮಹಾನ್ ಸಂಶೋಧಕರು, ಉದ್ದಿಮೆದಾರರು ಬೆಂಗಳೂರಿನಲ್ಲೇ ಓದಿದ್ದಾರೆ” ಎಂದು ವಿವರಿಸಿದರು.

ಆರ್ಥಿಕವಾಗಿ ಹಿಂದುಳಿದ ಪಾಲಿಕೆಗಳಿಗೆ ಸರ್ಕಾರದಿಂದ ನೆರವು :

“ಅಧಿಕಾರ ವಿಕೇಂದ್ರಿಕರಣದ ಉದ್ದೇಶದಿಂದ ಬೆಂಗಳೂರು ಮೂರು ಜಿಲ್ಲೆಯಾಯಿತು. ಉಡುಪಿ ಹಾಗೂ ದಕ್ಷಿಣ ಕನ್ನಡ ಬೇರೆ ಜಿಲ್ಲೆಯಾದವು, ಗದಗ ಹಾಗೂ ಹಾವೇರಿ ಎರಡು ಜಿಲ್ಲೆಗಳಾದವು. ಅಶ್ವತ್ಥ್ ನಾರಾಯಣ ಅವರು ನಾಮನಿರ್ದೇಶಿತ ಸದಸ್ಯರಿಗೆ ಮತದಾನದ ಹಕ್ಕು ನೀಡಬೇಡಿ ಎನ್ನುತ್ತಿದ್ದರು. ಜಿಬಿಎಂಪಿಯಲ್ಲಿ (ಗ್ರೇಟರ್ ಬೆಂಗಳೂರು ಅಥಾರಿಟಿ) ನಾಮನಿರ್ದೇಶಿತ ಸದಸ್ಯರಿರುವುದಿಲ್ಲ. ಕೇವಲ ಲೋಕಸಭೆ, ರಾಜ್ಯಸಭೆ, ವಿಧಾನಸಭೆ ಹಾಗೂ ಪರಿಷತ್ತಿನ ಚುನಾಯಿತ ಪ್ರತಿನಿಧಿಗಳು ಮಾತ್ರ ಮತದಾನ ಹಕ್ಕನ್ನು ಹೊಂದಿರುತ್ತಾರೆ” ಎಂದು ಸ್ಪಷ್ಟನೆ ನೀಡಿದರು.

“ನಾವು ಕೂಡ ಆಡಳಿತಾತ್ಮಕ ದೃಷ್ಟಿಯಿಂದಲೇ ಪಾಲಿಕೆ ವಿಭಜನೆ ಮಾಡುತ್ತಿದ್ದೇವೆ. ಯಾಕೆ ಮಾಡಬೇಕು. ಇದರಿಂದ ಅನುದಾನದ ಸಮಸ್ಯೆಯಾಗುತ್ತದೆ ಎಂದು ಕೆಲವು ಸದಸ್ಯರು ಪ್ರಸ್ತಾಪಿಸಿದ್ದಾರೆ. ನಾವು ಕೂಡ ಈ ವಿಚಾರವನ್ನು ಅವರುಗಳಂತೆಯೇ ಆಲೋಚನೆ ಮಾಡಿದ್ದೇವೆ. ಸಂವಿಧಾನದ 75ನೇ ತಿದ್ದುಪಡಿ ಪ್ರಕಾರ ಸ್ಥಳೀಯ ಸಂಸ್ಥೆಗಳ ಹಣವನ್ನು ನಾವು ಬೇರೆಡೆಗೆ ವರ್ಗಾವಣೆ ಮಾಡಲು ಸಾಧ್ಯವಿಲ್ಲ. ಜತೆಗೆ ಎಲ್ಲವನ್ನು ಒಟ್ಟಿಗೆ ಸಂಗ್ರಹಿಸಿ ಹಂಚಿಕೆ ಮಾಡಲು ಆಗುವುದಿಲ್ಲ. ಹೀಗಾಗಿ ನಾವು ಸರ್ಕಾರದಿಂದ ಆರ್ಥಿಕವಾಗಿ ದುರ್ಬಲವಾಗಿರುವ ಪಾಲಿಕೆಗಳಿಗೆ ಸಹಾಯ ಮಾಡಬೇಕು ಎಂದು ಈ ಮಸೂದೆಯಲ್ಲಿ ಪ್ರಸ್ತಾಪಿಸಿದ್ದೇವೆ” ಎಂದು ತಿಳಿಸಿದರು.

ಬೆಂಗಳೂರಿನ ಬಗ್ಗೆ ಮುಖ್ಯಮಂತ್ರಿಗಳಿಗೂ ಜವಾಬ್ದಾರಿ ಇರಬೇಕು:

“ಇನ್ನು ಮುಖ್ಯಮಂತ್ರಿಗಳಿಗೆ ಸಮಯಾವಕಾಶ ಇರುವುದಿಲ್ಲ ಎಂಬ ವಿಚಾರ ಪ್ರಸ್ತಾಪಿಸಿದ್ದಾರೆ. ನನಗೂ ಗೊತ್ತಿದೆ. ಸುಮಾರು 1.50 ಕೋಟಿ ಜನರು, ಅಂದರೆ ರಾಜ್ಯದ ಜನಸಂಖ್ಯೆಯಲ್ಲಿ ಶೇ. 25 ರಷ್ಟು ಜನಸಂಖ್ಯೆ ಇರುವ ನಗರದ ಬಗ್ಗೆ ಮುಖ್ಯಮಂತ್ರಿಗಳು ಸಭೆ ಮಾಡಲೇಬೇಕು. ಇದು ಅವರ ಕರ್ತವ್ಯ. ಮುಖ್ಯಮಂತ್ರಿಗಳಾದವರು ಕೇವಲ ನಗರ ಪ್ರದಕ್ಷಿಣೆ ಮಾಡಿದರೆ ಸಾಲುವುದಿಲ್ಲ. ಅವರೂ ಸಭೆ ಮಾಡಬೇಕು. ಹಣಕಾಸು ಹಂಚಿಕೆ ಮಾಡುವವರು ಅವರು. 

ನಾವು ಇಂದು ಪೆರಿಫೆರಲ್ ರಿಂಗ್ ರಸ್ತೆ, ಟನಲ್ ರಸ್ತೆ ಬಗ್ಗೆ ಮಾತನಾಡುತ್ತೇವೆ. ಅಂದೇ ಪಿಆರ್ ಆರ್ ಯೋಜನೆ ಮಾಡಿದ್ದರೆ 3-4 ಸಾವಿರ ಕೋಟಿಯಲ್ಲಿ ಪೂರ್ಣಗೊಳ್ಳುತ್ತಿತ್ತು. ಇಂದು ಆ ವೆಚ್ಚ 26 ಸಾವಿರ ಕೋಟಿ ರೂ. ಆಗುತ್ತಿದೆ. ಅಂದಿನ ಕಾಲದಲ್ಲಿಯೇ ಮೆಟ್ರೋ ಡಬಲ್ ಡೆಕ್ಕರ್ ಮಾಡಿದ್ದರೆ ಇಂದು ಈ ಪರಿಸ್ಥಿತಿ ಇರುತ್ತಿರಲಿಲ್ಲ. 

“ನಗರದ ಸಂಚಾರ ದಟ್ಟಣೆ ಬಗ್ಗೆ ನಮ್ಮ ಮಕ್ಕಳೇ ನನಗೆ ಬಯ್ಯುತ್ತಿರುತ್ತಾರೆ” :

ನೀವು ಬೆಂಗಳೂರಿನ ಯಾವುದೇ ಭಾಗದಲ್ಲಿ ರಸ್ತೆ ಅಗಲೀಕರಣಕ್ಕೆ ಕಟ್ಟಡ ಕೆಡವಬೇಕಾದರೆ ದುಪ್ಪಟ್ಟು ಪರಿಹಾರ ನೀಡಬೇಕು. ಇದೆಲ್ಲವನ್ನು ನೋಡಿಯೇ, ಸಾಲವಾದರೂ ಸರಿ, ಎಲ್ಲ ಯೋಜನೆಗಳನ್ನು ಅನುಷ್ಠಾನಕ್ಕೆ ತರಬೇಕು ಎಂದು ಹೊರಟಿದ್ದೇವೆ. ನಮ್ಮ ಮನೆಯಲ್ಲಿ ನಮ್ಮ ಮಕ್ಕಳೇ ನಗರದ ಸಂಚಾರ ದಟ್ಟಣೆ ವಿಚಾರವಾಗಿ ನನಗೆ ಬಯ್ಯುತ್ತಿರುತ್ತಾರೆ. 

ಗ್ರೇಟರ್ ಬೆಂಗಳೂರು ಪವಿತ್ರವಾದ ಮಸೂದೆ :

ಇದಕ್ಕೂ ಮೊದಲು ವಿಧೇಯಕ ಮಂಡನೆ ಕುರಿತ ಪ್ರಸ್ತಾವನೆ ವೇಳೆ ಮಾತನಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು, “ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕದಲ್ಲಿ 74ನೇ ತಿದ್ದುಪಡಿಗೆ ಯಾವುದೇ ಧಕ್ಕೆಯಾಗುವುದಿಲ್ಲ. ಬೆಂಗಳೂರಿನ ಭವಿಷ್ಯದ ಹಿತದೃಷ್ಟಿಯಿಂದ ಈ ವಿಧೇಯಕ ಪವಿತ್ರವಾದದ್ದು. ಬೆಂಗಳೂರು ವೇಗವಾಗಿ ಬೆಳೆಯುತ್ತಿರುವ ಕಾರಣ ಓರ್ವ ಪಾಲಿಕೆ ಆಯುಕ್ತರು, ಮುಖ್ಯ ಇಂಜಿನಿಯರ್ ಗಳಿಂದ ನಿಭಾಯಿಸಲು ಕಷ್ಟವಾಗುತ್ತಿದೆ. ಹೀಗಾಗಿ ಈ ಮಸೂದೆಯಲ್ಲಿ 7 ಪಾಲಿಕೆ ರಚನೆಗೆ ಮುಂದಾಗಿದ್ದೇವೆ. 

ಭವಿಷ್ಯದ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಈ ಪ್ರಸ್ತಾವನೆ ಸಲ್ಲಿಸಿದ್ದೇವೆ. ಸ್ಥಳೀಯ ಮಟ್ಟದಲ್ಲಿ ಶಾಸಕರಿಗೆ ನಿಯಂತ್ರಣ ಇರಬೇಕು, ವಾರ್ಡ್ ಸಮಿತಿಗಳಾಗಬೇಕು, ಅಲ್ಲಿ ಜನಪ್ರತಿನಿಧಿಗಳು ಇರಬೇಕು. ಈ ಮಸೂದೆಯಲ್ಲಿ ಎಲ್ಲಾ ಶಾಸಕರು, ಸಂಸದರು ಕೂಡ ಸದಸ್ಯರಾಗಿರುತ್ತಾರೆ. ಮುಖ್ಯಮಂತ್ರಿಗಳು ಇದರ ಅಧ್ಯಕ್ಷರಾಗಿರುತ್ತಾರೆ. ಜಿಲ್ಲಾ ಉಸ್ತುವಾರಿ ಸಚಿವರು ಇದಕ್ಕೆ ಉಪಾಧ್ಯಕ್ಷರಾಗಿರುತ್ತಾರೆ. ಪಾಲಿಕೆ ರಚನೆಯನ್ನು ನಾವು ಯಾವುದೇ ರೀತಿ ಬದಲವಾವಣೆ ಮಾಡುತ್ತಿಲ್ಲ” ಎಂದು ತಿಳಿಸಿದರು.

ಪಾಲಿಕೆಯಲ್ಲಿ ಎಲ್ಲಾ ವಿಭಾಗಗಳಿಗೂ ಹೊಣೆಗಾರಿಗೆ, ಜವಾಬ್ದಾರಿ : 

“ತೆರಿಗೆ ವಿಚಾರವಾಗಿ ಈ ಹಿಂದೆ ದೆಹಲಿಯಿಂದ ಕೆಲವು ಸೂಚನೆ ನೀಡಲಾಗಿತ್ತು. ಇಲ್ಲಿನ ತೆರಿಗೆಯನ್ನು ನಾವು ಕೆಲವು ತಿದ್ದುಪಡಿ ಮಾಡಿದ್ದೆವು. ಗ್ರೇಟರ್ ಬೆಂಗಳೂರು ಅಥಾರಿಟಿಯಲ್ಲಿ ಪೊಲೀಸರು, ನೀರು ಸರಬರಾಜು, ಬಿಎಂಟಿಸಿ, ಬಿಎಂಆರ್ ಸಿಎಲ್, ವಿಪತ್ತು ನಿರ್ವಹಣೆ, ಅಗ್ನಿಶಾಮಕದಳ, ಸಂಚಾರಿ ಪೊಲೀಸ್, ಕೊಳೆಗೇರಿ ಅಭಿವೃದ್ಧಿ ಮಂಡಳಿ, ಬೆಸ್ಕಾಂ, ಬಿಎಂಎಲ್ ಟಿಎ, ಬಿಡಿಎ ಸೇರಿದಂತೆ ಇತರೆ ವಿಭಾಗಗಳ ಆಯುಕ್ತರು, ಎಂ.ಡಿ ಹಾಗೂ ಸಿಇಓಗಳನ್ನು ಒಳಗೊಂಡಿದೆ. ಇಲ್ಲಿ ಪ್ರತಿಯೊಬ್ಬರಿಗೂ ಹೊಣೆಗಾರಿಕೆ ಹಾಗೂ ಜವಾಬ್ದಾರಿ ನೀಡಲಾಗಿದೆ” ಎಂದು ತಿಳಿಸಿದರು. 

“ಇನ್ನು ತಜ್ಞರ ಸಮಿತಿಯನ್ನು ರಚಿಸಿದ್ದು, ಆರು ಸಮಿತಿಗಳನ್ನು ನೇಮಿಸಲಾಗಿದೆ. ನಮ್ಮ ಮಸೂದೆಯಲ್ಲಿ 1ರಿಂದ 7 ಪಾಲಿಕೆ ಮಾಡಲು ಅವಕಾಶವಿದೆಯೇ ಹೊರತು, 7ಕ್ಕಿಂತ ಹೆಚ್ಚು ಮಾಡಲು ಅವಕಾಶವಿಲ್ಲ. ಒಂದಾದರೂ ಮಾಡಬಹುದು, ಎರಡು, ಮೂರು, ನಾಲ್ಕು ಹೀಗೆ ಮಾಡಬಹುದು. ಈ ವಿಚಾರದಲ್ಲಿ ಶಾಸಕರ ಅಭಿಪ್ರಾಯವನ್ನು ಪಡೆದು ನಂತರ ತೀರ್ಮಾನ ಮಾಡಲಾಗುವುದು. 

ಇಲ್ಲಿ ಪ್ರತಿ ಪಾಲಿಕೆಯ ಜನಸಂಖ್ಯೆ 10 ಲಕ್ಷಕ್ಕಿಂತ ಹೆಚ್ಚಾಗಿರಬೇಕು. ಕನಿಷ್ಠ 300 ಕೋಟಿಯಷ್ಟು ಆದಾಯ ಸಂಗ್ರಹವಾಗಬೇಕು. ಕೃಷಿಯೇತರ ಉದ್ಯೋಗ ಶೇ.50 ಕ್ಕಿಂತ ಹೆಚ್ಚಾಗಿರಬೇಕು. ಈ ಪಾಲಿಕೆಗೆ ಬೆಂಗಳೂರು ಉತ್ತರ, ದಕ್ಷಿಣ, ಕೇಂದ್ರ ಎಂದೇ ಹೆಸರಿಡಬೇಕು. ಯಾವುದೇ ಕಾರಣಕ್ಕೂ ಬೇರೆ ಹೆಸರು ಇಡುವಂತಿಲ್ಲ. ಆದಷ್ಟು ವಿಧಾನಸಭಾ ಕ್ಷೇತ್ರಗಳನ್ನು ಇಬ್ಬಾಗ ಮಾಡದಂತೆ ನೋಡಿಕೊಳ್ಳಬೇಕು. ಅಗತ್ಯ ಬಿದ್ದರೆ ಮಾತ್ರ ಎರಡು ಪಾಲಿಕೆಗೆ ಮಾತ್ರ ವಿಭಾಗಿಸಬೇಕು. 

ಈ ಪಾಲಿಕೆ ಆಡಳಿತಾವಧಿ 5 ವರ್ಷ ನಿಗದಿ ಮಾಡಿದ್ದು, ಇಲ್ಲಿ ಪ್ರತಿ ಪಾಲಿಕೆಯಲ್ಲಿ 100ರಿಂದ 150 ಸದಸ್ಯರಿಗೆ ಅವಕಾಶ ಮಾಡಿಕೊಡಲಾಗಿದೆ. ಮೇಯರ್, ಉಪಮೇಯರ್ ಅಧಿಕಾರವಧಿ ಎರಡೂವರೆ ವರ್ಷಗಳಿಗೆ ವಿಸ್ತರಿಸಲಾಗಿದೆ. ಮೇಯರ್ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಬೇಕಾದರೆ ಆತ ಮೇಯರ್ ಆಗಿ ಆರು ತಿಂಗಳು ಕಳೆದಿರಬೇಕು” ಎಂದು ಹೇಳಿದರು.

“ವಿಧಾಸಭಾ ಕ್ಷೇತ್ರ ಮಟ್ಟದ ಸಮಿತಿಗೆ ಆಯಾ ಶಾಸಕರೇ ಮುಖ್ಯಸ್ಥರಾಗಿರುತ್ತಾರೆ. ಇನ್ನು ಈ ಸಮಿತಿಯ ಸದಸ್ಯರಾಗಲು ಆ ಕ್ಷೇತ್ರದ ನಿವಾಸಿಯಾಗಿ, ಆ ಕ್ಷೇತ್ರದ ಮತದಾರನಾಗಿರಬೇಕು. ಆ ಭಾಗದ ಪರಿಷತ್ ಸದಸ್ಯರು, ಕಾರ್ಪೊರೇಟರ್, ಇತರೆ ವಿಭಾಗಗಳ ಅಧಿಕಾರಿಗಳು ಸದಸ್ಯರಾಗಿರುತ್ತಾರೆ. ಒಟ್ಟು 6 ವಿವಿಧ ಸಮಿತಿಗಳನ್ನು ಹೊಂದಿದ್ದು ಇದರ ಕಾಲಾವಧಿ ಎರಡೂವರೆ ವರ್ಷಗಳಿರಬೇಕು. ಈ ಸಮಿತಿಯ ಸದಸ್ಯರ ಸಂಖ್ಯೆಯು ಮುಖ್ಯಸ್ಥ ಸೇರಿದಂತೆ 9-15 ಜನ ಇರಬೇಕು. 

ವಾರ್ಡ್ ಸಮಿತಿಯ ಕಾಲಾವಧಿ 20 ತಿಂಗಳು ನಿಗದಿ ಮಾಡಲಾಗಿದ್ದು, ಕಾರ್ಪೊರೇಟರ್ ಇದರ ಮುಖ್ಯಸ್ಥರಾಗಿರುತ್ತಾರೆ. ಇಲ್ಲಿ ನಾಲ್ವರು ಸದಸ್ಯರನ್ನು ಜಿಬಿಎ ಮೂಲಕ ನಾಮನಿರ್ದೇಶನ ಮಾಡಲು ಅವಕಾಶವಿರುತ್ತದೆ. ಇನ್ನು ಪಾಲಿಕೆಯಲ್ಲಿ ಈಗಿರುವ ಮೀಸಲಾತಿ ಮುಂದುವರಿಯಲಿದೆ. ಪಾಲಿಕೆ ಅನುದಾನವನ್ನು ಸೆಕ್ಷನ್ 176 ಪ್ರಕಾರ ಅವಕಾಶ ನೀಡಲಾಗುವುದು” ಎಂದು ಹೇಳಿದರು.

“ಇವಿಷ್ಟು ಹೊರತಾಗಿ ಬಿಜೆಪಿ ಸರ್ಕಾರ ತಂದಿದ್ದ ಯಾವುದೇ ವಿಚಾರ ಬದಲಾವಣೆ ಮಾಡಿಲ್ಲ. ಇನ್ನು ನಮ್ಮ ಸದಸ್ಯರು ಕೂಡ ಸೆಕ್ಷನ್ 9, 10, 15, 84ನಲ್ಲಿ ಕೆಲವು ತಿದ್ದುಪಡಿಗೆ ಸಲಹೆ ನೀಡಿದ್ದು, ಅವುಗಳನ್ನು ಸೇರಿಸಲಾಗಿದೆ. ಈ ಮಸೂದೆಯ ಬಗ್ಗೆ ಎಲ್ಲರೂ ಚರ್ಚಿಸಿದಷ್ಟು ಒಳ್ಳೆಯದು. 

“ಬೆಂಗಳೂರಿನ ಹಿತಾಸಕ್ತಿಗಾಗಿ ಎಲ್ಲರೂ ಒಟ್ಟಾಗಿ ಶ್ರಮಿಸೋಣ. ನಮ್ಮ ಮುಖ್ಯಮಂತ್ರಿಗಳು ಮಂಡಿಸಿರುವ ಬಜೆಟ್ ನಲ್ಲಿ ಬೆಂಗಳೂರಿಗೆ ಸುಮಾರು ರೂ.1 ಲಕ್ಷ ಕೋಟಿಯಷ್ಟು ಮೊತ್ತದ ಯೋಜನೆಗಳನ್ನು ಘೋಷಣೆ ಮಾಡಿದ್ದಾರೆ. ಬೆಂಗಳೂರನ್ನು ಉಳಿಸಬೇಕು ಎಂದು ನಮ್ಮ ಸರ್ಕಾರ ಅತ್ಯಂತ ಧೈರ್ಯದ ನಿರ್ಧಾರ ತೆಗೆದುಕೊಂಡಿದೆ. ಬೆಂಗಳೂರಿನ ರಕ್ಷಣೆಯಲ್ಲಿ ಎಲ್ಲರ ಸಹಕಾರ ಅಗತ್ಯವಿದೆ” ಎಂದು ಡಿಸಿಎಂ ಕರೆ ನೀಡಿದರು. 

ಬೆಂಗಳೂರಿಗೆ ಒಬ್ಬರೇ ಉಸ್ತುವಾರಿ ಸಚಿವರಿರುವುದಿಲ್ಲ :

ಗ್ರೇಟರ್ ಬೆಂಗಳೂರು ಕಾರ್ಯಾಕಾರಿ ಸಮಿತಿಗೆ ಅಧ್ಯಕ್ಷರನ್ನು ನೇಮಿಸುವ ಬಗ್ಗೆ ಶಾಸಕ ಅಶ್ವಥ್ ನಾರಾಯಣ ಅವರು ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ, ಉತ್ತರಿಸಿದ ಡಿಸಿಎಂ ಅವರು, “ಬಿಜೆಪಿ ಸಮಯದಲ್ಲಿ ಬೆಂಗಳೂರಿನವರೇ ಮೂರು ನಾಲ್ಕು ಮಂದಿ ಸಚಿವರು ಇದ್ದರು. ಕಾರ್ಯಕಾರಿ ಸಮಿತಿಯಲ್ಲಿ ಬೆಂಗಳೂರು ಉಸ್ತುವಾರಿ ಸಚಿವರು ಒಬ್ಬರೇ ಇರುವುದಿಲ್ಲ” ಎಂದರು.

“ಡಾಕ್ಟರ್ ಅಶ್ವಥನಾರಾಯಣ ಅವರು ಮರೆತು ಹೋಗಿದ್ದಾರೆ. ಬಿಜೆಪಿ ಅವಧಿಯಲ್ಲಿ ಬೆಂಗಳೂರು ದಕ್ಷಿಣ, ಉತ್ತರಕ್ಕೆ ಉಸ್ತುವಾರಿ ಸಚಿವರಿದ್ದರು. ಬೇಕಿದ್ದರೇ ಅಶೋಕ್ ಅವರನ್ನೇ ಕೇಳಿ”ಎಂದು ಕೃಷ್ಣಭೈರೇಗೌಡ ಅವರು ಡಿಸಿಎಂ ಮಾತಿಗೆ ಬೆಂಬಲವಾಗಿ ನಿಂತರು. 

ಆಗ ಮತ್ತೆ ಉತ್ತರಿಸಿದ ಡಿಸಿಎಂ ಅವರು, “ಕೆ.ಆರ್.ಪುರ ಹಾಗೂ ಮಿಕ್ಕಿದ್ದು ಬಿಟ್ಟು ಏಳು ಸಿಎಂಸಿಗಳಿಗೆ ನಾನೇ ಉಸ್ತುವಾರಿಯಿದ್ದೆ. ಬೆಂಗಳೂರು ನಗರ ಕಾರ್ಪೋರೇಷನ್ ಬೇರೆಯಿತ್ತು. ಬೆಂಗಳೂರಿನಲ್ಲಿ  ಐದಾರು ಜನ ಮಂತ್ರಿಗಳಿದ್ದರೇ, ಆಗ ಯಾರಿಗೆ ಜವಾಬ್ದಾರಿ ಕೊಡಬೇಕು? ಈ ಮೊದಲು ಬೆಂಗಳೂರು ಉಸ್ತವಾರಿಯೇ ಇರಲಿಲ್ಲ, ಕೇವಲ ನಗರಾಭಿವೃದ್ದಿ ಸಚಿವರು ಮಾತ್ರ ಇದ್ದರು. ಧರಂ ಸಿಂಗ್ ಹಾಗೂ ಜಾರ್ಜ್ ಅವರು ಕೇವಲ ನಗರಾಭಿವೃದ್ದಿ ಸಚಿವರಾಗಿದ್ದರು. ಪಂಚಾಯಿತಿಗಳಿಗೆ ಬೇರೆ ಸಚಿವರು ಇದ್ದರು” ಎಂದರು.

ಕಾರ್ಯಾಕಾರಿ ಸಮಿತಿಯ ಅಧ್ಯಕ್ಷ ಹುದ್ದೆಗೆ ಬೆಂಗಳೂರು ಅಭಿವೃದ್ದಿ ಸಚಿವರು ‘ಅಥವಾ’ ಇಂತಹವರನ್ನು ನೇಮಕ ಮಾಡಬಹುದು ಎಂದು ಸೇರಿಸಿರುವುದರ ಬಗ್ಗೆ ತಕರಾರು ವ್ಯಕ್ತಪಡಿಸಿದಾಗ, “ಮುಂದಕ್ಕೆ ನಿಮ್ಮ ಅಥವಾ ನಮ್ಮ ಸರ್ಕಾರ ಬರುತ್ತದೆ ಎಂದು ತಿಳಿದುಕೊಳ್ಳಿ. ಆಗ ಬೆಂಗಳೂರಿನಲ್ಲಿ ಯಾರೂ ಗೆಲ್ಲುವುದಿಲ್ಲ. ಆಗ ಏನು ಮಾಡುತ್ತೀರಿ? ತೆಲಂಗಾಣದಲ್ಲಿ ಕಾಂಗ್ರೆಸ್ ಪಕ್ಷ ಗೆದ್ದಿದೆ. ಆದರೆ ಹೈದರಾಬಾದ್ ಸ್ಥಳೀಯ ಸಂಸ್ಥೆಯಲ್ಲಿ ಒಬ್ಬರೂ ಕಾಂಗ್ರೆಸ್ ಅಭ್ಯರ್ಥಿಗಳು ಗೆದ್ದಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಏನು ಮಾಡುವುದು?” ಎಂದು ಕೇಳಿದರು.

ಸಭಾಧ್ಯಕ್ಷ ಯು.ಟಿ.ಖಾದರ್ ಮಸೂದೆ ಅಂಗೀಕಾರದ ಪ್ರಸ್ತಾಪವನ್ನು ಧ್ವನಿಮತಕ್ಕೆ ಹಾಕಲು ಮುಂದಾದರು. ಆಗ ವಿಪಕ್ಷ ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ಸಭಾತ್ಯಾಗ ಮಾಡಿದರು. ವಿರೋಧ ಹಾಗೂ ಗದ್ದಲದ ಮಧ್ಯೆಯೇ ಮಸೂದೆಗೆ ಸದನದ ಅಂಗೀಕಾರ ಪಡೆದುಕೊಳ್ಳಲಾಯಿತು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

BMTC Isha package tour | ಬೆಂಗಳೂರು-ಇಶಾ ಫೌಂಡೇಶನ್ ಪ್ಯಾಕೇಜ್ ಟೂರಿಗೆ ಒಂದು ವರ್ಷ : 2.55 ಕೋಟಿ ರೂ. ಆದಾಯ

Next Post

Finance News | ಅಮೆರಿಕ ಷೇರು ಮಾರುಕಟ್ಟೆ ಕುಸಿತ : ಹೂಡಿಕೆದಾರರ ಹೂಡಿಕೆ ಮೌಲ್ಯ 4 ಟ್ರಿಲಿಯನ್ ಡಾಲರ್ ಇಳಿಕೆ!!

Next Post

Finance News | ಅಮೆರಿಕ ಷೇರು ಮಾರುಕಟ್ಟೆ ಕುಸಿತ : ಹೂಡಿಕೆದಾರರ ಹೂಡಿಕೆ ಮೌಲ್ಯ 4 ಟ್ರಿಲಿಯನ್ ಡಾಲರ್ ಇಳಿಕೆ!!

Karnataka Budget Session | ಒಂಭತ್ತು ಹೊಸ ವಿಶ್ವ ವಿದ್ಯಾಲಯ ವಿಷಯದಲ್ಲಿ ವಾಸ್ತವವೇನು? : ವಿಧಾನಪರಿಷತ್ ನಲ್ಲಿ ಸಚಿವ ಡಾ.ಎಂ.ಸಿ.ಸುಧಾರಕರ್ ಹೇಳಿದ್ದೇನು?

Please login to join discussion

Like Us on Facebook

Follow Us on Twitter

Recent News

BW SPECIAL | ಕಸ್ತೂರಿರಂಗನ್ ವರದಿ: ಪಶ್ಚಿಮ ಘಟ್ಟ ಸಂರಕ್ಷಣೆಗೆ ‘ಕರ್ನಾಟಕ ಪರ್ಯಾಯ ಮಾದರಿ’ ಮಂಡಿಸಿದ ಡಾ. ಪ್ರಕಾಶ್ ಕಮ್ಮರಡಿ

September 20, 2026

ಕೇವಲ 30 ನಿಮಿಷದಲ್ಲಿ ಕಟ್ಟಡ ನಕ್ಷೆ ಮಂಜೂರಾತಿ: ‘ನಂಬಿಕೆ ನಕ್ಷೆ 2.0’ ಲೋಕಾರ್ಪಣೆ!

September 20, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BW SPECIAL | ಕಸ್ತೂರಿರಂಗನ್ ವರದಿ: ಪಶ್ಚಿಮ ಘಟ್ಟ ಸಂರಕ್ಷಣೆಗೆ ‘ಕರ್ನಾಟಕ ಪರ್ಯಾಯ ಮಾದರಿ’ ಮಂಡಿಸಿದ ಡಾ. ಪ್ರಕಾಶ್ ಕಮ್ಮರಡಿ

September 20, 2026

ಕೇವಲ 30 ನಿಮಿಷದಲ್ಲಿ ಕಟ್ಟಡ ನಕ್ಷೆ ಮಂಜೂರಾತಿ: ‘ನಂಬಿಕೆ ನಕ್ಷೆ 2.0’ ಲೋಕಾರ್ಪಣೆ!

September 20, 2026
ಎಲ್ ಪಿಜಿ ಸಿಲಿಂಡರ್ ಸಾಂದರ್ಭಿಕ ಚಿತ್ರ

​ಎಲ್‌ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ಅಕ್ಟೋಬರ್ 1ರಿಂದ ಹೊಸ ನಿಯಮ ಜಾರಿ

September 20, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d