ಬೆಂಗಳೂರು, ಮಾ.13 www.bengaluruwire.com : ಮಾನನಷ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಬಿಎಂಪಿಯ ನೌಕರರು ಮತ್ತು ಅಧಿಕಾರಿಗಳ ಕಲ್ಯಾಣ ಸಂಘಕ್ಕೆ ಬಿಬಿಎಂಪಿಯ ಪ್ರಥಮ ದರ್ಜೆ ಸಹಾಯಕ(ಎಫ್‌ಡಿಎ) ಮಾಯಣ್ಣ ಅವರು 10 ಲಕ್ಷ ರೂ. ದಂಡ ಪಾವತಿಸುವಂತೆ ನಗರದ 24ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಆದೇಶಿಸಿದೆ.
ಮೂರು ತಿಂಗಳ ಒಳಗಾಗಿ ಸಂಘಕ್ಕೆ ಹಣ ಪಾವತಿಸುವಂತೆ ನ್ಯಾಯಾಧೀಶರಾದ ರೇಣುಕಾ ಡಿ.ರಾಯ್ಕರ್ ಆದೇಶಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯವು ಶಾಶ್ವತ ತಡೆಯಾಜ್ಞೆಯನ್ನೂ ನೀಡಿದೆ.
ಮಾಯಣ್ಣ ಅವರು ಅಪ ಪ್ರಚಾರ ಮಾಡಿ ಸಂಘದ ಅಧ್ಯಕ್ಷ ಹಾಗೂ ಪದಾಧಿಕಾರಿಗಳಿಗೆ ಮಾನಸಿಕ ಹಿಂಸೆ ಮತ್ತು ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಈ ಹಿಂದೆ ಅವರ ವಿರುದ್ಧ ಮಾನನಷ್ಟ ಪ್ರಕರಣ ದಾಖಲಿಸಲಾಗಿತ್ತು. ಈ ಬಗ್ಗೆ ಸುಧೀರ್ಘ ವಿಚಾರಣೆ ನಡೆಸಿದ ನ್ಯಾಯಾಲಯ 10 ಲಕ್ಷ ರೂ. ದಂಡ ಪಾವತಿಸುವಂತೆ ಆದೇಶಿಸಿದೆ.






















