Friday, July 31, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

    Kargil Vijay Diwas | ಕಾರ್ಗಿಲ್ ವಿಜಯ್ ದಿವಸ್: ದೇಶದ ವೀರ ಯೋಧರಿಗೆ ಪ್ರಧಾನಿ ನಮನ

    ನೀಟ್ ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

  • Bengaluru Focus

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

    ಜಕ್ಕೂರು ವೈಮಾನಿಕ ತರಬೇತಿ ಶಾಲೆ ಲೈಸೆನ್ಸ್‌ ನವೀಕರಣ: ಮೈಸೂರು, ಹಾಸನದಲ್ಲಿ ಸ್ಯಾಟಲೈಟ್ ಬೇಸ್

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

BIS Certification To BWSSB | ಬೆಂಗಳೂರು ಜಲಮಂಡಳಿ ನೀರಿನ ಗುಣಮಟ್ಟಕ್ಕೆ ಬಿಐಎಸ್ ಪ್ರಮಾಣಪತ್ರ

ಕುಡಿಯುವ ನೀರಿನ ಸರಬರಾಜು ಹಾಗೂ ಗುಣಮಟ್ಟದ ಬಗ್ಗೆ ದೇಶದಲ್ಲೇ ಮೊದಲ ಬಾರಿಗೆ ಈ ಪ್ರಮಾಣಪತ್ರ ಪಡೆದ ಜಲಮಂಡಳಿಯಾಗಿದೆ. | ಬಿಐಎಸ್‌ ಕಠಿಣ ಪರೀಕ್ಷೆಯಲ್ಲಿ ಪಾಸ್‌, ಸದ್ಯದಲ್ಲೇ ಕೇಂದ್ರ ಸರ್ಕಾರದಿಂದ ಪ್ರಮಾಣ ಪತ್ರ ವಿತರಣೆ.

by Bengaluru Wire Desk
March 14, 2025
in Bengaluru Focus, Public interest
Reading Time: 1 min read
0

ಬೆಂಗಳೂರು, ಮಾ.14 www.bengaluruwire.com : ಬೆಂಗಳೂರು ಜಲಮಂಡಳಿಯ ಪೈಪ್ ಮೂಲಕ ಕುಡಿಯುವ ನೀರು ಸರಬರಾಜು ನಿರ್ವಹಣಾ ವ್ಯವಸ್ಥೆಗೆ ದೇಶದಲ್ಲೇ ಮೊದಲ ಬಾರಿಗೆ ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ (ಬಿಐಎಸ್) ನಿಂದ ಪ್ರಮಾಣ ಪತ್ರ ದೊರೆತಿದೆ.

ಕುಡಿಯುವ ನೀರಿನ ಸರಬರಾಜು ಹಾಗೂ ಗುಣಮಟ್ಟದ ಬಗ್ಗೆ ದೇಶದಲ್ಲೇ ಮೊದಲ ಬಾರಿಗೆ ಈ ಪ್ರಮಾಣಪತ್ರ ಪಡೆದ ಹೆಗ್ಗಳಿಕೆಗೆ ಪಾತ್ರವಾಗಿದೆ. ಕಳೆದ ಆರು ತಿಂಗಳಿನಿಂದ ವಿವಿಧ ಹಂತಗಳಲ್ಲಿ ನಡೆದ ಪರೀಕ್ಷೆಗಳಲ್ಲಿ ನೀರು ಸರಬರಾಜು ವ್ಯವಸ್ಥೆಯಲ್ಲಿ ಅಳವಡಿಸಿಕೊಂಡಿರುವ ಅಂತರರಾಷ್ಟ್ರೀಯ ಮಾನದಂಡಗಳ ಬಗ್ಗೆ ಬಿಐಎಸ್‌ ನ ಕಠಿಣ ಪರೀಕ್ಷೆಯಲ್ಲಿ ಬೆಂಗಳೂರು ಜಲಮಂಡಳಿ ತೇರ್ಗಡೆಯಾಗಿ ಬಿಐಎಸ್ ಪ್ರಮಾಣ ಲಭ್ಯವಾಗಿದೆ.

 ಪೈಪ್ ಮೂಲಕ ಸ್ವಚ್ಛ, ಆರೋಗ್ಯಕರ ನೀರು ಸರಬರಾಜು ಮಾಡುತ್ತಿರುವ ಹಿನ್ನೆಲೆಯಲ್ಲಿ ಜಲ ಮಂಡಳಿಗೆ ಈ ಪ್ರಮಾಣ ಪತ್ರ ದೊರೆತಿದ್ದು ಇಂತಹ ಪ್ರಮಾಣ ಪತ್ರ ಪಡೆದಿರುವ ದೇಶದ ಏಕೈಕ ನೀರು ಸರಬರಾಜು ಮಂಡಳಿಯಾಗಿ ಹೊರಹೊಮ್ಮಿದೆ. 

ಬಿಐಎಸ್ ಪ್ರಮಾಣೀಕರಣದ ವ್ಯಾಪ್ತಿಯು ಜಲಮಂಡಳಿಯ ಸಮಗ್ರ ನೀರಿನ ನಿರ್ವಹಣಾ ಕಾರ್ಯಾಚರಣೆಗಳನ್ನು ಒಳಗೊಂಡಿದೆ. ಇದರಲ್ಲಿ ಮೂಲದಿಂದ ನೀರಿನ ಸೇವನೆ, ಸಂಸ್ಕರಣೆ, ಸಂಗ್ರಹಣೆ, ಪಂಪಿಂಗ್, ಜಲಮಂಳಿ ವ್ಯಾಪ್ತಿಯಲ್ಲಿ ಪೈಪ್ ನೆಟ್‌ವರ್ಕ್ ಮೂಲಕ ವಿತರಣೆ, ನಿರ್ವಹಣೆ, ಮೀಟರಿಂಗ್ ಮತ್ತು ಗ್ರಾಹಕರಿಗೆ ಬಿಲ್ಲಿಂಗ್ಅನ್ನು ಒಳಗೊಂಡಿದೆ. 

BWSSB Head Office
ಬೆಂಗಳೂರು ಜಲಮಂಡಳಿ ಕೇಂದ್ರ ಕಚೇರಿಯ ಸಾಂದರ್ಭಿಕ ಚಿತ್ರ

ಈ ಕುರಿತಂತೆ ಪ್ರತಿಕ್ರಿಯಿಸಿರುವ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, “ನಗರದ ಜನರಿಗೆ ಶುದ್ಧ ಮತ್ತು ಸುರಕ್ಷಿತ ನೀರು ಒದಗಿಸುವುದು ನಮ್ಮ ಪ್ರಮುಖ ಆದ್ಯತೆಯಾಗಿದೆ. ಬಿಐಎಸ್ ಪ್ರಾಮಾಣೀಕರಣ ಪಡೆದ ದೇಶದ ಮೊದಲ ಸಂಸ್ಥೆ ಎಂಬ ಹೆಗ್ಗಳಿಕೆಗೆ ಬೆಂಗಳೂರು ಜಲ ಮಂಡಳಿಯದ್ದಾಗಿರುವುದು ಹೆಮ್ಮೆಯ ವಿಚಾರ” ಎಂದು ಅಭಿನಂದಿಸಿದ್ದಾರೆ.

“ನಾವು ನೀರಿನ ಗುಣಮಟ್ಟ ಮತ್ತು ಸುರಕ್ಷತೆಗೆ ವಿಶೇಷ ಮಾನದಂಡ ಹೊಂದಿದ್ದೇವೆ. ಇದು ಸಾರ್ವಜನಿಕ ಸೇವೆಗಳು ಮತ್ತು ನಗರ ಸುಸ್ಥಿರತೆಯಲ್ಲಿ ಅತ್ಯುನ್ನತ ಮಾನದಂಡಗಳನ್ನು ಅಳವಡಿಸಿಕೊಳ್ಳುವ ನಗರವಾಗಿ ಬ್ರ್ಯಾಂಡ್ ಬೆಂಗಳೂರು ಉಪಕ್ರಮಕ್ಕೆ ಇನ್ನಷ್ಟು ಶಕ್ತಿ ನೀಡಲಿದೆ.  ಸುಸ್ಥಿರ ನೀರಿನ ನಿರ್ವಹಣೆ ಮತ್ತು ಗುಣಮಟ್ಟದ ಜೀವನಕ್ಕಾಗಿ ಬೆಂಗಳೂರನ್ನು ಮಾದರಿ ನಗರವಾಗಿ ರೂಪಿಸಲು ನಾವು ಇನ್ನಷ್ಟು ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸುತ್ತೇವೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಬೆಂಗಳೂರು ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿಯ ಅಧ್ಯಕ್ಷರಾದ ಡಾ.ರಾಮ ಪ್ರಸಾತ್ ಮನೋಹರ್, “ಬೆಂಗಳೂರಿನ ಲಕ್ಷಾಂತರ ನಿವಾಸಿಗಳಿಗೆ ಸೇವೆ ಸಲ್ಲಿಸುತ್ತಿರುವ ಜಲಮಡಳಿಯ ಕಾರ್ಯನಿರ್ವಹಣೆಗೆ ಬಿಐಎಸ್ ಪ್ರಮಾಣಪತ್ರ ಲಭಿಸಿರುವುದು ನಗರದ ನೀರಿನ ಉಪಯುಕ್ತತೆಗೆ ಸಂಬಂಧಿಸಿದಂತೆ ಮಹತ್ವದ ಮೈಲಿಗಲ್ಲಾಗಿದೆ. ನಾಗರಿಕರಿಗೆ ಗುಣಮಟ್ಟದ ಸೇವೆಯನ್ನು ಖಚಿತಪಡಿಸಿಕೊಳ್ಳುವುದನ್ನು ನಮ್ಮ ಆದ್ಯತೆ” ಎಂದು ಅವರು ತಿಳಿಸಿದ್ದಾರೆ. 

“ಬಿಐಎಸ್ ಪ್ರಮಾಣೀಕರಿಸಿದ ಕುಡಿಯುವ ನೀರು ರೋಗಕಾರಕಗಳು ಮತ್ತು ರಾಸಾಯನಿಕಗಳಿಗೆ ಒಡ್ಡಿಕೊಳ್ಳುವ ಅಪಾಯವನ್ನು ಕಡಿಮೆ ಮಾಡುತ್ತದೆ. ಒಟ್ಟಾರೆ ಆರೋಗ್ಯ ಮತ್ತು ಕ್ಷೇಮವನ್ನು ಪ್ರತಿಪಾದಿಸುತ್ತದೆ. ಜಲಮಂಡಳಿ ಪೂರೈಸುವ ನೀರಿನ ಗುಣಮಟ್ಟವು ಉತ್ತಮವಾಗಿದ್ದು, ಜನರಿಗೆ ಅಪಾಯಕಾರಿಯಲ್ಲ ಎಂಬುದರ ಆಧಾರದ ಮೇಲೆ ಈ ಬಿಐಎಸ್ ಪ್ರಮಾಣಪತ್ರ ಜಲಮಂಡಳಿಗೆ ಲಭ್ಯವಾಗಿದೆ” ಎಂದು ತಿಳಿಸಿದ್ದಾರೆ. 

WhatsApp Join our WhatsApp Channel
Previous Post

Free Medicines | 1032 ಬಗೆಯ ಔಷಧಿಗಳ ಉಚಿತ ಪೂರೈಕೆಗೆ ಶೀಘ್ರವೇ ಕ್ರಮ : ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

Next Post

KSMCL News | ರಾಜ್ಯ ಸರ್ಕಾರಕ್ಕೆ 1402 ಕೋಟಿ ರೂ. ಚೆಕ್ ಹಸ್ತಾಂತರಿಸಿದ ಕರ್ನಾಟಕ ರಾಜ್ಯ ಖನಿಜ ನಿಗಮ

Next Post

KSMCL News | ರಾಜ್ಯ ಸರ್ಕಾರಕ್ಕೆ 1402 ಕೋಟಿ ರೂ. ಚೆಕ್ ಹಸ್ತಾಂತರಿಸಿದ ಕರ್ನಾಟಕ ರಾಜ್ಯ ಖನಿಜ ನಿಗಮ

Namma Metro Purple Line

Namma Metro News | ನಮ್ಮ ಮೆಟ್ರೋ ನೇರಳೆ ಮಾರ್ಗದಲ್ಲಿ, ರೈಲು ಆವರ್ತನ ಸೌಲಭ್ಯವನ್ನು ಹೆಚ್ಚಿಸಿದೆ

Please login to join discussion

Like Us on Facebook

Follow Us on Twitter

Recent News

​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

July 31, 2026

ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

July 30, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

July 31, 2026

ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

July 30, 2026

​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

July 30, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group