ಬೆಂಗಳೂರು, ಮಾ.20 www.bengaluruwire.com : ಬಿಎಂಟಿಸಿ ಬಸ್‌ಗಳಲ್ಲಿ ಫೆಬ್ರವರಿ ತಿಂಗಳಲ್ಲಿ ಟಿಕೆಟ್ ರಹಿತವಾಗಿ ಪ್ರಯಾಣಿಸಿದ 2,820 ಪ್ರಯಾಣಿಕರಿಗೆ ದಂಡ ವಿಧಿಸಲಾಗಿದೆ.
ಬಿಎಂಟಿಸಿ ಅಧಿಕಾರಿಗಳು ನಗರದ ವಿವಿಧೆಡೆ ಫೆಬ್ರವರಿ ತಿಂಗಳಲ್ಲಿ 18,051 ಟ್ರಿಪ್‌ಗಳಲ್ಲಿ ತಪಾಸಣೆ ನಡೆಸಿದ್ದರು. ಈ ಸಂದರ್ಭದಲ್ಲಿ ಟಿಕೆಟ್ ಪಡೆಯದೇ ಪ್ರಯಾಣಿಸುತ್ತಿದ್ದವರನ್ನು ಪತ್ತೆ ಹಚ್ಚಿ, ಅವರಿಂದ 6,40,035 ರೂ. ದಂಡ ವಸೂಲಿ ಮಾಡಲಾಗಿದೆ.
ಕರ್ತವ್ಯ ಲೋಪವೆಸಗಿದ ಕಾರಣಕ್ಕಾಗಿ ಬಿಎಂಟಿಸಿ ಸಂಸ್ಥೆಯ 1,613 ನಿರ್ವಾಹಕರ ವಿರುದ್ಧ ಪ್ರಕರಣಗಳು ದಾಖಲಾಗಿವೆ. ಮಹಿಳಾ ಪ್ರಯಾಣಿಕರಿಗೆಂದೇ ಮೀಸಲಾಗಿರುವ ಆಸನಗಳಲ್ಲಿ ಕುಳಿತು ಪ್ರಯಾಣಿಸಿದ 310 ಪುರುಷ ಪ್ರಯಾಣಿಕರಿಗೆ 5,31,000 ರೂ. ದಂಡ ವಿಧಿಸಲಾಗಿದೆ ಎಂದು ಬಿಎಂಟಿಸಿ ಅಧಿಕಾರಿಗಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಹಿಳಾ ಪ್ರಯಾಣಿಕರಿಗೆ ಮೀಸಲಾದ ಆಸನದಲ್ಲಿ ಪುರುಷ ಪ್ರಯಾಣಿಕರು ಆ ಸೀಟುಗಳನ್ನು ಅವರಿಗೆ ಬಿಟ್ಟುಕೊಟ್ಟು ಕುಳಿತುಕೊಳ್ಳಲು ಅವಕಾಶ ಮಾಡಿಕೊಡಬೇಕು ಎಂದು ಬಿಎಂಟಿಸಿ ಕೋರಿದೆ.
