Friday, September 11, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BIS Hallmark | ​ಚೆನ್ನೈನಲ್ಲಿ ಹಾಲ್‌ಮಾರ್ಕ್ ಇಲ್ಲದ ಬರೋಬ್ಬರಿ 804 ಗ್ರಾಂ ಚಿನ್ನಾಭರಣ ವಶ: ಬಿಐಎಸ್ ತಂಡದಿಂದ ದಾಳಿ: ಚಿನ್ನಾಭರಣ ಅಸಲಿತನ ಹೇಗೆ ಚೆಕ್ ಮಾಡೋದು ಗೊತ್ತಾ?

    CM DK Shivakumar Open Letter | ಅಧಿಕಾರಕ್ಕಿಂತ ಹೊಣೆಗಾರಿಕೆ ದೊಡ್ಡದು: 100 ದಿನ ಪೂರೈಸಿದ ಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಪತ್ರ

    Free Coaching | ಮುಖ್ಯಮಂತ್ರಿ ವಿದ್ಯಾರ್ಥಿ ಸಹಾಯ ಹಸ್ತ: 90,000 ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಆನ್‌ಲೈನ್ ಕೋಚಿಂಗ್

    ಪಿಡಬ್ಲ್ಯುಡಿ ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್: 25ಕ್ಕೂ ಹೆಚ್ಚು ಕಡೆ ದಾಳಿ

    ಆರೋಗ್ಯ ಸಂದೇಶಕ್ಕೆ ಸಾಹಿತ್ಯದ ಸ್ಪರ್ಶ: ‘ವೈದ್ಯಲೋಕ’ ಕಥೆ-ಕವನ ಸ್ಪರ್ಧೆ ಪ್ರಶಸ್ತಿ ಪ್ರದಾನ

    ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

    ಉಡುಪಿ ಶ್ರೀಕೃಷ್ಣ ಮಠ, ಬೆಂಗಳೂರು ಇಸ್ಕಾನ್ ಸೇರಿ ದೇಶಾದ್ಯಂತ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

  • Bengaluru Focus

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    BWSSB News | ಬೆಂಗಳೂರಿನಲ್ಲಿ ತ್ಯಾಜ್ಯ ನೀರು ಸಂಸ್ಕರಣೆಗೆ ಬಿಗಿಯಾದ ಕ್ರಮ: KSPCB, ಜಲಮಂಡಳಿಗೆ ಸಚಿವ ರಾಮಲಿಂಗಾರೆಡ್ಡಿ ಗಡುವು

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BW SPECIAL | ಬೆಂಗಳೂರಿಗೆ ಆಡಳಿತ ಗ್ರಹಣ: ಮೇಯರ್, ಕಾರ್ಪೊರೇಟರ್‌ಗಳಿಲ್ಲದೆ 6 ವರ್ಷ ಪೂರ್ಣ

    ಪಿಡಬ್ಲ್ಯುಡಿ ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್: 25ಕ್ಕೂ ಹೆಚ್ಚು ಕಡೆ ದಾಳಿ

    ಓಲಾ, ಊಬರ್ ಗೂ ಬಿಎಂಟಿಸಿ ಲೈವ್ ಟ್ರ್ಯಾಕಿಂಗ್ ಆಪ್: ಮೆಟ್ರೋಗೆ 200 ಮಿನಿ ಎಸಿ ಬಸ್ ಸಂಪರ್ಕ

    ಯಶವಂತಪುರ ಎಪಿಎಂಸಿಗೆ ಸಿಎಂ ದಿಢೀರ್ ಭೇಟಿ: ವಿಮೆ ವಂಚಿಸಿದ ಸೊಸೈಟಿ ಕಾರ್ಯದರ್ಶಿ ವಜಾಕ್ಕೆ ಡಿಕೆಶಿ ಸೂಚನೆ

    ಆರೋಗ್ಯ ಸಂದೇಶಕ್ಕೆ ಸಾಹಿತ್ಯದ ಸ್ಪರ್ಶ: ‘ವೈದ್ಯಲೋಕ’ ಕಥೆ-ಕವನ ಸ್ಪರ್ಧೆ ಪ್ರಶಸ್ತಿ ಪ್ರದಾನ

    Railway News | ಶಿವಮೊಗ್ಗ-ಬೆಂಗಳೂರು-ತಿರುಪತಿ ವಂದೇ ಭಾರತ್ ಎಕ್ಸ್‌ಪ್ರೆಸ್‌ ಶೀಘ್ರ?

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Jewells News | ಬೆಂಗಳೂರಿನಲ್ಲಿ ಇಂದಿನಿಂದ ನಾಲ್ಕು ದಿನಗಳ ಆಭರಣ ಪ್ರದರ್ಶನ ಮತ್ತು ವಾಣಿಜ್ಯ ಮೇಳ : ದೇಶ ವಿದೇಶಗಳ ಖರೀದಿದಾರರು ಭಾಗಿ

ದೇವನಹಳ್ಳಿ ಬಳಿ ಜ್ಯುವೆಲ್ಲರಿ ಪಾರ್ಕ್ ಸ್ಥಾಪನೆಗೆ ಜಾಗ : ಆಭರಣ ಉದ್ಯಮಿಗಳಿಗೆ ಮೇಳ ಉದ್ಘಾಟನೆ ಸಂದರ್ಭದಲ್ಲಿ ಆಹ್ವಾನ‌ ನೀಡಿದ ಸಚಿವ ಎಂ.ಬಿ ಪಾಟೀಲ

by Bengaluru Wire Desk
March 21, 2025
in Bengaluru Focus, Life Style
Reading Time: 1 min read
0

ಬೆಂಗಳೂರು, ಮಾ.21 www.bengaluruwire.com : ಆಭರಣ ರಫ್ತಿಗೆ ಉತ್ತೇಜನ ನೀಡಲು ಸರ್ಕಾರ ಒತ್ತು ನೀಡಲಿದ್ದು, ದೇವನಹಳ್ಳಿ ವಿಮಾನ ನಿಲ್ದಾಣ ಸಮೀಪದಲ್ಲಿ ಜ್ಯುವೆಲ್ಲರಿ ಪಾರ್ಕ್ ನಿರ್ಮಾಣಕ್ಕೆ ಜಾಗ ನೀಡಲು ರಾಜ್ಯ ಸರ್ಕಾರ ಮುಕ್ತವಾಗಿದ್ದು, ಇದನ್ನು ಆಭರಣ ಉದ್ಯಮಿಗಳು ಸದುಪಯೋಗ ಮಾಡಿಕೊಳ್ಳಬೇಕು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಶುಕ್ರವಾರ ಹೇಳಿದರು.

ಇಲ್ಲಿನ ಬೆಂಗಳೂರು ಅಂತರರಾಷ್ಟ್ರೀಯ ಪ್ರದರ್ಶನ ಕೇಂದ್ರದಲ್ಲಿ (BIEC) ಮಾ.24ರ ತನಕ ನಡೆಯುತ್ತಿರುವ ನಾಲ್ಕು ದಿನಗಳ ಆಭರಣ ಪ್ರದರ್ಶನ ಮತ್ತು ವಾಣಿಜ್ಯ ಮೇಳಕ್ಕೆ ಅವರು ಶುಕ್ರವಾರ ಚಾಲನೆ ನೀಡಿ ಮಾತನಾಡಿದರು.

ಆಭರಣಗಳ ರಫ್ತಿಗೆ ಇರುವ ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳುವ ನಿಟ್ಟಿನಲ್ಲಿ ಹೂಡಿಕೆ ಮಾಡಲು ಉದ್ಯಮಿಗಳು ಮುಂದಾಗಬೇಕು. ಸುಸ್ಥಿರತೆಗೆ ಒತ್ತು ನೀಡುವ ದಿಸೆಯಲ್ಲಿ ‘ನೆಟ್ ಜೀರೋ ಜ್ಯುವೆಲ್ಲರಿ ಪಾರ್ಕ್’ ನಿರ್ಮಿಸಲು ಹಿತಾಸಕ್ತಿದಾರರು ಗಮನ ವಹಿಸಬೇಕು ಎಂದು ಇದೇ ಸಂದರ್ಭದಲ್ಲಿ ಅಭಿಪ್ರಾಯಪಟ್ಟರು.  

ಇದೇ 24ರವರೆಗೆ ನಡೆಯಲಿರುವ ದೇಶದ ಮೂರನೇ ಅತಿದೊಡ್ಡ ಚಿನ್ನಾಭರಣ ಮೇಳವನ್ನು ಮುಂಬರುವ ಅಕ್ಷಯ ತೃತೀಯ ಹಿನ್ನೆಲೆಯಲ್ಲಿ ದಿ ಜೆಮ್ ಅಂಡ್ ಜ್ಯೂವೆಲರಿ ಎಕ್ಸ್ಪೋರ್ಟ್ ಪ್ರಮೋಶನ್ ಕೌನ್ಸಿಲ್ ಏರ್ಪಡಿಸಿದೆ.

ಬೆಂಗಳೂರು ಅಂತರರಾಷ್ಟ್ರೀಯ ಪ್ರದರ್ಶನ ಕೇಂದ್ರದಲ್ಲಿ ಚಿನ್ನಾಭರಣ ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಚಾಲನೆ ನೀಡಿ ಚಿನ್ನಾಭರಣ ಮಳಿಗೆಗಳಿಗೆ ಸಚಿವ ಎಂ.ಬಿ.ಪಾಟೀಲ ಭೇಟಿ ನೀಡಿದರು.

ವಿಶ್ವ ದರ್ಜೆಯ ಮೂಲಸೌಕರ್ಯ, ಪುರೋಗಾಮಿ ನೀತಿಗಳು ಮತ್ತು ಕೌಶಲ್ಯಪೂರ್ಣ ಕೆಲಸಗಾರರನ್ನು ಹೊಂದಿರುವ ರಾಜ್ಯವು ಆಭರಣ ತಯಾರಿಕೆ ಮತ್ತು ರಫ್ತು ವಹಿವಾಟಿಗೆ ಪ್ರಶಸ್ತ ತಾಣವಾಗಿದೆ. ಇದಕ್ಕೆ ಪೂರಕವಾಗಿ, ಉಡುಪಿಯಲ್ಲಿ ಇರುವ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಜೆಮ್ ಅಂಡ್ ಜ್ಯೂವೆಲ್ಲರಿ ಸಂಸ್ಥೆಯು ಆಭರಣ ಕುಶಲಕರ್ಮಿಗಳನ್ನು ಸಜ್ಜುಗೊಳಿಸುತ್ತಿದೆ ಎಂದು ಸಚಿವರು ವಿವರಿಸಿದರು. 

ದೇಶದಲ್ಲಿ ವಾರ್ಷಿಕ 32 ಬಿಲಿಯನ್ ಡಾಲರ್ ಮೊತ್ತದ ಆಭರಣ ವಹಿವಾಟು ನಡೆಯುತ್ತಿದೆ. ಮುಖ್ಯವಾಗಿ ಇಲ್ಲಿಂದ ಅಮೆರಿಕ, ಅರಬ್ ಸಂಯುಕ್ತ ಸಂಸ್ಥಾನ, ರಷ್ಯಾ, ಸಿಂಗಪುರ್ ಮತ್ತು ಹಾಂಕಾಂಗ್ ಮಾರುಕಟ್ಟೆಗೆ ಹೆಚ್ಚಿನ ಆಭರಣಗಳನ್ನು ಕಳುಹಿಸಲಾಗುತ್ತಿದೆ. ಉಡುಪಿಯಲ್ಲಿರುವ ಕಾಮನ್ ಫೆಸಿಲಿಟಿ ಸೆಂಟರ್ ಐದು ವರ್ಷಗಳ ಹಿಂದೆ 55 ವಿದ್ಯಾರ್ಥಿಗಳನ್ನು ಹೊಂದಿತ್ತು. ಈಗ ಅಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳಿದ್ದು, ಅವರಿಗೆ ಹೊಸ ಬಗೆಯ ಕೌಶಲ್ಯಗಳನ್ನು  ಕಲಿಸಲಾಗುತ್ತಿದೆ. ಅದರಲ್ಲೂ ಮುಖ್ಯವಾಗಿ ಮಹಿಳೆಯರು ಮತ್ತು ಯುವಜನರಿಗೆ ಆದ್ಯತೆ ನೀಡಲಾಗಿದೆ ಎಂದು ಪಾಟೀಲ ಅವರು ತಿಳಿಸಿದರು.

ಪ್ರಸ್ತುತ ಮೇಳದಲ್ಲಿ ಆಭರಣ ವಲಯದ 80 ಪ್ರಮುಖ ಕಂಪನಿಗಳು ಪಾಲ್ಗೊಂಡಿವೆ. ಇವು ಹೊಸ ಬಗೆಯ ಯಂತ್ರೋಪಕರಣಗಳು, ತಂತ್ರಜ್ಞಾನ ಮತ್ತು ಪ್ಯಾಕೇಜಿಂಗ್ ಬಗ್ಗೆ ಗಮನ ಕೇಂದ್ರೀಕರಿಸಿವೆ. ಜತೆಗೆ ಭಾರತದ 15 ಸಾವಿರ ಮತ್ತು ವಿದೇಶಗಳ 300ಕ್ಕೂ ಹೆಚ್ಚು ಆಭರಣ ಖರೀದಿದಾರರು ಭಾಗವಹಿಸುತ್ತಿದ್ದಾರೆ. ಈಗ ಹೊಸ ಬಗೆಯ ವಿನ್ಯಾಸಗಳ ಆಭರಣಗಳಿಗೆ ಇರುವ ಬೇಡಿಕೆಯನ್ನು ತಿಳಿಸಿದರೆ, ಅಂತಹ ವಿನ್ಯಾಸಗಳನ್ನು ಅಕ್ಷಯ ತೃತೀಯ ವೇಳೆಗೆ ಸಿದ್ಧಪಡಿಸಿ, ವ್ಯಾಪಾರಿಗಳಿಗೆ ಪೂರೈಸಲಾಗುವುದು ಎಂದರು.

ರಾಜ್ಯವು ಉದ್ಯಮಸ್ನೇಹಿ ಮತ್ತು ರಫ್ತುಕೇಂದ್ರಿತ ಹೊಸ ಕೈಗಾರಿಕಾ ನೀತಿಯನ್ನು ಹೊಂದಿದೆ. ವಿದೇಶಿ ಹೂಡಿಕೆಯಲ್ಲಿ ದೇಶದಲ್ಲಿ ಮೊದಲ ಸ್ಥಾನದಲ್ಲಿರುವ ಕರ್ನಾಟಕವು ಜಿ.ಎಸ್.ಟಿ. ಸಂಗ್ರಹದಲ್ಲಿ ಎರಡನೇ ಸ್ಥಾನದಲ್ಲಿದೆ. ಇದಲ್ಲದೆ, ಉದ್ಯಮ ಬೆಳವಣಿಗೆಗೆ ಸಂಬಂಧಿಸಿದ ಇನ್ನೂ ಕೆಲವಾರು ಸೂಚ್ಯಂಕಗಳಲ್ಲಿ ರಾಜ್ಯವು ಮೇಲ್ಪಂಕ್ತಿಯಲ್ಲಿದೆ. 

2033ರ ವೇಳೆಗೆ ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಹೊಂದಲಿದ್ದು, ಅದಕ್ಕಾಗಿ ಈಗಾಗಲೇ ಕಾರ್ಯ ಆರಂಭವಾಗಿದೆ. ಹೀಗಾಗಿ, ಆಭರಣ ಉದ್ದಿಮೆದಾರರು ರಾಜ್ಯದಲ್ಲಿ ಹೂಡಿಕೆ ಮಾಡುವತ್ತ ಗಮನ ಹರಿಸಬೇಕು. ಈ ವಲಯದ ಬೆಳವಣಿಗೆಗೆ ಬೇಕಾದ ಎಲ್ಲಾ ಸೌಲಭ್ಯಗಳನ್ನೂ ಸರಕಾರವು ಒದಗಿಸಲಿದೆ ಎಂದು ಬೆಂಬಲದ ಮಾತುಗಳನ್ನಾಡಿದರು.

ನಾಲ್ಕು ದಿನಗಳ ಆಭರಣ ಮೇಳ, ಅಂಗಡಿ ಮತ್ತು ದೊಡ್ಡ ಮಟ್ಟದ ಆಭರಣ ಉದ್ಯಮದವರಿಗೆ ಮಾತ್ರ ಪ್ರವೇಶವಿದೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

STRR Project News | ಬೆಂಗಳೂರು ಉಪನಗರ ವರ್ತುಲ ರಸ್ತೆ ಯೋಜನೆಗೆ ಶೀಘ್ರವೇ ಕೇಂದ್ರ ಸಚಿವ ಸಂಪುಟದ ಒಪ್ಪಿಗೆ

Next Post

Kaveri Aarti In Sanky Lake | ಕಾವೇರಿ ಆರತಿ ಮೂಲಕ ಗಂಗೆಗೆ ನಮಿಸಿ, ಜಲಸಂರಕ್ಷಣೆಗೆ ಪಣತೊಟ್ಟ ಬೆಂಗಳೂರು

Next Post

Kaveri Aarti In Sanky Lake | ಕಾವೇರಿ ಆರತಿ ಮೂಲಕ ಗಂಗೆಗೆ ನಮಿಸಿ, ಜಲಸಂರಕ್ಷಣೆಗೆ ಪಣತೊಟ್ಟ ಬೆಂಗಳೂರು

Plastic Water Bottle | ಕುಡಿದ ಖಾಲಿ ವಾಟರ್ ಬಾಟಲಿ, ಚಿಲ್ಲರೆ ಅಂಗಡಿಗೆ ಕೊಟ್ರೆ ನಿಮಗೆ ಸಿಗುತ್ತೆ ಹಣ : ಸದ್ಯದಲ್ಲೇ ಹೊಸ ನಿಯಮ ಜಾರಿ

Please login to join discussion

Like Us on Facebook

Follow Us on Twitter

Recent News

GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

September 11, 2026

ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

September 11, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

September 11, 2026

ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

September 11, 2026

BWSSB News | ಬೆಂಗಳೂರಿನಲ್ಲಿ ತ್ಯಾಜ್ಯ ನೀರು ಸಂಸ್ಕರಣೆಗೆ ಬಿಗಿಯಾದ ಕ್ರಮ: KSPCB, ಜಲಮಂಡಳಿಗೆ ಸಚಿವ ರಾಮಲಿಂಗಾರೆಡ್ಡಿ ಗಡುವು

September 11, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d