Sunday, September 6, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

    ಉಡುಪಿ ಶ್ರೀಕೃಷ್ಣ ಮಠ, ಬೆಂಗಳೂರು ಇಸ್ಕಾನ್ ಸೇರಿ ದೇಶಾದ್ಯಂತ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

    ​ಬೆಂಗಳೂರು ಆಗಸದಲ್ಲಿ ಮತ್ತೆ ಲೋಹದ ಹಕ್ಕಿಗಳ ಕಲರವ: ಫೆಬ್ರವರಿ 8 ರಿಂದ 16ನೇ ‘ಏರೋ ಇಂಡಿಯಾ 2027’ ಸಂಭ್ರಮ

    Hebbal Short Tunnel IISC Study Report | ಹೆಬ್ಬಾಳ ಕಿರು ಸುರಂಗ ಯೋಜನೆ ಅವೈಜ್ಞಾನಿಕ: ರಾಜ್ಯಪಾಲರಿಗೆ ಐಐಎಸ್ಸಿ ವರದಿ ಸಲ್ಲಿಕೆ

    ಕೆಪಿಎಸ್ ಸ್ಸಿ ಕೇಂದ್ರ ಕಚೇರಿ ಕಟ್ಟಡ

    KPSC KAS Recruitment 2026 | ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ಸೆಪ್ಟೆಂಬರ್ 7ರವರೆಗೆ ವಿಸ್ತರಣೆ

    IST | ಒನ್ ನೇಷನ್, ಒನ್ ಟೈಮ್: 6 ತಿಂಗಳಲ್ಲಿ ದೇಶಾದ್ಯಂತ ಕಡ್ಡಾಯವಾಗಲಿದೆ ‘ಭಾರತೀಯ ಪ್ರಮಾಣಿತ ಸಮಯ’

    ಗ್ರಾ.ಪಂ ಸೇವೆ, ಇ-ಸ್ವತ್ತು ಅಹವಾಲಿಗೆ ಶೀಘ್ರವೇ ಆನ್‌ಲೈನ್ ಆ್ಯಪ್: ಸಚಿವ ಈಶ್ವರ ಖಂಡ್ರೆ ಸೂಚನೆ

    Kudremukh Neelakurinji | ​ಕುದುರೆಮುಖ ಬೆಟ್ಟಗಳಲ್ಲಿ ನೀಲಕುರಿಂಜಿ ವೈಭವ

    NEET PG-2026 | ನೀಟ್ ಪಿಜಿ-2026 ಪರೀಕ್ಷೆ ಯಶಸ್ವಿ: 2.65 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಭಾಗಿ

  • Bengaluru Focus
    Namma Metro Purple Line

    Namma Metro News | ನಮ್ಮ ಮೆಟ್ರೋ ನೇರಳೆ, ಹಸಿರು ಮಾರ್ಗಕ್ಕೆ 4 ಹೊಸ ರೈಲುಗಳು ಶೀಘ್ರದಲ್ಲೇ ಸೇರ್ಪಡೆ

    ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

    ಬೆಂಗಳೂರಿಗೆ ಬಿಗ್ ಗಿಫ್ಟ್: ಬಿಎಂಟಿಸಿಗೆ ಹಂತ ಹಂತವಾಗಿ 4,500 ಹೊಸ ಎಲೆಕ್ಟ್ರಿಕ್ ಬಸ್‌ಗಳ ಸೇರ್ಪಡೆ

    ​ಬೆಂಗಳೂರು ಆಗಸದಲ್ಲಿ ಮತ್ತೆ ಲೋಹದ ಹಕ್ಕಿಗಳ ಕಲರವ: ಫೆಬ್ರವರಿ 8 ರಿಂದ 16ನೇ ‘ಏರೋ ಇಂಡಿಯಾ 2027’ ಸಂಭ್ರಮ

    2021ರ ಪಾರ್ಕಿಂಗ್ ನೀತಿಯಡಿ ಹೊಸ ಕರಡು ನಿಯಮ ಪ್ರಕಟ: ಕಟ್ಟಡದಲ್ಲಿ ಪಾರ್ಕಿಂಗ್ ಜಾಗ ವಾಣಿಜ್ಯ ಉದ್ದೇಶಕ್ಕೆ ಬಳಸಿದ್ರೆ ಕಠಿಣ ಕ್ರಮ

    Hebbal Short Tunnel IISC Study Report | ಹೆಬ್ಬಾಳ ಕಿರು ಸುರಂಗ ಯೋಜನೆ ಅವೈಜ್ಞಾನಿಕ: ರಾಜ್ಯಪಾಲರಿಗೆ ಐಐಎಸ್ಸಿ ವರದಿ ಸಲ್ಲಿಕೆ

    ಕಲಾಗ್ರಾಮದ ಸಮಾಧಿಗಳನ್ನು ತಕ್ಷಣ ತೆರವುಗೊಳಿಸಿ: ಹೈಕೋರ್ಟ್ ವಕೀಲ ಎನ್.ಪಿ. ಅಮೃತೇಶ್ ಸರ್ಕಾರಕ್ಕೆ ನೋಟಿಸ್

    ಬೆಂಗಳೂರಿನ ಇಸ್ಕಾನ್ ದೇವಸ್ಥಾನ

    Temple News | ​ಬೆಂಗಳೂರಿನ ಇಸ್ಕಾನ್ ದೇವಾಲಯಗಳಲ್ಲಿ ನಾಳೆಯಿಂದ ಅದ್ಧೂರಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

    ಕೆಪಿಎಸ್ ಸ್ಸಿ ಕೇಂದ್ರ ಕಚೇರಿ ಕಟ್ಟಡ

    KPSC KAS Recruitment 2026 | ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ಸೆಪ್ಟೆಂಬರ್ 7ರವರೆಗೆ ವಿಸ್ತರಣೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Life Style

Plastic Water Bottle | ಕುಡಿದ ಖಾಲಿ ವಾಟರ್ ಬಾಟಲಿ, ಚಿಲ್ಲರೆ ಅಂಗಡಿಗೆ ಕೊಟ್ರೆ ನಿಮಗೆ ಸಿಗುತ್ತೆ ಹಣ : ಸದ್ಯದಲ್ಲೇ ಹೊಸ ನಿಯಮ ಜಾರಿ

by Bengaluru Wire Desk
March 22, 2025
in Life Style, Public interest
Reading Time: 1 min read
0

ಬೆಂಗಳೂರು, ಮಾ.22 www.bengaluruwire.com : ನೀರು ಕುಡಿದ ಬಳಿಕ ಪ್ಲಾಸ್ಟಿಕ್ ಬಾಟಲಿಗಳನ್ನು ಎಲ್ಲೆಂದರಲ್ಲಿ ಎಸೆಯುವುದಕ್ಕೆ ಕಡಿವಾಣ ಹಾಕಲು ಮುಂದಾಗಿರುವ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ಈಶ್ವರ ಬಿ ಖಂಡ್ರೆ, ನೀರಿನ ಬಾಟಲಿ ಮಾರುವ ಮಳಿಗೆಗಳು ಕಡ್ಡಾಯವಾಗಿ ಖಾಲಿ ನೀರಿನ ಬಾಟಲಿಗೆ ಕನಿಷ್ಠ ಬೆಲೆ ನೀಡಿ ಮರು ಖರೀದಿಸುವಂತೆ ನಿಯಮ ರೂಪಿಸಲು ಸೂಚನೆ ನೀಡಿದ್ದಾರೆ.

ತತ್ಸಂಬಂಧ ನಿಯಮ ರೂಪಿಸಲು ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯವರಿಗೆ ಸೂಚನೆ ನೀಡಿರುವ ಅವರು, ಬಾಟಲಿಗಳ ಮೂಲಕ ಕುಡಿಯುವ ನೀರನ್ನು ಮಾರಾಟ ಮಾಡುವ ಕಂಪನಿಗಳಿಗೆ ಆ ಪ್ಲಾಸ್ಟಿಕ್ ಬಾಟಲಿಯ ವೈಜ್ಞಾನಿಕ ವಿಲೇವಾರಿಯ ಜವಾಬ್ದಾರಿಯೂ ಇರುತ್ತದೆ. ಈ ಹಿನ್ನೆಲೆಯಲ್ಲಿ ಖಾಲಿ ಬಾಟಲಿಗಳನ್ನು ಕನಿಷ್ಠ ದರ ನೀಡಿ ಮರಳಿ ಖರೀದಿಸುವಂತೆ ನಿಯಮ ರೂಪಿಸಿದಲ್ಲಿ ಪ್ಲಾಸ್ಟಿಕ್ ಬಾಟಲಿಯ ಹಾವಳಿ ತಡೆಯಲು ಸಾಧ್ಯವಾಗುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಮಣ್ಣಲ್ಲಿ ಮಣ್ಣಾಗದ, ನೀರಿನಲ್ಲಿ ಕರಗದ, ಸುಟ್ಟರೆ ಪ್ರಾಣವಾಯುವಿಗೆ ವಿಷಕಾರಿ ಅಂಶಗಳನ್ನು ಸೇರ್ಪಡೆ ಮಾಡುವ ಪ್ಲಾಸ್ಟಿಕ್ ಪ್ರಕೃತಿ ಪರಿಸರಕ್ಕೆ ಅಷ್ಟೇ ಅಲ್ಲದೆ ಜನ, ಜಾನುವಾರಗಳ ಆರೋಗ್ಯಕ್ಕೂ ಮಾರಕವಾಗಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ನಿರ್ದಿಷ್ಟ ಏಕ ಬಳಕೆ ಪ್ಲಾಸ್ಟಿಕ್ ತಯಾರಿಕೆ, ದಾಸ್ತಾನು, ಮಾರಾಟ, ಬಳಕೆಯನ್ನು ನಿಷೇಧಿಸಿದ್ದು, ರಾಜ್ಯ ಸರ್ಕಾರ ಕೂಡ ಈ ಸಂಬಂಧ ನಿಯಮಗಳನ್ನು ರೂಪಿಸಿದೆ. ಆದಾಗ್ಯೂ ಏಕ ಬಳಕೆ ಪ್ಲಾಸ್ಟಿಕ್ ಉತ್ಪನ್ನಗಳು ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟವಾಗುತ್ತಿದ್ದು, ಪರಿಸರಕ್ಕೆ ಹಾನಿ ಆಗುತ್ತಿರುವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಮೊದಲಿಗೆ ರಸ್ತೆಯ ಬದಿಯಲ್ಲಿ ಎಲ್ಲೆಂದರಲ್ಲಿ ಬಿದ್ದು ಪರಿಸರ ಹಾಳು ಮಾಡುತ್ತಿರುವ, ಖನಿಜಯುಕ್ತ ನೀರಿನ ಬಾಟಲಿ (Mineral water bottles – ಮಿನರಲ್ ವಾಟರ್ ಬಾಟಲ್ಸ್)ಗೆ ಕಡಿವಾಣ ಹಾಕಬೇಕಾಗಿದೆ. ಹೊಸ ನೀರಿನ ಬಾಟಲಿ ಖರೀದಿಸಲು ಬರುವ ಗ್ರಾಹಕರಿಂದ ಬಾಟಲಿ ನೀರು ಮಾರುವ ಚಿಲ್ಲರೆ ಮಳಿಗೆಗಳು ಯಾವುದೇ ಕಂಪನಿಯ ನೀರಿನ ಬಾಟಲಿ ನೀಡಿದರೂ ಅದಕ್ಕೆ ಕನಿಷ್ಠ ಬೆಲೆ ನೀಡಿ/ ಅಷ್ಟು ದರ ಕಡಿತ ಮಾಡಿ ಹೊಸ ಬಾಟಲಿ ಮಾರಾಟ ಮಾಡುವಂತೆ ಮತ್ತು ಈ ರೀತಿ ಸಂಗ್ರಹಿಸಲಾದ ಖಾಲಿ ಬಾಟಲಿಗಳನ್ನು ನೀರು ಮಾರಾಟ ಮಾಡುವ ಕಂಪನಿಗಳೇ ಹಿಂಪಡೆದು, ವೈಜ್ಞಾನಿಕವಾಗಿ ವಿಲೇವಾರಿ ಮಾಡುವುದನ್ನು ಕಡ್ಡಾಯಗೊಳಿಸಲು ಸೂಚಿಸಿದ್ದಾರೆ.

ಉತ್ಪಾದಕರ ವಿಸ್ತರಿತ ಜವಾಬ್ದಾರಿ (ಇ.ಪಿ.ಆರ್. – Extended Producer Responsibility)ಯಂತೆ ಯಾವುದೇ ಉತ್ಪನ್ನವನ್ನು ತಯಾರಿಸುವವರು, ತಮ್ಮ ಉತ್ಪನ್ನಗಳಿಂದ ಪರಿಸರ ಮೇಲಾಗುವ ಪರಿಣಾಮಗಳನ್ನು ಉತ್ಪನ್ನವು ಗ್ರಾಹಕರ ಕೈಸೇರಿದ ನಂತರವೂ ನಿರ್ವಹಿಸುವ ಜವಾಬ್ದಾರಿ ಹೊಂದಿರುತ್ತಾರೆ. 

ಈ ಹಿನ್ನೆಲೆಯಲ್ಲಿ ಖಾಲಿ ಬಾಟಲಿಗಳನ್ನು ನೀರು ಮಾರಾಟ ಮಾಡುವ ಕಂಪನಿಗಳೇ ಮರು ಖರೀದಿ ಮಾಡಿ ವಿಲೇವಾರಿ ಮಾಡಿದಲ್ಲಿ ಬೃಹತ್ ಪ್ರಮಾಣದಲ್ಲಿ ಸಂಗ್ರಹವಾಗುತ್ತಿರುವ ಪ್ಲಾಸ್ಟಿಕ್ ತ್ಯಾಜ್ಯ ನಿಯಂತ್ರಿಸಬಹುದು ಎಂಬುದು ಸಚಿವ ಈಶ್ವರ ಖಂಡ್ರೆ ಅವರ ಅಭಿಮತವಾಗಿದೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

Kaveri Aarti In Sanky Lake | ಕಾವೇರಿ ಆರತಿ ಮೂಲಕ ಗಂಗೆಗೆ ನಮಿಸಿ, ಜಲಸಂರಕ್ಷಣೆಗೆ ಪಣತೊಟ್ಟ ಬೆಂಗಳೂರು

Next Post

Bangalore Rain | ಕಾದು ಕೆಂಡವಾಗಿದ್ದ ಬೆಂಗಳೂರಿಗೆ ತಂಪೆರೆದ ಮುಂಗಾರು ಪೂರ್ವ ಮಳೆಯ ಸಿಂಚನ  

Next Post

Bangalore Rain | ಕಾದು ಕೆಂಡವಾಗಿದ್ದ ಬೆಂಗಳೂರಿಗೆ ತಂಪೆರೆದ ಮುಂಗಾರು ಪೂರ್ವ ಮಳೆಯ ಸಿಂಚನ  

ಸಾಂದರ್ಭಿಕ ಚಿತ್ರ

Finance News | ಬ್ಯಾಂಕಿಂಗ್ ನಿಯಮಗಳು ಏ.1 ರಿಂದ ಬದಲಾಗುತ್ತಿವೆ : ಇಲ್ಲಿದೆ ಗ್ರಾಹಕರು ತಿಳಿದುಕೊಳ್ಳಬೇಕಾದ ಸಂಗತಿಗಳು

Please login to join discussion

Like Us on Facebook

Follow Us on Twitter

Recent News

Namma Metro Purple Line

Namma Metro News | ನಮ್ಮ ಮೆಟ್ರೋ ನೇರಳೆ, ಹಸಿರು ಮಾರ್ಗಕ್ಕೆ 4 ಹೊಸ ರೈಲುಗಳು ಶೀಘ್ರದಲ್ಲೇ ಸೇರ್ಪಡೆ

September 5, 2026

ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

September 4, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
Namma Metro Purple Line

Namma Metro News | ನಮ್ಮ ಮೆಟ್ರೋ ನೇರಳೆ, ಹಸಿರು ಮಾರ್ಗಕ್ಕೆ 4 ಹೊಸ ರೈಲುಗಳು ಶೀಘ್ರದಲ್ಲೇ ಸೇರ್ಪಡೆ

September 5, 2026

ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

September 4, 2026

ಉಡುಪಿ ಶ್ರೀಕೃಷ್ಣ ಮಠ, ಬೆಂಗಳೂರು ಇಸ್ಕಾನ್ ಸೇರಿ ದೇಶಾದ್ಯಂತ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

September 4, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d