Saturday, March 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

BBMP NEWS | ಬಿಬಿಎಂಪಿ ಬಜೆಟ್ ಕುರಿತ ಸಭೆಗೆ ನಗರದ ಬಿಜೆಪಿ ಶಾಸಕರ ಗೈರು ಹಾಜರಿ : ಜನಹಿತ ಮರೆತ ಕಮಲ ಪಕ್ಷ?

ಅಕ್ರಮ ಕಟ್ಟಡ ನಿರ್ಮಾಣ ತಡೆಯಲು ಪಾಲಿಕೆಯಿಂದ AI ಬಳಕೆ | ಶೀಘ್ರವೇ ಬಿಬಿಎಂಪಿ ಚುನಾವಣೆ | ಮನೆ ಬಾಗಿಲಿಗೆ ಉಚಿತ ಖಾತೆ ಏಪ್ರಿಲ್ ನಿಂದ ಜಾರಿ | ಬೀದಿ ಬದಿ ವ್ಯಾಪಾರಿಗಳ ನೋಂದಣಿ ಕಾಲಮಿತಿ ಏಪ್ರಿಲ್ ತನಕ ವಿಸ್ತರಣೆ

by Bengaluru Wire Desk
March 24, 2025
in Bengaluru Focus
Reading Time: 2 mins read
0

ಬೆಂಗಳೂರು, ಮಾ.24 www.bengaluruwire.com : “ಅನುಮತಿ ನೀಡಿದ್ದಕ್ಕಿಂತ ಹೆಚ್ಚು ವಿಸ್ತೀರ್ಣದ ಹಾಗೂ ಮಹಡಿಗಳನ್ನು ಅಕ್ರಮವಾಗಿ ಕಟ್ಟಿಕೊಂಡಿದ್ದಾರೆ. ಇಂತಹ ಅಕ್ರಮಗಳನ್ನು ʼಎಐʼ ತಂತ್ರಜ್ಞಾನದ ಮೂಲಕ ಪತ್ತೆ ಮಾಡುವ ವ್ಯವಸ್ಥೆ ಜಾರಿಗೆ ತರಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

2025- 26 ನೇ ಸಾಲಿನ ಬಿಬಿಎಂಪಿ ಬಜೆಟ್ ಕುರಿತು ಬೆಂಗಳೂರು ನಗರದ ಶಾಸಕರ ಜತೆ ಸಭೆ ಬಳಿಕ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸೋಮವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಅಕ್ರಮ ನಿರ್ಮಾಣ ಕಟ್ಟಡವನ್ನು ಎಷ್ಟು ವಿಸ್ತೀರ್ಣದಲ್ಲಿ, ಎಷ್ಟು ಎತ್ತರದಲ್ಲಿ ಕಟ್ಟಿದ್ದಾರೆ ಎಂಬುದು ತಿಳಿಯುತ್ತದೆ. ಜತೆಗೆ ಪ್ರತಿಯೊಂದು ಮನೆಯ ದಾಖಲೆಯೂ ಸಿಗುತ್ತದೆ” ಎಂದು ಹೇಳುತ್ತಾ ಅಕ್ರಮ ನಿರ್ಮಾಣವನ್ನು ಎಐ ತಂತ್ರಜ್ಞಾನದ ಮೂಲಕ ಹಿಮ್ಮೆಟ್ಟಿಸುವ ಸುಳಿವನ್ನು ನೀಡಿದರು.

“ನಗರದ ಸುಮಾರು 7 ಲಕ್ಷ ಮನೆಗಳು ತೆರಿಗೆ ಕಟ್ಟಿರಲಿಲ್ಲ. ಇವುಗಳಲ್ಲಿ 1 ಲಕ್ಷ ಮನೆಗಳು ತೆರಿಗೆ ವ್ಯಾಪ್ತಿಗೆ ಬಂದಿದ್ದು, ಇನ್ನೂ 6 ಲಕ್ಷ ಮನೆಗಳನ್ನು ತೆರಿಗೆ ವ್ಯಾಪ್ತಿಗೆ ತರಬೇಕಿದೆ. ಆದ ಕಾರಣ ಒಂದು ಬಾರಿ ಪಾವತಿಗೆ ಅವಕಾಶ (ಓಟಿಎಸ್) ಮಾಡಿಕೊಡಲಾಯಿತು. ಅಕ್ರಮ ನಿರ್ಮಾಣಗಳನ್ನು ಮುಟ್ಟುಗೋಲು ಹಾಕಿಕೊಳ್ಳುವ ಅವಕಾಶ ಪಾಲಿಕೆಗೆ ಇರಲಿಲ್ಲ. ಕಳೆದ ವಾರ ಸದನದಲ್ಲಿ ಈ ಬಗ್ಗೆ ವಿಧೇಯಕ ಅಂಗೀಕಾರವಾಗಿದೆ. ಜೊತೆಗೆ ಕಂದಾಯ ಬಡಾವಣೆಗಳಲ್ಲಿ ಇರುವ ಖಾಸಗಿ ರಸ್ತೆಗಳನ್ನೂ ಸಹ ಸರ್ಕಾರಿ ರಸ್ತೆಗಳು ಎಂದು ಘೋಷಣೆ ಮಾಡಲಾಗುವುದು” ಎಂದರು. 

“ನಗರದಲ್ಲಿ ಉತ್ತಮ ತೆರಿಗೆ ಸಂಗ್ರಹವಾಗಬೇಕು. ನೀರು, ರಸ್ತೆ ಸೇರಿದಂತೆ ಅನೇಕ ಮೂಲಸೌಕರ್ಯಗಳನ್ನು ನೀಡಿದ್ದೇವೆ. ಆದರೆ ಅನೇಕರು ಇದಕ್ಕೆ ತಕ್ಕಂತೆ ತೆರಿಗೆ ಪಾವತಿ ಮಾಡುತ್ತಿಲ್ಲ” ಎಂದು ಬೇಸರ ವ್ಯಕ್ತಪಡಿಸಿದರು. 

ಅಧಿಕಾರಿಗಳ ಅಕ್ರಮ; ಗಮನಕ್ಕೆ ತರದೆಯೂ ಅಮಾನತು ಮಾಡಿ :

“ಮನೆ, ನಿವೇಶನ ಮಾಲೀಕರ ಜೊತೆ ಒಳ ಒಪ್ಪಂದ ಮಾಡಿಕೊಂಡು ಕಂದಾಯ ಬಡಾವಣೆ ಅಕ್ರಮಗಳಲ್ಲಿ ಅಧಿಕಾರಿಗಳು ಭಾಗಿಯಾಗಿದ್ದರೆ ಅಂತಹವರನ್ನು ನನ್ನ ಗಮನಕ್ಕೆ ತರದೆಯೂ ಕೂಡಲೇ ಅಮಾನತು ಮಾಡಿ ಎಂದು ಉನ್ನತ ಅಧಿಕಾರಿಗಳಿಗೆ ತಿಳಿಸಿದ್ದೇನೆ. ಇತ್ತೀಚೆಗೆ ಅನೇಕ ದಂಡ ಶುಲ್ಕಗಳ ಮೊತ್ತವನ್ನು ಕೂಡ ಕಡಿಮೆ ಮಾಡಲಾಗಿದೆ. ನಗರದ ವ್ಯಾಪ್ತಿಯ ಎಲ್ಲಾ ಮನೆಗಳು ತೆರಿಗೆ ವ್ಯಾಪ್ತಿಗೆ ಬರಲೇಬೇಕು, ಅವರು ತೆರಿಗೆ ಕಟ್ಟಲೇಬೇಕು. ಇದರಲ್ಲಿ ರಾಜಿಯಾಗುವುದಿಲ್ಲ” ಎಂದು ತಿಳಿಸಿದರು. 

ಕಾಂಗ್ರೆಸ್ ಕೆಲ ಸಚಿವರು, ಶಾಸಕರು ಹಾಗೂ ಅಧಿಕಾರಿಗಳು ಪಾಲಿಕೆ ಬಜೆಟ್ ಪೂರ್ವ ಸಭೆಯಲ್ಲಿ ಪಾಲ್ಗೊಂಡಿದ್ದರು.

“ಮನೆ ನಿರ್ಮಾಣ ವಿಚಾರದಲ್ಲಿ ಶೇ. 50 ರಷ್ಟು ಗುಂಪು ಮನೆಗಳು, ಶೇ. 50 ರಷ್ಟು ಒಂಟಿ ಮನೆಗಳು ಮಾಡಬೇಕು ಎನ್ನುವ ಸಲಹೆಯನ್ನು ಶಾಸಕರು ನೀಡಿದ್ದಾರೆ” ಎಂದು ಹೇಳಿದರು.

ಮನೆ ಬಾಗಿಲಿಗೆ ಉಚಿತ ಖಾತೆ ಏಪ್ರಿಲ್ ನಿಂದ ಜಾರಿ :

“ಮನೆ ಬಾಗಿಲಿಗೆ ತೆರಳಿ ಉಚಿತವಾಗಿ ಖಾತೆ ನೀಡುವ ವಿನೂತನ ವ್ಯವಸ್ಥೆಯನ್ನು ಇಡೀ ದೇಶದಲ್ಲಿಯೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಜಾರಿಗೆ ತರಲಾಗಿದೆ. ಈ ಕಾರ್ಯಕ್ರಮಕ್ಕೆ ಏಪ್ರಿಲ್ ತಿಂಗಳಿನಿಂದ ಚಾಲನೆ ದೊರೆಯಲಿದೆ”.

“ಪ್ರತಿಯೊಂದು ಆಸ್ತಿ ದಾಖಲೆಗಳನ್ನು ಡಿಜಿಟಲೀಕರಣ ಮಾಡಲಾಗಿದೆ. ಅಕಸ್ಮಾತ್ ತಪ್ಪಿಹೋಗಿದ್ದಲ್ಲಿ ಅಂತವರು ತಮ್ಮ ದಾಖಲೆಗಳನ್ನು ಮತ್ತೆ ನೀಡಬಹುದು. ಬೆಂಗಳೂರು ನಗರದ ಪ್ರತಿ ಕ್ಷೇತ್ರದ ಶಾಸಕರ ಬಳಿ ಮಾತನಾಡಿ, ಕ್ಷೇತ್ರವಾರು ಕಾರ್ಯಕ್ರಮ ನಡೆಸಿ ಈ ಬಗ್ಗೆ ಅರಿವು ಮೂಡಿಸಲಾಗುವುದು” ಎಂದರು.

ಕಾಂಗ್ರೆಸ್ ಸರ್ಕಾರದಿಂದ ದಾಖಲೆಯುತ ಅನುದಾನ :

“ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಬಿಬಿಎಂಪಿಗೆ ನೀಡುತ್ತಿರುವ ಅನುದಾನವನ್ನು 4 ಸಾವಿರ ಕೋಟಿ ರೂಪಾಯಿಯಿಂದ 7 ಸಾವಿರ ಕೋಟಿಗೆ ಹೆಚ್ಚಳ ಮಾಡಿದೆ. ಎಫ್ ಎಆರ್, ಜಾಹೀರಾತಿನಿಂದ ಪಾಲಿಕೆಗೆ ಆದಾಯ ಬರುತ್ತದೆ ಎಂದು ಅಂದಾಜು ಮಾಡಲಾಗಿತ್ತು. 

ನ್ಯಾಯಲಯ ಜಾಹೀರಾತು ವಿಚಾರದಲ್ಲಿ ಮಧ್ಯಪ್ರವೇಶ ಮಾಡಿದ ಕಾರಣ ಇದರಿಂದ ನಿರೀಕ್ಷಿತ ಆದಾಯ ಕಷ್ಟಸಾಧ್ಯ. ನ್ಯಾಯಲಯ ಈ ಹಿಂದೆ ಎರಡು- ಮೂರು ವಿಚಾರದಲ್ಲಿ ಹೀಗೆ ಮಧ್ಯಪ್ರವೇಶ ಮಾಡಿದ ಕಾರಣ ನಾವು ಜಾಗೃತರಾಗಿ ಬಜೆಟ್ ಮಂಡಿಸಬೇಕಾಗುತ್ತದೆ. 

ಈ ಬಾರಿಯ ರಾಜ್ಯ ಬಜೆಟ್ ಅಲ್ಲಿ ಸಿಎಂ ಸಿದ್ದರಾಮಯ್ಯ ಅವರು ಬೆಂಗಳೂರಿಗೆ ಅನೇಕ ಕೊಡುಗೆಗಳನ್ನು ಕೊಟ್ಟಿದ್ದಾರೆ. ಡಬಲ್ ಡೆಕ್ಕರ್, ಮೆಟ್ರೋ, ಮೇಲ್ಸೇತುವೆ, ಸುರಂಗ ರಸ್ತೆಗೆ ಹಣ ಕೊಟ್ಟಿದ್ದಾರೆ. ಇಷ್ಟು ದಿನಗಳ ಕಾಲ ಯಾವುದೇ ಸರ್ಕಾರವೂ ಬೆಂಗಳೂರಿಗೆ ಇಷ್ಟು ಹೆಚ್ಚಿನ ಅನುದಾನ ನೀಡಿರಲಿಲ್ಲ. ಈಗ ಬೆಂಗಳೂರಿಗೆ ಅತಿಹೆಚ್ಚು ಅನುದಾನ ನೀಡಿದೆ” ಎಂದರು.

ಬೀದಿಬದಿ ವ್ಯಾಪಾರಕ್ಕೆ 3778 ತಳ್ಳುವ ಗಾಡಿಗಾಗಿ ಅರ್ಜಿ ಸಲ್ಲಿಕೆ :

“ಬೀದಿ ಬದಿ ವ್ಯಾಪಾರಿಗಳಿಗೆ ರಸ್ತೆಬದಿ ಮಳಿಗೆ ನಿರ್ಮಾಣಕ್ಕೆ ಮುಂದಿನ ದಿನಗಳಲ್ಲಿ ಅವಕಾಶವಿಲ್ಲ. ಈ ಬಗ್ಗೆ ನ್ಯಾಯಲಯದ ನಿರ್ದೇಶನವೂ ಇದೆ. ಈಗ ಸುಮಾರು 3,778 ಜನ ತಳ್ಳುವ ಗಾಡಿ ನೀಡಿ ಎಂದು ಅರ್ಜಿ ಹಾಕಿದ್ದಾರೆ. ನಾವು ಈ ವರ್ಷ ಪಾಲಿಕೆಯಿಂದ ಸುಮಾರು 10 ಸಾವಿರ ತಳ್ಳುವ ಗಾಡಿಗಳನ್ನು ನೀಡಲು ತಯಾರಿದ್ದೇವೆ. ಗಾಡಿ ಬೇಕಾದವರು ನೋಂದಣಿ ಮಾಡಿಕೊಳ್ಳಬೇಕು. ಗಾಡಿಯನ್ನು ಸುಮ್ಮನೆ ನಿಲ್ಲಿಸಿಕೊಳ್ಳುವಂತಿಲ್ಲ. ಪ್ರತಿದಿನ ಎಲ್ಲಿ, ಯಾವ ಜಾಗದಲ್ಲಿ ವಹಿವಾಟು ನಡೆಸಲಾಯಿತು ಎನ್ನುವ ಮಾಹಿತಿ ತಿಳಿದುಕೊಳ್ಳುವ ವ್ಯವಸ್ಥೆ ಜಾರಿಗೆ ತರಲಿದ್ದೇವೆ. ಗಾಡಿಯನ್ನು ಮನೆಯಲ್ಲಿ ನಿಲ್ಲಿಸಿಕೊಳ್ಳಬೇಕು. ಮತ್ತೊಬ್ಬರಿಗೆ ಮಾರುವುದಕ್ಕೆ ಅವಕಾಶವಿಲ್ಲ” ಎಂದರು.

ಬೀದಿಬದಿ ವ್ಯಾಪಾರಿಗಳ ನೋಂದಣಿ ಕಾಲಮಿತಿ ಏಪ್ರಿಲ್ ತನಕ ವಿಸ್ತರಣೆ :

“ಇದುವರೆಗೂ ಪಾಲಿಕೆಯಿಂದ 27,565 ಬೀದಿ ಬದಿ ವ್ಯಾಪಾರಿಗಳು ನೋಂದಣಿ ಮಾಡಿಕೊಂಡಿದ್ದಾರೆ. ನೋಂದಣಿ ದಿನಾಂಕವನ್ನು ಏಪ್ರಿಲ್ ಕೊನೆಯವರೆಗೆ ವಿಸ್ತರಿಸಲಾಗುವುದು. ನೋಂದಣಿ ಮಾಡಿಕೊಳ್ಳದ ವ್ಯಾಪಾರಿಗಳನ್ನು ಗಡವು ನಂತರ ತೆರವುಗೊಳಿಸಲಾಗುವುದು. ನೋಂದಣಿ ಮಾಡಿಕೊಂಡವರಿಗೆ ಸಹಾಯಧನ ನೀಡಿ ತಳ್ಳುವ ಗಾಡಿಗಳನ್ನು ನೀಡಲಾಗುವುದು. ಆಟೋ, ಬೈಸಿಕಲ್, ಬೈಕ್ ಹಾಗೂ ಸಾಂಪ್ರದಾಯಿಕ ತಳ್ಳುವ ಗಾಡಿ ಹೀಗೆ ನಾಲ್ಕು ಮಾದರಿಯ ತಳ್ಳು ಗಾಡಿಗಳನ್ನು ಪಾಲಿಕೆ ಸಿದ್ಧಪಡಿಸಿದೆ.” ಎಂದರು.

“ಇವುಗಳನ್ನು ತಯಾರಿಸಲು ಟೆಂಡರ್ ಕರೆಯಲಾಗುತ್ತೆ. ನೋಂದಣಿ ಮಾಡಿಸಿಕೊಂಡವರ ಪೈಕಿ ಶೇಕಡವಾರು ಪ್ರಮಾಣದಲ್ಲಿ ಈ ಸೌಲಭ್ಯ ನೀಡಲಾಗುವುದು. ವ್ಯಾಪಾರ ಮುಗಿದ ನಂತರ ಗಾಡಿಗಳನ್ನು ಅಲ್ಲಿಯೇ ನಿಲ್ಲಿಸುವಂತಿಲ್ಲ. ಪ್ರತಿ ಬೀದಿ ಬದಿ ವ್ಯಾಪಾರಿಗಳ ಲೆಕ್ಕಾಚಾರ ಪಾಲಿಕೆ ಬಳಿ ಇರಬೇಕು. ಪೊಲೀಸರು, ಅಧಿಕಾರಿಗಳು, ಗೂಂಡಾಗಳು ತೊಂದರೆ ಕೊಡುತ್ತಾರೆ ಎನ್ನುವ ದೂರುಗಳನ್ನು ತಪ್ಪಿಸಲು ಈ ವ್ಯವಸ್ಥೆ ತರಲಾಗುತ್ತಿದೆ. ಒಂದು ಕುಟುಂಬಕ್ಕೆ ಒಂದೇ ಗಾಡಿ” ಎಂದು ತಿಳಿಸಿದರು.

ಶೀಘ್ರವೇ ಬಿಬಿಎಂಪಿ ಚುನಾವಣೆ :

ಕಳೆದ ಐದು ವರ್ಷಗಳಿಂದ ಬಿಬಿಎಂಪಿ ಚುನಾವಣೆ ನಡೆಯದ ಬಗ್ಗೆ ಕೇಳಿದಾಗ, “ಬಿಬಿಎಂಪಿ ಚುನಾವಣೆಯನ್ನು ಆದಷ್ಟು ಶೀಘ್ರದಲ್ಲಿಯೇ ನಡೆಸಲು ಸರ್ಕಾರ ತಯಾರಿ ಮಾಡಿಕೊಂಡಿದೆ. ಗ್ರೇಟರ್ ಬೆಂಗಳೂರು ವಿಧೇಯಕಕ್ಕೆ ಈಗಾಗಲೇ ಒಪ್ಪಿಗೆ ಸಿಕ್ಕಿದೆ. ಇದರ ಬಗ್ಗೆ ವಿಪಕ್ಷಗಳು ಜಂಟಿ ಸದನ ಸಮಿತಿ ರಚಿಸುವಂತೆ ಮನವಿ ಮಾಡಿದ್ದೆವು. ಈಗಾಗಲೇ ಅನೇಕರು ತಮ್ಮ ಸಲಹೆಗಳನ್ನು ನೀಡಿದ್ದಾರೆ. ರಾಜ್ಯಪಾಲರು ಎಷ್ಟು ಬೇಗ ಸಹಿ ಹಾಕಿ ಕಳುಹಿಸುತ್ತಾರೋ ಅಷ್ಟು ಬೇಗ ಪ್ರದೇಶಗಳನ್ನು ಗುರುತಿಸಿ, ಶಾಸಕರ ಬಳಿ ಮತ್ತೊಮ್ಮೆ ಚರ್ಚೆಮಾಡಿ ಚುನಾವಣೆಗೆ ತೆರಳುತ್ತೇವೆ. ಸಂವಿಧಾನದ 73, 74ನೇ ತಿದ್ದುಪಡಿ ಬಗ್ಗೆ ನಮಗೆ ಬದ್ಧತೆಯಿದೆ” ಎಂದರು.

“ಬೆಂಗಳೂರು ನಗರದ ಚುನಾಯಿತ ಪ್ರತಿನಿಧಿಗಳು ಬಿಬಿಎಂಪಿ ಬಜೆಟ್ ಬಗ್ಗೆ ಚರ್ಚೆ, ಸಲಹೆ ಸೂಚನೆ ವೇಳೆ ತಮ್ಮ ಕ್ಷೇತ್ರದ ಬೇಡಿಕೆಗಳು, ಸಮಸ್ಯೆಗಳು ಸೇರಿದಂತೆ ಹಲವಾರು ವಿಚಾರಗಳನ್ನು ಗಮನಕ್ಕೆ ತಂದಿದ್ದಾರೆ. ಇವುಗಳನ್ನು ಗಮನದಲ್ಲಿಟ್ಟುಕೊಂಡು ಈ ಬಾರಿ ಬಜೆಟ್ ಮಂಡಿಸಲಾಗುವುದು” ಎಂದು ಮಾಹಿತಿ ನೀಡಿದರು.

ರಾಜಕೀಯ ಕಾರಣಕ್ಕೆ ಬಿಜೆಪಿಯವರು ಸಭೆಗೆ ಗೈರು :

“ಸದನದಿಂದ ಅಮಾನತು ಆದೇಶವನ್ನು ಹಿಂಪಡೆಯಿರಿ ಎಂದು ಅನೇಕ ಬಿಜೆಪಿ ಶಾಸಕರು ಬಿಬಿಎಂಪಿ ಬಜೆಟ್ ಸಭೆಗೆ ಗೈರಾಗಿದ್ದಾರೆ. ಇದು ನನಗೆ ಸಂಬಂಧಪಟ್ಟ ವಿಚಾರವಲ್ಲ ಸಭಾಧ್ಯಕ್ಷರು ಹಾಗೂ ನೀವುಂಟು ಎಂದು ಹೇಳಿದ್ದೇನೆ. ಸಭೆಯಲ್ಲಿ ಹಾಜರಿರುವ ಶಾಸಕರು, ಮಂತ್ರಿಗಳ ಬಳಿ ಬಜೆಟ್ ಬಗ್ಗೆ ಸಲಹೆ ಸೂಚನೆಗಳನ್ನು ತೆಗೆದುಕೊಂಡಿದ್ದೇವೆ. ಬಿಬಿಎಂಪಿ ಆಡಳಿತಾಧಿಕಾರಿಗಳು ಸಮಯ ನೋಡಿ ವಾಸ್ತವವಾಗಿ ಎಷ್ಟು ಗಾತ್ರದ ಬಜೆಟ್ ಅನ್ನು ಮಂಡಿಸಲು ಸಾಧ್ಯವೋ ಅದನ್ನು ಮಂಡಿಸುತ್ತಾರೆ” ಎಂದು ತಿಳಿಸಿದರು.

“ಅಶೋಕ್, ಅಶ್ವಥ ನಾರಾಯಣ ಅವರ ಬಳಿ ಬಜೆಟ್ ಸಭೆ ದಿನಾಂಕದ ಬಗ್ಗೆ ಚರ್ಚೆ ಮಾಡಿಯೇ ನಿಗದಿ ಮಾಡಿದ್ದೆ. ಅವರಿಂದ ಸೂಕ್ತ ಸಲಹೆಗಳನ್ನು ಪಡೆದುಕೊಂಡು ಬಜೆಟ್ ನಲ್ಲಿ ಬದಲಾವಣೆ ಮಾಡಲು ನಾವು ಬದ್ದರಾಗಿದ್ದೇವೆ. ಅನಧಿಕೃತವಾಗಿ ವಿರೋಧ ಪಕ್ಷಗಳ ನಾಯಕರು ಸಹ ನಮ್ಮ ಅನೇಕ ನಿರ್ಧಾರಗಳನ್ನು ಸ್ವಾಗತಿಸಿದ್ದಾರೆ. ರಾಜಕೀಯ ಕಾರಣಕ್ಕೆ ಸಭೆಗೆ ಗೈರಾಗಿದ್ದಾರೆ” ಎಂದು ಬೆಂಗಳೂರು ಅಭಿವೃದ್ಧಿ ಸಚಿವ ಡಿ.ಕೆ.ಶಿವಕುಮಾರ್ ಹೇಳಿದರು.

ಬಿಬಿಎಂಪಿ ಬಜೆಟ್ ಕುರಿತ ಬೆಂಗಳೂರು ನಗರದ ಶಾಸಕರ ಜೊತೆಗಿನ ಸಭೆಯಲ್ಲಿ ಸಚಿವರಾದ ರಾಮಲಿಂಗಾರೆಡ್ಡಿ, ಕೃಷ್ಣ ಭೈರೇಗೌಡ, ದಿನೇಶ್ ಗುಂಡೂರಾವ್, ಜಮೀರ್ ಅಹ್ಮದ್, ಕಾಂಗ್ರೆಸ್ ನೊಂದಿಗೆ ಗುರುತಿಸಿಕೊಂಡಿರುವ ಎಸ್.ಟಿ. ಸೋಮಶೇಖರ್ ಹೊರತುಪಡಿಸಿ ಉಳಿದ ಯಾವ ಶಾಸಕರು ಸಭೆಗೆ ಬಂದಿರಲಿಲ್ಲ. ಆದರೆ ಕಾಂಗ್ರೆಸ್ ಶಾಸಕರಾದ ರಿಜ್ವಾನ್ ಅರ್ಷದ್, ಎನ್.ಎ ಹ್ಯಾರಿಸ್, ಎ.ಸಿ ಶ್ರೀನಿವಾಸ್, ಎಂಎಲ್ಸಿ ನಾಗರಾಜ್ ಯಾದವ್, ಬಿಬಿಎಂಪಿ ಆಡಳಿತಾಧಿಕಾರಿ ಉಮಾಶಂಕರ್, ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್, ಬಿ ಡಬ್ಲ್ಯೂ ಎಸ್ ಎಸ್ ಬಿ ಅಧ್ಯಕ್ಷ ರಾಮ್ ಪ್ರಸಾತ್ ಮನೋಹರ್, ಡಿಸಿಎಂ ಕಾರ್ಯದರ್ಶಿ, ಬಿಎಂಆರ್ ಡಿಎ ಕಮಿಷನರ್ ರಾಜೇಂದ್ರ ಚೋಳನ್ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

Power News | ಸ್ಮಾರ್ಟ್ ಮೀಟರ್ ಟೆಂಡರಲ್ಲಿ ಹಗರಣವಾಗಿಲ್ಲ, ನಿಯಮಾನುಸಾರ ಗುತ್ತಿಗೆ ನೀಡಲಾಗಿದೆ : ಇಂಧನ ಇಲಾಖೆ ಎಸಿಎಸ್ ಗೌರವ ಗುಪ್ತಾ ಸ್ಪಷ್ಟನೆ

Next Post

Village Names In Google | ಗೂಗಲ್ : ರಾಜ್ಯದ ಗ್ರಾಮಗಳ ಹೆಸರು ತಪ್ಪಾಗಿ ಬಳಕೆ ; ಸಮಸ್ಯೆ ಬಗೆಹರಿಸಲು ಯೋಜನೆ

Next Post

Village Names In Google | ಗೂಗಲ್ : ರಾಜ್ಯದ ಗ್ರಾಮಗಳ ಹೆಸರು ತಪ್ಪಾಗಿ ಬಳಕೆ ; ಸಮಸ್ಯೆ ಬಗೆಹರಿಸಲು ಯೋಜನೆ

ರೈಲು ಪ್ರಯಾಣಿಕರ ಕ್ಷೇಮಕ್ಕೆ ಮಹತ್ವದ ಕೊಡುಗೆ : ನೈಋತ್ಯ ರೈಲ್ವೆಯ 5 ಸಿಬ್ಬಂದಿಗೆ ಸುರಕ್ಷತಾ ಪ್ರಶಸ್ತಿ ಪ್ರದಾನ

Please login to join discussion

Like Us on Facebook

Follow Us on Twitter

Recent News

GBA News | ಬೆಂಗಳೂರು ಉತ್ತರ ನಗರ ಪಾಲಿಕೆಯಿಂದ ‘ಕಾಂಪೋಸ್ಟ್ ಸಂತೆ’: ಹಸಿಕಸದಿಂದ ಗೊಬ್ಬರ ತಯಾರಿಕೆಗೆ ಆಯುಕ್ತರ ಕರೆ

March 7, 2026
ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಬೆಂಗಳೂರು ಉತ್ತರ ನಗರ ಪಾಲಿಕೆಯಿಂದ ‘ಕಾಂಪೋಸ್ಟ್ ಸಂತೆ’: ಹಸಿಕಸದಿಂದ ಗೊಬ್ಬರ ತಯಾರಿಕೆಗೆ ಆಯುಕ್ತರ ಕರೆ

March 7, 2026
ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d