ಬೆಂಗಳೂರು, ಮಾ.28 www.bengaluruwire.com : ಕರ್ನಾಟಕ ಲೋಕಸೇವಾ ಆಯೋಗ (KPSC) ನಡೆಸುವ ಗೆಜೆಟೆಡ್ ಪ್ರೊಬೇಷನರಿ 384 ಹುದ್ದೆಗಳ ನೇಮಕಾತಿಗೆ ಮೇ 3, 5, 7 ಮತ್ತು 9ರಂದು ಮುಖ್ಯ ಪರೀಕ್ಷೆ ನಡೆಸಲು ಆಯೋಗ ತೀರ್ಮಾನಿಸಿದೆ.
ಈ ಹಿಂದೆ ಡಿ. 29ರಂದು ನಡೆದ ಪೂರ್ವಭಾವಿ ಮರು ಪರೀಕ್ಷೆಯಲ್ಲಿ 1:15ರ ಅನುಪಾತ ದಲ್ಲಿ ಮುಖ್ಯ ಪರೀಕ್ಷೆಗೆ ಅರ್ಹರಾದ ಅಭ್ಯರ್ಥಿಗಳ ನೋಂದಣಿ ಸಂಖ್ಯೆಯನ್ನು ಕೆಪಿಎಸ್‌ಸಿ ಈಗಾಗಲೇ ಬಿಡುಗಡೆ ಮಾಡಿದೆ. ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ಮುಖ್ಯ ಪರೀಕ್ಷೆಯನ್ನು ಇದೇ 28, 29 ಮತ್ತು ಏಪ್ರಿಲ್ 1, 2ರಂದು ನಡೆಸಲು ಕೆಪಿಎಸ್‌ಸಿ ಈ ಹಿಂದೆ ನಿರ್ಧರಿಸಿತ್ತು.
ಆದರೆ ಪ್ರಶ್ನೆಪತ್ರಿಕೆಯಲ್ಲಿ ಭಾಷಾಂತರ ಲೋಪಗಳು ಕಂಡುಬಂದ ಕಾರಣ ಮತ್ತೊಮ್ಮೆ ಪೂರ್ವಭಾವಿ ಪರೀಕ್ಷೆಗೆ ಆಗ್ರಹಿಸಿ ಕೆಲ ಅಭ್ಯರ್ಥಿಗಳು ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿ (KAT)ಯ ಕದ ತಟ್ಟಿದ್ದರು. ಹೀಗಾಗಿ, ಪರೀಕ್ಷೆಯನ್ನು ಮುಂದೂಡ ಲಾಗಿತ್ತು. ಪ್ರಕರಣವನ್ನು ಕೆಎಟಿ ವಿಲೇವಾರಿ ಮಾಡಿದ ಕಾರಣ ಹೊಸ ದಿನಾಂಕವನ್ನು ಕೆಪಿಎಸ್‌ಸಿ ನಿಗದಿಪಡಿಸಿದೆ.
ಮುಖ್ಯ ಪರೀಕ್ಷೆಯ ವೇಳಾಪಟ್ಟಿಯನ್ನು ಆಯೋಗದ ವೆಬ್‌ಸೈಟ್‌ನಲ್ಲಿ (http://kpsc.kar.nic.in) ಪ್ರಕಟ ಮಾಡಲಾಗಿದೆ ಎಂದು ಕೆಪಿಎಸ್‌ಸಿ ಕಾರ್ಯದರ್ಶಿ ರಮಣದೀಪ್ ಚೌಧರಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

“ಬೆಂಗಳೂರು ವೈರ್” ಪ್ರತಿ ಸುದ್ದಿ ನಿತ್ಯ ನಿರಂತರವಾಗಿ, ಉಚಿತವಾಗಿ ನಿಮಗೆ ಲಭ್ಯವಾಗಲಿದೆ. ಇದಕ್ಕಾಗಿ ಇಂದೇ ನಿಮಿಷದೊಳಗಾಗಿ Subscribe ಆಗಿ. ಈ ಡಿಜಿಟಲ್ ವೆಬ್ ನ್ಯೂಸ್ ಪೋರ್ಟೆಲ್ಲಿನ ಸೋಶಿಯಲ್ ಮೀಡಿಯಾ ಪೇಜ್ ಹಾಗೂ Google News ಗಳಿಗೆ ಉಚಿತವಾಗಿ Subscribe ಆಗಲು Facebook, Telegram, Twitter, Youtube, Whatsup Channel ಗೆ ಜಾಯಿನ್ ಆಗಲು ಇವುಗಳ ಲಿಂಕ್ ಮೇಲೆ ಕ್ಲಿಕ್ ಮಾಡಿ.
