ನವದೆಹಲಿ, ಏ.07 www.bengaluruwire.com : ಇತ್ತೀಚೆಗಷ್ಟೇ ಡೀಸೆಲ್ (Disel) ಮೇಲಿನ ಮಾರಾಟ ತೆರಿಗೆ (Sales Tax) ಏರಿಸಿ ರಾಜ್ಯ ಸರ್ಕಾರ ದರ ಏರಿಕೆಯಾಗಿತ್ತು. ಇದರ ಬೆನ್ನಲ್ಲೇ ಕೇಂದ್ರ ಸರ್ಕಾರ ಇದೀಗ ಪೆಟ್ರೋಲ್ (Petrol) ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕ (Excise Duty)ವನ್ನು ಪ್ರತಿ ಲೀಟರಿಗೆ 2 ರೂ.ನಷ್ಟು ಹೆಚ್ಚಳ ಮಾಡಿದೆ.
ಕೇಂದ್ರ ಸರ್ಕಾರದ ಹಣಕಾಸು ಇಲಾಖೆ (Ministry Of Finance Department) ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಲೀಟರ್ ಗೆ 2 ರೂ.ನಷ್ಟು ಏರಿಕೆ ಮಾಡಿ ಏ.7ರಂದು ಅಧಿಸೂಚನೆ ಹೊರಡಿಸಿದ್ದು ನಾಳೆಯಿಂದಲೇ ಈ ಸುಂಕ ಜಾರಿಗೆ ಬರಲಿದೆ ಎಂದು ತಿಳಿಸಲಾಗಿದೆ ಎಂದು ಎಎನ್ ಐ ವರದಿ ಮಾಡಿದೆ.
ಇಂದು ಅಬಕಾರಿ ಸುಂಕ ದರಗಳಲ್ಲಿ ಹೆಚ್ಚಳವಾದ ನಂತರ ಪೆಟ್ರೋಲ್ ಮತ್ತು ಡೀಸೆಲ್ ಚಿಲ್ಲರೆ ಬೆಲೆಯಲ್ಲಿ ಯಾವುದೇ ಹೆಚ್ಚಳ ಇರುವುದಿಲ್ಲ ಎಂದು ಸಾರ್ವಜನಿಕ ತೈಲ ಮಾರುಕಟ್ಟೆ ಕಂಪನಿಗಳು ತಿಳಿಸಿವೆ ಎಂಬುದಾಗಿ ಕೇಂದ್ರ ಇಂಧನ ಸಚಿವಾಲಯ ಸ್ಪಷ್ಟಪಡಿಸಿದೆ.