Thursday, October 15, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಜೆಡಿಎಸ್ ಸೋಶಿಯಲ್ ಮೀಡಿಯಾ ಹುಡುಗನನ್ನು ಪೊಲೀಸ್ ವಶಕ್ಕೆ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕಿಡಿ

    Railway News | ಹಾಸನಾಂಬ ಜಾತ್ರೆ: ಬೆಂಗಳೂರು-ಹಾಸನ ನಡುವೆ ವಿಶೇಷ ರೈಲು ಸೇವೆ ಆರಂಭ

    CREATOR: gd-jpeg v1.0 (using IJG JPEG v62), quality = 82?

    ಬಿಹಾರದಲ್ಲಿ ಭೀಕರ ದುರಂತ: ಗಂಗಾ ನದಿಯಲ್ಲಿ ದೋಣಿ ಮುಳುಗಿ 14 ಮಕ್ಕಳು ಜಲಸಮಾಧಿ?

    ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

    ಎಸ್‌ಸಿ-ಎಸ್‌ಟಿ ಮೀಸಲಾತಿ ರದ್ದು: ಬಿಜೆಪಿ ಅವಸರವೇ ಕಾರಣ ಎಂದ ಮಾಜಿ ಸಿಎಂ ಸಿದ್ದರಾಮಯ್ಯ

    ಕರ್ನಾಟಕದ ನೂತನ ರಾಜ್ಯಪಾಲರಾಗಿ ಸುಧಾ ಯಾದವ್ ನೇಮಕ

    Excise News | ಬೆಳಗಾವಿಯಲ್ಲಿ ಭರ್ಜರಿ ಕಾರ್ಯಾಚರಣೆ: ₹32.40 ಲಕ್ಷ ಮೌಲ್ಯದ 24,000 ಲೀಟರ್ ಅಕ್ರಮ ಮದ್ಯಸಾರ ಜಪ್ತಿ

    Defence News | ಭಾರತೀಯ ಸೇನೆಗೆ ‘ಭಾರತ್ ರೈಸ್’ ಪೂರೈಕೆ ಆರಂಭ: ಈ ಯೋಜನೆ ವಿಶೇಷತೆಯೇನು?

    ಆಸ್ಪತ್ರೆ ಬಿಲ್ ಬಾಕಿ: ಮೃತದೇಹ ನೀಡದಿದ್ದರೆ ಕಠಿಣ ಕಾನೂನು ಕ್ರಮ

    Mysore Dasara 2026 | ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ: ಸಾಂಸ್ಕೃತಿಕ ನಗರಿಯಲ್ಲಿ ಸಂಭ್ರಮ

  • Bengaluru Focus

    BW Special | ಖಜಾನೆ ಖಾಲಿ, ಜನರಿಗೆ ಬೆಲೆ ಏರಿಕೆ ಬರೆ; ಸಚಿವರು-ಸಂಸದರ ಐಷಾರಾಮಿ ಕಾರಿಗೆ ₹31 ಲಕ್ಷ ಗಿಫ್ಟ್!

    ದೇವನಹಳ್ಳಿ ತಹಶೀಲ್ದಾರ್ ಕಚೇರಿಗೆ ಡಿಸಿಎಂ ಪರಮೇಶ್ವರ್ ದಿಢೀರ್ ಭೇಟಿ: ದಾಖಲೆ ನಿರ್ವಹಣೆ ನಿರ್ಲಕ್ಷಿಸಿದ ಅಧಿಕಾರಿ ಅಮಾನತು

    KSRTC News | ದಸರಾ ಹಬ್ಬಕ್ಕೆ ಕೆಎಸ್‌ಆರ್‌ಟಿಸಿಯಿಂದ 3,000ಕ್ಕೂ ಹೆಚ್ಚು ಹೆಚ್ಚುವರಿ ಬಸ್ ಸೇವೆ

    ಕರ್ನಾಟಕದಲ್ಲಿ ಹುಲಿಗಳ ಸಂತತಿ ಹೆಚ್ಚಳ: 700ರ ಗಡಿ ದಾಟಿದ ವ್ಯಾಘ್ರಗಳ ಸಂಖ್ಯೆ

    BDA News | ಬಿಡಿಎ ಅಧ್ಯಕ್ಷ ಪೀಠದಲ್ಲಿ ವಿಶೇಷ ಚೇತನ ಬಾಲಕ: ಕಚೇರಿಯಲ್ಲಿ ಭಾವುಕ ಕ್ಷಣ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

BWSSB News | ಬೆಂಗಳೂರಿನಲ್ಲಿ ಕಾವೇರಿ ನೀರಿನ ದರ ಏರಿಕೆ : ಪರಿಷ್ಕೃತ ದರ ಮೇ ತಿಂಗಳ ಬಿಲ್ಲಿಗೆ ಅನ್ವಯ

ವಿವಿಧ ಸ್ಲಾಬ್ ನಲ್ಲಿನ ಗೃಹ ಬಳಕೆಯ ಪ್ರತಿ ಲೀಟರ್ ನೀರಿಗೆ ಕನಿಷ್ಠ 0.15 ಪೈಸೆ (ಒಂದು ಪೈಸೆಗಿಂತಲೂ ಕಡಿಮೆ) ಹಾಗೂ ಗರಿಷ್ಠ 1 ಪೈಸೆ, ದೊಡ್ಡ ಅಪಾರ್ಟ್‌ಮೆಂಟ್‌ಗಳಿಗೆ ಕನಿಷ್ಠ 0.30 ಪೈಸೆ, ಗರಿಷ್ಠ 1 ಪೈಸೆ, ವಾಣಿಜ್ಯ ಉದ್ದೇಶಕ್ಕೆ ಕನಿಷ್ಠ ದರ 0.90 ಪೈಸೆ ಹಾಗೂ ಗರಿಷ್ಠ 1.20 ಪೈಸೆಯಷ್ಟು ಏರಿಕೆ ಮಾಡಲಾಗಿದೆ.

by Bengaluru Wire Desk
April 9, 2025
in Bengaluru Focus
Reading Time: 2 mins read
0

ಬೆಂಗಳೂರು, ಏ.09 www.bengaluruwire.com : ಹಾಲು, ವಿದ್ಯುತ್, ಗ್ಯಾಸ್, ಡೀಸೆಲ್ ಮತ್ತಿತರ ಅಗತ್ಯ ವಸ್ತುಗಳ ಬೆಲೆ ಏರಿಕೆ ನಂತರ ಇದೀಗ ಕಾವೇರಿ ಕುಡಿಯುವ ನೀರಿನ ದರ (Cauvery drinking water price)ವನ್ನು ಬೆಂಗಳೂರು ಜಲಮಂಡಳಿ (Bangalore Water Board)ಯು ಏರಿಕೆ ಮಾಡಿದೆ. ಆದರೆ ಈ ಬೆಲೆ ಹೆಚ್ಚಳವಾಗಿದ್ದು 11 ವರ್ಷಗಳ ನಂತರ ಜನಸಾಮಾನ್ಯರಿಗೆ ಹೆಚ್ಚಿನ ಹೊರೆಯಾಗದಂತೆ ಹೆಚ್ಚಳ ಮಾಡಿದೆ.

ನೀರಿನ ಸಮರ್ಪಕ ಬಳಕೆಗೆ ಒತ್ತು ನೀಡುವುದನ್ನ ಮನಗಾಣಿಸುವ ಅಂಶಕ್ಕೆ ಒತ್ತು ನೀಡುವ ನಿಟ್ಟಿನಲ್ಲಿ ನೀರಿನ ದರವನ್ನು ಏರಿಕೆ ಮಾಡಲು ಉದ್ದೇಶಿಸಲಾಗಿದೆ. ವಿವಿಧ ಸ್ಲಾಬ್ (Various slabs) ಗಳಿಗೆ ಆಧಾರಿತವಾಗಿ ಗೃಹ ಬಳಕೆ (Domestic Use)ಗೆ ಪ್ರತಿ ಲೀಟರ್ ನೀರಿಗೆ ಕನಿಷ್ಠ 0.15 ಪೈಸೆ (ಒಂದು ಪೈಸೆಗಿಂತಲೂ ಕಡಿಮೆ) ಹಾಗೂ ಗರಿಷ್ಠ 1 ಪೈಸೆ, ದೊಡ್ಡ ಅಪಾರ್ಟ್‌ಮೆಂಟ್‌ (Apartment)ಗಳಿಗೆ ಕನಿಷ್ಠ 0.30 ಪೈಸೆ ಹಾಗೂ ಗರಿಷ್ಠ 1 ಪೈಸೆಯಷ್ಟು ಏರಿಕೆ ಮಾಡಲಾಗಿದೆ ಹಾಗೂ ವಾಣಿಜ್ಯ ಉದ್ದೇಶ (Commercial purpose)ಕ್ಕೆ ಕನಿಷ್ಠ ದರವನ್ನು ಪ್ರತಿ ಲೀ.0.90 ಪೈಸೆ ಹಾಗೂ ಗರಿಷ್ಠ 1.20 ಪೈಸೆ ಹೆಚ್ಚಳ ಮಾಡಲಾಗಿದ್ದು ಕಾವೇರಿ ನೀರಿನ ಬಳಕೆಗೆ ಅನುಗುಣವಾಗಿ ದರ ಏರಿಕೆ ಮಾಡಲಾಗಿದೆ.

ಈ ಬಗ್ಗೆ ಏ.10ರಂದು ಅಧಿಕೃತವಾಗಿ ಆದೇಶ ಹೊರಡಿಸಲಾಗುವುದು ಎಂದು ಬೆಂಗಳೂರು ಜಲಮಂಡಳಿ ಅಧ್ಯಕ್ಷ ಡಾ ರಾಮ್ ಪ್ರಸಾತ್ ಮನೋಹರ್ (Bangalore Water Board Chairman Dr Ram Prasat Manohar) ತಿಳಿಸಿದ್ದಾರೆ.

ಇಂದು ಬೆಂಗಳೂರು ಜಲಮಂಡಳಿಯ ಕೇಂದ್ರ ಕಚೇರಿಯಲ್ಲಿ ತಮ್ಮನ್ನು ಭೇಟಿಯಾದ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರಿಸಿದ ಅವರು, ಕಳೆದ 11 ವರ್ಷಗಳಲ್ಲಿ ಬೆಂಗಳೂರು ನಗರ ಕೇವಲ ವ್ಯಾಪ್ತಿಯಷ್ಟೇ ಅಲ್ಲ ಜನಸಂಖ್ಯೆಯಲ್ಲೂ ಅಗಾಧ ಬೆಳವಣಿಗೆಯನ್ನು ಕಂಡಿದೆ. ಸರಕಾರದಿಂದ ಹಣಕಾಸಿನ ಸಹಾಯವಿಲ್ಲದೇ ಸ್ವಾಯತ್ತ ಸಂಸ್ಥೆಯಾಗಿರುವ ಮಂಡಲಿಗೆ ಕುಡಿಯುವ ನೀರಿಗೆ ವಿಧಿಸುವ ಶುಲ್ಕವೇ ಪ್ರಮುಖ ಆದಾಯವಾಗಿದೆ.

ಕಳೆದ 10 ವರ್ಷಗಳಲ್ಲಿ ವಿದ್ಯುತ್ ವೆಚ್ಚ (Electricity cost)ವು ಶೇಕಡಾ 107% ರಷ್ಟು ಹೆಚ್ಚಾಗಿದೆ. ಹಾಗೆಯೇ ನಿರ್ವಹಣಾ ವೆಚ್ಚದಲ್ಲಿ ಶೇಡಕಾ 122.5 ರಷ್ಟು ಹೆಚ್ಚಳವಾಗಿದೆ.ಪ್ರಸ್ತುತ ಬೆಂಗಳೂರು ಜಲಮಂಡಳಿಯ ಮಾಸಿಕ ವೆಚ್ಚ 200 ಕೋಟಿ ರೂಪಾಯಿಗಳು. ಆದರೆ, ಪ್ರತಿ ತಿಂಗಳು ಸಂಗ್ರಹಣೆ ಆಗುತ್ತಿರುವುದು ಕೇವಲ 120 ಕೋಟಿ ರೂಪಾಯಿಗಳು ಮಾತ್ರ. ಪ್ರತಿ ತಿಂಗಳು ಸುಮಾರು 80 ಕೋಟಿ ರೂಪಾಯಿಗಳ ಆರ್ಥಿಕ ಕೊರತೆಯನ್ನ ಬೆಂಗಳೂರು ಜಲಮಂಡಳಿ ನಿಭಾಯಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. 

ಇದನ್ನು ಸರಿಪಡಿಸುವ ನಿಟ್ಟಿನಲ್ಲಿ ನೀರಿನ ದರವನ್ನು ಏರಿಸಲು ಉದ್ದೇಶಿಸಲಾಗಿದ್ದು , ಏ.10ರಂದು ಅಧಿಕೃತ ಘೋಷಣೆ ಹೊರಡಿಸಲಾಗುವುದು ಎಂದು ಜಲಮಂಡಳಿ ಅಧ್ಯಕ್ಷರಾದ ಡಾ ರಾಮ್ ಪ್ರಸಾತ್ ಮನೋಹರ್ ತಿಳಿಸಿದರು.

ನೀರಿನ ದರ ಹೆಚ್ಚಳದ ಪ್ರಮಾಣ ಹೇಗೆ? : 

ಬೆಂಗಳೂರು ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿಯ ತನ್ನ ಹೊರೆಯನ್ನು ಕಡಿಮೆ ಮಾಡಿಕೊಳ್ಳುವ ನಿಟ್ಟಿನಲ್ಲಿ ಹಾಗೂ ಜನಸಾಮಾನ್ಯರಿಗೆ ಹೊರೆಯಾಗದಂತೆ ನಿಭಾಯಿಸಲು ನೀರಿನ ದರವನ್ನು ಏರಿಕೆ ಮಾಡಲಾಗಿದೆ. ಕಡಿಮೆ ನೀರು ಬಳಕೆಯನ್ನು ಉತ್ತೇಜಿಸುವುದು ಹಾಗೆಯೇ ನೀರಿನ ಮರುಬಳಕೆಯನ್ನು ಹೆಚ್ಚಿಸುವುದು ನಮ್ಮ ಪ್ರಮುಖ ಗುರಿಯಾಗಿದೆ. ಈ ನಿಟ್ಟಿನಲ್ಲಿ ಯಾರಿಗೂ ಹೊರೆಯಾಗದಂತಹ ನಿರ್ಧಾರವನ್ನು ಕೈಗೊಳ್ಳಲಾಗಿದೆ.

ಗೃಹ ಬಳಕೆ ನೀರಿನ ದರ ಏರಿಕೆ (ಪ್ರತಿ ಲೀಟರ್‌ಗೆ)

0-8000 ಸಾವಿರ ಲೀಟರ್ ಬಳಕೆಯ ಸ್ಲಾಬ್: ಪ್ರತಿ ಲೀಟರ್ ಗೆ 0.15 ಪೈಸೆ ಹೆಚ್ಚಳ(1ಪೈಸೆಗಿಂತ ಕಡಿಮೆ) ಈ ಸ್ಲ್ಯಾಬ್ ನಡಿಯಲ್ಲಿ ಪ್ರತಿ 1 ಸಾವಿರ ಲೀಟರ್ ಗೆ ಪ್ರಸ್ತುತ ದರ ರೂ.7ರಿಂದ ರೂ.8.50 ಪೈಸೆ(ಅಂದರೇ ರೂ.1.50)ಯಷ್ಟು ಹೆಚ್ಚಳವಾಗಲಿದೆ.

ಇನ್ನು 8001- 25000 ಲೀಟರ್ ಬಳಕೆಯ ಸ್ಲಾಬ್: ಪ್ರತಿ ಲೀಟರ್ ಗೆ 0.30 ಪೈಸೆ ಹೆಚ್ಚಳ(1ಪೈಸೆಗಿಂತ ಕಡಿಮೆ) ಉದಾಹರಣೆಗೆ ಈ ಸ್ಲ್ಯಾಬ್ ನಡಿಯಲ್ಲಿ ಪ್ರತಿ 1 ಸಾವಿರ ಲೀಟರ್ ಗೆ ಪ್ರಸ್ತುತ ದರ ರೂ.11ರಿಂದ ರೂ.14ಕ್ಕೆ (ಅಂದರೆ ರೂ.3)ಹೆಚ್ಚಳವಾಗಲಿದೆ.

ಅದೇ ರೀತಿ 25001 – 50000 ಲೀಟರ್ ತನಕ :

0.80 ಪೈಸೆ ಹೆಚ್ಚಳ ಹಾಗೂ 50,001 – 1,00,000 ಲೀಟರ್ ಗಿನ ನೀರಿನ ಬಳಕೆಗೆ 1.00 ಪೈಸೆ ಹೆಚ್ಚಳ ಮಾಡಲಾಗಿದೆ.

ಅಪಾರ್ಟ್‌ಮೆಂಟ್ ನೀರಿನ ದರ ಏರಿಕೆ (ಪ್ರತಿ ಲೀಟರ್‌ಗೆ) :

ನಗರದಲ್ಲಿನ ಅಪಾರ್ಟ್ ಮೆಂಟ್ ಗಳಲ್ಲಿನ ವಸತಿ ಘಟಕಗಳಿಗೆ 0-2,00,000 ಲೀಟರ್ ತನಕದ ನೀರಿಗೆ:

0.30 ಪೈಸೆ, 2,00,001-5,00,000 ಲೀಟರ್ ನೀರಿಗೆ:

0.60 ಪೈಸೆ ಹಾಗೂ 5,00,001-10,00,000 ಲೀಟರ್ ನೀರಿಗೆ : 1 ಪೈಸೆಯಷ್ಟು ಏರಿಕೆ ಮಾಡಲಾಗಿದೆ.

ನಾನ್ ಡೊಮೆಸ್ಟಿಕ್ -ಗೃಹೇತರ ಬಳಕೆ (ವಾಣಿಜ್ಯ ಉದ್ದೇಶ)ಕೈಗಾರಿಕೆಗಳಿಗೆ/ಬಲ್ಕ್ ಸಪ್ಲೇ ಬಳಕೆಯ ಸ್ಲಾಬ್: ಪ್ರತಿ ಲೀಟರ್ ಗೆ 0.90 ಪೈಸೆ ಹೆಚ್ಚಳ(1ಪೈಸೆಗಿಂತ ಕಡಿಮೆ)

0 – 10,000 ಸಾವಿರ ಲೀಟರ್ ಬಳಕೆಯ ಸ್ಲಾಬ್: ಪ್ರತಿ ಲೀಟರ್ ಗೆ 1.00 ಪೈಸೆ ಹೆಚ್ಚಳ

10,001 – 25,000 ಸಾವಿರ ಲೀಟರ್ ಬಳಕೆಯ ಸ್ಲಾಬ್: ಪ್ರತಿ ಲೀಟರ್ಗೆ 1.30 ಪೈಸೆ ಹೆಚ್ಚಳ

25,001 – 50,000 ಸಾವಿರ ಲೀಟರ್ ಬಳಕೆಯ ಸ್ಲಾಬ್: ಪ್ರತಿ ಲೀಟರ್ಗೆ 1.50 ಪೈಸೆ ಹೆಚ್ಚಳ

50,001 – 75,000 ಸಾವಿರ ಲೀಟರ್ ಬಳಕೆಯ ಸ್ಲಾಬ್: ಪ್ರತಿ ಲೀಟರ್ಗೆ 1.90 ಪೈಸೆ ಹೆಚ್ಚಳ

760001 – 1 ಲಕ್ಷ ಸಾವಿರ ಲೀಟರ್ ಬಳಕೆಯ ಸ್ಲಾಬ್: ಪ್ರತಿ ಲೀಟರ್ಗೆ 1.10 ಪೈಸೆ ಹೆಚ್ಚಳ

1 ಲಕ್ಷ ಮತ್ತು ಅದಕ್ಕೂ ಹೆಚ್ಚು ಬಳಕೆ ಸ್ಲಾಬ್: ಪ್ರತಿ ಲೀಟರ್ಗೆ 1.20 ಪೈಸೆ ಹೆಚ್ಚಳ

“ಬೆಂಗಳೂರು ವೈರ್” ಪ್ರತಿ ಸುದ್ದಿ ನಿತ್ಯ ನಿರಂತರವಾಗಿ, ಉಚಿತವಾಗಿ ನಿಮಗೆ ಲಭ್ಯವಾಗಲಿದೆ. ಇದಕ್ಕಾಗಿ ಇಂದೇ ನಿಮಿಷದೊಳಗಾಗಿ Subscribe ಆಗಿ. ಈ ಡಿಜಿಟಲ್ ವೆಬ್ ನ್ಯೂಸ್ ಪೋರ್ಟೆಲ್ಲಿನ ಸೋಶಿಯಲ್ ಮೀಡಿಯಾ ಪೇಜ್ ಹಾಗೂ Google News ಗಳಿಗೆ ಉಚಿತವಾಗಿ Subscribe ಆಗಲು Facebook, Telegram, Twitter, Youtube, Whatsup Channel ಗೆ ಜಾಯಿನ್ ಆಗಲು ಇವುಗಳ ಲಿಂಕ್ ಮೇಲೆ ಕ್ಲಿಕ್ ಮಾಡಿ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

ಮಲ್ಲೇಶ್ವರದ ಅನಧಿಕೃತ ವಾಣಿಜ್ಯ ಕಟ್ಟಡಕ್ಕೆ ಸ್ವಾಧೀನ ಪತ್ರ ನೀಡದಂತೆ ಹೈಕೋರ್ಟ್ ನಿರ್ದೇಶನ

Next Post

BW Special | ಬಿಬಿಎಂಪಿ ವ್ಯಾಪ್ತಿಯಲ್ಲಿ ಕಂದಾಯ ನಿವೇಶಗಳಿಗೂ ಕಟ್ಟಡ ನಕ್ಷೆ ಅವಕಾಶ ಪ್ರಸ್ತಾವನೆ : 4 ತಿಂಗಳಾದರೂ ಸರ್ಕಾರದಿಂದ ನಿರುತ್ತರ

Next Post
ಬೆಂಗಳೂರಿನ ಪಕ್ಷಿನೋಟ ಸಾಂದರ್ಭಿಕ ಚಿತ್ರ

BW Special | ಬಿಬಿಎಂಪಿ ವ್ಯಾಪ್ತಿಯಲ್ಲಿ ಕಂದಾಯ ನಿವೇಶಗಳಿಗೂ ಕಟ್ಟಡ ನಕ್ಷೆ ಅವಕಾಶ ಪ್ರಸ್ತಾವನೆ : 4 ತಿಂಗಳಾದರೂ ಸರ್ಕಾರದಿಂದ ನಿರುತ್ತರ

TTD News | ಮುಖ್ಯಮಂತ್ರಿ ಭೇಟಿ ಬೆನ್ನಲ್ಲೇ ಭಕ್ತರಿಗೆ ಸಿಹಿ ಸುದ್ದಿ ನೀಡಿದ ಟಿಟಿಡಿ : ವಾಟ್ಸಾಪ್‌ನಲ್ಲಿ 15 ಸೇವೆಗಳು ಲಭ್ಯ!

Please login to join discussion

Like Us on Facebook

Follow Us on Twitter

Recent News

ಜೆಡಿಎಸ್ ಸೋಶಿಯಲ್ ಮೀಡಿಯಾ ಹುಡುಗನನ್ನು ಪೊಲೀಸ್ ವಶಕ್ಕೆ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕಿಡಿ

October 14, 2026

Railway News | ಹಾಸನಾಂಬ ಜಾತ್ರೆ: ಬೆಂಗಳೂರು-ಹಾಸನ ನಡುವೆ ವಿಶೇಷ ರೈಲು ಸೇವೆ ಆರಂಭ

October 14, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಜೆಡಿಎಸ್ ಸೋಶಿಯಲ್ ಮೀಡಿಯಾ ಹುಡುಗನನ್ನು ಪೊಲೀಸ್ ವಶಕ್ಕೆ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕಿಡಿ

October 14, 2026

Railway News | ಹಾಸನಾಂಬ ಜಾತ್ರೆ: ಬೆಂಗಳೂರು-ಹಾಸನ ನಡುವೆ ವಿಶೇಷ ರೈಲು ಸೇವೆ ಆರಂಭ

October 14, 2026
CREATOR: gd-jpeg v1.0 (using IJG JPEG v62), quality = 82?

ಬಿಹಾರದಲ್ಲಿ ಭೀಕರ ದುರಂತ: ಗಂಗಾ ನದಿಯಲ್ಲಿ ದೋಣಿ ಮುಳುಗಿ 14 ಮಕ್ಕಳು ಜಲಸಮಾಧಿ?

October 14, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d