Monday, September 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

    ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

    ದೆಹಲಿಯಲ್ಲಿ ಬ್ರಿಕ್ಸ್‌ ಶೃಂಗಸಭೆ: ಕೊಳಗೇರಿಗೆ ಪರದೆ ಕಟ್ಟಿ ಬಡತನ ಮರೆಮಾಚುವ ಯತ್ನಕ್ಕೆ ಆಕ್ರೋಶ

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BIS Hallmark | ​ಚೆನ್ನೈನಲ್ಲಿ ಹಾಲ್‌ಮಾರ್ಕ್ ಇಲ್ಲದ ಬರೋಬ್ಬರಿ 804 ಗ್ರಾಂ ಚಿನ್ನಾಭರಣ ವಶ: ಬಿಐಎಸ್ ತಂಡದಿಂದ ದಾಳಿ: ಚಿನ್ನಾಭರಣ ಅಸಲಿತನ ಹೇಗೆ ಚೆಕ್ ಮಾಡೋದು ಗೊತ್ತಾ?

    CM DK Shivakumar Open Letter | ಅಧಿಕಾರಕ್ಕಿಂತ ಹೊಣೆಗಾರಿಕೆ ದೊಡ್ಡದು: 100 ದಿನ ಪೂರೈಸಿದ ಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಪತ್ರ

    Free Coaching | ಮುಖ್ಯಮಂತ್ರಿ ವಿದ್ಯಾರ್ಥಿ ಸಹಾಯ ಹಸ್ತ: 90,000 ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಆನ್‌ಲೈನ್ ಕೋಚಿಂಗ್

    ಪಿಡಬ್ಲ್ಯುಡಿ ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್: 25ಕ್ಕೂ ಹೆಚ್ಚು ಕಡೆ ದಾಳಿ

  • Bengaluru Focus
    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

    GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    BWSSB News | ಬೆಂಗಳೂರಿನಲ್ಲಿ ತ್ಯಾಜ್ಯ ನೀರು ಸಂಸ್ಕರಣೆಗೆ ಬಿಗಿಯಾದ ಕ್ರಮ: KSPCB, ಜಲಮಂಡಳಿಗೆ ಸಚಿವ ರಾಮಲಿಂಗಾರೆಡ್ಡಿ ಗಡುವು

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BW SPECIAL | ಬೆಂಗಳೂರಿಗೆ ಆಡಳಿತ ಗ್ರಹಣ: ಮೇಯರ್, ಕಾರ್ಪೊರೇಟರ್‌ಗಳಿಲ್ಲದೆ 6 ವರ್ಷ ಪೂರ್ಣ

    ಪಿಡಬ್ಲ್ಯುಡಿ ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್: 25ಕ್ಕೂ ಹೆಚ್ಚು ಕಡೆ ದಾಳಿ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

‘ಲಿಖಿತ ರೂಪದಲ್ಲಿರುವ ಅತ್ಯುತ್ತಮ ಸಂವಿಧಾನ ನಮ್ಮ ಭಾರತ ಸಂವಿಧಾನ’ : ಎಸ್.ಆರ್ ಉಮಾಶಂಕರ್

ಬಿಬಿಎಂಪಿಯಿಂದ 12,692 ಪೌರಕಾರ್ಮಿಕರ ಖಾಯಂ | ಮೇ 1 ರಂದು ನೇಮಕಾತಿ ಆದೇಶ ಪತ್ರ ವಿತರಣೆ

by Bengaluru Wire Desk
April 17, 2025
in Bengaluru Focus
Reading Time: 1 min read
0

ಬೆಂಗಳೂರು, ಏ.17 www.bengaluruwire.com : ‘ಲಿಖಿತ ರೂಪದಲ್ಲಿರುವ ಅತ್ಯುತ್ತಮ ಸಂವಿಧಾನ ನಮ್ಮ ಭಾರತ ಸಂವಿಧಾನ’ ಎಂದು ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಆಡಳಿತಗಾರರಾದ ಎಸ್.ಆರ್ ಉಮಾಶಂಕರ್ ರವರು ಅಭಿಪ್ರಾಯ ವ್ಯಕ್ತಪಡಿಸಿದರು. 

ಬಿಬಿಎಂಪಿ ವತಿಯಿಂದ ಕೇಂದ್ರ ಕಚೇರಿಯ ಡಾ. ರಾಜ್ ಕುಮಾರ್ ಗಾಜಿನ ಮನೆಯಲ್ಲಿ ಹಮ್ಮಿಕೊಂಡಿರುವ ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ರವರ ಹಾಗೂ ಪೌರಕಾರ್ಮಿಕರ ದಿನಾಚರಣೆ-2025 ಕಾರ್ಯಕ್ರಮವನ್ನು ಉದ್ಘಾಟಿಸಿದ ಬಳಿಕ ಅವರು ಮಾತನಾಡಿದರು.

ಡಾ. ಬಿ.ಆರ್ ಅಂಬೇಡ್ಕರ್ ರವರು ಇಡೀ ದೇಶಕ್ಕೆ ಅತ್ಯುತ್ತಮ ಸಂವಿಧಾನವನ್ನು ಕಲ್ಪಿಸಿಕೊಟ್ಟವರು. ಅದು ಇಡೀ ಪ್ರಪಂಚದಲ್ಲಿಯೇ ಉತ್ತಮವಾದ, ವಿವರಣಾತ್ಮಕವಾದ ಸಂವಿಧಾನವಾಗಿದೆ. ಇದು ಕೇವಲ ಭಾರತಕ್ಕೆ ಮಾತ್ರವಲ್ಲ, ಮುಂದಿನ ದಿನಗಳಲ್ಲಿ ವಿಶ್ವದ ಅನೇಕ ದೇಶಗಳಿಗೆ ಮುನ್ನುಡಿಯಾಗಲಿದೆ ಎಂದು ಅವರು ಹೇಳಿದರು.

ಪೌರಕರ್ಮಿಕರಿಗಾಗಿ ಒಂಟಿ ಮನೆ ಯೋಜನೆ, ಮಕ್ಕಳ ವಿದ್ಯಾಭ್ಯಾಸಕ್ಕಾಗಿ ವಿವಿಧ ಸೌಲಭ್ಯ, ಧನಸಹಾಯ, ಬೋನಸ್ ನೀಡಲಾಗುತ್ತಿದೆ. ಹಲವಾರು ಹಿತರಕ್ಷಣಾ ಕಾರ್ಯಕ್ರಮಗಳಿಗೆ ಹೆಚ್ಚಿನ ಅನುದಾನವನ್ನು ಆಯವ್ಯಯದಲ್ಲಿ ಮೀಸಲಿಡಲಾಗಿದೆ. ಕಳೆದ ಬಾರಿ ಆಯವ್ಯಯಕ್ಕಿಂತ ಹೆಚ್ಚಿನ ಅನುದಾನವನ್ನು ಈ ಬಾರಿ ಮಿಸಲಿಡಲಾಗಿದೆ ಎಂದು ಹೇಳಿದರು. 

12,692 ಪೌರಕಾರ್ಮಿಕರ ಖಾಯಂ:

ಪೌರಕಾರ್ಮಿಕರ ಒಳಿತಿಗಾಗಿ ಪಾಲಿಕೆ ವತಿಯಿಂದ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ನಗರದಲ್ಲಿ 12,692 ನೇರ ವೇತನ ಪೌರಕಾರ್ಮಿಕರನ್ನು ಖಾಯಂ ಮಾಡಿಕೊಳ್ಳುತ್ತಿದ್ದೇವೆ. ಪೌರಕಾರ್ಮಿಕರ ಖಾಯಮಾತಿಗೆ ಪ್ರಮುಖ ಕಾರಣೀಕರ್ತರು ಮುಖ್ಯ ಆಯುಕ್ತರು, ವಿಶೇಷ ಆಯುಕ್ತರು, ವಲಯ ಆಯುಕ್ತರು ಹಾಗೂ ಇನ್ನಿತರೆ ಅಧಿಕಾರಿಗಳು ಮುತುವರ್ಜಿ ವಹಿಸಿದ್ದು, ಅವರೆಲ್ಲರಿಗೂ ಅಭಿನಂದನೆಗಳನ್ನು ತಿಳಿಸುತ್ತೇನೆ ಎಂದು ಬಿಬಿಎಂಪಿ ಆಡಳಿತಗಾರರಾದ ಉಮಾಶಂಕರ್ ಹೇಳಿದರು.

ಮೇ 1 ರಂದು ನೇಮಕಾತಿ ಆದೇಶ ವಿತರಣೆ :

ಪೌರಕಾರ್ಮಿಕರನ್ನು ಖಾಯಂ ಮಾಡುವ ವೇಳೆ ಸಾಕಷ್ಟು ದೂರುಗಳು, ಮೋಸ, ದುರುಪಯೋಗಗಳಿಗೆ ಯಾವ ಅಧಿಕಾರಿಗಳೂ ಆಸ್ಪದ ನೀಡದೆ, ಖಾಯಮಾತಿ ಪ್ರಕ್ರಿಯೆಯನ್ನು ಬಹುತೇಕ ಪೂರ್ಣಗೊಳಿಸಲಾಗಿದೆ. ಖಾಯಂ ಆದ ನಂತರ ಪೌರಕಾರ್ಮಿಕರು ಮುಂದಿನ ದಿನಗಳಲ್ಲಿ ನೆಮ್ಮದಿ ಜೀವನ ಸಾಗಿಸಲು ಅನುಕೂಲವಾಗಲಿದೆ. ಇದೇ 1ನೇ ಮೇ ರಂದು ರಾಜ್ಯ ಸರ್ಕಾರದ ಕಾರ್ಯಕ್ರಮದಲ್ಲಿ ಖಾಯಂ ಆದವರಿಗೆ ನೇಮಕಾತಿ ಆದೇಶ ಪತ್ರಗಳನ್ನು ನೀಡಲಾಗುವುದು ಎಂದು ತಿಳಿಸಿದರು.

ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ಮಾತನಾಡಿ, ಡಾ. ಬಿ.ಆರ್ ಅಂಬೇಡ್ಕರ್ ರವರ ಕುರಿತಂತಹ ಪುಸ್ತಕಗಳನ್ನು ನಾವೆಲ್ಲರೂ ಓದಿ ಅರಿತುಕೊಳ್ಳಬೇಕಿದೆ. ಅವರ ವ್ಯಕ್ತಿತ್ವವನ್ನು ನಾವು ಎಲ್ಲರಿಗೂ ಪರಿಚಯಿಸಬೇಕು. ಅವರ ಎಲ್ಲಾ ವಿಚಾರಧಾರೆಗಳನ್ನು ಇತರರಿಗೂ ತಿಳಿಯುವ ಹಾಗೆ ಮಾಡಬೇಕೆಂದು ಅಭಿಪ್ರಾಯಪಟ್ಟರು. 

ಪೌರಕಾರ್ಮಿಕರ ಮಕ್ಕಳು ಎಸ್.ಎಸ್.ಎಲ್.ಸಿ, ಪಿಯುಸಿ ಹಾಗೂ ಪದವಿಯಲ್ಲಿ ಉತ್ತಮ ಅಂಕ ಗಳಿಸಿದವರಿಗೆ ಇಂದು ಸನ್ಮಾನ ಮಾಡಿ, ಅವರೆಲ್ಲರಿಗೂ “ಡಾ. ಬಿ.ಆರ್ ಅಂಬೇಡ್ಕರ್ ರವರ ವಿಚಾರಗಳು” ಎಂಬ ಪುಸ್ತಕವನ್ನು ನೀಡಲಾಗಿದೆ. ಅದನ್ನು ಸಂಪೂರ್ಣವಾಗಿ ಓದಿ ಬೇರೆಯವರಿಗೂ ಅದನ್ನು ಓದಿ ತಿಳಿದುಕೊಳ್ಳಲು ಪ್ರೇರಣೆ ನೀಡಬೇಕೆಂದು ತಿಳಿಸಿದರು.

ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ :

ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಪೌರಕಾರ್ಮಿಕರ ದಿನಾಚರಣೆ-2025 ಕಾರ್ಯಕ್ರಮಕ್ಕೂ ಮುಂಚಿತವಾಗಿ ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ರವರ ಹಾಗೂ ಪೌರಕಾರ್ಮಿಕರ ಪಿತಾಮಹ ಐ.ಪಿ.ಡಿ ಸಾಲಪ್ಪ ರವರ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಲಾಯಿತು.

ಪೌರಕಾರ್ಮಿಕರ ಮಕ್ಕಳಿಗೆ ಸನ್ಮಾನ :

ಎಸ್.ಎಸ್.ಎಲ್.ಸಿ, ಪಿಯುಸಿ ಹಾಗೂ ಪದವಿಯಲ್ಲಿ ಉತ್ತಮ ಅಂಕ ಪಡೆದ  ಪೌರಕಾರ್ಮಿಕರ 46 ಮಕ್ಕಳಿಗೆ ಸನ್ಮಾನಿಸಿ ಗೌರವಿಸಲಾಯಿತು.

ಅತ್ಯುತ್ತಮ ಪೌರಕಾರ್ಮಿಕರಿಗೆ ಸನ್ಮಾನ :

ಪಾಲಿಕೆಯ ಎಂಟು ವಲಯಗಳಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ 17 ಪೌರಕಾರ್ಮಿಕರಿಗೆ ಸನ್ಮಾನಿಸಿ ಗೌರವಿಸಲಾಯಿತು. 

ಪೌರಕಾರ್ಮಿಕರಿಗೆ ಬೋನಸ್ :

ಡಾ: ಬಿ.ಆರ್. ಅಂಬೇಡ್ಕರ್ ರವರ ಜಯಂತಿ ಪ್ರಯುಕ್ತ ಖಾಯಂ ಪೌರಕಾರ್ಮಿಕರಿಗೆ 22,000 ರೂ. ಹಾಗೂ ನೇರ ವೇತನ ಪೌರಕಾರ್ಮಿಕರಿಗೆ 8,000 ರೂ. ಗಳ ಬೋನಸ್ ನೀಡಲಾಗುವುದು ಎಂದು ಬಿಬಿಎಂಪಿ ಅಧಿಕಾರಿಗಳು ತಿಳಿಸಿದರು.

ಈ ವೇಳೆ ವಿಶೇಷ ಆಯುಕ್ತರಾದ ಡಾ.ಕೆ.ಹರೀಶ್ ಕುಮಾರ್, ಸುರಳ್ಕರ್ ವಿಕಾಸ್ ಕಿಶೋರ್, ಅವಿನಾಶ್ ಮೆನನ್ ರಾಜೇಂದ್ರನ್, ಪ್ರೀತಿ ಗೆಹ್ಲೋಟ್, ವಲಯ ಆಯುಕ್ತರಾದ ಸತೀಶ್, ಕರೀಗೌಡ, ಉಪ ಆಯುಕ್ತರಾದ ಮಂಜುನಾಥ ಸ್ವಾಮಿ, ಪೌರಕಾರ್ಮಿಕರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

BW SPECIAL | ಬಿಬಿಎಂಪಿ : ನಗರದಲ್ಲಿ ಕಟ್ಟಡ ನಿರ್ಮಾಣ ಉಲ್ಲಂಘನೆ ಮಿತಿ ಶೇ.15ಕ್ಕೆ ಹೆಚ್ಚಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ

Next Post

ಬನ್ನೇರುಘಟ್ಟದಲ್ಲಿ ಬಿಎಂಟಿಸಿ ಬಸ್ ತಡೆದ ಗಂಡಾನೆ : ಪ್ರಯಾಣಿಕರು ಕಂಗಾಲು

Next Post

ಬನ್ನೇರುಘಟ್ಟದಲ್ಲಿ ಬಿಎಂಟಿಸಿ ಬಸ್ ತಡೆದ ಗಂಡಾನೆ : ಪ್ರಯಾಣಿಕರು ಕಂಗಾಲು

ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

₹ 2,000 ಮೀರಿದ ಯುಪಿಐ ಪಾವತಿಗಳ ಮೇಲೆ  ಜಿಎಸ್‌ಟಿ ವಿಧಿಸುವ ಸಾಧ್ಯತೆ? : ತಜ್ಞರು ಹೇಳುವುದೇನು?

Please login to join discussion

Like Us on Facebook

Follow Us on Twitter

Recent News

CREATOR: gd-jpeg v1.0 (using IJG JPEG v80), quality = 82?

ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

September 14, 2026

Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

September 13, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
CREATOR: gd-jpeg v1.0 (using IJG JPEG v80), quality = 82?

ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

September 14, 2026

Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

September 13, 2026

Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

September 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d