ನವದೆಹಲಿ, ಏ.19 www.bengaluruwire.com : ದೇಶಾದ್ಯಂತ 2,000 ರೂ.ಗೆ ಮೇಲ್ಪಟ್ಟ ಯುಪಿಐ ಪಾವತಿ ವ್ಯವಸ್ಥೆ ಮೇಲೆ ಸರಕು ಮತ್ತು ಸೇವಾ ತೆರಿಗೆ (GST) ವಿಧಿಸಲು ಕೇಂದ್ರ ಸರಕಾರ ಯೋಜಿಸುತ್ತಿದೆ ಎಂಬ ಇತ್ತೀಚಿನ ವದಂತಿಗಳನ್ನು ಕೇಂದ್ರ ಹಣಕಾಸು ಸಚಿವಾಲಯ ಸ್ಪಷ್ಟವಾಗಿ ನಿರಾಕರಿಸಿದೆ.
ಈ ಕುರಿತು ಅಧಿಕೃತ ಪ್ರಕಟನೆ ಬಿಡುಗಡೆ ಮಾಡಿರುವ ಕೇಂದ್ರ ಸರ್ಕಾರ ಇಂತಹ ಮಾಹಿತಿಗಳು ಸುಳ್ಳು, ದಾರಿ ತಪ್ಪಿಸುವ ಹಾಗೂ ನಿರಾಧಾರಾದ ಸುದ್ದಿಗಳು ಎಂದು ತಿಳಿಸಿದೆ.
“2,000 ರೂ.ಗೆ ಮೇಲ್ಪಟ್ಟ ಯುಪಿಐ ವಹಿವಾಟುಗಳಿಗೆ ಜಿಎಸ್ಟಿ ವಿಧಿಸಲು ಕೇಂದ್ರ ಸರಕಾರ ಚಿಂತನೆ ನಡೆಸುತ್ತಿದೆ ಎಂಬ ವದಂತಿಗಳು ಸುಳ್ಳು. ಇವು ದಾರಿ ತಪ್ಪಿಸುವ ಹಾಗೂ ನಿರಾಧಾರ ಸುದ್ದಿಗಳಾಗಿವೆ. ಸದ್ಯ, ಕೇಂದ್ರ ಸರ್ಕಾರದ ಮುಂದೆ ಅಂತಹ ಯಾವುದೇ ಪ್ರಸ್ತಾವನೆಯಿಲ್ಲ. ಸರ್ಕಾರವು ಯುಪಿಐ ಮೂಲಕ ಡಿಜಿಟಲ್ ಪಾವತಿಗಳನ್ನು ಉತ್ತೇಜಿಸಲು ಬದ್ಧವಾಗಿದೆ” ಎಂದೂ ಪ್ರಕಟಣೆಯಲ್ಲಿ ಸ್ಪಷ್ಟಪಡಿಸಲಾಗಿದೆ” ಎಂದು ಪತ್ರಿಕಾ ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿದೆ. ಈ ಕುರಿತು ಯುಪಿಐ ಪಾವತಿ ಬಳಕೆದಾರರು ಹಾಗೂ ವರ್ತಕರಿಬ್ಬರಿಗೂ ಇದರಿಂದ ನಿಟ್ಟುಸಿರು ಬಿಡುವಂತಾಗಿದೆ.